Breaking News

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಆಲಗೂರು ಬಳಿ ಭೀಕರ ಸರಣಿ ಅಪಘಾತ

ಬಾಗಲಕೋಟೆ, ಫೆಬ್ರವರಿ 01: ಬಾಗಲಕೋಟೆ (Bagalkot) ಜಿಲ್ಲೆಯ ಜಮಖಂಡಿ (Jamakandi) ತಾಲೂಕಿನ ಆಲಗೂರು ಗ್ರಾಮದ ಬಳಿ ಸಂಭವಿಸಿದ ಸರಣಿ‌ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಮಹಾಂತೇಶ್ ಹೊನಕಟ್ಟಿ (35, ಬೆಳಗಾವಿ ಜಿಲ್ಲೆಯ ಅರಬಾವಿ ನಿವಾಸಿ ಭೀಮಪ್ಪ ಗಂಟೆಣ್ಣವರ (೪೨), ಜಮಖಂಡಿ ತಾಲ್ಲೂಕಿನ ಜಂಬಗಿ ಬಿಕೆ ಗ್ರಾಮದ ನಿವಾಸಿ ಆನಂದ ಬಾಡಗಿ (22) ಮೃತ ದುರ್ದೈವಿಗಳು.ನಸುಕಿನ ಜಾವ ಜಮಖಂಡಿ‌ಯಿಂದ ವಿಜಯಪುರಕ್ಕೆ ಟಾಟಾ ಏಸ್ ವಾಹನ ಹೊರಟಿತ್ತು. ಕಾರು ವಿಜಯಪುರದಿಂದ ಜಮಖಂಡಿಗೆ ಬರುತ್ತಿತ್ತು. ಕಾರು ಜಾಗೂ …

Read More »

ಸಚಿನ್ ಬಸವಂತ್ ಮಂಡೆಡ್ ಅಲಿಯಾಸ್ ಮಂಡೆದಾರ್ 2 ಕೋಟಿ 50 ಲಕ್ಷ 12 ಸಾವಿರದ 559 ರೂಪಾಯಿ ಪತ್ತೆ

ಲೋಕಾ ದಾಳಿ  ಸಚಿನ್ ಬಸವಂತ್ ಮಂಡೆಡ್ ಅಲಿಯಾಸ್ ಮಂಡೆದಾರ್, ಸಬ್ ರಿಜಿಸ್ಟಾರ್, ಬೆಳಗಾವಿ ಉತ್ತರ, ಬೆಳಗಾವಿ ಬೆಳಗಾವಿ ಜಿಲ್ಲೆಯ ಒಟ್ಟು 5 ಸ್ಥಳಗಳಲ್ಲಿ ಶೋಧ ಕಾರ್ಯ ಮಾಡಲಾಗಿದೆ. ಅಧಿಕಾರಿ ಒಟ್ಟು ಸ್ಥಿರಾಸ್ತಿ ಅಂದಾಜು ಮೌಲ್ಯ 58 ಲಕ್ಷ. 1 ನಿವೇಶನ, 1 ನಿರ್ಮಾಣ ಹಂತದ ವಾಸದ ಮನೆ. ಮತ್ತು ಚರಾಸ್ತಿ ಮೌಲ್ಯ 1 ಕೋಟಿ 92 ಲಕ್ಷ 12 ಸಾವಿರದ 559 ರೂಪಾಯಿ, 1 ಲಕ್ಷ 35 ಸಾವಿರ ನಗದು, …

Read More »

ಮೋದಿ ಸರ್ಕಾರದ ಬಜೆಟ್​ಗೆ ಕೌಂಟ್‌ಡೌನ್

ನವದೆಹಲಿ, (ಜನವರಿ 31): ಈಗಾಗಲೇ ನಿನ್ನೆಯಿಂದ (ಜನವರಿ 31) ಬಜೆಟ್ ಅಧಿವೇಶನ ಶುರುವಾಗಿದ್ದು, ಮೊದಲ ದಿನ ರಾಷ್ಟ್ರಪತಿ ದ್ರೌಪತಿ ಮುರ್ಮು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಇದಾದ ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉಭಯ ಸದನದಲ್ಲೂ ಆರ್ಥಿಕ ಸಮೀಕ್ಷಾ ವರದಿ ಮಂಡಿಸಿದ್ದು,. 2024-25 ರ ಆರ್ಥಿಕ ಸಮೀಕ್ಷೆಯ ಪ್ರಕಾರ 2025-26 ಹಣಕಾಸು ವರ್ಷದಲ್ಲಿ ಭಾರತದ GDP ಬೆಳವಣಿಗೆಯು 6.3% ಮತ್ತು 6.8% ರ ನಡುವೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ. …

Read More »

