Breaking News

ಭತ್ತ ಕಟಾವು ಯಂತ್ರದ ಬಾಡಿಗೆ ದರ ಗಂಟೆಗೆ ರೂ.1,800 ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಿಬೇಕು.

ದಾವಣಗೆರೆ : ಜಿಲ್ಲೆಯಲ್ಲಿ 2020-21ನೇ ಸಾಲಿನ ಮುಂಗಾರಿನ ಹಂಗಾಮಿನಲ್ಲಿ 66046 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದ್ದು, ಸದ್ಯ ಭತ್ತದ ಬೆಳೆಯು ಬಹುತೇಕ ಕಾಳು ಬೆಳೆಯುವ ಹಂತದಲ್ಲಿರುವುದರಿಂದ ಇನ್ನು 2 ರಿಂದ 3 ವಾರಗಳಲ್ಲಿ ಕಟಾವು ಪ್ರಾರಂಭವಾಗಲಿದೆ. ಜಿಲ್ಲೆಯಲ್ಲಿ ಶೇ.95% ರಷ್ಟು ರೈತರು ಭತ್ತದ ಬೆಳೆಯನ್ನು ಭತ್ತ ಕಟಾವು ಯಂತ್ರಗಳ ಮೂಲಕ ಕಟಾವು ಮಾಡುತ್ತಿದ್ದು, ತಮ್ಮ ಸಮೀಪದ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಲಭ್ಯಯವಿರುವ ಭತ್ತ ಕಟಾವು ಯಂತ್ರಗಳ ಪ್ರಯೋಜನವನ್ನು ಪಡೆಯಬಹುದಾಗಿರುತ್ತದೆ. ಖಾಸಗಿ ಭತ್ತ …

Read More »

ರಾಜ್ಯ ರೈಲ್ವೆ ಖಾತೆ ತೆರವಾಗಿದ್ದು, ಈ ಖಾತೆ ಮೇಲೆ ರಾಜ್ಯದ ಸಂಸದರು ಕಣ್ಣಿಟ್ಟಿದ್ದಾರೆ

ಬೆಳಗಾವಿ:  ಸುರೇಶ್ ಅಂಗಡಿ ಅವರು ಉತ್ತರ ಕರ್ನಾಟಕ ಭಾಗಕ್ಕೆ ಸೇರಿದ ವೀರಶೈವ-ಲಿಂಗಾಯತ ಸಮುದಾಯದ ನಾಯಕರಾಗಿದ್ದರು. ಹೀಗಾಗಿ ಅದೇ ಸಮುದಾಯದ ಸಂಸದರಿಗೆ ಕೇಂದ್ರ ಸಚಿವ ಸ್ಥಾನ ನೀಡಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ನಡುವೆ ವೀರಶೈವ ಲಿಂಗಾಯತ ಸಮುದಾಯದ ಪ್ರಮುಖ ನಾಯಕರಾಗಿರುವ ಸಂಸದ ಪಿ.ಸಿ. ಗದ್ದೀಗೌಡರ್, ಸಂಸದ ಶಿವಕುಮಾರ್ ಉದಾಸಿ, ಸಂಸದ ಕರಡಿ ಸಂಗಣ್ಣ, ಸಂಸದ ಜಿ.ಎಸ್.ಬಸವರಾಜ್ ಹಾಗೂ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರಗೆ ಅವರು …

Read More »

ಕನ್ನಡ ಕಿರುತೆರೆಯ ಖ್ಯಾತ ನಟ ಚಂದು ಬಿ ಗೌಡ ಬಹುಕಾಲದ ಗೆಳತಿ ಶಾಲಿನಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ

