ಬೆಂಗಳೂರು : ಜಿ.ಪಂ ಸದಸ್ಯ ಯೋಗೀಶ್ ಗೌಡ ಅವರ ಕೊಲೆ ಪ್ರಕರಣದ ಆರೋಪದಡಿ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ. ವಿಜಯ ಕುಲಕರ್ಣಿ ಜಾಮೀನು ಅರ್ಜಿಯನ್ನು ಬೆಂಗಳೂರಿನ ಹೈಕೋರ್ಟ್ ಮತ್ತೆ ಮುಂದೂಡಿದೆ. ಇಂದು ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ಜಾಮೀನು ಅರ್ಜಿಯನ್ನು ಏಪ್ರಿಲ್ 15 ಕ್ಕೆ ಮುಂದೂಡಿದೆ. ಇಂದು ವಿಚಾರಣೆಯ ಮಾಡಿದ ನ್ಯಾಯಮೂರ್ತಿಗಳು ಜಾಮೀನು ಅರ್ಜಿಯನ್ನು ಏಪ್ರಿಲ್ 15 ಕ್ಕೆ ಮುಂದೂಡಿದ್ದಾರೆ. ಈ ಮೂಲಕ …
Read More »ಪ್ರಹ್ಲಾದ್ ಜೋಶಿ ಮನೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಸಾವು
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಹುಬ್ಬಳ್ಳಿಯ ಮನೆಯ ಮುಂದೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಶ್ರೀದೇವಿ ಕಮ್ಮಾರ ಮೃತ ಮಹಿಳೆ. ಮನೆ ಬಿದ್ದ ಪರಿಣಾಮ ಪರಿಹಾರಕ್ಕೆ ಅಲೆದಾಡಿದ ಮಹಿಳೆ ಮನನೊಂದು ಏಪ್ರಿಲ್ 6ರಂದು ಸಚಿವರ ಹುಬ್ಬಳ್ಳಿ ಮಯೂರಿ ಎಸ್ಟೇಟ್ ನಲ್ಲಿರುವ ಮನೆಯ ಎದುರು ಆತ್ಮಹತ್ಯೆಗೆ ಯತ್ನಿಸಿದ್ದರು. ಇದೇ ವೇಳೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ನಿನ್ನೆ …
Read More »ಕೊರೊನಾ ಕರ್ಫ್ಯೂ ಮಾರ್ಗಸೂಚಿ ಪ್ರಕಟ ನಾಳೆ ರಾತ್ರಿಯಿಂದ 10 ದಿನಗಳ ಕಾಲ ಕರ್ಫ್ಯೂ ಜಾರಿ
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಳೆಯಿಂದ 8 ಜಿಲ್ಲೆಗಳಲ್ಲಿ ಕೊರೊನಾ ಕರ್ಫ್ಯೂ ಜಾರಿಗೊಳಿಸಿದ್ದು, ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ನಾಳೆ ರಾತ್ರಿ 10ಗಂಟೆಯಿಂದ ಏಪ್ರಿಲ್ 20ರವರೆಗೆ ರಾತ್ರಿ ವೇಳೆ ಕೊರೊನಾ ಕರ್ಫ್ಯೂ ಜಾರಿಗೆ ಬರಲಿದ್ದು, ವೈದ್ಯಕೀಯ ಹಾಗೂ ತುರ್ತು ಸೇವೆಗೆ ಮಾತ್ರ ಅವಕಾಶ ನೀಡಲಾಗಿದೆ.ಉಳಿದಂತೆ ಎಲ್ಲಾ ವಾಣಿಜ್ಯ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ರಾತ್ರಿ 10ಗಂಟೆಯಿಂದ ಎಲ್ಲಾ ಅಂಗಡಿಗಳು, ಹೋಟೆಲ್, ಬಾರ್, ರೆಸ್ಟೋರೆಂಟ್, ಸೇರಿದಂತೆ ವಾಣಿಜ್ಯ …
Read More »ಲಾಟರಿಯಲ್ಲಿ ಕೋಟಿ ರೂ. ಒಲಿದ ಕಥೆ ಕಟ್ಟಿದ ತೊಕ್ಕೊಟ್ಟು ವಾಚ್‌ಮನ್
