ಬೆಳಗಾವಿ: ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗೃತಾ ಕ್ರಮವಾಗಿ ಮೇ.12 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕೋರೊನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಏಪ್ರಿಲ್ 21ರ ರಾತ್ರಿ 9 ಗಂಟೆಯಿಂದ ಮೇ.4 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಹೊರಡಿಸಲಾಗಿತ್ತು. ಆದರೆ, ಕೊವಿಡ್ ಪ್ರಕರಣಗಳಲ್ಲಿ ಪ್ರತಿದಿನ ಹೆಚ್ಚಳ …
Read More »ರೆಮ್‍ಡಿಸಿವಿರ್ ಇಂಜೆಕ್ಷನ್ ಅನ್ನು ಕದ್ದು ಮಾರುತ್ತಿದ್ದ 10 ಜನ ಗ್ಯಾಂಗ್ ಅನ್ನು ಬಾಗಲಕೋಟೆ ಸಿಇಎನ್ ಪೊಲೀಸರು ಬೇಟೆಯಾಡಿದ್ದಾರೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಕದ್ದು ಮುಚ್ಚಿ ರೆಮ್‍ಡಿಸಿವಿರ್ ಇಂಜೆಕ್ಷನ್ ಅನ್ನು ಕದ್ದು ಮಾರುತ್ತಿದ್ದ 10 ಜನ ಗ್ಯಾಂಗ್ ಅನ್ನು ಬಾಗಲಕೋಟೆ ಸಿಇಎನ್ ಪೊಲೀಸರು ಬೇಟೆಯಾಡಿದ್ದಾರೆ. ಆಸ್ಪತ್ರೆ ಸಿಬ್ಬಂದಿಯೇ ಈ ಕಳ್ಳರಾಗಿರೋದು ಬೆಳಕಿಗೆ ಬಂದಿದೆ. 10 ಜನರಲ್ಲಿ ಮೂವರು ಕೋವಿಡ್ ಆಸ್ಪತ್ರೆ ಸಿಬ್ಬಂದಿ, 7 ಜನ ಖಾಸಗಿ ಆಸ್ಪತ್ರೆ ಸಿಬ್ಬಂದಿ ಆಗಿದ್ದಾರೆ. ರೋಗಿಗಳಿಗೆ ಕೊಡುವ ಇಂಜೆಕ್ಷನ್ ಅನ್ನು ಹೊರತಂದು ಬ್ಲಾಕ್‍ನಲ್ಲಿ 25-30 ಸಾವಿರಕ್ಕೆ ಮಾರಾಟ ಮಾಡುತ್ತಿದ್ದ ವೇಳೆ ಬಲೆಗೆ ಬಿದ್ದಿದ್ದಾರೆ. ಇತ್ತ, ತುಮಕೂರಿನಲ್ಲಿ …
Read More »ನೆಲಮಂಗಲ ಬಳಿ ಬಿಜೆಪಿಯ ಪೋಸ್ಟರ್ ಶೋಕಿ- ಫೋಟೋ ವೈರಲ್ ಆಗ್ತಿದ್ದಂತೆ ಫ್ಲೆಕ್ಸ್ ತೆರವ
