ಉಡುಪಿಯ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಐಸಿಯು ಭರ್ತಿಯಾಗಿದೆ. ಕೊರೋನಾ ರೋಗಿಗಳ ಸಂಖ್ಯೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ. ಆದರೆ, ಹೊರ ಜಿಲ್ಲೆಗಳಿಂದ ಬರುವ ರೋಗಿಗಳ ಸಂಖ್ಯೆ ಹೆಚ್ಚಳವಾಗಿದೆ. ಇದರಿಂದಾಗಿ ಐಸಿಯು ಹಾಸಿಗೆಗಳು, ವೆಂಟಿಲೇಟರ್ ಹಾಸಿಗೆಗಳ ಕೊರತೆ ಕಂಡುಬಂದಿದೆ. ರೋಗಿಗಳು ಆಸ್ಪತ್ರೆಗೆ ಬರುವ ಮೊದಲು ಐಸಿಯು ಮತ್ತು ವೆಂಟಿಲೇಟರ್ ಬೆಡ್ ಖಾಲಿ ಇರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು ಎಂದು ಹೇಳಲಾಗಿದೆ. ಮುಂದಿನ ದಿನಗಳಲ್ಲಿ ಕೋವಿಡ್ ರೋಗಿಗಳಿಗೆ ಹಾಸಿಗೆ ಮೀಸಲಾಗಿಡಲಾಗುವುದರಿಂದ ಬೆಡ್ ಗಳು ಖಾಲಿ ಇರುವ …
Read More »ಸಿಎಂ ಯಡಿಯೂರಪ್ಪರಿಗೆ ಸುಸ್ತು, ಜ್ವರ: ವಿಶ್ರಾಂತಿ ಬಳಿಕ ಚುನಾವಣೆ ಪ್ರಚಾರ
ಬೆಳಗಾವಿ: ಏಪ್ರಿಲ್ 17 ರಂದು ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸಿದ ಸಿಎಂ ಯಡಿಯೂರಪ್ಪ ಬೆಳಗಾವಿಯ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಅವರಿಗೆ ಜ್ವರ ಮತ್ತು ಸುಸ್ತು ಆಗಿದ್ದು ರಾತ್ರಿ ಕೆಎಲ್‌ಇ ಆಸ್ಪತ್ರೆಯ ಇಬ್ಬರು ವೈದ್ಯರು ಆರೋಗ್ಯ ತಪಾಸಣೆ ಮಾಡಿದ್ದಾರೆ. ಆರೋಗ್ಯ ತಪಾಸಣೆ ಬಳಿಕ ಸಿಎಂಗೆ ಮಾತ್ರೆ ನೀಡಿದ್ದು ಸಿಎಂ ತಮ್ಮ ಕೊಠಡಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇಂದು ಅವರ ಆರೋಗ್ಯ ತಪಾಸಣೆಗೆ …
Read More »ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ, ಸರ್ಕಾರ ಅದರತ್ತ ಹೆಜ್ಜೆ ಇಡಬಾರದು: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ; ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ. ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ಹೆಜ್ಜೆ ಇಡಬಾರದು ಎಂದು ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ದಿನೇ ದಿನೇ ಕರೋನಾ ಪ್ರಕರಣ ಹೆಚ್ಚುತ್ತಿದೆ. ಹಾಗೆಂದು ಸದ್ಯಕ್ಕೆ ರಾಜ್ಯದಲ್ಲಿ ಲಾಕ್ ಡೌನ್ ಅವಶ್ಯಕತೆ ಇಲ್ಲ. ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರವಲ್ಲ. 17 ರ ನಂತರ ರಾಜ್ಯದಲ್ಲಿ ಲಾಕ್ …
Read More »ಸಿದ್ದರಾಮಯ್ಯ ಮತ್ತು ಯತ್ನಾಳ್ ಇಬ್ಬರೂ ವಿಜಯೇಂದ್ರ ವಿರುದ್ದ ಒಂದೇ ರೀತಿಯ ಆರೋಪ ಗೋಣಿ ಚೀಲದಲ್ಲಿ ಹಣ ತುಂಬಿಕೊಂಡು ಮಸ್ಕಿಗೆ ಬಂದಿದ್ದಾರೆ
ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ದ ಬಿಜೆಪಿಯ ಒಂದು ವರ್ಗದಲ್ಲೇ ಅಸಮಾಧಾನ ಇರಬೇಕಾದರೆ ಇನ್ನು ಕಾಂಗ್ರೆಸ್ ಮತ್ತು ಜೆಡಿಎಸ್‌ನಲ್ಲಿ ಇರದೇ ಇರಲು ಸಾಧ್ಯವೇ? ಆದರೆ, ಯಾವುದೇ ಆರೋಪ ಅಥವಾ ಹೇಳಿಕೆಗಳಿಗೆ ತಲೆಕೆಡಿಸಿಕೊಳ್ಳದ ವಿಜಯೇಂದ್ರ ಅವರು ಪಕ್ಷ ತಮಗೆ ವಹಿಸಿದ ಕೆಲಸವನ್ನು ಮಾಡಿಕೊಂಡು ಹೋಗುತ್ತಿದ್ದಾರೆ. ಕಳೆದ ಶಿರಾ ಅಸೆಂಬ್ಲಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ವಿಜಯಪತಾಕೆ ಹಾರಿಸಿದ ನಂತರ ಇವರನ್ನು ಬೈಎಲೆಕ್ಷನ್ ಸ್ಪೆಷ್ಟಲಿಸ್ಟ್ ಎಂದೇ ಪಕ್ಷದಲ್ಲಿ ಕರೆಯಲಾಗುತ್ತಿದೆ. ಮಸ್ಕಿ …
Read More »ಯಾವುದೇ ಕಚೇರಿಗಳನ್ನು ನೋಡದ ಸಚಿವ ಜಗದೀಶ ಶೆಟ್ಟರ್‌ಗೆ ಮಾತನಾಡುವದು ಬಿಟ್ಟರೆ ಬೇರೆ ಏನೂ ಸಾಧನೆ ಗೊತ್ತಿಲ್ಲ: ಸತೀಶ ಜಾರಕಿಹೊಳಿ
ಬೆಳಗಾವಿ: ಯಾವುದೇ ಕಚೇರಿಗಳನ್ನು ನೋಡದ ಸಚಿವ ಜಗದೀಶ ಶೆಟ್ಟರ್‌ಗೆ ಮಾತನಾಡುವದು ಬಿಟ್ಟರೆ ಬೇರೆ ಏನೂ ಸಾಧನೆ ಗೊತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ತಿರುಗೇಟು ನೀಡಿದರು. ಬೆಳಗಾವಿಯಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಶೆಟ್ಟರ ಅವರಿಗೆ ಜನಸಾಮಾನ್ಯರ ಕಷ್ಟದ ಬಗ್ಗೆ ಗೊತ್ತಿಲ್ಲ. ಕೇವಲ ಭಾಷಣ ಮಾಡೋದನ್ನೇ ಸಾಧನೆ ಅಂದುಕೊಂಡಿದ್ದಾರೆ ಎಂದು ಟೀಕಿಸಿದರು. ವಿಧಾನಸಭೆ ಸಭೆಯಲ್ಲಿ ಸತೀಶ್ ಜಾರಕಿಹೊಳಿ ಒಮ್ಮೆಯೂ …
Read More »ನಾನು ಸಿ.ಎಂ. ಸ್ಥಾನದ ಆಕಾಂಕ್ಷಿ : ಶಾಸಕ ಯತ್ನಾಳ ಏ.18 ರಂದು ರಾಜ್ಯ ರಾಜಕಾರಣದ ಭವಿಷ್ಯ ಹೇಳುತ್ತೇನೆ
ವಿಜಯಪುರ :ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದು, ಪಕ್ಷದ ಹೈಕಮಾಂಡ್ ಬಯಸಿದಲ್ಲಿ ಅವಕಾಶ ಕಲ್ಪಿಸಿದಲ್ಲಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಿಸಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇರವಾಗಿ ತಾವು ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವುದಾಗಿ ಬಹಿರಂಗವಾಗಿ ಹೊರ ಹಾಕಿದ್ದಾರೆ. ಬುಧವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ತರ ಕರ್ನಾಟಕದವರು ಅದರಲ್ಲೂ ವಿಜಯಪುರ ಜಿಲ್ಲೆಯವರು ಮುಖ್ಯಮಂತ್ರಿ ಸ್ಥಾನ ನಿರ್ವಹಸುವಲ್ಲಿ …
Read More »ಮುಷ್ಕರ ನಿರತರಿಂದ 60 ಬಸ್ಸುಗಳಿಗೆ ಹಾನಿ,152 ಕೋಟಿ ರೂ.ಆದಾಯ ನಷ್ಟ : ಸಚಿವ ಲಕ್ಷ್ಮಣ ಸವದಿ
ಬೆಂಗಳೂರು: ಮುಷ್ಕರ ನಿರತ ಸಾರಿಗೆ ನೌಕರರ ವಿಚಾರದಲ್ಲಿ ನಮ್ಮ ಸರ್ಕಾರ ಎಷ್ಟೇ ಸಮಾಧಾನ, ಸೌಹಾರ್ದದ ಕ್ರಮ ಅನುಸರಿಸುತ್ತಿದ್ದರೂ ಸಹ ಕಳೆದ 7 ದಿನಗಳಲ್ಲಿ ರಾಜ್ಯಾದ್ಯಂತ 60 ಸರ್ಕಾರಿ ಬಸ್ಸುಗಳ ಮೇಲೆ ದಾಳಿ ಮಾಡಿ ಹಾನಿಗೊಳಿಸಿದ್ದು ತೀರ ಖಂಡನೀಯ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಸಾರಿಗೆ ನೌಕರರ ಕುರಿತು ಇಂದು ತಮ್ಮ ಅಧಿಕೃತ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿರುವ ಅವರು, ಕೆ.ಎಸ್.ಆರ್.ಟಿ.ಸಿ.ಯ 34, ಬಿ.ಎಂ.ಟಿ.ಸಿ.ಯ 3, ಈಶಾನ್ಯ ಸಾರಿಗೆಯ …
