ಬೆಂಗಳೂರು: ‘ರಾಜ್ಯದಾದ್ಯಂತ ಅಕ್ರಮ ಗಣಿಗಾರಿಕೆಯನ್ನು ಡ್ರೋನ್ ಮೂಲಕ ಸಮೀಕ್ಷೆ ನಡೆಸಿ ವಿಧಿಸಿದ್ದ ಐದು ಪಟ್ಟು ದಂಡವನ್ನು ಬದಲಿಸಿ, ಸದ್ಯ ಒಂದು ಪಟ್ಟು ಮಾತ್ರ ವಿಧಿಸಲು ನಿರ್ಧರಿಸಲಾಗಿದೆ’ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಚಿಕ್ಕಬಳ್ಳಾಪುರ ಮತ್ತು ಶಿವಮೊಗ್ಗದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಗಳ ನಂತರ ಗಣಿಗಾರಿಕೆ ಕಂಪನಿಗಳ ಪರವಾನಗಿ ಮತ್ತು ದಂಡ ಪ್ರಮಾಣದಲ್ಲಿ ಬದಲಾವಣೆ ಮಾಡಲಾಗಿದೆ’ ಎಂದರು. ‘ಕಾನೂನುಬಾಹಿರ ಗಣಿಗಾರಿಕೆ ನಡೆಯುವ …
Read More »ಸರ್ಕಾರದ ಮಾರ್ಗಸೂಚಿ ವಿಚಾರ-ಅಂಗಡಿ ಮಾಲೀಕರಿಂದ ಆಕ್ರೋಶ
ಧಾರವಾಡ: ಜಿಲ್ಲೆಯ ಜನತೇ ಸರ್ಕಾರದ ಕೊರೊನಾ ಮಾರ್ಗ ಸೂಚಿಗಳ ವಿಷಯದಲ್ಲಿ ಈಗಲೂ ಗೊಂದಲದಲ್ಲಿದ್ದಾರೆ. ನಗರದ ಅಂಗಡಿ ಮಾಲೀಕರು ಪ್ರತಿ ದಿನದಂತೆ ಇವತ್ತು ಅಂಗಡಿಗಳನ್ನು ತೆರೆದಿದ್ದರು. ಆದರೆ ಪೊಲೀಸರು ಬಂದು ಅಂಗಡಿಗಳನ್ನು ಬಂದ್ ಮಾಡಿಸಿದ್ದಾರೆ. ಇದನ್ನು ಕಂಡು ಸರ್ಕಾರದ ವಿರುದ್ಧ ಅಂಗಡಿ ಮಾಲೀಕರು ಆಕ್ರೋಶ ಹೊರಹಾಕಿದ್ದಾರೆ. ಧಾರವಾಡ ಜಿಲ್ಲೆಯ ಪಟ್ಟಣದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಅಗತ್ಯ ವಸ್ತುಗಳ ಅಂಗಡಿಗಳನ್ನು ಹೊರತು ಪಡಿಸಿ, ಬಟ್ಟೆ, ಪಾತ್ರೆ, ಮೊಬೈಲ್ ಸೇರಿ ಹಲವು ಅಂಗಡಿಗಳನ್ನು ಪೊಲೀಸರು ಬಂದ್ …
Read More »ಆಮ್ಲಜನಕವನ್ನು ಎಲ್ಲಿಂದಲಾದರೂ ತಂದು ಸರಬರಾಜು ಮಾಡಿ ; ಸರ್ಕಾರಕ್ಕೆ ಕೋರ್ಟ್ ತಾಕೀತು
ನವದೆಹಲಿ, : ಆಮ್ಲಜನಕವನ್ನು ಭಿಕ್ಷೆ ಬೇಡುತ್ತೀರೋ, ಸಾಲಕ್ಕೆ ತರುತ್ತೀರೋ, ಕದ್ದು ತರುತ್ತೀರೋ ತನ್ನಿ ಎಂದು ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ತಾಕೀತು ಮಾಡಿದೆ. ದೇಶದ ಜನರು ಆಕ್ಸಿಜನ್ ಸಿಗದೆ ಸಾಯುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ನಿಜಕ್ಕೂ ಖೇದದ ಸಂಗತಿ. ಜನರ ಜೀವಕ್ಕೆ ಬೆಲೆ ಇಲ್ಲವೆ? ನೀವು ದೊಡ್ಡ ದುರಂತದತ್ತ ಸಾಗುತ್ತಿದ್ದೀರಿ ಎಂದು ನ್ಯಾಯಾಧೀಶರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಆಮ್ಲಜನಕವನ್ನು ಕೈಗಾರಿಕೆಗಳಿಗೆ ಬಳಸಲು ಅವಕಾಶ ನೀಡಿರುವುದಕ್ಕೆ ಆಕ್ರೋಶಗೊಂಡಿರುವ ದೆಹಲಿ ಹೈಕೋರ್ಟ್ …
Read More »ಶೇ.23ರಷ್ಟು ಡೋಸ್ ಲಸಿಕೆಯನ್ನು ವ್ಯರ್ಥವಾಗಿ ಹಾಳು ಮಾಡಲಾಗಿದೆ
