Breaking News

ಬಕ್ರೀದ್ ಸ್ಪೆಷಲ್: 1.25 ಲಕ್ಷ ರೂ.ಗೆ ಬಂಡೂರು ತಳಿಯ 2 ಟಗರು ಮಾರಾಟ

ಮಂಡ್ಯ: ಬಕ್ರಿದ್ ಹಬ್ಬದ ಹಿನ್ನೆಲೆಯಲ್ಲಿ ಟಗರು, ಕುರಿಗಳ ವ್ಯಾಪಾರ ಜೋರಾಗಿದೆ. ಇದರಲ್ಲಿ ವಿಶೇಷ ಎಂಬಂತೆ ಈ ಬಾರಿ ಬರೋಬರಿ 1.25 ಲಕ್ಷ ರೂ.ಗೆ ಎರಡು ಬಂಡೂರು ತಳಿಯ ಟಗರು ಮಾರಾಟವಾಗಿದೆ. ಮಂಡ್ಯ ತಾಲೂಕು ಸೂನಗನಹಳ್ಳಿಯಲ್ಲಿ ಟಗರುಗಳ ಮಾರಾಟ ಭರ್ಜರಿಯಾಗಿ ನಡೆಯುತ್ತಿದ್ದು ಇಲ್ಲಿ ದೊಡ್ಡ ಮೊತ್ತಕ್ಕೆ ಟಗರು ಸೇಲ್ ಆಗಿದೆ. ಸುಮಾರು ಒಂದು ವರ್ಷದಿಂದ ರೈತ ಶಂಭು ಎನ್ನುವವರು ಸಾಕಿದ್ದ ಜೋಡಿ ಟಗರುಗಳನ್ನು ಭಾರಿ ಮೊತ್ತಕ್ಕೆ ಮಂಡ್ಯದ ಹಾಲಹಳ್ಳಿ ಬಡಾವಣೆಯ ಸಾಬುದ್ದೀನ್ …

Read More »

ಮಹಿಳೆ ಸುಪಾರಿ ಕೊಲೆ ಶಂಕೆ ; ಗಂಡನ ತೀವ್ರ ವಿಚಾರಣೆ

ಉಡುಪಿ: ಇಲ್ಲಿಗೆ ಸಮೀಪದ ಬ್ರಹ್ಮಾವರದ ಉಪ್ಪಿನಕೋಟೆ ಅಪಾರ್ಟ್‌ಮೆಂಟ್‌ನಲ್ಲಿ ಕಳೆದ ಜುಲೈ.12 ರಂದು ಸಂಭವಿಸಿದ ವಿಶಾಲಾ ಗಾಣಿಗ ಎಂಬ ಮಹಿಳೆಯ ಕೊಲೆಗೆ ಸಂಬಂದಿಸಿದಂತೆ ಮಹಿಳೆಯ ಪತಿ ರಾಮಕೃಷ್ಣ ಗಾಣಿಗ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಕರಣದಲ್ಲಿ ತನಿಖೆಗೆ ಪೊಲೀಸರು ನಾಲ್ಕು ತಂಡ ರಚಿಸಿದ್ದು, ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಹೊರ ರಾಜ್ಯದ ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳಿಂದ …

Read More »

