ಹುಬ್ಬಳ್ಳಿ: ಇಲ್ಲಿನ ಕಿಮ್ಸ್, ಚಿಟಗುಪ್ಪಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಹಾಗೂ ಪತ್ರಕರ್ತರಿಗಾಗಿ ಪ್ರೆಸ್ ಕ್ಲಬ್ನಲ್ಲಿ ಕೋವಿಡ್ ಲಸಿಕೆ ನೀಡಲಾಯಿತು. ಕಿಮ್ಸ್ನಲ್ಲಿ ಜನದಟ್ಟಣೆ ಹೆಚ್ಚಿತ್ತು. ಲಸಿಕೆ ಹಾಕಿಸಿಕೊಳ್ಳಲು ಬಂದವರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು ಬಹುತೇಕ ಕೇಂದ್ರಗಳಲ್ಲಿ ಎರಡನೇ ಡೋಸ್ ಮಾತ್ರ ನೀಡಲಾಗುತ್ತಿದೆ
Read More »ರೋಡಿಗೆ ಇಳಿದಿರುವ ಬೈಕ್ ಸವಾರರ ಮೇಲೆ ಲಾಠಿ ಚಾರ್ಜ್ ಪೊಲೀಸರ ವರ್ತನೆಗೆ ಸಾರ್ವಜನಿಕರ ವ್ಯಾಪಕ ಆಕ್ರೋಶ
ಗೋಕಾಕ:ರಸ್ತೆಗಿಳಿದವರ ಮೇಲೆ ಲಾಠಿ ಏಟು, ಪೊಲೀಸರ ವರ್ತನೆಗೆ ಸಾರ್ವಜನಿಕರ ವ್ಯಾಪಕ ಆಕ್ರೋಶ ಲಾಕ್ಡೌನ್ ಸಂದರ್ಭದಲ್ಲಿ ರಸ್ತೆಗಿಳಿದವರ ಮೇಲೆ ಪೊಲೀಸರು ಲಾಠಿಯಲ್ಲಿ ಹಿಗ್ಗಾಮುಗ್ಗ ಥಳಿಸುತ್ತಿರುವುದರ ವಿರುದ್ಧ ವ್ಯಾಪಕ ಆಕ್ರೋಶಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿವೆ. ಸಾಮಾಜಿಕ ಹೋರಾಟಗಾರರು, ಬರಹಗಾರರು ಮಾತ್ರವಲ್ಲದೆ ಸಾರ್ವಜನಿಕರು ಪೊಲೀಸರ ನಡೆಯನ್ನು ಖಂಡಿಸುತ್ತಿದ್ದಾರೆ. ಕೋವಿಡ್ ಕಠಿಣ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಜನಸಾಮಾನ್ಯರನ್ನು ಅಪರಾಧಿಗಳಂತೆ ನಡೆಸಿಕೊಂಡು ಶಿಕ್ಷೆ ಕೊಡಲು ಪೊಲೀಸರಿಗೆ ಅಧಿಕಾರ ಕೊಟ್ಟಿದ್ದು ಯಾರು ಎಂದು ಪ್ರಶ್ನಿಸುತ್ತಿದ್ದಾರೆ. ‘ಪೊಲೀಸರಿಗೆ ಶಿಕ್ಷಿಸುವ …
Read More »ಲಸಿಕೆ ವಿಷಯದಲ್ಲಿ ರಾಜಕೀಯ ಬೇಡ, ಎಲ್ಲ ಅರ್ಹರಿಗೂ ವ್ಯಾಕ್ಸಿನ್ ಹಾಕಿಸಿ : ಸಿದ್ದರಾಮಯ್ಯ
ಬೆಂಗಳೂರು : ಕೋವಿಡ್ ಲಸಿಕೆ ವಿಚಾರದಲ್ಲಿ ರಾಜಕೀಯ ಮಾಡದೆ ಎಲ್ಲ ಅರ್ಹರಿಗೂ ಲಸಿಕೆ ಹಾಕುವ ಮೂಲಕ ರಾಜ್ಯದ ಜನರನ್ನು ಕಾಪಾಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, ಮುಂದಿನ ಕೆಲವು ತಿಂಗಳಲ್ಲಿ ಮೂರನೇ ಅಲೆ ಪ್ರಾರಂಭವಾಗುತ್ತದೆಂದು ತಜ್ಞರು ಹೇಳುತ್ತಿದ್ದಾರೆ. ಆದ್ದರಿಂದ ಒಂದೆರಡು ತಿಂಗಳಲ್ಲಿ ಸಂಪೂರ್ಣ ಲಸಿಕೆ ಹಾಕಿಸಿ ಮುಗಿಸಬೇಕು. ಲಸಿಕೆಗಳನ್ನು ಕೇಂದ್ರದಿಂದಾದರೂ …