ಮಂಗಳೂರು, ಏಪ್ರಿಲ್ 9: ಸಾಲಗಾರರ ಕಾಟ ತಡೆಯಲಾರದೆ ಲಾಟರಿಯಲ್ಲಿ ಒಂದು ಕೋಟಿ ರೂ. ಗೆದ್ದ ಸುಳ್ಳಿನ ಕಥೆ ಕಟ್ಟಿ ಸೆಕ್ಯೂರಿಟಿ ಗಾರ್ಡ್ ಪರಾರಿಯಾದ ಸ್ವಾರಸ್ಯಕರ ಘಟನೆ ಮಂಗಳೂರಿನಲ್ಲಿ ನಡೆದಿದೆ. ಗುರುವಾರ ಮಂಗಳೂರು ನಗರ ಹೊರವಲಯದ ತೊಕ್ಕೊಟ್ಟು ಜಂಕ್ಷನ್ನಿನ ಕಟ್ಟಡದಲ್ಲಿ ಮೂರು ವರ್ಷಗಳಿಂದ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿರುವ ಕೇರಳದ ಕ್ಯಾಲಿಕಟ್ ನಿವಾಸಿ ಮೊಯಿದ್ದೀನ್ ಕುಟ್ಟಿ, ಗುರುವಾರ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಿದ್ದರು. ಸೆಕ್ಯೂರಿಟಿ ಗಾರ್ಡ್ ಕೇರಳದ ಲಾಟರಿಯಲ್ಲಿ …
Read More »ಎಚ್.ಕೆ.ಪಾಟೀಲ್ ಮತ್ತು ಅಶೋಕ ಮಹದೇವಗೆ ಗೌರವ ಡಾಕ್ಟರೇಟ್
ಗದಗ : ಮಾಜಿ ಸಚಿವ, ಶಾಸಕ ಎಚ್.ಕೆ.ಪಾಟೀಲ್ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಅಶೋಕ ಮಹದೇವ ದಳವಾಯಿ ಅವರಿಗೆ ಇಲ್ಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರಕಟಿಸಿದೆ. ಸಾರ್ವಜನಿಕ ನೀತಿ ಮತ್ತು ಸಮಾಜ ಸೇವೆಗೆ ನೀಡಿದ ಗಮನಾರ್ಹ ಕೊಡುಗೆಯನ್ನು ಗುರುತಿಸಿ ಎಚ್.ಕೆ.ಪಾಟೀಲ್ ಅವರಿಗೆ ಹಾಗೂ ದೇಶದ ಗ್ರಾಮೀಣ ಮತ್ತು ಬುಡಕಟ್ಟು ಜನಾಂಗಗಳ ಪುನರ್ ನಿರ್ಮಾಣದಲ್ಲಿ ಸಲ್ಲಿಸಿರುವ ಮಹತ್ತರ ಸೇವೆಯನ್ನು ಪರಿಗಣಿಸಿ ಡಾ|ಅಶೋಕ ಮಹಾದೇವ ದಳವಾಯಿ ಅವರಿಗೆ …
Read More »ಸರ್ಕಾರದ ಬೆದರಿಕೆ ತಂತ್ರಗಳಿಗೆ ಹೆದರುವುದಿಲ್ಲ, ಮುಷ್ಕರ ಮುಂದುವರಿಕೆ: ಕೋಡಿಹಳ್ಳಿ ಚಂದ್ರಶೇಖರ್
ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಮೂರನೇ ದಿನ ಮುಂದುವರಿಯುತ್ತಿದ್ದು ಇಲಾಖೆ ನೌಕರರ ಭವಿಷ್ಯ, ಜೀವನದ ಅನೇಕ ಪ್ರಶ್ನೆಗಳನ್ನು ಸರ್ಕಾರದ ಮುಂದಿಡಲಾಗಿದೆ. ನೌಕರರ ಜೀವನ ಸುಧಾರಣೆಗೆ ಸರ್ಕಾರ ತಾರತಮ್ಯ ನೀತಿಯನ್ನು ಅನುಸರಿಸಬಾರದು ಎಂದು ರಾಜ್ಯ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಸರ್ಕಾರ ವೇತನ ಶ್ರೇಣಿಯ ವ್ಯತ್ಯಾಸ ಮಾಡುತ್ತಿದೆ. ಸಾರಿಗೆ ನೌಕರರ ವಿಚಾರದಲ್ಲಿ ತಾರತಮ್ಯ ಮಾಡ್ತಿದ್ದಾರೆ. ನಿನ್ನೆಯ ಸಭೆಯಲ್ಲಿ ಯಾವುದೇ ತೀರ್ಮಾನಗಳು ಆಗಿಲ್ಲ. ರಾಜ್ಯ …
Read More »ಕೆಲಸಕ್ಕೆ ಬರದಿದ್ದರೆ ವಜಾ ಮಾಡ್ತೀವಿ : ಮುಷ್ಕರ ನಿರತ ‘ಸಾರಿಗೆ ನೌಕರ’ರಿಗೆ ಅಧಿಕಾರಿಗಳಿಂದ ‘ಬ್ಲಾಕ್‌ಮೇಲ್’.?