ಬೆಂಗಳೂರು : ಚಿತ್ರರಂಗದಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಸ್ಯಾಂಡಲ್ ವುಡ್ ಸೇರಿದಂತೆ ಬೇರೆ ಬೇರೆ ಭಾಷೆಯಲ್ಲಿ ಅನೇಕ ಕಲಾವಿದರು ಹಸೆಮಣೆ ಏರುತ್ತಿದ್ದಾರೆ. ಇದೀಗ ಕನ್ನಡ ಕಿರುತೆರೆಯ ಖ್ಯಾತ ನಟ ಚಂದು ಬಿ ಗೌಡ ಬಹುಕಾಲದ ಗೆಳತಿ ಶಾಲಿನಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ ಗುರುವಾರ (ಅ.29) ನಡೆದ ಮದುವೆ ಸಮಾರಂಭದಲ್ಲಿ ನಟ ಚಂದು ಗೆಳತಿ ಶಾಲಿನಿ ಕೊರಳಿಗೆ ಮಾಂಗಲ್ಯಧಾರಣೆ ಮಾಡಿದ್ದಾರೆ. ಚಂದು ಮತ್ತು ಶಾಲಿನಿ ಸರಳವಾಗಿ, ಶಾಸ್ತ್ರೋಕ್ತವಾಗಿ ಮದುವೆಯಾಗಿದ್ದಾರೆ. ಇಬ್ಬರ …

Read More »

ಉಮೇಶ ಕತ್ತಿ ಮಂತ್ರಿನೇ ಆಗಲಿಲ್ಲ. ಇನ್ನು ಮುಖ್ಯಮಂತ್ರಿ ಹೇಗೆ ಆಗುತ್ತಾರೆ

ಬೆಳಗಾವಿ : ಉಮೇಶ ಕತ್ತಿ ಮಂತ್ರಿನೇ ಆಗಲಿಲ್ಲ. ಇನ್ನು ಮುಖ್ಯಮಂತ್ರಿ ಹೇಗೆ ಆಗುತ್ತಾರೆ ಎಂದು ಮಾಜಿ ಸಂಸದ ರಮೇಶ ಕತ್ತಿ ಅವರು ಪ್ರಶ್ನಿಸಿದ್ದಾರೆ. ಗುರು​ವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಮೇಶ ಕತ್ತಿ ಅವರು, ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾಗಬೇಕೆಂಬುದು ಈ ಭಾಗದ ಜನತೆಯ ಬಯಕೆಯಾಗಿದೆ ಎಂದು ತಿಳಿಸಿದ್ದಾರೆ. ಭೀಕರ ಪ್ರವಾಹ: ‘ಮನೆ ನಿರ್ಮಿಸಿಕೊಳ್ಳದಿದ್ದರೆ ಹಣ ವಾಪಸ್‌’ ಮುಖ್ಯಮಂತ್ರಿ ಸ್ಥಾನಕ್ಕೆ ಉಮೇಶ ಕತ್ತಿ ಹೆಸರು ಮುಂಚೂಣಿಯಲ್ಲಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಮೇಶ …

Read More »

ಉಪಚುನಾವಣೆಯ ಹಿನ್ನೆಲೆಯಲ್ಲಿ ಮುನಿರತ್ನ ಪರ ನಟ ದರ್ಶನ್ ಪ್ರಚಾರಕ್ಕೆ ಆಗಮಿಸಿದರು. ನಾನು ಯಾವುದೇ ಪಕ್ಷ ನೋಡಿ

ಬೆಂಗಳೂರು: ನವೆಂಬರ್​ 3ರಂದು ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಮುನಿರತ್ನ ಪರ ನಟ ದರ್ಶನ್ ಪ್ರಚಾರಕ್ಕೆ ಆಗಮಿಸಿದರು. ನಾನು ಯಾವುದೇ ಪಕ್ಷ ನೋಡಿ ಪ್ರಚಾರಕ್ಕೆ ಹೋಗಲ್ಲ. ವ್ಯಕ್ತಿ ನೋಡಿ ಮುನಿರತ್ನ ಪರ ಪ್ರಚಾರಕ್ಕೆ ಬಂದಿದ್ದೀನಿ ಎಂದು ದರ್ಶನ್ ಹೇಳಿದರು. ಹಾಗಾಗಿ, ಮುನಿರತ್ನ ಪರ ಸ್ಯಾಂಡಲ್​ವುಡ್ ‘ಚಕ್ರವರ್ತಿ’ ಮತಯಾಚಿಸಿದರು. ಆರ್​.ಆರ್​. ನಗರದ ‘ಕುರುಕ್ಷೇತ್ರ’ದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಪ್ರಚಾರಕ್ಕೆ ಇಳಿದ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಹಾಗೂ ನಟಿ ಅಮೂಲ್ಯ ಬಗ್ಗೆ ಶಿವಸ್ವಾಮಿ …

Read More »

ಬ್ಲ್ಯಾಕ್ ಡೇ ಗೆ ಕರೆ ಕೊಟ್ಟ ಮಹಾರಾಷ್ಟ್ರ ಸರ್ಕಾರ…!