ರಾಜ್ಯ ಶಿಕ್ಷಣ ಇಲಾಖೆಯಿಂದ ಬೆಳಗಾವಿ ಡಿಡಿಪಿಐ ತಂಡಕ್ಕೆ ಅಭಿನಂದನಾ ಸಂದೇಶ

ಬೆಳಗಾವಿ–   ಎಸ್ಎಸ್ಎಲ್ ಸಿ ಪರೀಕ್ಷೆಯ ಮೊದಲ ಹಂತದ ಯಶಸ್ಸಿನ ಹಿನ್ನೆಲೆಯಲ್ಲಿ ರಾಜ್ಯ ಶಿಕ್ಷಣ ಇಲಾಖೆ ಬೆಳಗಾವಿ ಡಿಡಿಪಿಐ ಮತ್ತು ಅವರ ಸಂಪೂರ್ಣ ತಂಡಕ್ಕೆ ಅಭಿನಂದನೆ ಸಲ್ಲಿಸಿದೆ. ಈ ಕುರಿತು ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕ ಕೆ. ಎಸ್. ಕರಿಚಣ್ಣವರ ಸಂದೇಶ ಕಳಿಸಿದ್ದಾರೆ. ಅವರ ಸಂದೇಶ ಹೀಗಿದೆ – “ಬೆಳಗಾವಿ ಜಿಲ್ಲೆಯಾದ್ಯಂತ ಇಂದು ದಿ: ೧೯-೦೭-೨೦೨೧ ರಂದು ನಡೆದ SSLC ಪರೀಕ್ಷೆಯ ಯಶಸ್ಸಿಗೆ ಕಾರಣರಾದ ಉಪ ನಿರ್ದೇಶಕರು(ಆಡಳಿತ) ಹಾಗೂ ತಂಡ,  (ಅಭಿವೃದ್ಧಿ) …

Read More »

6 ಬ್ಯಾಗ್‌ ಕೊಂಡೊಯ್ದರು ಎಂದೆ, ಪ್ರಧಾನಿಗೆ ಹಣ ಕೊಂಡೊಯ್ದರು ಎಂದೆನೇ? ಎಚ್‌ಡಿಕೆ

ಬೆಂಗಳೂರು: ‘ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ದೆಹಲಿಗೆ ಹೋಗುವಾಗ ವಿಶೇಷ ವಿಮಾನದಲ್ಲಿ ಆರು ಬ್ಯಾಗ್‌ಗಳಲ್ಲಿ ತೆಗೆದುಕೊಂಡು ಹೋಗಿದ್ದು ಏನು ಎಂದು ನಾನು ಕೇಳಿದ್ದೆ. ಪ್ರಧಾನಿಗೆ ಹಣ ಕೊಂಡೊಯ್ದಿದ್ದಾರೆ ಎಂದು ನಾನು ಹೇಳಿದ್ದೇನೆಯೇ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು. ಜೆಡಿಎಸ್‌ ಕಚೇರಿ ಜೆ.ಪಿ. ಭವನದಲ್ಲಿ ಸೋಮವಾರ ವಿವಿಧ ಜಿಲ್ಲೆಗಳ ಪಕ್ಷದ ಮುಖಂಡರ ಸಭೆ ನಡೆಸುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ತಮ್ಮ ಹೇಳಿಕೆ ಕುರಿತು …

Read More »

3 ದಿನಗಳಲ್ಲಿ ದೇವಸ್ಥಾನಗಳಲ್ಲಿ ಎಲ್ಲ ಸೇವೆಗೆ ಅವಕಾಶ: ಕೋಟ ಶ್ರೀನಿವಾಸ ಪೂಜಾರಿ

ದೇವಸ್ಥಾನಗಳಲ್ಲಿ ಎಲ್ಲ ಸೇವೆಗಳು ಮತ್ತು ಅನ್ನಪ್ರಸಾದ ವಿತರಣೆ ಆರಂಭಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿದ್ದು, ಮುಂದಿನ ಮೂರು ದಿನಗಳಲ್ಲಿ ಅನುಮತಿ ನೀಡಲಾಗು ವುದು ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಸೋಮವಾರ ಕೊರ್ಗಿ ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿದ ಅವರು ಉದಯವಾಣಿ ಜತೆ ಮಾತನಾಡಿದರು. ಧ್ವನಿ ಸುರುಳಿ ಬಗ್ಗೆ ಶಂಕೆೆ ಬಿಜೆಪಿ ರಾಜಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಸಾಮಾನ್ಯ ಕಾರ್ಯ ಕರ್ತನಾಗಿ ಬಂದು ರಾಜ್ಯದ …

Read More »

