ಬೆಂಗಳೂರು: ಕೋವಿಡ್ ಸೋಂಕಿತರಿಗೆ ಕೊಡಲಾಗುವ ರೆಮಿಡಿಸಿವಿರ್ ಔಷಧಿ ಕಾಳ ಸಂತೆಯಲ್ಲಿ ಮಾರಾಟವಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವಂತೆ ಇಂದು ಸಿಎಂ ಯಡಿಯೂರಪ್ಪ ಅಧಿಕಾರಿಗಳ ಸಭೆ ನಡೆಸಿದರು. ರೆಮ್ ಡಿಸಿವಿರ್ ಕೊರತೆ ಬಗ್ಗೆ ತಮ್ಮ ನಿವಾಸದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ಸಂಪೂರ್ಣ ಮಾಹಿತಿ ಇದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಇಂದು ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. …
Read More »ಆಟಗಾರರಲ್ಲಿ ಕೋವಿಡ್-19 ಸೋಂಕು ಕಂಡು ಬರುತ್ತಿರುವ ಕಾರಣದಿಂದ ಈ ಬಾರಿಯ ಐಪಿಎಎಲ್ ಕೂಟವನ್ನು ಅಮಾನತು ಮಾಡಲು ಬಿಸಿಸಿಐ ನಿರ್ಧರಿಸಿದೆ.
ಹೊಸದಿಲ್ಲಿ:ಆಟಗಾರರಲ್ಲಿ ಕೋವಿಡ್-19 ಸೋಂಕು ಕಂಡು ಬರುತ್ತಿರುವ ಕಾರಣದಿಂದ ಈ ಬಾರಿಯ ಐಪಿಎಎಲ್ ಕೂಟವನ್ನು ಅಮಾನತು ಮಾಡಲು ಬಿಸಿಸಿಐ ನಿರ್ಧರಿಸಿದೆ. ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಈ ಬಗ್ಗೆ ಮಾಹಿತಿ ನೀಡಿದ್ದು, 2021ನೇ ಸಾಲಿನ ಐಪಿಎಲ್ ಕೂಟವನ್ನು ಸ್ಥಗಿತಗೊಳಿಸಲಾಗಿದೆ, ಮುಂದೆ ಮತ್ತೆ ಕೂಟ ಆಯೋಜಿಸಲು ಪ್ರಯತ್ನಿಸುತ್ತೇವೆ. ಆದರೆ ರದ್ದು ಮಾಡಿಲ್ಲ ಎಂದಿದ್ದಾರೆ. ಮೂವರು ಆಟಗಾರರು ಸೇರಿದಂತೆ ಒಟ್ಟು ಆರು ಮಂದಿಗೆ ಕೋವಿಡ್ ಸೋಂಕು ದೃಢವಾಗಿತ್ತು. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವರುಣ್ …
Read More »ಮಮತಾ ಬ್ಯಾನರ್ಜಿ ಬಗ್ಗೆ ಆಕ್ಷೇಪಾರ್ಹ ಟ್ವೀಟ್ : ಕಂಗನಾ ರಣಾವತ್ ಟ್ವಿಟ್ಟರ್ ಅಮಾನತು
ನವದೆಹಲಿ : ಮೈಕ್ರೊ ಬ್ಲಾಗಿಂಗ್ ನಿಯಮಾವಳಿಗಳನ್ನು ಉಲ್ಲಂಘನೆ ಮಾಡಿ ಟ್ವೀಟ್ ಮಾಡಿದ ಕಾರಣ ನಟಿ ಕಂಗನಾ ರಣಾವತ್ ಟ್ವಿಟ್ಟರ್ ಖಾತೆಯನ್ನು ಅಮಾನತು ಮಾಡಲಾಗಿದೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಬಗ್ಗೆ ಆಕ್ಷೇಪಾರ್ಹ ಸರಣಿ ಟ್ವೀಟ್ ಮಾಡಿದ ಹಿನ್ನೆಲೆಯಲ್ಲಿ ನಟಿಯ ಟ್ವಿಟ್ಟರ್ ಖಾತೆಯನ್ನು ಅಮಾನತು ಮಾಡಲಾಗಿದೆ. 2021ರ ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ಟಿಎಂಸಿ ಗೆದ್ದಿದೆ. ಇದೇ ಹಿನ್ನೆಲೆಯಲ್ಲಿ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತವನ್ನು ತರಬೇಕು ಎಂದು ಕಂಗನಾ ಒತ್ತಾಯ …
