Breaking News

ರಾಜ್ಯದಲ್ಲಿ ಕೊರೊನಾ ಕ್ರಿಮಿ ಹಾವು ಏಣಿ ಆಟ ಆಡುತ್ತಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕ್ರಿಮಿ ಹಾವು ಏಣಿ ಆಟ ಆಡುತ್ತಿದೆ. ಸೋಂಕಿತರ ಸಂಖ್ಯೆ ಕಡಿಮೆಯಾಗಿ ಇನ್ನೇನು ಕೊರೊನಾ ಹಾವಳಿ ಕಡಿಮೆಯಾಯಿತು ಅಂದುಕೊಳ್ಳುವಷ್ಟರಲ್ಲೇ ಮತ್ತೆ ಧುತ್ತನೆ ಕಾಣಿಸಿಬಿಡುತ್ತಿದೆ ಈ ಕ್ರಿಮಿ. ಇದು ಸರ್ಕಾರಕ್ಕೂ ತಲೆಬೇನೆಯಾಗಿದೆ. ಜನಾನೂ ಹೈರಾಣಗೊಂಡಿದ್ದಾರೆ. ಈ ಮಧ್ಯೆ ಕೊವಿಡ್ ಉಸ್ತುವಾರಿಯನ್ನು ಏಕಾಂಗಿಯಾಗಿ ಒಬ್ಬರ ಹೆಗಲಿಗೆ ಜವಾಬ್ದಾರಿ ವಹಿಸಲಾಗಿದ್ದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್​ ಕೊರೊನಾ ಕ್ರಿಮಿಯನ್ನು ಕಟ್ಟಿಹಾಕಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ಆದಷ್ಟು …

Read More »

ಹಿರಿಯ ಅಧಿಕಾರಿಯ ಆಕ್ರೋಶಕ್ಕೆ ಬೇಸತ್ತು ಪೊಲೀಸ್​ ಅಧಿಕಾರಿಯೊಬ್ಬರು ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಬಳ್ಳಾರಿ: ಹಿರಿಯ ಅಧಿಕಾರಿಯ ಆಕ್ರೋಶಕ್ಕೆ ಬೇಸತ್ತು ಪೊಲೀಸ್​ ಅಧಿಕಾರಿಯೊಬ್ಬರು ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿಬಂದಿದೆ. ಹಂಪಿ Dy. SP ಎಸ್.ಎಸ್. ಕಾಶಿಗೌಡ ಅಧಿಕಾರಿಗಳ ಆಕ್ರೋಶಕ್ಕೆ ಬೇಸತ್ತು ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿಬಂದಿದೆ.  DG&IGPಗೆ ರಾಜೀನಾಮೆ ಸಲ್ಲಿಸಿದ Dy. SP ಕಾಶಿಗೌಡ IGP ನಂಜುಂಡಸ್ವಾಮಿ ರಾಜೀನಾಮೆ ನೀಡುವಂತೆ ಹೇಳಿದ ಹಿನ್ನೆಲೆ ರಾಜೀನಾಮೆ ನೀಡಿದ್ದೇನೆ ಎಂದು ಈ ಬಗ್ಗೆ ಪೊಲೀಸ್ WhatsApp ಗ್ರೂಪ್​ನಲ್ಲಿ ಬರೆದುಕೊಂಡಿದ್ದಾರೆ. ಏನಿದು ರಾಜೀನಾಮೆ ಪ್ರಕರಣ? ಹಂಪಿ ಸುತ್ತಮುತ್ತ …

Read More »

ರಸ್ತೆ ದಾಟುತ್ತಿದ್ದ ಜಿಂಕೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸಾವನ್ನಪ್ಪಿರೋ ಘಟನೆ

ಮೈಸೂರು: ರಸ್ತೆ ದಾಟುತ್ತಿದ್ದ ಜಿಂಕೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ನಾಗಾಪುರ ಬಳಿ ನಡೆದಿದೆ. ಹುಣಸೂರು-ನಾಗರಹೊಳೆ ರಸ್ತೆಯಲ್ಲಿರುವ ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ ಬಳಿ ಅವಘಡ ಸಂಭವಿಸಿದೆ. ಬೈಕ್​ ಡಿಕ್ಕಿ ಹೊಡೆದ ರಭಸಕ್ಕೆ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿದೆ. ಇನ್ನು ಬೈಕ್​ ಸವಾರ ಸಂತೋಷ್​ಗೆ ಗಾಯಗಳಾಗಿದ್ದು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Read More »

ನಗರದಲ್ಲಿ ಬೆಳ್ಳಂಬೆಳಗ್ಗೆ ನಿವೃತ್ತ ಪ್ರೊಫೆಸರ್​ನನ್ನು ಕೊಲೆಗೈದಿರುವ ಘಟನೆ ಲಿಂಗರಾಜ ನಗರದಲ್ಲಿ ನಡೆದಿದೆ.

