Breaking News

ಮನವಿ ಮಾಡಿದ್ರೂ ನೌಕರರು ಡೋಂಟ್ ಕೇರ್: ಸಾರಿಗೆ ನೌಕರರಿಗೆ ಶಾಕ್ ನೀಡಲು ಮುಂದಾದ ಸರ್ಕಾರ!

ಬೆಂಗಳೂರು: ಆರನೇ ವೇತನ ಆಯೋಗ ಶಿಫಾರಸಿಗೆ ಆಗ್ರಹಿಸಿ ಸಾರಿಗೆ ನೌಕರರು ಇಂದು ಮುಷ್ಕರ ಹೂಡಿದ್ದು, ಯಾವುದೇ ಕೆಎಸ್‌ಆರ್ ಟಿಸಿ, ಬಿಎಂಟಿಸಿ ಬಸ್ ಗಳು ರಸ್ತೆಗಿಳಿದಿಲ್ಲ. ಸರ್ಕಾರ, ಅಧಿಕಾರಿಗಳ ಮನವಿಗೆ ನೌಕರರು ಸೊಪ್ಪು ಹಾಕದೆ ಇರುವುದರಿಂದ ನೌಕರರಿಗೆ ಶಾಕ್ ನೀಡಲು ಸರ್ಕಾರ ನಿರ್ಧರಿಸಿದೆ. ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿರುವ ನೌಕರರ ಮಾರ್ಚ್ ತಿಂಗಳ ವೇತನ ತಡೆಯಲು ಸರ್ಕಾರ ಮುಂದಾಗಿದೆ.   ಪ್ರತಿ ತಿಂಗಳು 10ನೇ ತಾರೀಖಿನೊಳಗೆ ನಿಗಮಗಳು ನೌಕರರಿಗೆ ವೇತನ ನೀಡುತ್ತಿದ್ದವು. ಆದರೆ …

Read More »

ಸರ್ಕಾರಿ ಬಸ್‌ಗಳಿಗೆ ಪರ್ಯಾಯವಾಗಿ ಹಲವೆಡೆ ಖಾಸಗಿ ಬಸ್ ಸಂಚಾರ ಆರಂಭ

ಬೆಂಗಳೂರು: ಕೋವಿಡ್ ಸಂಕಷ್ಟದ ಕಾಲದಲ್ಲಿ ಸರ್ಕಾರಿ ಸಾರಿಗೆ ನೌಕರರ ಮುಷ್ಕರದ ಬಿಸಿ ಜನರಿಗೆ ತಟ್ಟುತ್ತಿದೆ. ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಸರ್ಕಾರಿ ಸಾರಿಗೆ ನೌಕರರ ಒಕ್ಕೂಟ ಪಟ್ಟು ಹಿಡಿದಿದೆ. ಆದರೆ, ಸದ್ಯ ಆರನೇ ವೇತನ ಆಯೋಗ ಜಾರಿಗೆ ಸಾಧ್ಯವೇ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಆದರೆ, ಪಟ್ಟು ಸಡಿಲಿಸದ ನೌಕರರು ಮುಷ್ಕರ ಆರಂಭಿಸಿದ್ದಾರೆ. ರಾಜ್ಯದಾದ್ಯಂತ ಸರ್ಕಾರಿ ಸಾರಿಗೆ ಸಿಬ್ಬಂದಿ ಕೆಲಸಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಸಂಚಾರ …

Read More »

ದ್ವಿಚಕ್ರ ವಾಹನದಲ್ಲಿ ಇವಿಎಂ ಸಾಗಿಸ್ತಿದ್ದವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!

