Breaking News

ಕ್ಷುಲ್ಲಕ ಕಾರಣಕ್ಕಾಗಿ ನವ ವಿವಾಹಿತೆ ಆತ್ಮಹತ್ಯೆ

ಬೆಳಗಾವಿ: ಕ್ಷುಲ್ಲಕ ಕಾರಣಕ್ಕಾಗಿ ನವ ವಿವಾಹಿತೆ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ನಡೆದಿದೆ. ಜ್ಯೋತಿ ನಿಖಿಲ್‌ ಚೋಪಡೆ (19) ಆತ್ಮಹತ್ಯೆಗೆ ಶರಣಾದ ನವ ವಿವಾಹಿತೆ. ಕಳೆದ ಐದು  ತಿಂಗಳ ಹಿಂದಷ್ಟೇ ಜ್ಯೋತಿ, ಉಚಗಾಂವ ಗ್ರಾಮದ ನಿಖಿಲ್ ಎಂಬಾತನೊಂದಿಗೆ ಪ್ರೇಮ ವಿವಾಹವಾಗಿದ್ದಳು.  ತವರು ಮನೆಗೆ ಆಗಮಿಸಿದ್ದ  ಜ್ಯೋತಿ ಒಂದಿಲ್ಲದೊಂದು ಬೇಡಿಕೆ ಇಡುತ್ತಿದ್ದಳು. ಇತ್ತೀಚೆಗಷ್ಟೆ ಪೋಷಕರಿಗೆ ಕಾಡಿಬೇಡಿ  ಫ್ರೀಡ್ಜ್  ಖರೀದಿಸಿದ್ದಳು. ಇದೀಗ  ಸೋಫಾ‌ ಸೆಟ್ ಕೊಡಿಸುವಂತೆ ಬೇಡಿಕೆ ಇಟ್ಟಿದ್ದಳು.  …

Read More »

ದೇವಸ್ಥಾನದೊಳಗೆ ಪ್ರತ್ಯಕ್ಷವಾಗಿ ಅಚ್ಚರಿ ಮೂಡಿಸಿದ ಮೊಸಳೆ

ಮಂಗಳೂರು: ನೆರೆಯ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಅನಂತಪುರ ದೇವಸ್ಥಾನದಲ್ಲಿ ಇಂದು ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಗರ್ಭಗುಡಿ ಬಳಿ ಬಂದಿದ್ದು, ಈ ಕ್ಷೇತ್ರದ ಮೊಸಳೆ ಅನ್ನೋದು ವಿಶೇಷ. ಈ ಕ್ಷೇತ್ರ ಕೆರೆ ನೀರಿನ ಮಧ್ಯೆ ಇದ್ದು ಇಲ್ಲಿನ ಕೆರೆಯಲ್ಲಿ ವಾಸವಾಗಿರುವ ದೇವರ ಮೊಸಳೆ ಎಂದೇ ಪ್ರಸಿದ್ಧಿ ಪಡೆದ ‘ಬಬಿಯಾ’ ಅನ್ನುವ ಮೊಸಳೆ ಗರ್ಭಗುಡಿ ಬಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ. ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುವ ‘ಬಬಿಯಾ’ಗೆ ಪ್ರತಿನಿತ್ಯದ ಪೂಜೆಯ ಬಳಿಕ …

Read More »

ಚಪ್ಪಲಿ ಸ್ಟ್ಯಾಂಡ್ ವಿಚಾರಕ್ಕೆ ಮಹಿಳೆಯರಿಬ್ಬರು ಮಾರಮಾರಿ

ಬೆಂಗಳೂರು: ಚಪ್ಪಲಿ ಸ್ಟ್ಯಾಂಡ್ ವಿಚಾರಕ್ಕೆ ಮಹಿಳೆಯರಿಬ್ಬರು ಮಾರಮಾರಿ ಬಡಿದಾಡಿಕೊಂಡಿರುವ ಘಟನೆ ಜೆಪಿ ನಗರದ ಎಸ್.ವಿ ಇನ್‍ಫ್ರಾ ಅಪಾರ್ಟ್‍ಮೆಂಟ್‍ನಲ್ಲಿ ನಡೆದಿದೆ. ಒಂದೇ ಅಪಾರ್ಟ್‍ಮೆಂಟ್‍ನಲ್ಲಿ ಬೇರೆ ಬೇರೆ ಫ್ಲಾಟ್‍ಗಳಲ್ಲಿ ವಾಸವಿರೋ ಕುಮಾರಿ ಹಾಗೂ ವರಲಕ್ಷ್ಮಿ ಇಬ್ಬರು ಹೊಡೆದಾಡಿಕೊಂಡಿದ್ದಾರೆ. ಕಳೆದ 14ರಂದು ಚಪ್ಪಲಿ ಸ್ಟಾಂಡ್ ವಿಚಾರಕ್ಕೆ ವರಲಕ್ಷ್ಮಿ ಹಾಗೂ ಕುಮಾರಿ ನಡುವೆ ಗಲಾಟೆ ಶುರುವಾಗಿತ್ತು. ಕುಮಾರಿ ಅವರ ಚಪ್ಪಲಿ ಸ್ಟ್ಯಾಂಡ್ ಅನ್ನು ವರಲಕ್ಷ್ಮಿ ಡ್ಯಾಮೇಜ್ ಮಾಡಿದ್ದರು. ಹೂವಿನ ಫಾಟ್‍ನಿಂದ ಚಪ್ಪಲಿ ಸ್ಟ್ಯಾಂಡ್‍ಗೆ ಹೊಡೆದು ವರಲಕ್ಷ್ಮಿ …