ಗೋಕಾಕ-ಮೂಡಲಗಿ ತಾಲೂಕುಗಳಲ್ಲಿ 7 ಹಾಲು ಶಿಥಿಲೀಕರಣ ಘಟಕಗಳು ಇಷ್ಟರಲ್ಲಿಯೇ ಆರಂಭ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಜಿಲ್ಲಾ ಹಾಲು ಒಕ್ಕೂಟಕ್ಕೆ ಹಾಲು ಪೂರೈಸುತ್ತಿರುವ ರೈತ ಕಲ್ಯಾಣ ಸಂಘದ ಸದಸ್ಯರುಗಳ 16 ವಾರಸುದಾರರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇತ್ತೀಚೆಗೆ ತಲಾ 10 ಸಾವಿರ ರೂ.ಗಳ ಸಹಾಯಧನದ ಚೆಕ್‍ಗಳನ್ನು ವಿತರಿಸಿದರು. ಹಾಲು ಒಕ್ಕೂಟಕ್ಕೆ ಹಾಲು ಪೂರೈಕೆ ಮಾಡುತ್ತಿರುವ 16 ಜನರು ಮೃತಪಟ್ಟಿದ್ದರಿಂದ ಅವರ ಕುಟುಂಬಗಳ ವಾರಸುದಾರರಿಗೆ ಜಿಲ್ಲಾ ಹಾಲು ಒಕ್ಕೂಟದಿಂದ ಚೆಕ್‍ಗಳನ್ನು ವಿತರಿಸಿದರು. ಜೊತೆಗೆ ಗುರ್ಲಾಪೂರ ಹಾಲು ಉತ್ಪಾದಕರ ಸಹಕಾರಿ ಸಂಘದ ಸಿಬ್ಬಂದಿಯೋರ್ವ …

Read More »

ಯಡಿಯೂರಪ್ಪ ಅವರೇ ನಿಮಗೆ ವಯಸ್ಸಾಗಿದೆ. ಯಾರಿಗಾದರು ಸಿಎಂ ಪಟ್ಟ ಕಟ್ಟಿ ನೀವು ಹಿಂದಕ್ಕೆ ಸರಿಯಿರಿ.: ನಾಗನ ಗೌಡ

ಯಾದಗಿರಿ: ಬಿಎಸ್ ಯಡಿಯೂರಪ್ಪ ಅವರೇ ನಿಮಗೆ ವಯಸ್ಸಾಗಿದೆ. ಯಾರಿಗಾದರು ಸಿಎಂ ಪಟ್ಟ ಕಟ್ಟಿ ನೀವು ಹಿಂದಕ್ಕೆ ಸರಿಯಿರಿ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ. ಸೂಕ್ತವಾಗಿ ಅಧಿಕಾರ ಬಿಟ್ಟರೆ ಚೆನ್ನಾಗಿರುತ್ತದೆ. ನೀವು ರಾಜೀನಾಮೆ ನೀಡದಿದ್ದರೆ ರಾಜ್ಯದ ಜನರು ದಂಗೆ ಏಳುತ್ತಾರೆ ಅಂತ ಜೆಡಿಎಸ್ ಶಾಸಕ ನಾಗನಗೌಡ ಹೇಳಿದ್ದಾರೆ. ಈ ಬಗ್ಗೆ ಯಾದಗಿರಿಯಲ್ಲಿನ ತಮ್ಮ ಕಚೇರಿಯಲ್ಲಿ ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಯಾರಿಗಾದರೂ ಸಲಹೆಗಾರರಾಗಿ, ಬಿಎಸ್ ವೈ ಸಿಎಂ ಸ್ಥಾನ …

Read More »