Read More »ಲಸಿಕೆ ವಿತರಣೆಯಲ್ಲೂ ರಾಜಕೀಯ ಇದು ಅತ್ಯಂತ ಕೀಳಮಟ್ಟದ ನಡೆಯಾಗಿದ್ದು ನಿತ್ಯ ಸುಳ್ಳು ಹೇಳಿಕೆ ಕೊಡುವ ನಾಲಾಯಕ್ಕು ಆರೋಗ್ಯ ಸಚಿವ : ಸುಧಾಕರ್ ವಿರುದ್ದ ಗುಂಡುರಾವ್ ಕಿಡಿ
ಬೆಂಗಳೂರು: ಲಸಿಕೆ ವಿತರಣೆಯಲ್ಲೂ ರಾಜಕೀಯ ಇದು ಅತ್ಯಂತ ಕೀಳಮಟ್ಟದ ನಡೆಯಾಗಿದ್ದು ನಿತ್ಯ ಸುಳ್ಳು ಹೇಳಿಕೆ ಕೊಡುವ ನಾಲಾಯಕ್ಕು ಆರೋಗ್ಯ ಸಚಿವ ತಕ್ಷಣ ವಜಾಗೊಳಿಸಿ ಎಂದು ಸುಧಾಕರ್ ವಿರುದ್ದ ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ. ಆರೋಗ್ಯ ಸಚಿವರ ಸ್ವ ಕ್ಷೇತ್ರ ಚಿಕ್ಕಬಳ್ಳಾಪುರ ಜಿಲ್ಲೆಗೆ ಇತರೆ ಜಿಲ್ಲೆಗಳಿಗಿಂತ ಹೆಚ್ಚು ಲಸಿಕೆ ಪಡೆದಿರೋದಾಗಿ ತಿಳಿದು ಬಂದಿವ ವಿಚಾರವಾಗಿ ಟ್ವೀಟ್ ಮಾಡಿರುವ ಅವರು , ” ಸಚಿವ ಸುಧಾಕರ್ ಅವರೇ ಲಸಿಕೆ ವಿತರಣೆಯಲ್ಲೂ …
Read More »ಮೂಗು ನೋಯುತ್ತೆ ಅಂತಾ ಮಾಸ್ಕ್ ಹಾಕಿಲ್ಲ, ನಮ್ಮನ್ನ ಬಿಟ್ಟು ದೇಶ ಲೂಟಿ ಮಾಡೋರನ್ನು ಹಿಡೀರಿ- ದಂಪತಿ ಹೈ ಡ್ರಾಮಾ
ಯಾದಗಿರಿ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿವೆ. ಜನ ಆಕ್ಸಿಜನ್, ಬೆಡ್ ಕೊರತೆಯಿಂದ ನರೆಳಿ ಸಾಯುತ್ತಿದ್ದಾರೆ. ಇಷ್ಟಾದರೂ ಕೆಲವರು ಮಾತ್ರ ಉದ್ಧಟತನ ಮೆರೆಯುತ್ತಿದ್ದಾರೆ. ಮೂಗೂ ನೋವು ಆಗುತ್ತೆ ಎಂದು ದಂಪತಿ ಮಾಸ್ಕ್ ಹಾಕದೆ, ಸಿಟಿ ರೌಂಡ್ಸ್ ಹೊಡೆಯುತ್ತಿದ್ದು, ಪ್ರಶ್ನಿಸಿದ ಪೊಲೀಸರಿಗೆ ಅವಾಜ್ ಹಾಕಿದ್ದಾರೆ. ಸುಭಾಷ್ ವೃತ್ತದಲ್ಲಿ ಘಟನೆ ನಡೆದಿದ್ದು, ಮಾಸ್ಕ್ ಹಾಕದೇ ಮೊಪೆಡ್ನಲ್ಲಿ ನಗರ ಸುತ್ತುತ್ತಿದ್ದ ದಂಪತಿಯನ್ನು ಪ್ರಶ್ನಿಸಿದ್ದಕ್ಕೆ ಹೈ ಡ್ರಾಮಾ ಮಾಡಿ, ಉದ್ಧಟತನ ಮೆರೆದಿದ್ದಾರೆ. ಮಾಸ್ಕ್ ಹಾಕದ್ದಕ್ಕೆ …
Read More »ಬೆಳಗಾವಿ: ಅಗತ್ಯ ವಸ್ತುಗಳಿಗೆ ಪರದಾಟ