ನೆಲಮಂಗಲ: ಅಂತ್ಯಸಂಸ್ಕಾರ ವ್ಯವಸ್ಥೆಯಲ್ಲೂ ಬಿಜೆಪಿ ಶೋಕಿಗೆ ಇಳಿದಿದೆ. ಕೋವಿಡ್‍ನಿಂದ ಮೃತಪಟ್ಟವರ ಉಚಿತ ಅಂತ್ಯಸಂಸ್ಕಾರಕ್ಕೆ ಗಿಡ್ಡೇನಹಳ್ಳಿಯಲ್ಲಿ ಸ್ಮಶಾನ ನಿರ್ಮಿಸಲಾಗಿದೆ. ಈ ಸ್ಮಶಾನಕ್ಕೆ ಹೋಗುವ ದಾರಿಯ ಮಾರ್ಗವನ್ನ ಸೂಚಿಸುವ ಫ್ಲೆಕ್ಸ್ ನಲ್ಲಿ ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ, ಕಂದಾಯ ಸಚಿವ ಆರ್ ಅಶೋಕ್, ಬಿಡಿಎ ಅಧ್ಯಕ್ಷ ಎಸ್. ಆರ್ ವಿಶ್ವನಾಥ್, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮರಿಸ್ವಾಮಿ ಫೋಟೊ ಹಾಕಲಾಗಿತ್ತು. ಅಲ್ಲದೆ ಕೊರೊನಾ ಶವಸಂಸ್ಕಾರಕ್ಕೆ ಬರುವ ಸಂಬಂಧಿಕರು, ಅಂಬುಲೆನ್ಸ್ ಚಾಲಕರು ಹಾಗೂ …
Read More »ಕೊರೊನಾ ಪರಿಣಾಮ: ಭಾರತದ ನಿರುದ್ಯೋಗ ದರ 4 ತಿಂಗಳ ಗರಿಷ್ಠ ಮಟ್ಟಕ್ಕೆ ಏರಿಕೆ
ಭಾರತದ ನಿರುದ್ಯೋಗ ದರವು ಏಪ್ರಿಲ್‌ನಲ್ಲಿ ನಾಲ್ಕು ತಿಂಗಳ ಗರಿಷ್ಠ ಶೇಕಡಾ 8ಕ್ಕೆ ಏರಿಕೆಗೊಂಡಿದೆ. ಕೋವಿಡ್-19 ಸಾಂಕ್ರಾಮಿಕದ ಕಾರಣದಿಂದಾಗಿ ಅನೇಕ ರಾಜ್ಯಗಳು ನಿರ್ಬಂದಕ್ಕೊಳಗಾಗಿದ್ದು, ವೈರಸ್ ಪ್ರಕರಣಗಳಲ್ಲಿ ದಾಖಲೆಯ ಏರಿಕೆ ಕಂಡಿದೆ. ಖಾಸಗಿ ಸಂಶೋಧನಾ ಸಂಸ್ಥೆಯಾದ ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ ಪ್ರೈ.ಲಿ.ನ ಅಂಕಿ ಅಂಶಗಳ ಪ್ರಕಾರ, ಮಾರ್ಚ್‌ನಲ್ಲಿ ಶೇಕಡಾ 6.5 ರಷ್ಟಿದ್ದ ನಿರುದ್ಯೋಗ ದರವು ಏಪ್ರಿಲ್‌ನಲ್ಲಿ ಶೇಕಡಾ 7.97ಕ್ಕೆ ಏರಿಕೆಗೊಂಡಿದೆ. ಭಾರತದಲ್ಲಿ ಭಾನುವಾರ 3,689ರಷ್ಟು ಸೋಂಕಿತರು ಕೋವಿಡ್-19ಗೆ ಬಲಿಯಾಗಿದ್ದು ದಾಖಲೆಯಾಗಿದೆ. …
Read More »ರಾಜ್ಯದ ಜನರಿಗೆ ಶಾಕ್ ನೀಡಿದ ವೈದ್ಯರು; ಸೋಂಕಿತರ ಸಂಖ್ಯೆ ಇನ್ನೂ ಏರಿಕೆಯಾಗಲಿದೆಯಂತೆ..!!!