Read More »

ಹಾಡಹಗಲೇ ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ

ಹಾವೇರಿ: ಹಾಡಹಗಲೇ ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ಹಾವೇರಿ ನಗರಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಮಹಿಳೆಯನ್ನು ಮೂಲತಃ ಕಲಬುರಗಿ ಜಿಲ್ಲೆಯ ಬಾಪುನಗರದ ಜಯಶ್ರೀ ಕನ್ವರ್ ಉಪಾದ್ಯ (30) ಎಂದು ಗುರುತಿಸಲಾಗಿದೆ. ಹಾವೇರಿ ನಗರದ ಅಶ್ವಿನಿ ನಗರ, ಶಿವಾಜಿ ನಗರ ಸೇರಿದಂತೆ ನಗರದ ನಾಲ್ಕು ಮನೆಗಳನ್ನು ಈಕೆ ಕಳ್ಳತನ ಮಾಡಿದ್ದಾಳೆ. ಬಂಧಿತ ಆರೋಪಿಯಿಂದ 3,43,500 ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ಹಾಗೂ …

Read More »

3ನೇ ಪತಿಯನ್ನ ಮನೆಯಿಂದ ಹೊರ ಹಾಕಿದ ಬಿಗ್‍ಬಾಸ್ ಸ್ಪರ್ಧಿ

ಚೆನ್ನೈ: ಲಾಕ್‍ಡೌನ್ ವೇಳೆ ಸರಳವಾಗಿ ಮಕ್ಕಳ ಸಮ್ಮುಖದಲ್ಲಿ ಮೂರನೇ ಮದುವೆಯಾಗಿದ್ದ ಬಿಗ್‍ಬಾಸ್ ಸ್ಪರ್ಧಿ, ನಟಿ, ವನಿತಾ ವಿಜಯಕುಮಾರ್ ದಾಂಪತ್ಯದಲ್ಲಿ ಬಿರುಕು ಬಿಟ್ಟಿರುವ ಬಗ್ಗೆ ವರದಿಯಾಗಿದೆ. ಮೂರನೇ ಪತಿ ಪೀಟರ್ ಪೌಲ್ ಸದ್ಯ ಮನೆಯಲ್ಲಿಲ್ಲ ಎಂಬುದನ್ನ ಸ್ವತಃ ವನಿತಾ ಒಪ್ಪಿಕೊಂಡಿದ್ದಾರೆ. ನಿರ್ಮಾಪಕ ರವೀಂದ್ರ ಚಂದ್ರಶೇಖರನ್ ತಮ್ಮ ಫೇಸ್‍ಬುಕ್ ನಲ್ಲಿ ವನಿತಾ ಪತಿಯನ್ನ ಹೊರ ಹಾಕಿರುವ ಬಗ್ಗೆ ಬರೆದುಕೊಂಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದ ನಟಿ ಎಲ್ಲ ಊಹಾಪೋಹಗಳಿಗೆ ಗೊಂದಲಮಯವಾಗಿ ಸ್ಪಷ್ಟನೆ ನೀಡಿದ್ದಾರೆ. …

Read More »

14 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ಹೋಗುವ ಮೂಲಕ, +0.182 ರನ್‍ರೇಟ್ ಪಡೆದುಕೊಂಡಿದೆ.R.C.B

ಅಬುಧಾಬಿ: ಇಂದು ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್‍ಗಳ ಭಾರೀ ಅಂತರದಿಂದ ಗೆದ್ದು, ರನ್ ರೇಟಿನಲ್ಲಿ ಚೇತರಿಕೆ ಕಂಡಿದೆ. ಇಂದು ಅಬುಧಾಬಿ ಮೈದಾನದಲ್ಲಿ ನಡೆದ ಐಪಿಎಲ್-2020ಯ 39ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲ ಬ್ಯಾಟ್ ಮಾಡಿದ ಕೋಲ್ಕತ್ತಾ ತಂಡ ಬೆಂಗಳೂರು ಬೌಲರ್ ಗಳ ಮಾರಕ ದಾಳಿಗೆ ತತ್ತರಸಿ ನಿಗದಿತ 20 ಓವರಿನಲ್ಲಿ ಎಂಟು ವಿಕೆಟ್ ಕಳೆದುಕೊಂಡು ಕೇವಲ 84 ರನ್ …

Read More »

ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರಿಗೆ ಯಾವುದೇ ನೋಟಿಸ್​ ನೀಡದೆ ಪಕ್ಷದಿಂದ ಉಚ್ಛಾಟನೆ