ಚೆನ್ನೈ (ತಮಿಳುನಾಡು) : ದ್ವಿಚಕ್ರ ವಾಹನದಲ್ಲಿ ಎಲೆಕ್ಟ್ರಾನಿಕ್​ ವೋಟಿಂಗ್​ ಮೆಷಿನ್​ (ಇವಿಎಂ) ಸಾಗಿಸುತ್ತಿದ್ದ ವ್ಯಕ್ತಿಗಳಿಬ್ಬರನ್ನು ಚೆನ್ನೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಈ ಘಟನೆ ವೇಲಚೇರಿ ಏರಿಯಾದಲ್ಲಿ ನಡೆದಿದೆ. ಇವಿಎಂ ಬದಲಾಯಿಸಲಿಸಲು ಬೈಕ್​ನಲ್ಲಿ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಸ್ಥಳೀಯರು ಗಮನಿಸಿ ಇಬ್ಬರನ್ನು ಇವಿಎಂ ಸಮೇತ ಪೊಲೀಸರ ವಶಕ್ಕೆ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಹ ವೈರಲ್​ ಆಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇನ್ನು ಇವಿಎಂ ಬಗ್ಗೆ ಮಾತನಾಡಿರುವ ತಮಿಳುನಾಡು …

Read More »

ಕೊರೊನಾ ಮುಕ್ತ ಉತ್ತರ ಕೊರಿಯಾ..!!

ಸಿಯೋಲ್,ಏ.7-ಇಡೀ ವಿಶ್ವವೇ ಕೊರೊನಾ ಸೋಂಕಿನಿಂತ ತತ್ತರಿಸಿ ಹೋಗಿದ್ದರು. ಉತ್ತರ ಕೋರಿಯಾ ಮಾತ್ರ ನಮ್ಮ ದೇಶ ಸೋಂಕು ರಹಿತವಾಗಿದೆ ಎಂದು ಘೋಷಿಸಿಕೊಂಡಿದೆ. ಕೊರೊನಾ ಕಾಣಿಸಿಕೊಂಡ ನಂತರ ನಾವು ನಮ್ಮ ದೇಶದಿಂದ ಸೋಂಕು ಹೋಗಲಾಡಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಉತ್ತರ ಕೋರಿಯಾ ಹೇಳಿತ್ತು. ಇದೀಗ ಮತ್ತೆ ತನ್ನ ಹೇಳಿಕೆಯನ್ನು ಪುನರುಚ್ಚರಿಸಿರುವ ಕೋರಿಯಾ ವಿಶ್ವ ಆರೋಗ್ಯ ಸಂಸ್ಥೆಗೆ ಸಲ್ಲಿರುವ ದಾಖಲೆಯಲ್ಲಿ ನಾವು ಸೋಂಕಿನಿಂದ ಮುಕ್ತರಾಗಿದ್ದೇವೆ ಎಂದು ಹೇಳಿಕೆ ನೀಡಿದೆ. ನಮ್ಮ ರಾಷ್ಟ್ರದ ಗಡಿಭಾಗಗಳನ್ನು ಬಂದ್ ಮಾಡಿದ್ದೇವೆ. …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವತಿಯಿಂದ ‘ನಿರುಪಮ’ (ಚೆನ್ನಮ್ಮ) ಎನ್ನುವ ಹೆಸರಿಟ್ಟು ಸಿಂಹಿಣಿಯನ್ನು ದತ್ತಕ ತೆಗೆದುಕೊಳ್ಳಲಾಯಿತು.