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯು ಜೋರಾಗಿದ್ದು, ಇದು ಇನ್ನೂ 15 ದಿನಗಳ ಕಾಲ ಹೀಗೆ ಮುಂದುವರೆಯುತ್ತದೆ ಎಂದು ಹೇಳುವ ಮೂಲಕ ಮಣಿಪಾಲ ಆಸ್ಪತ್ರೆಗಳ ಮುಖ್ಯಸ್ಥ ಡಾ. ಸುದರ್ಶನ್ ಬಲ್ಲಾಳ್ ರಾಜ್ಯದ ಜನರಿಗೆ ಶಾಕ್ ಕೊಟ್ಟಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಕೋವಿಡ್ 2 ನೇ ಅಲೆಯ ತೀಕ್ಷ್ಣತೆ ಇನ್ನೂ 15 ದಿನ ಇರಲಿದ್ದು, ನಂತರ ಕಡಿಮೆಯಾಗಬಹುದು. ಕೊರೊನಾದ 2 ನೇ ಅಲೆಯು ಬಹಳ ವೇಗವಾಗಿ ವ್ಯಾಪಿಸುತ್ತಿದ್ದು, …
Read More »ಸೋಂಕಿತರ ಚಿಕಿತ್ಸೆಗೆ ಬಳಸಿದ ರೆಮ್ ಡೆಸಿವಿರ್ ಮಾರಾಟ ಮಾಡಲು ಯತ್ನ: ಮೂವರು ಅಂದರ್
ದೇವಾಸ್ : ಕೋವಿಡ್ 19 ಸೋಂಕಿತರ ಚಿಕಿತ್ಸೆ ನೀಡಲು ಬಳಸಿದ ರೆಮ್ ಡೆಸಿವಿರ್ ಇಂಜೆಕ್ಶನ್ ನನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ಇಬ್ಬರು ದಾದಿಯರು ಮತ್ತು ಮೆಡಿಕಲ್ ಮಾಲೀಕರೊಬ್ಬರನ್ನು ಬಂಧಿಸಲಾಗಿದೆ ಎಂದು ಮಧ‍್ಯಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೋವಿಡ್ 19 ಸೋಂಕು ರಾಜ್ಯದಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರೆಮ್ ಡೆಸಿವಿರ್ ಗೆ ಬೇಡಿಕೆ ಹೆಚ್ಚಾದ ಕಾರಣದಿಂದ ಇಂತಹ ಪ್ರಕರಣಗಳು ಹೆಚ್ಚಾಗಿವೆ. ದುಬಾರಿ ಬೆಲೆಗೆ ಹಾಗೂ ಸೋಂಕಿತರಿಗೆ ಬಳಸಲಾದ …
Read More »1912 ಹೆಲ್ಪ್‌ಲೈನ್ ಸರಿಯಾಗಲು 2 ದಿನ ಗಡುವು ನೀಡಿದ ಡಿಸಿಎಂ
ಬೆಂಗಳೂರು: ಎರಡು ದಿನಗಳ ಒಳಗಾಗಿ ಬೆಂಗಳೂರು ಮಹಾನಗರದಲ್ಲಿ ಕೋವಿಡ್‌ಗೆ ಸಂಬಂಧಿತ ಎಲ್ಲ ಸೇವೆಗಳನ್ನು 1912 ಹೆಲ್ಪ್‌ಲೈನ್‌ಗೆ ಜೋಡಿಸಬೇಕು; ಬೆಡ್ ಹಂಚಿಕೆ ಪಾರದರ್ಶಕಗೊಳಿಸಬೇಕು ಎಂದು \ ಡಾ.ಸಿ.ಎನ್.ಅಶ್ವತ್ಥನಾರಾಯಣ ಅಧಿಕಾರಿಗಳಿಗೆ ಡೆಡ್‌ಲೈನ್ ವಿಧಿಸಿದರು. ಬೆಂಗಳೂರಿನಲ್ಲಿ ದಿನವಿಡೀ ಕೋವಿಡ್ ಸಂಬಂಧಿತ ಸಭೆಗಳಲ್ಲಿ ಪಾಲ್ಗೊಂಡ ಅವರು, ಮಾಹಿತಿ ಮತ್ತು ಸೌಲಭ್ಯಗಳ ಕೊಂಡಿಯಾಗಿರುವ ಹೆಲ್ಪ್‌ಲೈನ್ ವ್ಯವಸ್ಥೆಯನ್ನು ಸರಿ ಮಾಡುವ ಉದ್ದೇಶದಿಂದ ಸೋಮವಾರ ಸಂಜೆ ಉನ್ನತಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಬೆಂಗಳೂರು ನಗರದಲ್ಲಿರುವ ಕೋವಿಡ್ ಬೆಡ್‌ಗಳ ಪ್ರಮಾಣ, ಹಂಚಿಕೆ …