ಬೆಳಗಾವಿ- ಕನ್ನಡಿಗರು ಹಬ್ಬದ ದಿನ ರಾಜ್ಯೋತ್ಸವದ ದಿನ ಮಹಾರಾಷ್ಟ್ರ ಸರ್ಕಾರವೇ ಕಪ್ಪು ದಿನ ಆಚರಿಸುವ ಮೂಲಕ ಎಂಈಎಸ್ ಗೆ ಬೆಂಬಲ ನೀಡಲು ನಿರ್ಧರಿಸಿ ಭಾರತದ ಒಕ್ಕೂಟದ ವ್ಯೆವಸ್ಥೆಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿರುವಾಗ ಅದಕ್ಕೆ ತಕ್ಕ ಉತ್ತರ ಕೊಡಬೇಕಾದ ನಮ್ಮ ಸರ್ಕಾರ ಮಲಗಿದೆಯಾ ? ಎನ್ನುವ ಪ್ರಶ್ನೆ ಈಗ ಎದುರಾಗಿದೆ. ಕಪ್ಪು ಪಟ್ಟಿ ಧರಿಸಿ,ಕಪ್ಪು ದಿನ ಆಚರಣೆಗೆ ಬೆಂಬಲ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿ ಈ ಕುರಿತು ಮಹಾರಾಷ್ಟ್ರ ಗಡಿ …

Read More »

ಕೊರೊನಾ ಸಂಕಷ್ಟ ಸಮಯದಲ್ಲಿ ಅಕ್ಕಿ-ಆಹಾರ ಕಿಟ್​ ನೀಡಿರುವುದು ದೊಡ್ಡತನ.ನಟ ದರ್ಶನ್​ ಹೇಳಿದರು.

ಬೆಂಗಳೂರು: ಕೊರೊನಾ ಸಂಕಷ್ಟ ಸಮಯದಲ್ಲಿ ಅಕ್ಕಿ-ಆಹಾರ ಕಿಟ್​ ನೀಡಿರುವುದು ದೊಡ್ಡತನ. ಮುನಿರತ್ನರ ಆ ದೊಡ್ಡತನದಿಂದಲೇ ನಾನು ಪ್ರಚಾರಕ್ಕೆ ಬಂದಿದ್ದೇನೆ ಎಂದು ನಟ ದರ್ಶನ್​ ಹೇಳಿದರು. ಮಾನವೀಯ ದೃಷ್ಟಿಯಿಂದಷ್ಟೇ ಪ್ರಚಾರಕ್ಕೆ ಹೋಗುತ್ತಿದ್ದೇನೆ. ನಾನು ಯಾವುದೇ ಪಕ್ಷ ನೋಡಿ ಪ್ರಚಾರಕ್ಕೆ ಹೋಗುತ್ತಿಲ್ಲ. ವ್ಯಕ್ತಿ ನೋಡಿ ಮುನಿರತ್ನ ಪರ ಪ್ರಚಾರಕ್ಕೆ ಹೋಗುತ್ತಿದ್ದೇನೆ ಎಂದು ದರ್ಶನ್ ಹೇಳಿದರು. ಕೊರೊನಾ ಟೈಮಲ್ಲಿ ಮುನಿರತ್ನ ಅನ್ನ ದಾಸೋಹ ನಡೆಸಿದ್ದಾರೆ. ಲಾಕ್​ಡೌನ್ ಅವಧಿಯಲ್ಲಿ ಅವರ ಸೇವೆಯನ್ನ ನೋಡೋಣ. ಮಾನವೀಯತೆ ನೋಡಿ ಮುನಿರತ್ನ …

Read More »

ಶೆಟ್ಟಿಹಳ್ಳಿಯ ವೇರ್‌ಹೌಸ್ ಬಳಿ ಯುವಕನ ಬರ್ಬರ ಕೊಲೆಯಾಗಿರುವ ಘಟನೆ ನಡೆದಿದೆ.