ಬೆಳಗಾವಿ: ಭಾರತೀಯ ಸ್ವಾತಂತ್ರ್ಯದ ಅಮೃತ ಮಹೋತ್ಸವ ( 75ನೆಯ ವರ್ಷಾಚರಣೆಯ) ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿ ಪ್ರಾಣಾರ್ಪಣೆ ಮಾಡಿದ ಹುತಾತ್ಮರ ಸ್ಮರಣೆಗಾಗಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವತಿಯಿಂದ ‘ನಿರುಪಮ’ (ಚೆನ್ನಮ್ಮ) ಎನ್ನುವ ಹೆಸರಿಟ್ಟು ಸಿಂಹಿಣಿಯನ್ನು ದತ್ತಕ ತೆಗೆದುಕೊಳ್ಳಲಾಯಿತು. ಈ ಕುರಿತು ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೊ ಎಂ ರಾಮಚಂದ್ರಗೌಡ, ಕುಲಸಚಿವರಾದ ಪ್ರೊ. ಬಸವರಾಜ ಪದ್ಮಶಾಲಿ, ಕುಲಸಚಿವರು ಮೌಲ್ಯಮಾಪನ ರಾದ ಪ್ರೊ. ಎಸ್. ಎಂ ಹೂರಕಡ್ಲಿ ಹಣಕಾಸು ಅಧಿಕಾರಿಗಳಾದ ಪ್ರೊ. …

Read More »

ಜನವಿರೋಧಿ ಆಡಳಿತದಿಂದಾಗಿ ಎಲ್ಲೆಡೆ ಬಿಜೆಪಿ ವಿರೋಧಿ ಅಲೆ : ಸತೀಶ್ ಜಾರಕಿಹೊಳಿ ಗೆಲುವು ಖಚಿತ ಎಂದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ – ಜನವಿರೋಧಿ ಆಡಳಿತದಿಂದಾಗಿ ಎಲ್ಲೆಡೆ ಬಿಜೆಪಿ ವಿರೋಧಿ ಅಲೆ ಎದ್ದಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಗೆಲುವು ಖಚಿತ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ. ​ಅತವಾಡ, ಗೋಜಗಾ, ಬೆಕ್ಕಿನಕೇರಿ, ಗಣೇಶಪುರದ ಜ್ಯೋತಿ ನಗರದಲ್ಲಿ ಲೋಕಸಭಾ ಉಪ ಚುನಾವಣೆಯ ಪ್ರಯುಕ್ತ  ಸತೀಶ್ ಜಾರಕಿಹೊಳಿಯವರ ಪರ ಮತ ಯಾಚಿಸಿ ಅವರು ಮಾತನಾಡುತ್ತಿದ್ದರು. ​ ​ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರಕಾರಕ್ಕೆ ಬಡ ಜನರ ಬಗೆಗೆ …

Read More »

6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಮುಂಜಾನೆಯಿಂದ ಮುಷ್ಕರ ಆರಂಭ

: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಮುಂಜಾನೆಯಿಂದ ಮುಷ್ಕರ ಆರಂಭಸಿದ್ದಾರೆ. ರಾಜ್ಯಾದ್ಯಂತ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಪ್ರಾಯಾಣಿಕರು ವಿದ್ಯಾರ್ಥಿಗಳು, ರೋಗಿಗಳು ಬಸ್ ಗಳಿಲ್ಲದೇ ಪರದಾಡುತ್ತಿದ್ದಾರೆ. ಮುಷ್ಕರ ನಿರ್ಧಾರ ಕೈಬಿಡುವಂತೆ ಸರ್ಕಾರ ಹಲವು ಬಾರಿ ಮನವಿ ಮಾಡಿದರೂ ಬಗ್ಗದ ಸಾರಿಗೆ ನೌಕರರು ಬೇಡಿಕೆ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಇದರಿಂದ ಸರ್ಕಾರ ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಿದೆ. ಸಾರಿಗೆ ನೌಕರರ ಮಾರ್ಚ್ ತಿಂಗಳ ವೇತನ ತಡೆ …

Read More »