Read More »ದ್ವಿತೀಯ PUC ಪರೀಕ್ಷೆ ಮುಂದೂಡಿಕೆ, ಪ್ರಥಮ ಪಿಯುಸಿ ವಿದ್ಯಾರ್ಥಿಗಳ ತೇರ್ಗಡೆ, ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಂ – ಸಚಿವ ಸುರೇಶ್ ಕುಮಾರ್ ಘೋಷಣೆ
ಬೆಂಗಳೂರು : ಕೋವಿಡ್ ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಮುಂದಿನ ದಿನಗಳಲ್ಲಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಎಂದರು. ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು …
Read More »ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
ಬೆಳಗಾವಿ : ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಬೆಡ್ ಗಳ ಮಾಹಿತಿಯನ್ನು ಪ್ರತಿದಿನ ವೆಬ್‌ಸೈಟ್ ಮೂಲಕ ಜನರಿಗೆ ನೀಡಬೇಕು; ಆಕ್ಸಿಜನ್, ರೆಮಿಡಿಸಿವಿರ್ ಮತ್ತಿತರ ಔಷಧೋಪಕರಣಗಳ ಕೊರತೆ ಉಂಟಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಮತ್ತು ಅಗತ್ಯ ಚಿಕಿತ್ಸೆ …
Read More »ತಮಿಳುನಾಡಿನಲ್ಲಿ ಡಿಎಂಕೆಗೆ ಜಯ : ಹರಕೆ ಈಡೇರಿಸಲು ತನ್ನ ನಾಲಿಗೆ ಕತ್ತರಿಸಿ ದೇವಿಗೆ ಅರ್ಪಿಸಿದ ಮಹಿಳೆ
ಚೆನ್ನೈ : ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನಂತರ ತಮಿಳುನಾಡಿನ ಮಹಿಳೆಯೊಬ್ಬಳು ದೇವಾಲಯ ದೇವತೆಗೆ ನೀಡಿದ ಹರಕೆಯನ್ನು ಉಳಿಸಿಕೊಳ್ಳುವ ಸಲುವಾಗಿ ತನ್ನ ನಾಲಿಗೆಯನ್ನು ಕತ್ತರಿಸಿ ನೀಡಿದ್ದಾಳೆ. ೨೦೨೧ ರ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಗೆದ್ದರೆ ದೇವರಿಗೆ ಹರಕೆಯಾಗಿ ತನ್ನ ನಾಲಿಗೆಯನ್ನು ಕತ್ತರಿಸಿ ನೀಡುವುದಾಗಿ ಮೂವತ್ತೆರಡು ವರ್ಷದ ವನಿತಾ ಈ ಹಿಂದೆ ಮಹಿಳೆ ಹರಕೆ ಹೊತ್ತಿದ್ದರು ಎನ್ನಲಾಗಿದೆ. ಡಿಎಂಕೆ ಜನಾದೇಶ ವನ್ನು ಗೆದ್ದ ನಂತರ, ವನಿತಾ …
Read More »ನಮ್ಮವರೇ ನಮ್ಮ ಕಷ್ಟಕ್ಕೆ ಆಗೋದು.. ಕಿಮ್ಸ್ಗೆ ನೆರವಿನ ಹಸ್ತ ಚಾಚಿದ ಖಾಸಗಿ ಕಂಪನಿಗಳು..!
ಹುಬ್ಬಳ್ಳಿ: ಕೋವಿಡ್ ವ್ಯಾಪಕಗೊಂಡಿರುವ ಸಂದರ್ಭದಲ್ಲಿ ಸರ್ಕಾರದ ನೆರವಿಗೆ ಖಾಸಗಿ ಕಂಪನಿಗಳು ಮುಂದಾಗಿವೆ. ಸ್ವರ್ಣ ಗ್ರೂಪ್ ಆಪ್ ಕಂಪನಿಸ್, ದೇಶಪಾಂಡೆ ಫೌಂಡೇಶನ್, ಟಾಟಾ ಹಿಟಾಚಿ, ಟಾಟಾ ಮಾರ್ಕೊಪೊಲೊ ಕಂಪನಿಗಳ ಸಾರ್ವಜನಿಕ ಹೊಣೆಗಾರಿಕೆ ನಿಧಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ 570 ಬೆಡ್ ಗಳನ್ನು ನೀಡಲಾಯಿತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ 100 ಆಕ್ಸಿಜನ್ ಬೆಡ್‌ಗಳ ಕೋವಿಡ್ ಆಸ್ಪತ್ರೆಯನ್ನು ವೇದಾಂತ ಸಂಸ್ಥೆ ಯವರು ಕಿಮ್ಸ್ ಆವರಣದಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ವಿವಿಧ ಜಿಲ್ಲೆಗಳಿಂದ ಆಗಮಿಸುವ …