Read More »ರಾಜ್ಯದ ವಿವಿಧೆಡೆ ಉತ್ತಮ ಮಳೆ : ಮಂಗಳೂರು ರಸ್ತೆ ಬದಿ ಕುಸಿತ, ಎರಡು ದಿನ ಎಲ್ಲೋ ಅಲರ್ಟ್
ಮಡಿಕೇರಿ/ಮಣಿಪಾಲ: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಬಿರುಸುಗೊಂಡಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡುಗಳಲ್ಲಿ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಬುಧವಾರ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಾದ್ಯಂತ ಸಿಡಿಲು, ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಕೆಲವು ಭಾಗಗಳಲ್ಲಿ ಮರ, ಬರೆ ಕುಸಿದು ಹಾನಿಯಾದ ಘಟನೆ ನಡೆದಿದೆ. ಕೊಡಗಿನಲ್ಲಿ ಬುಧವಾರ ಸುಮಾರು ಒಂದು ತಾಸು ಸುರಿದ ಮಳೆಗೆ ಚರಂಡಿ ಮತ್ತು ರಸ್ತೆಗಳಲ್ಲಿ ನೀರು ತುಂಬಿ ಹರಿದಿದೆ. ರಾಜಾಸೀಟು ಉದ್ಯಾವನದ ಆವರಣದಲ್ಲಿ …
Read More »ಮುಷ್ಕರನಿರತ ಸಾರಿಗೆ ನೌಕರರಿಗೆ ಸರ್ಕಾರದಿಂದ ಶಾಕ್: 271 ಚಾಲಕರು, ನಿರ್ವಾಹಕರು ಸಸ್ಪೆಂಡ್
ಬೆಂಗಳೂರು: ಮುಷ್ಕರನಿರತ ನೌಕರರ ಮೇಲೆ ಬಿಎಂಟಿಸಿ ಶಿಸ್ತು ಕ್ರಮ ಕೈಗೊಂಡಿದೆ. 271 ಚಾಲಕರು ಮತ್ತು ನಿರ್ವಾಹಕರನ್ನು ಅಮಾನತು ಮಾಡಲಾಗಿದೆ. ಕರ್ತವ್ಯಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಚಾಲಕರು ಮತ್ತು ನಿರ್ವಾಹಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕಳೆದ 8 ದಿನದಲ್ಲಿ 495 ನೌಕರರ ಮೇಲೆ ಶಿಸ್ತಿನ ಅಸ್ತ್ರ ಪ್ರಯೋಗಿಸಲಾಗಿದೆ. ಸಾರಿಗೆ ನೌಕರರ ಮುಷ್ಕರ 9 ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸಂಜೆ ಮೇಣದಬತ್ತಿ ಹಿಡಿದು ಪ್ರತಿಭಟನೆ ನಡೆಸಲಾಗುವುದು. ಸಾರಿಗೆ ನೌಕರರ ಮುಷ್ಕರವನ್ನು …
Read More »ಹಾವೇರಿಯಲ್ಲಿ ಹೋಳಿ ಹಬ್ಬದಲ್ಲಿ ಕೈಚಳಕ ತೋರಿದ್ದ ಕಳ್ಳರು ಪೊಲೀಸರ ಬಲೆಗೆ
ಹಾವೇರಿ: ಮಾರ್ಚ್ 28, 2021ರಂದು ಹಾವೇರಿ ನಗರದ ಜನರು ಅದರಲ್ಲೂ ಯಾಲಕ್ಕಿ ಓಣಿಯ ಜನರು ಅಕ್ಷರಶಃ ಬೆಚ್ಚಿ ಬಿದ್ದಿದ್ದರು. ಯಾಕಂದರೆ, ಮಾರ್ಚ್ 28, 2021ರಂದು ರಾತ್ರಿಯಿಡೀ ಜನರು ಹೋಳಿ ಹುಣ್ಣಿಮೆ ಪ್ರಯುಕ್ತ ಹಲಗೆ ಬಾರಿಸುವುದರಲ್ಲಿ ಬ್ಯುಸಿ ಆಗಿದ್ದರು. ಹೀಗೆ ಜನರು ಹಬ್ಬದ ಸಂಭ್ರಮದಲ್ಲಿ ಇದ್ದಾಗಲೇ ಹುಬ್ಬಳ್ಳಿ ಕಡೆಯಿಂದ ಬಂದಿದ್ದ ಮೂವರು ಖದೀಮರ ಗ್ಯಾಂಗ್ ಬೀಗ ಹಾಕಿದ ಮನೆಗಳನ್ನ ಟಾರ್ಗೆಟ್ ಮಾಡಿ ಹುಡುಕಾಡ್ತಿದ್ದರು. ಆಗ ಯಾಲಕ್ಕಿ ಓಣಿಯ ಗುಡಿಸಲು ಕೇರಿ ಓಣಿಯಲ್ಲಿ …
Read More »