ಬೆಂಗಳೂರು: ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಮನೆಗೆ ಎಂಟ್ರಿಯಾಗಿದ್ದ ವೈಜಯಂತಿ ಅಡಿಗ ಈ ವಾರ ಎಲಿಮಿನೇಟ್ ಆಗಿದ್ದು, ಈ ಮೂಲಕ ಶಮಂತ್ ಸೇವ್ ಆಗಿದ್ದಾರೆ. ಕೇವಲ ನಾಲ್ಕೇ ದಿನಕ್ಕೆ ವೈಜಯಂತಿ ಬಿಗ್ ಬಾಸ್ ಮನೆಯಿಂದ ಹೊರ ಬರುತ್ತಿರುವುದು ಅಚ್ಚರಿ ಮೂಡಿಸಿದ್ದು, ಇನ್ನೂ ಆಶ್ಚರ್ಯವೆಂಬಂತೆ ವೈಜಯಂತಿ ಈ ವಾರ ಮನೆಯಿಂದ ಎಲಿಮಿನೇಟ್ ಆಗಲು ನಾಮಿನೇಟ್ ಸಹ ಆಗಿರಲಿಲ್ಲ. ಹೀಗಿರುವಾಗ ತಾವೇ ಮನೆಯಿಂದ ಹೊರ ಬರುವ ನಿರ್ಧಾರವನ್ನು ವೈಜಯಂತಿ ಮಾಡಿದ್ದಾರೆ ಇದರಿಂದ …
Read More »ಒಂದೇ ದಿನದಲ್ಲಿ 10,250 ಮಂದಿಗೆ ಸೋಂಕು..!
ಬೆಂಗಳೂರು: ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಇಂದು ಬಂದ ನಂಬರ್ಸ್ ನಾಳೆಗೆ ಮತ್ತಷ್ಟು ಏರಿಕೆಯಾಗುತ್ತಿದೆ. ಸೋಂಕಿತರ ಸಂಖ್ಯೆ ನೋಡುತ್ತಿದ್ರೆ ತಲೆ ಗಿರ್ ಎನ್ನುತ್ತಿದೆ. ಇಂದು ಒಂದೇ ದಿನ 10,250 ಮಂದಿಗೆ ಸೋಂಕು ದೃಢಪಟ್ಟಿದೆ. 9,635 ರ್ಯಾಪಿಡ್ ಆಯಂಟಿಜೆನ್ ಹಾಗೂ 1,23,071 RTPCR ಟೆಸ್ಟ್ ಸೇರಿದಂಯೆ ಒಟ್ಟು 1,32,706 ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 10,250 ಮಂದಿಗೆ ಕೊರೊನಾ ದೃಢಪಟ್ಟಿದೆ. ಬೆಂಗಳೂರು ಒಂದರಲ್ಲೇ 7584 ಜನ ಸೋಂಕಿತರಿದ್ದಾರೆ. 27 …
Read More »ಪಶ್ಚಿಮ ಬಂಗಾಳದ ಜನರು ಹೇಳಿದರೆ ರಾಜಿನಾಮೆ ನೀಡಲು ಸಿದ್ದ: ಅಮಿತ್ ಷಾ
ಕೊಲ್ಕತ್ತಾ:ಪಶ್ಚಿಮ ಬಂಗಾಳದ ಜನರು ಹಾಗೆ ಕೇಳಿದರೆ ಮಾತ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ. ಆದಾಗ್ಯೂ, ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಸೋಲುವುದರಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇ 2 ರಂದು ತ್ಯಜಿಸಬೇಕಾಗುತ್ತದೆ ಎಂದು ಬಿಜೆಪಿಯ ಹಿರಿಯ ಮುಖಂಡ ಅಮಿತ್ ಷಾ ಪ್ರತಿಪಾದಿಸಿದರು. ಕೂಚ್ ಬೆಹಾರ್ ಜಿಲ್ಲೆಯ ಸಿಟಾಲ್ಕುಚಿಯಲ್ಲಿ ಶನಿವಾರ ನಡೆದ ನಾಲ್ಕನೇ ಹಂತದ ಮತದಾನದ …
Read More »ಮೋದಿ ಗಡ್ಡಬಿಟ್ಟರೆ ಟ್ಯಾಗೋರ್ ಆಗೋದಿಲ್ಲ: ಖರ್ಗೆ
ಮಸ್ಕಿ (ರಾಯಚೂರು): ‘ಪ್ರಧಾನಿ ನರೇಂದ್ರ ಮೋದಿ ಗಡ್ಡಬಿಟ್ಟರೆ ರವೀಂದ್ರನಾಥ ಟ್ಯಾಗೋರ್ ಆಗೋದಿಲ್ಲ. ಪಶ್ಚಿಮ ಬಂಗಾಳ ಚುನಾವಣೆ ಗಮನದಲ್ಲಿಟ್ಟುಕೊಂಡು ಮಾಡಿರುವ ನಕಲು ಇದಾಗಿದೆ’ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಮಸ್ಕಿಯಲ್ಲಿ ಭಾನುವಾರ ಆಯೋಜಿಸಿದ್ದ ಕಾಂಗ್ರೆಸ್ ಪರ ಬಹಿರಂಗ ಸಭೆಯಲ್ಲಿ ಮಾತನಾಡಿದರು. ‘ಪಶ್ಚಿಮ ಬಂಗಾಳಕ್ಕೆ ಹೋಗಿದ್ದ ಪ್ರಧಾನಿ ಪಕ್ಷದ ನೀತಿಗಳನ್ನು ಹೇಳುವ ಬದಲಾಗಿ, ಮಮತಾ ಬ್ಯಾನರ್ಜಿ ಅವರನ್ನು ವ್ಯಂಗ್ಯ ಮಾಡಿದ್ದಾರೆ. ಪ್ರಧಾನಿ ಜೋಕರ್ ರೀತಿ ವರ್ತನೆ ತೋರಿಸಿದ್ದಾರೆ’ …
Read More »ಮಸ್ಕಿ ಬಿಜೆಪಿ ಅಭ್ಯರ್ಥಿಗೆ ಅಂಟಿಕೊಂಡ ಸೋಂಕು!