ನವದೆಹಲಿ, : ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಅಭಿಯಾನ ಆರಂಭವಾದ ಜನವರಿ ತಿಂಗಳಿನಿಂದ ಇಂದಿನವರೆಗೂ ಶೇ.23ರಷ್ಟು ಡೋಸ್ ಲಸಿಕೆಯನ್ನು ವ್ಯರ್ಥವಾಗಿ ಹಾಳು ಮಾಡಲಾಗಿದೆ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ವರದಿಯಿಂದ ತಿಳಿದು ಬಂದಿದೆ. ತಮಿಳುನಾಡಿನಲ್ಲಿ ಅತಿಹೆಚ್ಚು ಕೊವಿಡ್-19 ಸೋಂಕಿನ ಲಸಿಕೆಯನ್ನು ವ್ಯರ್ಥ ಮಾಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ತಮಿಳುನಾಡಿನಲ್ಲಿ ಶೇ.12, ಹರಿಯಾಣ ಶೇ.9.74, ಪಂಜಾಬ್ ಶೇ.8.12 ಮಣಿಪುರ ಶೇ.7.8 ಮತ್ತು ತೆಲಂಗಾಣ ಶೇ.7.55ರಷ್ಟು ಲಸಿಕೆಯನ್ನು ವ್ಯರ್ಥವಾಗಿ ಖರ್ಚು ಮಾಡಲಾಗಿದೆ ಎಂದು …
Read More »ಸಿಪಿಐಎಂ ಮುಖಂಡ ಸೀತಾರಂ ಯೆಚೂರಿ ಪುತ್ರ ಕೊರೊನಾಕ್ಕೆ ಬಲಿ
ಗುರುಗ್ರಾಮ, : ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರ ಪುತ್ರ ಆಶೀಶ್ ಯೆಚೂರಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಕೊವಿಡ್ 19 ಸೋಂಕಿನಿಂದ ಬಳಲುತ್ತಿದ್ದ ಆಶೀಶ್ ಅವರಿಗೆ 34 ವರ್ಷವಾಗಿತ್ತು.ಕಳೆದ ಎರಡು ವಾರಗಳಿಂದ ಜೀವನ್ಮರಣ ಹೋರಾಟ ನಡೆಸಿದ್ದ ಆಶೀಶ್ ಕೆಲದಿನಗಳಲ್ಲಿ ಚೇತರಿಕೆ ಹೊಂದುವ ನಿರೀಕ್ಷೆಯಿತ್ತು. ಆದರೆ, ಗುರುಗ್ರಾಮದ ಮೇದಾಂತಾ ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗೆ 5.30ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಆಪ್ತವಲಯ ತಿಳಿಸಿದೆ. ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ …
Read More »ಬ್ರೇಕಿಂಗ್: ಸಿಎಂ ಬಿಎಸ್‌ವೈ ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು,ಏ.22- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದು ಆಸ್ಪತ್ರೆಯಿಂದ ಬಿಡುಗಡೆ ಯಾಗಿದ್ದಾರೆ. ಎರಡನೇ ಬಾರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಪುನಃ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಅವರಿಗೆ ನೆಗೆಟಿವ್ ಬಂದಿರುವುದರಿಂದ ಮಣಿಪಾಲ್ ಆಸ್ಪತ್ರೆಯಿಂದ ಇಂದು ಬಿಡುಗಡೆಯಾದರು. ಕಳೆದ ವಾರ ಯಡಿಯೂರಪ್ಪನವರಿಗೆ ಕೊರೊನಾ ಪಾಸಿಟವ್ ಕಾಣಿಸಿಕೊಂಡಿದ್ದರಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಪಟ್ಟಿದ್ದರು. ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಕೆಲ ದಿನಗಳ ಮಟ್ಟಿಗೆ ಮನೆಯಲ್ಲೇ ಹೋಂ ಕ್ವಾರಂಟೈನ್‍ಗೆ ಒಳಗಾಗಲಿದ್ದಾರೆ ಎಂದು …
Read More »ಬಿಜೆಪಿ ಪಂಚ ಪ್ರಶ್ನೆಗೆ ‘ದಶ ಪ್ರಶ್ನೆ’ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ!