ಸಿಎಂ ಹುದ್ದೆ ಖಾಲಿ ಇದ್ರೆ ನೆಕ್ಸ್ಟ್ ನಾನೇ ಉಮೇಶ್ ಕತ್ತಿ

ಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ವದಂತಿ ಬೆನ್ನಲ್ಲೇ ಆಹಾರ ಸಚಿವ ಉಮೇಶ್ ಕತ್ತಿ ಹೊಸ ಬಾಂಬ್ ಸಿಡಿಸಿದ್ದು, ಸಿಎಂ ಹುದ್ದೆ ಖಾಲಿ ಇದ್ರೆ ನೆಕ್ಸ್ಟ್ ನಾನೇ ಇದ್ದೇನೆ ಎಂದು ಹೇಳುವ ಮೂಲಕ ಸಿಎಂ ಸ್ಥಾನದ ಆಸೆಯನ್ನು ತೇಲಿಬಿಟ್ಟಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಕತ್ತಿ, ಸಿಎಂ ಹುದ್ದೆ ಖಾಲಿಯಾದರೆ ನಂತರ ನಾನೇ ಇದ್ದೇನೆ. ಮುಖ್ಯಮಂತ್ರಿಯಾಗಲು ನನಗೆ ಎಲ್ಲಾ ಅರ್ಹತೆಗಳಿವೆ. ನನ್ನ ಮೇಲೆ ಯಾವುದೇ ಕಳಂಕದ ಆರೋಪಗಳು ಇಲ್ಲ, 8 ಬಾರಿ ಶಾಸಕನಾಗಿ ಕೂದ …

Read More »

ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ ಎಂ.ಜೆ. ನೇಮಕ

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಇಲ್ಲಿನ ಸದಾಶಿವ ನಗರದ ಪ್ರದೀಪ ಎಂ.ಜೆ. ಇವರನ್ನು ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿ (ಆಡಳಿತ) ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ಅವರು ಆದೇಶ ಹೊರಡಿಸಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಸತೀಶ ಜಾರಕಿಹೊಳಿ ಅವರು ಪ್ರದೀಪ ಎಂ.ಜೆ. ಅವರಿಗೆ ಆದೇಶ ಪ್ರತಿ ವಿತರಿಸಿದರು. ನಂತರ ಮಾತನಾಡಿದ ಸತೀಶ ಜಾರಕಿಹೊಳಿ ಅವರು, …

Read More »

ವಿದ್ಯಾಕಾಶಿ ಧಾರವಾಡದಲ್ಲಿ SSLC ಪರೀಕ್ಷೆ : ವಿದ್ಯಾರ್ಥಿಗಳಿಗೆ ಚಾಕೊಲೇಟ್ ‌ಸ್ವಾಗತ

ಧಾರವಾಡ : ಜಿಲ್ಲೆಯಲ್ಲಿ ಎಸ್‌ಎಸ್‌ಎಲಸಿ‌ ಪರೀಕ್ಷೆ ಆರಂಭಗೊಂಡಿದ್ದು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ ಶುಭ ಹಾರೈಸಿದ ಕೆಲವು ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಗೆ ರೆಡ್ ಕಾರ್ಪೆಟ್ ಹಾಸಿ, ಚಾಕೊಲೇಟ್ ನೀಡಿ ಸ್ವಾಗತಿಸಿ ಗಮನ ಸೆಳೆದಿವೆ. ಇಲ್ಲಿನ.ಮಾಳಮಡ್ಡಿಯಲ್ಲಿರುವ ಕೆ.ಇ.ಬೋರ್ಡ್ ಶಾಲೆಯ ಆಡಳಿತ ಮಂಡಳಿಯ ಸದಸ್ಯರೆಲ್ಲಾ ಪರೀಕ್ಷೆ ಬರೆಯಲು ಬಂದ ಎಲ್ಲಾ ವಿದ್ಯಾರ್ಥಿಗಳಿಗೆ ಚಾಕೊಲೇಟ್ ನೀಡಿ ಅವರಿಗೆ ಸ್ವಾಗತಿಸಿದರು. ಶಾಲೆಯ ದ್ವಾರ ಬಾಗಿಲಿಗೆ ಬಲೂನಿನಿಂದ ಅಲಂಕಾರ ಮಾಡಿ, ತಳಿರು ಕಟ್ಟಿಸಿಂಗರಿಸಲಾಗಿತ್ತು. ಕೋವಿಡ್ ಬಗ್ಗೆ ಪರೀಕ್ಷಾರ್ಥಿಗಳು‌ಅಂಜಿಕೊಳ್ಳುವ ಅಗತ್ಯವಿಲ್ಲ. …

Read More »