ಭಾರತ ಬಹುತ್ವದ ಪ್ರಜಾಪ್ರಭುತ್ವವಾದಿ ದೇಶ: ಒಂದು ದರ್ಮದ ರಾಷ್ಟ್ರ ಮಾಡಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಡಗು : ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು. ಅವರು ಇಂದು ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಆಯೋಜಿಸಲಾಗಿದ್ದ ಭಾಗಮಂಡಲದ ಹತ್ತಿರ ಮಡಿಕೇರಿ ಮತ್ತು ತಲಕಾವೇರಿ ಮತ್ತು ನಾಪೋಕ್ಲು –ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ …

Read More »

ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಅಥವಾ ವೈಜಾಗ್ ಸ್ಟೀಲ್ ಕಂಪನಿಯನ್ನು ₹11,440 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲಾಗುವುದು ಎಂದು ಕೇಂದ್ರದ ಉಕ್ಕು -ಬೃಹತ್ ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಿಸಿದರು.

ವಾರ್ಷಿಕ 7.3 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ ನವದೆಹಲಿ: ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಅಥವಾ ವೈಜಾಗ್ ಸ್ಟೀಲ್ ಕಂಪನಿಯನ್ನು ₹11,440 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲಾಗುವುದು ಎಂದು ಕೇಂದ್ರದ ಉಕ್ಕು -ಬೃಹತ್ ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಿಸಿದರು. ಇದು ಐತಿಹಾಸಿಕ ನಿರ್ಧಾರ ಎಂದು ಬಣ್ಣಿಸಿರುವ ಕುಮಾರಸ್ವಾಮಿ ಅವರು; ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ …

Read More »

ಸ್ಯಾಂಡಲ್‌ವುಡ್ ಸ್ಟಾರ್ಸ್ ಶೂಟಿಂಗ್ ಗೆ ಬ್ರೇಕ್ ಹಾಕಿ ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಮೈದಾನಕ್ಕೆ ಇಳಿಯೋ ಸಮಯ ಮತ್ತೆ ಬಂದಿದೆ.

ಸ್ಯಾಂಡಲ್‌ವುಡ್ ಸ್ಟಾರ್ಸ್ ಶೂಟಿಂಗ್ ಗೆ ಬ್ರೇಕ್ ಹಾಕಿ ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಮೈದಾನಕ್ಕೆ ಇಳಿಯೋ ಸಮಯ ಮತ್ತೆ ಬಂದಿದೆ. ಸಿಸಿಎಲ್ 11ನೇ ಸೀಸನ್‌ಗೆ ದಿನಗಣನೆ ಶುರುವಾಗಿದ್ದು, ಇದೇ ಫೆಬ್ರವರಿ 8ರಿಂದ ಸಿಸಿಎಲ್ 11ನೇ ಸೀಸನ್ ರಂಗೇರುತ್ತಿದೆ. ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ. ಕರ್ನಾಟಕ ಬುಲ್ಡೋಜರ್ಸ್ ತಂಡವನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮುನ್ನಡೆಸಲಿದ್ದು, ತಂಡದ ಮಾಲೀಕರಾಗಿ ಅಶೋಕ್ ಖೇಣಿ ಸಾಥ್ ಕೊಡುತ್ತಿದ್ದಾರೆ. ಕಳೆದ ಬಾರಿ ರನ್ನರ್ ಅಪ್ ಆಗಿ …

Read More »

ರಾಕ್ಷಸ ಸಿನಿಮಾಗೆ ಸೋನಲ್ ಮೊಂಥೆರೋ ನಾಯಕಿ…ಶಿವರಾತ್ರಿಗೆ ಪ್ರಜ್ವಲ್ ದೇವರಾಜ್ ಚಿತ್ರ ರಿಲೀಸ್

ಪ್ರಜ್ವಲ್ ದೇವರಾಜ್ ಗೆ ಸೋನಲ್ ಮೊಂಥೆರೋ ನಾಯಕಿ..ಶಿವರಾತ್ರಿ ಹಬ್ಬಕ್ಕೆ ‘ರಾಕ್ಷಸ’ ದರ್ಶನ ರಾಕ್ಷಸ ಸಿನಿಮಾಗೆ ಸೋನಲ್ ಮೊಂಥೆರೋ ನಾಯಕಿ…ಶಿವರಾತ್ರಿಗೆ ಪ್ರಜ್ವಲ್ ದೇವರಾಜ್ ಚಿತ್ರ ರಿಲೀಸ್ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರು ಪ್ರತಿ ಸಿನಿಮಾದಲ್ಲೂ ಬೇರೆ ಬೇರೆ ರೀತಿಯ ಪಾತ್ರಗಳನ್ನು ಪ್ರಯತ್ನಿಸುತ್ತಿದ್ದಾರೆ. ಆ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಅವರ ಮುಂಬರುವ ಸಿನಿಮಾಗಳ ಬಗ್ಗೆ ನಿರೀಕ್ಷೆ ಇದೆ. ಆ ಪೈಕಿ ‘ರಾಕ್ಷಸ’ ಸಿನಿಮಾ ಕೂಡ ಕುತೂಹಲ ಮೂಡಿಸಿದೆ.‌ಇದೀಗ ರಾಕ್ಷಸ ಸಿನಿಮಾ ಅಂಗಳದಿಂದ …