ಬೆಂಗಳೂರು: ಬಿಜೆಪಿ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಬಿಜೆಪಿ ಪಕ್ಷ ಕೇಳಿರುವ ಐದು ಪ್ರಶ್ನೆಗಳಿಗೆ 10 ಪ್ರಶ್ನೆಗಳನ್ನು ಕೇಳುವ ಮೂಲಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಆಡಳಿತ ನಡೆಸುವವರ ಕೆಲಸ ಪ್ರಶ್ನೆ ಕೇಳುವುದಲ್ಲ, ಜನರ ಪ್ರಶ್ನೆಗಳಿಗೆ ಉತ್ತರ ನೀಡುವುದು. ತಮ್ಮದು ವಿರೋಧ ಪಕ್ಷ ಅಲ್ಲ, ಆಡಳಿತಾರೂಢ ಪಕ್ಷ ಎನ್ನುವುದನ್ನು ರಾಜ್ಯ ಬಿಜೆಪಿ ಏನಾದರೂ ಮರೆತುಬಿಟ್ಟಿದೆಯಾ ಹೇಗೆ? ಪ್ರಶ್ನೆ ಕೇಳುವ ಅಷ್ಟೊಂದು ಹುಚ್ಚಿದ್ದರೆ ಮರ್ಯಾದೆಯಿಂದ ರಾಜೀನಾಮೆ …
Read More »ವಾರದ ಸಂತೆಗೆ ಪರ್ಯಾಯ ವ್ಯವಸ್ಥೆ : ಗೋಕಾಕ ವಾಲ್ಮೀಕಿ ಕ್ರೀಡಾಂಗಣಕ್ಕೆ ಸ್ಥಳಾಂತರ
ಗೋಕಾಕ : ಸಾಮಾಜಿಕ ಅಂತರ ಕಾಯ್ದುಕೊಂಡು ವಾರದ ಸಂತೆಯನ್ನು ನಡೆಸಲು ಅನುಕೂಲವಾಗುವಂತೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ನಗರದಲ್ಲಿರುವ ಮಾರುಕಟ್ಟೆಯನ್ನು ವಾಲ್ಮೀಕಿ ಕ್ರೀಡಾಂಗಣಕ್ಕೆ ಸ್ಥಳಾಂತರ ಮಾಡಲಾಗಿದೆ. ಮೈದಾನದಲ್ಲಿ ಸಾಮಾಜಿ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಯ ಸಿಬ್ಬಂದಿ ಗುರುತು( ಮಾರ್ಕಿಂಗ್ ) ಮಾಡಿದ್ದಾರೆ. ಅಂಗಡಿಗಳಿಗೆ ಹಾಗೂ ಗ್ರಾಹಕರಿಗೆ ಮಾರ್ಕಿಂಗ್ ಮಾಡಲಾಗಿದ್ದು, ಆ ವ್ಯಾಪ್ತಿಯಲ್ಲೇ ನಿಂತು ವ್ಯಾಪಾರ- ವಹಿವಾಟು ನಡೆಸಲಾಗುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮಾರ್ಕಿಂಗ್ ಮಾಡಲಾಗಿದ್ದು, ಅಲ್ಲಿಯೇ ನಿಂತು ತರಕಾರಿಗಳನ್ನು ಖರೀದಿ ಮಾಡಬೇಕಾಗಿದೆ. …
Read More »ಸಾರಿಗೆ ನೌಕರರ ಮುಷ್ಕರ ಅಂತ್ಯ : ರಾಜ್ಯಾದ್ಯಂತ ಬಸ್ ಸಂಚಾರ ಆರಂಭ
ಬೆಂಗಳೂರು : ಕಳೆದ 15 ದಿನಗಳಿಂದ ಸಾರಿಗೆ ನೌಕರರು 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ನಡೆಸುತ್ತಿದ್ದ ಮುಷ್ಕರ ಬುಧವಾರ ಅಂತ್ಯವಾಗಿದೆ. ಈ ಬಗ್ಗೆ ಬುಧವಾರ ಮಾಹಿತಿ ನೀಡಿರುವ ಸಾರಿಗೆ ನೌಕರರ ಸಂಘದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, “ಸಂಜೆಯಿಂದಲೇ ಬಸ್ಸುಗಳ ಸಂಚಾರ ಆರಂಭವಾಗಿದೆ. ನಾಳೆಯಿಂದ ಬಸ್ ಸಂಚಾರ ಆರಂಭವಾಗಲಿದೆ” ಎಂದು ತಿಳಿಸಿದ್ದಾರೆ. ಬುಧವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಹೈಕೋರ್ಟ್ ಆದೇಶ ಗೌರವಿಸಿ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತಿದ್ದೇವೆ. ಕೊರೊನಾ …
Read More »ಕಡೆಗೂ ಗೆದ್ದ ಸನ್‌ರೈಸರ್ಸ್, ರಾಹುಲ್ ಬಳಗಕ್ಕೆ ಹ್ಯಾಟ್ರಿಕ್ ಸೋಲು
ಚೆನ್ನೈ: ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟು ಜಯಕ್ಕಾಗಿ ಪರಿತಪಿಸುತ್ತಿದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್-14ರಲ್ಲಿ ಕಡೆಗೂ ಗೆಲುವಿನ ಹಳಿಗೇರಲು ಯಶಸ್ವಿಯಾಯಿತು. ಚೆಪಾಕ್ ಅಂಗಳದ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ತಂಡ 9 ವಿಕೆಟ್‌ಗಳಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿತು. ಮತ್ತೊಂದೆಡೆ, ಕನ್ನಡಿಗ ಕೆಎಲ್ ರಾಹುಲ್ ಬಳಗ ಹ್ಯಾಟ್ರಿಕ್ ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಕಡೇ ಸ್ಥಾನಕ್ಕೆ ಕುಸಿಯಿತು. ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡ, ಖಲೀಲ್ ಅಹಮದ್ …
Read More »