ಬೆಂಗಳೂರು: ಜಿಲ್ಲೆಯ ಆನೇಕಲ್ ತಾಲೂಕಿನ ಶೆಟ್ಟಿಹಳ್ಳಿಯ ವೇರ್‌ಹೌಸ್ ಬಳಿ ಯುವಕನ ಬರ್ಬರ ಕೊಲೆಯಾಗಿರುವ ಘಟನೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ 25 ವರ್ಷದ V.Y. ವಿನುತ್ ಎಂಬಾತನನ್ನು ಹತ್ಯೆ ಮಾಡಲಾಗಿದೆ.         ಕೆಲಸಕ್ಕೆ ತೆರಳುತ್ತಿದ್ದ ವೇಳೆ ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ ಎಸಗಲಾಗಿದ್ದು ಹಳೇ ದ್ವೇಷದ ಹಿನ್ನೆಲೆಯಲ್ಲಿ ವಿನುತ್ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ವಿನುತ್ ಬೆಸ್ತಮಾನಹಳ್ಳಿ ನಿವಾಸಿ ಎಂದು …

Read More »

IPL ಕ್ರಿಕೆಟ್ ಬೆಟ್ಟಿಂಗ್​ನಲ್ಲಿ ಹಣ ಕಳೆದುಕೊಂಡಿರುವ ಶಂಕೆಯಡಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ

ಬೆಂಗಳೂರು: IPL ಕ್ರಿಕೆಟ್ ಬೆಟ್ಟಿಂಗ್​ನಲ್ಲಿ ಹಣ ಕಳೆದುಕೊಂಡಿರುವ ಶಂಕೆಯಡಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. 20 ವರ್ಷದ ಮಂಜುನಾಥ್ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಕಳೆದ ಒಂದು ವಾರದ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ಮಂಜುನಾಥ್ ಇಂದು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ವಿದ್ಯಾಭ್ಯಾಸಕ್ಕೆಂದು ಅಜ್ಜಿ ಮನೆಗೆ ಬಂದಿದ್ದ ಮಂಜುನಾಥ್ ಕಳೆದ ವಾರ ಇದ್ದಕ್ಕಿದ್ದಂತೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಆಗ, ಕಾರಣ ತಿಳಿದಯದೇ ಇದ್ದ ಕುಟುಂಬಸ್ಥರಿಗೆ …

Read More »

ಬ್ಯಾಂಕಿಂಗ್ ಸೇವೆಗಳಿಗೆ ಸಂಬಂಧಿಸಿದ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ರಾಜ್ಯ ಭಾಷೆಗಳಲ್ಲಿ ನಡೆಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಿರಂತರವಾಗಿ ಒತ್ತಾಯಿಸುತ್ತಾ ಬಂದಿದೆ.

ಬೆಂಗಳೂರು: ಬ್ಯಾಂಕಿಂಗ್ ಸೇವೆಗಳಿಗೆ ಸಂಬಂಧಿಸಿದ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ರಾಜ್ಯ ಭಾಷೆಗಳಲ್ಲಿ ನಡೆಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಿರಂತರವಾಗಿ ಒತ್ತಾಯಿಸುತ್ತಾ ಬಂದಿದೆ. ಈ ಸಂಬಂಧ ಹಲವು ಭಾರಿ ಕೇಂದ್ರ ವಿತ್ತ ಸಚಿವರನ್ನು ಖುದ್ದು ಭೇಟಿ ಮಾಡಿ ಮನವಿ, ಮೊರೆಗಳನ್ನು ಸಲ್ಲಿಸಿದ್ದಾರೆ. ಆದರೂ ಸಹ ಹಳೆಯ ಮಾರ್ಗಸೂಚಿಗಳನ್ವಯ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿರುವ ಐಬಿಪಿಎಸ್​ ಕ್ರಮ ಖಂಡನಾರ್ಹವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಕನ್ನಡ …

Read More »