ಹುಬ್ಬಳ್ಳಿ: ನಗರದಲ್ಲಿ ಬೆಳ್ಳಂಬೆಳಗ್ಗೆ ನಿವೃತ್ತ ಪ್ರೊಫೆಸರ್​ನನ್ನು ಕೊಲೆಗೈದಿರುವ ಘಟನೆ ಲಿಂಗರಾಜ ನಗರದಲ್ಲಿ ನಡೆದಿದೆ. ಚಾಕುವಿನಿಂದ ಇರಿದು ನಿವೃತ್ತ ಪ್ರೊಫೆಸರ್ ಶಂಕ್ರಪ್ಪ ಮುಶನ್ನವರ ಕೊಲೆ ಮಾಡಲಾಗಿದೆ. ಶಂಕ್ರಪ್ಪ ಗದಗ ಜಿಲ್ಲೆಯ ಕಾನೂನು ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸಿದ್ದು ಇತ್ತೀಚೆಗೆ ನಿವೃತ್ತಿ ಪಡೆದು ಹುಬ್ಬಳ್ಳಿಯಲ್ಲಿ ನೆಲೆಸಿದ್ದರು ಎಂದು ತಿಳದುಬಂದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಳಿಯನೇ ಕೊಲೆ ಮಾಡಿರುವ ಶಂಕೆ‌ ವ್ಯಕ್ತವಾಗಿದೆ. ಸ್ಥಳಕ್ಕೆ ವಿದ್ಯಾನಗರ ಠಾಣೆ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಶಂಕ್ರಪ್ಪರ …

Read More »

ಪೊಲೀಸರ ಮೇಲೂ ತಲವಾರು ಬೀಸಿದ ಬಂಟ್ವಾಳ ಹತ್ಯೆ ಪ್ರಕರಣದ ಆರೋಪಿ | ಆರೋಪಿಯ ಮೇಲೆ ಪೊಲೀಸರಿಂದ ಫೈರಿಂಗ್

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮೆಲ್ಕಾರ್ ನಲ್ಲಿ ನಿನ್ನೆ ರಾತ್ರಿ ಉಮರ್ ಫಾರೂಕ್ ಎಂಬಾತನನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು. ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಪ್ರಮುಖ ಆರೋಪಿ ಖಲೀಲ್ ಹಾಗೂ ಆತನ ಇಬ್ಬರು ಸಹಚರರು ಬೆಂಗಳೂರಿಗೆ ತೆರಳಲು ಯತ್ನಿಸುತ್ತಿರುವ ಮಾಹಿತಿ ಆಧರಿಸಿ ಪೊಲೀಸರು ಅವರನ್ನು ಬೆನ್ನಟ್ಟಿ ಹೋಗಿದ್ದು, ಗುಂಡ್ಯ ಸಮೀಪದಲ್ಲಿ ಖಲೀಲ್ ಪೊಲೀಸರ ಮೇಲೆ ತಲವಾರು ಬೀಸಿದ್ದಾನೆ ಎಂದು …

Read More »

ರಾಜ್ಯದಲ್ಲಿ ಅಕ್ಟೋಬರ್ 27 ರವರೆಗೆ ಭಾರೀ ಮಳೆ,ಬೆಂಗಳೂರಿನಲ್ಲಿ ಇನ್ನೆರಡು ದಿನ ಮಳೆ ಆರ್ಭಟ ಮುಂದುವರಿಯಲಿದೆ

ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್ 27ರವರೆಗೆ ಭಾರೀ ಮಳೆಯಾಗುತ್ತದೆ. ಬೆಂಗಳೂರಿನಲ್ಲಿ ಇನ್ನೆರಡು ದಿನ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಆಯ್ತು, ಈಗ ಬೆಂಗಳೂರು ಸರದಿ. ಮುಂಬೈ, ಹೈದರಾಬಾದ್ ರೀತಿ ಬೆಂಗಳೂರು ಕೂಡ ಮುಳುಗುತ್ತಾ ಎಂಬ ಆತಂಕ ಸದ್ಯ ಎದುರಾಗಿದೆ. ಅಕ್ಟೋಬರ್ ತಿಂಗಳ ಈ ಮಳೆ ಕಂಟಕ ಇನ್ನೆಷ್ಟು ದಿನ ಅನ್ನೋ ಪ್ರಶ್ನೆ ಮೂಡಿದೆ. ಈ ಮಧ್ಯೆ ಮಳೆ ಭವಿಷ್ಯದ ಮಾಹಿತಿ …

Read More »

ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ

ಇಸುವಾ(ಬಿಹಾರ),ಅ.23- ಅತ್ತ ಎನ್‍ಡಿಎ ಪರವಾಗಿ ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರ ಚುನಾವಣೆಗಾಗಿ ಪಾಂಚಜನ್ಯ ಮೊಳಗಿಸಿದ್ದರೆ, ಇತ್ತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರ್‍ಜೆಡಿ ನೇತೃತ್ವದ ಮೈತ್ರಿಕೂಟಕ್ಕಾಗಿ ರಣಕಹಳೆ ಊದಿದ್ದಾರೆ. ಇಸುವಾ ಕ್ಷೇತ್ರದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಲಡಾಕ್‍ನಲ್ಲಿ ಚೀನಿ ಸೈನಿಕರು ಗಡಿಯೊಳಗೆ ನುಸುಳಿ ಹಿಂಸಾಚಾರ …