ರಾಯಚೂರು : ರಾಜ್ಯದ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಸದ್ಯ ಉಪ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಅವರಿಗೆ ಸೋಂಕು ಇರುವುದು ಖಚಿತವಾಗಿದೆ. ಈ ಕುರಿತು ಸ್ವತಃ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಅವರು ಕೆಲವು ದಿನಗಳ ಹಿಂದೆಯಷ್ಟೇ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದರು. ಆದರೂ ಅವರಿಗೆ ಸೋಂಕು ಮೆತ್ತಿಕೊಂಡಿದೆ. ನನಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಪ್ರತ್ಯೇಕವಾಗಿ …
Read More »ಹೆಚ್.ಡಿ. ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್, ಯು.ಟಿ. ಖಾದರ್ ವಿರುದ್ಧ ಬಿಜೆಪಿ ದೂರು
ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ, ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಶಾಸಕರಾದ ಯು.ಟಿ. ಖಾದರ್ ಮತ್ತಿತರ ಮುಖಂಡರ ವಿರುದ್ಧ ಬಿಜೆಪಿ ವತಿಯಿಂದ ಇಂದು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗೆ ದೂರು ಸಲ್ಲಿಸಲಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ಬಸವಕಲ್ಯಾಣದ ಗಾಂಧಿವೃತ್ತದಲ್ಲಿ ಭಾಷಣ ಮಾಡುವ ವೇಳೆ “ನಗರ ಮತ್ತು ಗ್ರಾಮೀಣ ವಾಸಿಗಳ ಪ್ರತಿ ಕುಟುಂಬಕ್ಕೆ ಒಂದು ಮನೆ ಮಂಜೂರು ಮಾಡುತ್ತೇನೆ” ಎಂದು ಮತದಾರರಿಗೆ ಆಮಿಷ ತೋರಿರುತ್ತಾರೆ. ಇದು ಚುನಾವಣಾ …
Read More »ಮೇ 24ರಿಂದ PUC, ಜೂನ್ 20ರಿಂದ SSLC ಪರೀಕ್ಷೆಗಳು ಆರಂಭ: ಸುರೇಶ್ ಕುಮಾರ್
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಮೇ 24ರಿಂದ ಪಿಯುಸಿ ಹಾಗೂ ಜೂನ್ 20ರಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ. ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳು ಸುರಕ್ಷತಾ ಕೇಂದ್ರಗಳು ಆಗಿರುತ್ತೆ. ಎಸ್ಎಸ್ಎಲ್ಸಿಗೆ 8,75,798 ಜನ ವಿದ್ಯಾರ್ಥಿಗಳ ನೋಂದಣಿಯಾಗಿದೆ. ಪಿಯುಸಿಗೆ 7,01,651 ಮಂದಿ ವಿದ್ಯಾರ್ಥಿಗಳನ್ನು ನೋಂದಣಿ ಮಾಡಲಾಗಿದೆ ಎಂದು ವಿವರಿಸಿದರು. ಸಿಲೇಬಸ್ ನಲ್ಲಿ ಶೇ.30ರಷ್ಟು …
Read More »6ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ : ಯುಗಾದಿ ಹಬ್ಬಕ್ಕ ಹೋಗೋರಿಗೆ ಬಸ್ ಸಿಗೋದು ಡೌಟ್.!
ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಇಂದಿಗೆ 6ನೇ ದಿನಕ್ಕೆ ಕಾಲಿಟ್ಟಿದೆ. 6ನೇ ವೇತನ ಆಯೋಗದ ಶಿಫಾರಸ್ಸಿಗೆ ಒತ್ತಾಯಿಸಿ ನಡೆಸುತ್ತಿರುವಂತ ಮುಷ್ಕರ ಇಂದು ತಾರಕ್ಕಕ್ಕೂ ಏರವಿದೆ. ಇಂದಿನಿಂದ ಸಾರಿಗೆ ನೌಕರರು ಬೀದಿಗೆ ಇಳಿಯಲಿದ್ದು, ಜಿಲ್ಲಾಧಿಕಾರಿ, ತಹಶೀಲ್ದಾರ್ ಕಚೇರಿಗಳ ಮುಂದೆ ತಟ್ಟೆ, ಜಾಗಟೆ ಬಾರಿಸುವ ಮೂಲಕ, ತಮ್ಮ ಬೇಡಿಕೆ ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲಿದ್ದಾರೆ. ಇದರ ನಡುವೆ ಇಂದು ಯುಗಾದಿ ಹಬ್ಬದ ಮುನ್ನಾದಿನವಾದ್ದರಿಂದ ಸಾರಿಗೆ ನೌಕರರ ಮುಷ್ಕರದ ಬಿಸಿ, ಊರಿಗೆ ಹೋಗೋ …
Read More »ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಸಾರಿಗೆ ನೌಕರರು : ಇಂದು ಡಿಸಿ, ತಹಶೀಲ್ದಾರ್ ಕಚೇರಿ ಮುಂದೆ ತಟ್ಟೆ, ಜಾಗಟೆ ಬಡಿದು ಪ್ರತಿಭಟನೆ
ಬೆಂಗಳೂರು : ರಾಜ್ಯ ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ನಾ ಕೊಡೆ, ನಾ ಬಿಡೆ ಎನ್ನುವ ಸಂಘರ್ಷ ಇಂದಿಗೆ 6ನೇ ದಿನಕ್ಕೆ ಕಾಲಿಟ್ಟಿದೆ. ಮುಷ್ಕರ ನಿರತರನ್ನು ಮನವೊಲಿಸೋ ಪ್ರಯತ್ನಕ್ಕೆ ಇಳಿದಯಂತ ರಾಜ್ಯ ಸರ್ಕಾರ, ವಿವಿಧ ತಂತ್ರಗಾರಿಕೆ ಮೂಲಕ ನೌಕರರನ್ನು ಮುಷ್ಕರದಿಂದ ಸೇವೆಗೆ ಮರಳೋದಕ್ಕೆ ಪ್ರಯತ್ನಕ್ಕಿಳಿದಿದೆ. ಇದರ ಮಧ್ಯೆ ಇಂದಿನಿಂದ ರಾಜ್ಯ ಸರ್ಕಾರ ವಿರುದ್ಧ ಸಾರಿಗೆ ನೌಕರರು ಸಿಡಿದೆದ್ದಿದ್ದು, ತಮ್ಮ ಪ್ರತಿಭಟನೆಯನ್ನು ಮತ್ತೆ ತೀವ್ರಗೊಳಿಸಿದ್ದಾರೆ. ಇಂದಿನಿಂದ ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಕಚೇರಿ …
Read More »ಸುವರ್ಣ ವಿಧಾನ ಸೌಧದ ಸುತ್ತಲೂ ಸುಮಾರು ೧ ಕಿ.ಮೀ ಸುತ್ತಳತೆಯಲ್ಲಿ ಏ.೧೦ ರಿಂದ ಮೇ.೯ ಮಧ್ಯರಾತ್ರಿಯವರೆಗೆ ಸಿ.ಆರ್.ಪಿ.ಸಿ ೧೯೭೩ ಕಲಂ ೧೪೪ ಪ್ರಕಾರ ನಿಷೇಧಾಜ್ಞೆ
ಬೆಳಗಾವಿ – ಸುವರ್ಣ ವಿಧಾನ ಸೌಧದ ಸುತ್ತಲೂ ಸುಮಾರು ೧ ಕಿ.ಮೀ ಸುತ್ತಳತೆಯಲ್ಲಿ ಏ.೧೦ ರಿಂದ ಮೇ.೯ ಮಧ್ಯರಾತ್ರಿಯವರೆಗೆ ಸಿ.ಆರ್.ಪಿ.ಸಿ ೧೯೭೩ ಕಲಂ ೧೪೪ ಪ್ರಕಾರ ನಿಷೇಧಾಜ್ಞೆಯನ್ನು ವಿಧಿಸಿ, ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರಾದ ಡಾ|| ಕೆ. ತ್ಯಾಗರಾಜನ್ ಅವರು ಆದೇಶ ಹೊರಡಿಸಿದ್ದಾರೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸುವರ್ಣ ವಿಧಾನ ಸೌಧದ ಬಳಿ ಕೆಲವು ಸಂಘ ಸಂಸ್ಥೆಯವರು, ಪ್ರತಿಭಟನಾಕಾರರು ಹಲವು ಬೇಡಿಕೆಗಳ ಈಡೇರಿಕೆಗಾಗಿ, ಚಿಕ್ಕಪುಟ್ಟ ವಿಷಯಗಳಿಗೆ …
Read More »