Read More »ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅಣ್ಣ ಕೋವಿಡ್‌ನಿಂದ ನಿಧನ
ಬೆಂಗಳೂರು: ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಅಣ್ಣ ಕಿರಣ್(44), ಕೋವಿಡ್-19ನಿಂದ ಮೃತಪಟ್ಟಿದ್ದಾರೆ. ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿರುವ ಅರ್ಜುನ್ ಜನ್ಯ, ‘ಅಣ್ಣ ಕೋವಿಡ್‌ನಿಂದ ಮೃತಪಟ್ಟಿದ್ದಾನೆ. ನೀನಿಲ್ಲದೆ ಇರುವ ನೋವನ್ನು ಹೇಗೆ ವ್ಯಕ್ತಪಡಿಸಬೇಕು ಎನ್ನುವುದು ತಿಳಿಯುತ್ತಿಲ್ಲ. ನನ್ನ ಕೊನೆಯ ಉಸಿರು ಇರುವವರೆಗೂ ನೀನು ನನ್ನ ಉಸಿರಲ್ಲಿರುವೆ’ ಎಂದು ಬರೆದಿದ್ದಾರೆ. ಅನಾರೋಗ್ಯದ ಕಾರಣ 15 ದಿನಗಳ ಹಿಂದೆ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದ ಕಿರಣ್ ಅವರು, ಭಾನುವಾರ ರಾತ್ರಿ ಮೃತಪಟ್ಟಿದ್ದರು. ಕಳೆದ …
Read More »ಮುಖ್ಯಮಂತ್ರಿ B.S.Y.ರಾಜೀನಾಮೆ ನೀಡಲಿ- ಸಿದ್ದರಾಮಯ್ಯ
ಬೆಂಗಳೂರು: ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಸಿಗದೆ 24 ಜನ ರೋಗಿಗಳು ಸಾವಿಗೀಡಾಗಿರುವ ಘಟನೆ ತಿಳಿದು ಸಂಕಟವಾಯಿತು. ಮೃತರ ಶೋಕತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಆಕ್ಸಿಜನ್ ಸಿಗದೆ ಉಂಟಾಗಿರುವ ಸರಣಿ ಸಾವುಗಳ ಮುಂದುವರೆದ ಭಾಗವಿದು. ಈ ಸಾವಿಗೆ …
Read More »ಆಮ್ಲಜನಕ ದುರಂತ: ನಿರ್ಲಕ್ಷ್ಯ ವಹಿಸಿತೇ ಜಿಲ್ಲಾಡಳಿತ?
ಚಾಮರಾಜನಗರ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಪದೇ ಪದೇ ಆಮ್ಲಜನಕದ ಕೊರತೆ ಆಗುತ್ತಿದ್ದರೂ; ಅದರ ಬಗ್ಗೆ ಗಮನ ಹರಿಸದೇ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದ್ದೇ ದುರಂತ ನಡೆಯಲು ಕಾರಣವಾಯಿತೇ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. ಆಮ್ಲಜನಕ ಕೊರತೆಯಾಗಿ ಕೊನೆ ಕ್ಷಣದಲ್ಲಿ ಮೈಸೂರಿನಿಂದ ಬಂದು ಅಥವಾ ಹತ್ತಿರದ ಆಸ್ಪತ್ರೆಗಳಿಂದ ತಂದು ವೈದ್ಯರು ರೋಗಿಗಳಿಗೆ ಆಮ್ಲಜನಕ ವ್ಯವಸ್ಥೆ ಮಾಡಿದ ಪ್ರಸಂಗಗಳು ಸಾಕಷ್ಟಿವೆ. 6 ಸಾವಿರ ಲೀಟರ್ ಸಾಮರ್ಥ್ಯದ ಆಮ್ಲಜನಕ ಘಟಕ ಸ್ಥಾಪನೆಯಾದ ಬಳಿಕ ಒಂದು ವಾರಕ್ಕೆ …
Read More »