Read More »

ಪ್ರತಿ ತಿಂಗಳು ಪತಿಗೆ 2 ಸಾವಿರ ಜೀವನಾಂಶ ನೀಡಿ – 58ರ ಪತ್ನಿಗೆ ಕೋರ್ಟ್ ಆದೇಶ

ಲಕ್ನೋ: ಪತಿಗೆ ಪ್ರತಿ ತಿಂಗಳು 2 ಸಾವಿರ ರೂ. ಜೀವನಾಂಶ ನೀಡುವಂತೆ 58 ವರ್ಷದ ಮಹಿಳೆಗೆ ಕೋರ್ಟ್ ಆದೇಶಿಸಿದೆ.ಮುಜಾಫರ್ ನಗರ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದ್ದು, 62 ವರ್ಷದ ಕಿಶೋರಿ ಲಾಲ್ ಸೊಹಂಕರ್ ಟೀ ಅಂಗಡಿ ನಡೆಸುತ್ತಿದ್ದು, ಇವರಿಗೆ ಬೇರೆ ಯಾವುದೇ ಆದಾಯ ಮೂಲವಿಲ್ಲ. ಆದರೆ 58 ವರ್ಷದ ಇವರ ಪತ್ನಿ ಮುನ್ನಿ ದೇವಿ ಸೇನೆಯಿಂದ ನಿವೃತ್ತಿ ಹೊಂದಿದವರಾಗಿದ್ದಾರೆ. ಹೀಗಾಗಿ ಇವರಿಗೆ 12 ಸಾವಿರ ರೂ. ಪೆನ್ಷನ್ ಬರುತ್ತದೆ. ಇದರಲ್ಲಿ …

Read More »

ರ‍್ಯಾಶ್ ಡ್ರೈವಿಂಗ್ ಮಾಡುವವರಿಗೆ ಭಾರೀ ದಂಡದ ಜೊತೆ ಜೈಲು ಶಿಕ್ಷೆ

ಬೆಂಗಳೂರು: 4 ವರ್ಷ ಮೇಲ್ಪಟ್ಟ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ. ಇಲ್ಲದಿದ್ರೆ ದಂಡದ ಜೊತೆ ಡಿಎಲ್ ಸಸ್ಪೆಂಡ್ ಮಾಡುವ ಆದೇಶ ಹೊರಡಿಸಿದ್ದ ಸಾರಿಗೆ ಇಲಾಖೆ ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದೆ. ರ‍್ಯಾಶ್ ಡ್ರೈವಿಂಗ್ ಮಾಡುವವರಿಗೆ ಭಾರೀ ದಂಡದ ಜೊತೆ ಜೈಲು ಶಿಕ್ಷೆ ವಿಧಿಸುವ ಸಂಬಂಧ ಆದೇಶ ಹೊರಡಿಸಿದೆ. ವೀಲಿಂಗ್, ಸೈಲೆನ್ಸರ್ ಅಲ್ಟ್ರೇಷನ್, ಅಡ್ಡಾದಿಡ್ಡಿ ಚಾಲನೆ, ಅಪಾಯಕಾರಿ ಚಾಲನೆ ಮಾಡಿದರೆ ಅಪರಾಧ ದಂಡ ಸಂಹಿತೆ(ಸಿಆರ್‌ಪಿಸಿ) ಸೆಕ್ಷನ್ 107ರ ಆಡಿ ಕೇಸ್ …

Read More »

ಕೊರೊನಾ ವೈರಸ್‍ಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಲಸಿಕೆ ಸಿಗುವ ಸಾಧ್ಯತೆಯಿದೆ.

ನವದೆಹಲಿ: ಕೊರೊನಾ ವೈರಸ್‍ಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಲಸಿಕೆ ಸಿಗುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಈಗಲೇ ಕೇಂದ್ರ ಸರ್ಕಾರ ಲಸಿಕೆಗೆ ಹಂಚಿಕೆ ಮಾಡಲು ಸಿದ್ಧತೆ ನಡೆಸುತ್ತಿದೆ. ಯಾವೆಲ್ಲ ಲಸಿಕೆ? ಇಂಗ್ಲೆಂಡಿನ ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯದ ಲಸಿಕೆ ದೇಶದಲ್ಲಿ ಮೊದಲು ಲಭ್ಯವಾಗಬಹುದು. ಈಗಾಗಲೇ ಪುಣೆಯ ಸೀರಂ ಸಂಸ್ಥೆ ಮೂರನೇ ಹಂತದ ಲಸಿಕೆ ಪ್ರಯೋಗ ನಡೆಸಿದೆ. ಇದರ ಜೊತೆ ಜೊತೆಗೆ 30 ಕೋಟಿ ಡೋಸ್ ಉತ್ಪಾದಿಸಲು ತಯಾರಿ ನಡೆಸಿದೆ. ರಷ್ಯಾದ ಸ್ಟುಟ್ನಿಕ್ ವಿ ಲಸಿಕೆ …

Read More »