Read More »

ಮೈಕ್ರೋ ಪೈನಾನ್ಸ್ ಕಿರುಕುಳಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಮೈಕ್ರೋ ಪೈನಾನ್ಸ್ ಕಿರುಕುಳಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ರಾಜ್ಯದಲ್ಲಿ ಜನರು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಊರು ಬಿಟ್ಟು ಹೋಗೋದು ಒಂದೆಡೆಯಾದ್ರೆ ಕೆಲವು ಜನ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ,ಹೀಗಾಗಿ ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೇ ಅಂಕುಶ ಹೇರಲು ಮುಂದಾಗಿದೆ,ಆದ್ರೆ ಇಲ್ಲೆದರ ನಡುವೆ ಛೋಟಾ ಮುಂಬೈ ಖ್ಯಾತಿಯ ಹುಬ್ಬಳ್ಳಿಯಲ್ಲಿ ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾನೆ. ಹೀಗೆ ಆಸ್ಪತ್ರೆಯ ಬೆಡ್ ಮೇಲೆ ಮಲಗಿರೋ ಈತನ ಹೆಸರು ಮಾಬಲಿ …

Read More »

ಬಿಜೆಪಿಯಿಂದ ಗಾಂಧಿ ಅವರ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

ಬಿಜೆಪಿಯಿಂದ ಗಾಂಧಿ ಅವರ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ಮಹಾತ್ಮ ಗಾಂಧಿ ಅವರನ್ನು ಒಪ್ಪದ ಬಿಜೆಪಿ ಪ್ರತಿಭಟಿಸಲು ಅವರ ಹೆಸರು, ಪ್ರತಿಮೆಯನ್ನೇ ಆಶ್ರಯಿಸುತ್ತದೆ ದೇಶದ ಸ್ವಾತಂತ್ರ್ಯಕ್ಕೆ ಬಿಜೆಪಿಯವರ ಕೊಡುಗೆ ಏನಿಲ್ಲ ಬೆಂಗಳೂರು : “ಬಿಜೆಪಿಯವರು ಗಾಂಧಿಯವರ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ ಮಾಡುತ್ತಿದ್ದಾರೆ. ನಾವು ಅದನ್ನು ಉಳಿಸುವ ಕೆಲಸ ಮಾಡಬೇಕು. ಮಹಾತ್ಮ ಗಾಂಧಿ ಅವರ ತತ್ವಗಳನ್ನು ಒಪ್ಪದ ಬಿಜೆಪಿಯವರು ಅವರ ಪ್ರತಿಮೆ ಕೆಳಗೆ ಕುಳಿತು …

Read More »

ರಾಜ್ಯಾಧ್ಯಕ್ಷನ ಸ್ಥಾನಕ್ಕೆ ಯಾರು ಸ್ಪರ್ಧಿಸಬೇಕೆಂದು ದೆಹಲಿಯಲ್ಲಿ ನಿರ್ಣಯಿಸುತ್ತೇವೆ: ಬಸನಗೌಡ ಯತ್ನಾಳ್

ಬೆಂಗಳೂರು: ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಸಭೆ ನಡೆಸಿದ ಬಳಿಕ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಮಾತಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷದ ರಾಜ್ಯಾಧ್ಯಕ್ಷನ ಸ್ಥಾನಕ್ಕೆ ಸ್ಪರ್ಧಿಸುತ್ತೀರಾ ಎಂದು ಕೇಳಿದ ಪ್ರಶ್ನೆಗೆ ನೇರವಾದ ಉತ್ತರ ನೀಡಲಿಲ್ಲ. ಸಂಸತ್ತಿನ ಅಧಿವೇಶನ ಜಾರಿಯಲ್ಲಿರುವಾಗಲೇ ತಾವೆಲ್ಲ ದೆಹಲಿಗೆ ಹೋಗಿ ರಾಜ್ಯದ ಬಿಜೆಪಿ ಸಂಸದರನ್ನು ಭೇಟಿಯಾಗಿ ಎಲ್ಲ ಸಮುದಾಯಗಳಿಗೆ ನ್ಯಾಯ ಒದಗಿಸುವ ಪದಾಧಿಕಾರಿಗಳನ್ನು ಆಯ್ಕೆ ಮಾಡಬೇಕೆಂಬ ಒಂದು ನಿರ್ಣಯವನ್ನು ತೆಗೆದುಕೊಂಡು ಅದನ್ನು ವರಿಷ್ಠರ ಹಮನಕ್ಕೆ ತರುತ್ತೇವೆ ಅಂತ ಹೇಳಿದ ಯತ್ನಾಳ್, …

Read More »