ಕೊಪ್ಪಳ: ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಮೂರ್ಖತನದ ಮಾತುಗಳನ್ನಾಡುತ್ತಿದ್ದು, ಅವರಿಗೆ ಯಾವುದೇ ನೋಟಿಸ್​ ನೀಡದೆ ಪಕ್ಷದಿಂದ ಉಚ್ಛಾಟಿಸಲು ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ಗೆ ಮನವಿ ಮಾಡುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್​​ ಸಚಿವ ಕೆ.ಎಸ್​. ಈಶ್ವರಪ್ಪ ಕಿಡಿಕಾರಿದರು. ಯತ್ನಾಳ್​ ಹೇಳಿಕೆಯನ್ನು ರಾಜ್ಯದ ಯಾವೊಬ್ಬ ಬಿಜೆಪಿ ಕಾರ್ಯಕರ್ತ ಒಪ್ಪುವುದಿಲ್ಲ. ನಮ್ಮದು ಶಿಸ್ತಿನ ಪಕ್ಷ. ಅವರು ಹೀಗೆ ಪದೇಪದೆ ಬಾಯಿಗೆ ಬಂದಂತೆ ಮಾತನಾಡಿದರೆ, ಸೂಕ್ತ ಕ್ರಮ ಆಗೇ ಆಗುತ್ತದೆ ಎಂದು ಸುದ್ದಿಗಾರರಿಗೆ …

Read More »

ಡಿ.ಕೆ. ಶಿವಕುಮಾರ್ ಅವರನ್ನು ಕಟ್ಟಿ ಹಾಕಲು ಬಿಜೆಪಿ ಇನ್ನಿಲ್ಲದ ಕಸರತ್ತು

ರಾಮನಗರ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಕಟ್ಟಿ ಹಾಕಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸಿದೆ. ಅಕ್ರಮ ಸಂಪತ್ತು ಗಳಿಕೆ ಪ್ರಕರಣದ ವಿಚಾರವಾಗಿ ಹಿಂದಿನ ವರ್ಷ ಇಡಿ ಅಧಿಕಾರಿಗಳು ಡಿಕೆಶಿ ಅವರನ್ನು ಬಂಧಿಸಿದ್ದ ಸಂದರ್ಭದಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆದಿತ್ತು. ಆ ಸಂದರ್ಭದಲ್ಲಿ ಸಾರ್ವಜನಿಕರ ಆಸ್ತಿ – ಪಾಸ್ತಿಗೆ ನಷ್ಟ ಉಂಟಾಗಿತ್ತು. ಸದ್ಯ ನಷ್ಟದ ವಿಚಾರಣೆಗೆ ಸರ್ಕಾರ, ನಿವೃತ್ತ ನ್ಯಾಯಮೂರ್ತಿಗಳನ್ನು ನೇಮಿಸಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆ ನಡೆಸಿದ …

Read More »

ಕಾಂಗ್ರೆಸ್‌ ಮುಖಂಡರತ್ತ ಸಂಬರಗಿ ಮಾತು

ಬೆಂಗಳೂರು : ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ನಡೆಯುತ್ತಿರುವ ಚುನಾವಣೆಗೆ ಕಾಂಗ್ರೆಸ್‌ ಧರ್ಮದ ಆಧಾರದ ಮೇಲೆ ಅಭ್ಯರ್ಥಿ ಆಯ್ಕೆ ಮಾಡಿ ಎಲ್ಲ ವಿದ್ಯಾವಂತರಿಗೆ ಮಾಡಿರುವ ಅವಮಾನ ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರಗಿ ಟೀಕಿಸಿದ್ದಾರೆ. ಈ ಸಂಬಂಧ ಅಭ್ಯರ್ಥಿಗಳ ಪಟ್ಟಿಸಮೇತ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಪ್ರಕಾಶ್‌ ಸಂಬರಗಿ ಅವರು, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಪ್ರವೀಣ್‌ ಕುಮಾರ್‌ ಅವರು ಪೀಟರ್‌ ಆಗಿದ್ದಾರೆ. ಇದನ್ನೇ ಅರ್ಹತೆಯಾಗಿ ಪರಿಗಣಿಸಿ …

Read More »

ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ನವೆಂಬರ್ 2 ರೊಳಗೆ ಚುನಾವಣೆ ಪೂರ್ಣಗೊಳಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಏಕಸದಸ್ಯ ಪೀಠ ನೀಡಿದ್ದ ತಡೆಯಾಜ್ಞೆಯನ್ನ ತೆರವುಗೊಳಿಸಿದೆ. ನಿಯಮದಂತೆ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ನೀಡಲಾಗಿದೆ. ಚುನಾವಣೆ ಘೋಷಣೆ ನಂತರ ತಡೆಯಾಜ್ಞೆ ಸೂಕ್ತವಲ್ಲ ಎಂದು ಸರ್ಕಾರದ ಪರ ಎಜಿ ಪ್ರಭುಲಿಂಗ್ ನಾವದಗಿ ವಾದ …

Read More »