ಬಸ್ ಗಳಿಲ್ಲದೇ ವೃದ್ಧನ ಪರದಾಟ – ಹೃದಯಾಘಾತದಿಂದ ಸಾವು

ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಬೆಳಿಗ್ಗೆಯಿಂದಲೇ ರಾಜ್ಯಾದ್ಯಂತ ಮುಷ್ಕರ ಆರಂಭಿಸಿದ್ದು, ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಖಾಸಗಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆಯಾದರೂ ದುಪ್ಪಟ್ಟು ಹಣ, ಬಸ್ ಸಂಚಾರ ಸಮರ್ಪಕವಾಗಿಲ್ಲದ ಕಾರಣ ಪ್ರಯಾಣಿಕರು ಪರದಾಡುತ್ತಿದ್ದಾರೆ. ಈ ನಡುವೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ವೃದ್ಧ ಅಂಗವಿಕಲರೊಬ್ಬರು ಹೃದಾಯಾಘಾತದಿಂದ ಮೃತಪಟ್ಟಿರುವ ಧಾರುಣ ಘಟನೆ ನಡೆದಿದೆ. ! ಜಿಗಣಿಯಿಂದ ಬಂದಿದ್ದ ಚೆನ್ನಪ್ಪ ಮೆಜೆಸ್ಟಿಕ್ ನಲ್ಲಿ …

Read More »

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ರಮೇಶ್ ಜಾರಕಿಹೊಳಿ ಕೆಲ ದಿನ ಹೋಂ ಕ್ವಾರಂಟೈನ್ ನಲ್ಲಿ ಇರಲಿದ್ದಾರೆ

ಬೆಳಗಾವಿ : ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ರಮೇಶ್ ಜಾರಕಿಹೊಳಿ ಡಿಸ್ಚಾರ್ಜ್, ಇನ್ನು ಕೆಲ ದಿನ ಹೋಂ ಕ್ವಾರಂಟೈನ್ ನಲ್ಲಿ ಇರಲಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಗೋಕಾಕ ತಾಲ್ಲೂಕು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಏಪ್ರಿಲ್ 4ರಂದು ರಾತ್ರಿ 10.30ರ ಸುಮಾರಿಗೆ ತೀವ್ರ ಉಸಿರಾಟದ ಸಮಸ್ಯೆ ಎದುರಾದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ರಮೇಶ್ ಜಾರಕಿಹೊಳಿ ಬಿಪಿ, ಶುಗರ್ …

Read More »

ಸಂಸದ ಅನಂತ ಕುಮಾರ ಹೆಗೆಡೆಗೆ ಮತ್ತೊಮ್ಮೆ ಜೀವ ಬೆದರಿಕೆ ಕರೆ, ಪ್ರಕರಣ ದಾಖಲು

ಶಿರಸಿ: ಇತ್ತೀಚಿಗಷ್ಟೇ ಅನಾರೋಗ್ಯದಿಂದ ಚೇತರಿಸಿಕೊಂಡಿರುವ ಬಿಜೆಪಿ ಸಂಸದ ಅನಂತ ಕುಮಾರ ಹೆಗಡೆ ಅವರಿಗೆ ಮಂಗಳವಾರದಂದು ಬೆದರಿಕೆ ಕರೆ ಬಂದ ನಂತರ ಸಂಸದರ ಆಪ್ತ ಕಾರ್ಯದರ್ಶಿ ಸುರೇಶ್​ ಗೋವಿಂದ ಶೆಟ್ಟಿ ಅವರಿಂದ ಹೊಸ ಮಾರುಕಟ್ಟೆ ಠಾಣೆಯಲ್ಲಿ ಜೀವ ಬೆದರಿಕೆಯ ದೂರು ದಾಖಲಾಗಿದೆ. ಶಿರಸಿಯಲ್ಲಿರುವ ಸಂಸದರ ಮನೆಗೆ ಕರೆಮಾಡಿದ ವ್ಯಕ್ತಿಯು, ‘ನೀನು ಅನಂತ ಕುಮಾರ ಹೆಗಡೆ, ಬಿಜೆಪಿ ಪಕ್ಷದ ಸಂಸದ….. ಹೌದು ತಾನೆ? ನಾನು ಹಿಂದಿನ‌ ಬಾರಿ ಕರೆ ಮಾಡಿದ್ದಾಗ ಪೊಲೀಸ್​ ಠಾಣೆಗೆ …

Read More »