Read More »ಪಂಚರಾಜ್ಯ ಚುನಾವಣೆ ಮುಗಿಯುತ್ತಿದ್ದಂತೆ ವಾಹನ ಚಾಲಕರಿಗೆ ಶಾಕ್ ಕೊಟ್ಟ ಕೇಂದ್ರ
ನವದೆಹಲಿ: ಪಂಚರಾಜ್ಯ ಚುನಾವಣೆಗೂ ಮುಂಚೆ ದಿನನಿತ್ಯ ಪೆಟ್ರೋಲ್ ಡಿಸೇಲ್ ಬೆಲೆ ಏರುತ್ತಲೇ ಇತ್ತು. ಚುನಾವಣೆ ಹೊತ್ತಲ್ಲಿ ಸ್ಥಿರವಾಗಿದ್ದ ದರ ಇದೀಗ ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿ ವಾಹನ ಸವಾರರಿಗೆ ಬಿಗ್ ಶಾಕ್ ಕೊಟ್ಟಿದೆ. ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 15 ಪೈಸೆ ಏರಿಕೆಯಾಗಿದ್ದು, ಡಿಸೇಲ್ ದರ 16 ಪೈಸೆ ಏರಿಕೆ ಮಾಡಲಾಗಿದೆ. ಈ ಮೂಲಕ ದೆಹಲಿಯಲ್ಲಿ ಪ್ರತಿ …
Read More »ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಮೃತ ಮಹಿಳೆಯ ಮಾಂಗಲ್ಯ ಸರ ಕಳವು
ಚಿಕ್ಕಬಳ್ಳಾಪುರ: ಕೋವಿಡ್ ಸೋಂಕಿನಿಂದ ಮೃತಳಾದ ಮಹಿಳೆಯ ಮಾಂಗಲ್ಯ ಸರಕಳವು ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ನಡೆದಿದೆ. ಅಂದಾರ್ಲಹಳ್ಳಿ ಗ್ರಾಮದ ಲಕ್ಷ್ಮಮ್ಮ ಕೊರೊನಾ ದಿಂದ ಮೃತಪಟ್ಟಿದ್ದರು. ಮೃತದೇಹ ಪಡೆಯಲು ಬಂದ ಸಂಬಂಧಿಕರು ಮೃತ ಮಹಿಳೆಯ ಮೈಮೇಲೆ ಇದ್ದ ಆಭರಣಗಳನ್ನು ಕೇಳಿದ್ದಾರೆ. ಈ ವೇಳೆ ಮೊದಲು ಬೆಳ್ಳಿ ಕಾಲು ಚೈನ್ ತದನಂತರ ಬಂಗಾರದ ಕಿವಿ ಒಲೆ ತಂದುಕೊಟ್ಟಿದ್ದಾರೆ. ಆದರೆ ಮಾಂಗಲ್ಯ ಸರ ಎಲ್ಲಿ ಅಂತ ಕೇಳಿದ್ರ ಯಾರ ಬಳಿಯೂ ಉತ್ತರ …
Read More »ಕೊರೋನಾದಿಂದಾಗಿ 8 ದಿನದ ಅಂತರದಲ್ಲಿ ತಂದೆ, ತಾಯಿ, ಮಗ ಸಾವಿಗೀಡಾಗಿದ್ದಾರೆ.
ಬೆಳಗಾವಿ – ಕೊರೋನಾದಿಂದಾಗಿ 8 ದಿನದ ಅಂತರದಲ್ಲಿ ತಂದೆ, ತಾಯಿ, ಮಗ ಸಾವಿಗೀಡಾಗಿದ್ದಾರೆ. ಬೆಳಗಾವಿಯ ಬಾಕ್ಸೈಟ್ ರಸ್ತೆಯ ವಿದ್ಯಾನಗರದ ನಿವಾಸಿಗಳಾದ ಪಾರ್ವತಿ ಕೃಷ್ಣಾ ತೇರಗಾಂವ( 76), ನಿವೃತ್ತ ಉಪ ನೊಂದನಾಧಿಕಾರಿ ಕೃಷ್ಣಾ ಭೀಮಪ್ಪ ತೇರಗಾಂವ (80) ಮತ್ತು ಪ್ರಶಾಂತ ಕೃಷ್ಣಾ ತೇರಗಾಂವ್ (49) ಮೃತರಾದವರು.ಪಾರ್ವತಿ ಏ.24ರಂದು, ಕೃಷ್ಣಾ ಏ. 29ರಂದು ಹಾಗೂ ಪ್ರಶಾಂತ ಮೇ 3ರಂದು ಮೃತರಾದರು. ಕೃಷ್ಣಾ ಹಾಗೂ ಪ್ರಶಾಂತ ಸಬ್ ರಜಿಸ್ಟ್ರಾರ್ ಕಚೇರಿ ಕನ್ಸಲ್ಟಂಟ್ ಆಗಿ ಕೆಲಸ …
Read More »