ಬೆಳಗಾವಿ: ‘ಕೋವಿಡ್ ಪ್ರಕರಣಗಳನ್ನು ತಗ್ಗಿಸಲು ಜಾರಿಗೊಳಿಸಿರುವ ಲಾಕ್ಡೌನ್ ಅವಧಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6ರಿಂದ 10ರವರೆಗೆ ಅವಕಾಶವಿದೆ. ಆದರೆ, ವಾಹನಗಳಲ್ಲಿ ಬರುವಂತಿಲ್ಲ; ನಡೆದುಕೊಂಡೇ ತೆರಳಬೇಕು’ ಎಂಬ ಸರ್ಕಾರದ ಆದೇಶವು ಗ್ರಾಮೀಣ ಜನರಿಗೆ ತೊಡಕಾಗಿ ಪರಿಣಮಿಸಿದೆ. ಬಹುತೇಕ ಹಳ್ಳಿಗಳಲ್ಲಿ ದಿನಸಿ, ತರಕಾರಿ ಮೊದಲಾದವುಗಳು ಸಿಗುವ ಅಂಗಡಿಗಳಿರುವುದಿಲ್ಲ. ಪಕ್ಕದಲ್ಲಿರುವ ದೊಡ್ಡ ದೊಡ್ಡ ಗ್ರಾಮಗಳು, ಪಟ್ಟಣ, ಹೋಬಳಿ, ತಾಲ್ಲೂಕು ಅಥವಾ ಜಿಲ್ಲಾ ಕೇಂದ್ರದಲ್ಲಿನ ಅಂಗಡಿಗಳನ್ನು ಅಥವಾ ಮಾರುಕಟ್ಟೆಯನ್ನು ಅವಲಂಬಿಸಿರುತ್ತಾರೆ. ಹೀಗೆ ಹೋಗಿ ಬರುವುದಕ್ಕೆ …
Read More »ಇಂದು ಕೊರೊನಾ ಕೇಸ್ಗಿಂತ ಗುಣಮುಖರಾದವ್ರ ಸಂಖ್ಯೆ ಹೆಚ್ಚಳ, 24 ಗಂಟೆಗಳಲ್ಲಿ 3,56,082 ಮಂದಿ ಡಿಸ್ಚಾರ್ಜ್
ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 3,29,942 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 3,876 ಮಂದಿ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ನಿನ್ನೆಗೆ ಹೋಲಿಸಿದ್ರೆ ಇಂದು ವರದಿಯಾಗಿರೋ ಕೇಸ್ಗಳ ಸಂಖ್ಯೆ ಇಳಿಕೆ ಕಂಡಿದೆ. ಹಾಗೇ ಇಂದು ವರದಿಯಾಗಿರೋ ಹೊಸ ಕೇಸ್ಗಳಿಗಿಂತ ಗುಣಮುಖರ ಸಂಖ್ಯೆ ಹೆಚ್ಚಿದ್ದು ಸಮಾಧಾನ ಮೂಡಿಸಿದೆ. ನಿನ್ನೆ ಒಂದೇ ದಿನ 3,66,161 ಕೊರೊನಾ ಪ್ರಕರಣಗಳು ಹಾಗೂ 3,754 ಸೋಂಕಿತರ ಸಾವು ವರದಿಯಾಗಿತ್ತು. 3,56,082 ಮಂದಿ ನಿನ್ನೆ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. …
Read More »ಬೆಡ್, ಆಕ್ಸಿಜನ್ ಕೊರತೆಗೆ ಕಾಂಗ್ರೆಸ್ ಕಾರಣ :ಕಟೀಲ್”
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ, ಅದರ ನಿಯಂತ್ರಣಕ್ಕೆ ಆಡಳಿತ ಪಕ್ಷವಾಗಿ ಕೋವಿಡ್ ನಿಯಂತ್ರಿಸಲು ಮಾಡುತ್ತಿರುವ ಕೆಲಸ, ಜಿಂದಾಲ್ ಸಂಸ್ಥೆಗೆ ಸರ್ಕಾರ ಜಮೀನುನೀಡಲು ಮುಂದಾಗಿರುವುದಕ್ಕೆ ಸ್ವಪಕ್ಷೀಯ ಶಾಸಕರ ವಿರೋಧ, ನಾಯಕತ್ವ ಬದಲಾವಣೆ ಈ ಎಲ್ಲ ವಿಚಾರಗಳ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷನಳಿನ್ ಕುಮಾರ್ ಕಟೀಲ್” ಮುಕ್ತವಾಗಿ ಮಾತನಾಡಿದ್ದಾರೆ. ಕೋವಿಡ್ ನಿಯಂತ್ರಿಸಲು ಬಿಜೆಪಿ ಏನು ಮಾಡುತ್ತಿದೆ? ನಾವು ಕೋವಿಡ್ ಮೊದಲು ಬಂದಾಗಲೂ ಸೇವಾ ಹಿ ಸಂಘಟನೆ ಮಾಡಿದ್ದೆವು. ಈಗಲೂ ಪಕ್ಷದ 37 ಜಿಲ್ಲಾ ಘಟಕಗಳಲ್ಲಿ …
Read More »ಬೆಂಗಳೂರಿಗೆ ಮೊದಲ ಬಾರಿಗೆ ರೈಲಿನ ಮೂಲಕ ಆಕ್ಸಿಜನ್ ಆಗಮನ
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಆಕ್ಸಿಜನ್ ಅಭಾವ ಹೆಚ್ಚಾಗಿದ್ದು ಅನೇಕ ದೇಶಗಳು ಸಹಾಯಕ್ಕಾಗಿ ಮುಂದೆ ಬಂದಿವೆ. ಸದ್ಯ ಇಂದು ಇದೇ ಮೊದಲ ಬಾರಿಗೆ ರೈಲಿನ ಮೂಲಕ ಆಕ್ಸಿಜನ್ ಬಂದಿದೆ. ಜಮ್ಶೆಡ್ಪುರದಿಂದ ಬೆಂಗಳೂರಿಗೆ ಎಕ್ಸ್ಪ್ರೆಸ್ ರೈಲಿನಲ್ಲಿ 6 ಆಕ್ಸಿಜನ್ ಕಂಟೇನರ್ಗಳು ತಲುಪಿವೆ. ತಲಾ 20 ಟನ್ ಇರುವ ಆಕ್ಸಿಜನ್ ಕಂಟೇನರ್ಗಳು ಈಗ ವೈಟ್ಫೀಲ್ಡ್ನಲ್ಲಿರುವ ಕಾರ್ಪೊರೇಷನ್ ಆಫ್ ಇಂಡಿಯಾ ಡಿಪೋಗೆ ಆಗಮಿಸಿವೆ. ಜಮ್ಶೆಡ್ಪುರದಿಂದ ನಿನ್ನೆ ಮುಂಜಾನೆ 3ಕ್ಕೆ ಹೊರಟಿದ್ದ ಆಕ್ಸಿಜನ್ ಎಕ್ಸ್ಪ್ರೆಸ್ ರೈಲು 30 …
Read More »ರೆಮಿಡಿಸಿವರ್ ಅಕ್ರಮ ಮಾರಾಟಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ಇನ್ನೂ ಇಬ್ಬರನ್ನು ಬಂಧಿಸಿದ್ದಾರೆ.
ಬೆಂಗಳೂರು – ರೆಮಿಡಿಸಿವರ್ ಅಕ್ರಮ ಮಾರಾಟಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ಇನ್ನೂ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರು ಪ್ರಸಿದ್ಧ ಖಾಸಗಿ ಆಸ್ಪತ್ರೆಯೊಂದರ ಸ್ಟಾಪ್ ನರ್ಸ್ ಹಾಗೂ ಓರ್ವ ಅಂಬುಲೆನ್ಸ್ ಚಾಲಕ. ಇವರು ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ರೆಮ್ ಡಿಸಿವರ್ ವಾಯೆಲ್ಸ್ ಗಳನ್ನು ಮಾರಾಟ ಮಾಡುತ್ತಿದ್ದರು ಎಂದು ಸಿಸಿಬಿ ಅಧಿಕಾರಿ ಸಂದೀಪ್ ಪಾಟೀಲ ತಿಳಿಸಿದ್ದಾರೆ. ರಾಜ್ಯದಲ್ಲಿ ಕಳೆದ ಸುಮಾರು 15 ದಿನಗಳಿಂದ ರೆಮ್ ಡಿಸಿವರ್ ಕಾಳಸಂತೆಕೋರರ ವಿರುದ್ಧ ಕಾರ್ಯಾಚರಣೆ ನಡೆಯುತ್ತಿದೆ. …
Read More »