ಬೆಂಗಳೂರು : ರಾಜ್ಯ ಸರ್ಕಾರವು ಈಗಾಗಲೇ 8 ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಿದೆ. ಆದ್ರೇ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು, 6ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸಬೇಕು ಎನ್ನುವ ಬೇಡಿಕೆ ಮಾತ್ರ ಈಡೇರಿಸೋದಕ್ಕೆ ಬಿಲ್ ಕುಲ್ ನೋ ಎಂದಿದೆ. ಹೀಗಾಗಿ ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಇಂದು ಕಾಲಿಟ್ಟಿದೆ. ಇಂತಹ ನೌಕರರನ್ನು ಮನವೊಲಿಸುವ ಬದಲಾಗಿ, ಕೆಲಸಕ್ಕೆ ಬಾರದಿದ್ದರೇ ವಜಾ ಮಾಡ್ತೀವಿ ಎಂಬುದಾಗಿ ಅನೇಕ ಮುಷ್ಕರ ನಿರತ ನೌಕರರಿಗೆ …
Read More »ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಖರ್ಚು ಮಾಡಿದ ಹಣದ ಲೆಕ್ಕ ಸರ್ಕಾರ ಹೇಳಲಿ -ಸಿದ್ದರಾಮಯ್ಯ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರದ ಕಾರ್ಯವೈಖರಿ ಕುರಿತು ಟ್ವಿಟರ್‌ನಲ್ಲಿ ಟೀಕಿಸಿದ್ದಾರೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕ್ರಿಯಾಯೋಜನೆ ಸಿದ್ಧಪಡಿಸಿದ ಬಿಜೆಪಿ ಸರ್ಕಾರ, ಅಭಿವೃದ್ಧಿ ಕಾಮಗಾರಿಗಳಿಗೆ ಈ ವರೆಗೆ ನಯಾಪೈಸೆ ಖರ್ಚು ಮಾಡಿಲ್ಲ ಎಂದು ಆಕ್ರೋಶಗೊಂಡಿದ್ದಾರೆ ಈ ವಿಚಾರ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ. ಹಣ ಖರ್ಚು ಮಾಡಿದ್ದರೆ ಲೆಕ್ಕ ಹೇಳಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ …
Read More »ಸಚಿವಾಲಯದ ಅಧಿಕಾರಿ, ನೌಕರ’ರಿಗೆ ಬಹುಮುಖ್ಯ ಮಾಹಿತಿ : ಏ.12ರಂದು ’45 ವರ್ಷ’ ಮೇಲ್ಪಟ್ಟವರಿಗೆ ‘ಬ್ಯಾಂಕ್ವೆಟ್ ಹಾಲ್’ನಲ್ಲಿ’ಕೊರೋನಾ ಲಸಿಕೆ’
ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕೊರೋನಾ 2ನೇ ಅಲೆಯ ಅಬ್ಬರಿಸುತ್ತಿದೆ. ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ಏಪ್ರಿಲ್ 11ರಿಂದ 14ರವರೆಗೆ ಲಸಿಕಾ ಅಭಿಯಾನಕ್ಕೂ ಕೂಡ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದ ಸಚಿವಾಲಯದ 45 ವರ್ಷ ಮೇಲ್ಪಟ್ಟ ಅಧಿಕಾರಿ, ನೌಕರರಿಗೆ ದಿನಾಂಕ 12-04-2021ರಂದು ಬ್ಯಾಂಕ್ವೆಟ್ ಹಾಲ್ ನಲ್ಲಿ ಕೊರೋನಾ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಸಿಆಸುಇ(ಕಾರ್ಯದರ್ಶಿ) …
Read More »ಶಾಸಕ ಯತ್ನಾಳ್ ಶೀಘ್ರದಲ್ಲಿ ಬಿಜೆಪಿಯಿಂದ ‘ಉಚ್ಛಾಟನೆ’ : ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್
ಬೆಳಗಾವಿ : ಬಿಜೆಪಿಯಲ್ಲಿ ಇದ್ದುಕೊಂಡು ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಬಸನಗೌಡ ಯತ್ನಾಳ್ ಅವರು ತಮ್ಮದೇ ಪಕ್ಷದ ನಾಯಕರ ವಿರುದ್ದ ಕಿಡಿಕಾರುತ್ತಿರುವುದು ಈಗ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿದ್ದು, ಬಹಿರಂಗವಾಗಿಯೇ ಯತ್ನಾಳು ಅವರು ಸಿಎಂ ಸೇರಿದಂತೆ ನಾನಾ ಮಂದಿಯ ವಿರುದ್ದ ಕಿಡಿಕಾರುತ್ತಿದ್ದಾರೆ. ಈ ನಡುವೆ ಶಾಸಕ ಯತ್ನಾಳ್ ಶೀಘ್ರದಲ್ಲಿ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗುವುದು ಅಂತ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಈ …
Read More »