Breaking News

ಒಂದೇ ಹುದ್ದೆ, ಒಂದೇ ಕುರ್ಚಿಗಾಗಿ ಇಬ್ಬರು ಅಧಿಕಾರಿಗಳು ಕಿತ್ತಾಟ

ಕೊಪ್ಪಳ, ): ಒಂದೇ ಕುರ್ಚಿಗೆ ಇಬ್ಬರು ಅಧಿಕಾರಿಗಳ ನಡುವೆ ಗುದ್ದಾಟ ನಡೆದಿದೆ. ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಹುದ್ದೆಗೆ ತಿಪ್ಪಣ್ಣ ಸಿರಸಗಿ ಮತ್ತು ಪಿ ವೈ ಶೆಟ್ಟಪ್ಪನವರ‌ ನಡುವೆ ಜಟಾಪಟಿ ನಡೆದಿದೆ. 8.9.2023 ರಂದು ಉಪನಿರ್ದೇಶಕರಾಗಿ ಬಂದಿದ್ದ ತಿಪ್ಪಣ್ಣ ಅವರನ್ನು 3.10.24ರಂದು ಕರ್ತವ್ಯಲೋಪ ಹಿನ್ನೆಲೆಯಲ್ಲಿ ಸಸ್ಪೆಂಡ್ ಮಾಡಲಾಗಿತ್ತು. ಬಳಿಕ ತಿಪ್ಪಣ್ಣ ಹುದ್ದೆಗೆ ‌ಪಿ ವೈ ಶೆಟ್ಟೆಪ್ಪ ಎನ್ನುವರನ್ನು ಸರ್ಕಾರ ನಿಯೋಜಿಸಿತ್ತು. ಆದ್ರೆ, ಇದೀಗ ತಿಪ್ಪಣ್ಣ ಅಮಾನತ್ತಿಗೆ …

Read More »

ಮುಡಾ ಮಾಜಿ ಆಯುಕ್ತರ ಶೋಧನೆ ರದ್ದುಗೊಳಿಸಿದ ಕೋರ್ಟ್

ಬೆಂಗಳೂರು, ಜನವರಿ 30: ಮುಡಾ ಹಗರಣ ಸಂಬಂಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಡಿಬಿ ನಟೇಶ್ ವಿರುದ್ಧದ ಜಾರಿ ನಿರ್ದೇಶನಾಲಯ ಸಮನ್ಸ್ ರದ್ದು ವಿಚಾರವಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ. ನಟೇಶ್ ವಿರುದ್ಧ ಪಿಎಂಎಲ್‌ಎ ಕಾಯ್ದೆ ಅಡಿಯ ಇಡಿ ಶೋಧನೆಯನ್ನು ಹೈಕೋರ್ಟ್ ಬುಧವಾರ ರದ್ದುಪಡಿಸಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಬಳಿ ನಟೇಶ್ ದಾಖಲಿಸಿದ್ದ ಹೇಳಿಕೆಯನ್ನೂ ಹೈಕೋರ್ಟ್ ರದ್ದುಪಡಿಸಿದೆ. ಡಿಬಿ ನಟೇಶ್ ವಿರುದ್ಧ ಯಾವುದೇ ಅಧಿಸೂಚಿತ ಕೇಸ್ ದಾಖಲಾಗಿರಲಿಲ್ಲ. 14 …

Read More »

ಹೆಚ್​ಡಿಕೆ ಮತ್ತು ಸಂಬಂಧಿಕರಿಂದ ಸರ್ಕಾರಿ ಜಮೀನು ಒತ್ತುವರಿ ಆರೋಪ: ಅಧಿಕಾರಿಗಳ ವಿರುದ್ಧ ಹೈಕೋರ್ಟ್ ಗರಂ

ಹೆಚ್​ಡಿಕೆ ಮತ್ತು ಸಂಬಂಧಿಕರಿಂದ ಸರ್ಕಾರಿ ಜಮೀನು ಒತ್ತುವರಿ ಆರೋಪ: ಅಧಿಕಾರಿಗಳ ವಿರುದ್ಧ ಹೈಕೋರ್ಟ್ ಗರಂ ಬೆಂಗಳೂರು: ಕೇತಗಾನಹಳ್ಳಿ ಸರ್ಕಾರಿ ಜಮೀನನ್ನು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ, ಮತ್ತಿತರರಿಂದ ಒತ್ತುವರಿ ಮಾಡಿದ ಆರೋಪ ಪ್ರಕರಣದಲ್ಲಿ ಪ್ರತಿವಾದಿಗಳು ಉನ್ನತ ಸ್ಥಾನದಲ್ಲಿದ್ದಾರೆ ಎಂಬ ಕಾರಣದಿಂದ ಕಳೆದ ಐದು ವರ್ಷಗಳಿಂದ ತೆರವು ಕಾರ್ಯಕ್ಕೆ ಮುಂದಾಗಿಲ್ಲವೇ ಎಂದು ಕಂದಾಯ ಇಲಾಖೆ ಅಧಿಕಾರಿಗಳನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತು. ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಶಾಸಕ ಡಿ.ಸಿ.ತಮ್ಮಣ್ಣ ಮತ್ತಿತರರು …

Read More »

ಡಿಕೆಶಿ ವಿರುದ್ಧದ ಸಿಬಿಐ ಕೇಸ್​: ಯತ್ನಾಳ್​​ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​

ನವದೆಹಲಿ: ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ಕುರಿತು ಸಿಬಿಐ ತನಿಖೆಗೆ ನೀಡಿದ್ದ ಒಪ್ಪಿಗೆ ಹಿಂದಕ್ಕೆ ತೆಗೆದುಕೊಂಡಿದ್ದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸುಪ್ರೀಂ ಕೋರ್ಟ್ ಬುಧವಾರ ತರಾಟೆಗೆ ತೆಗೆದುಕೊಂಡಿದೆ. ಡಿಕೆ ಶಿವಕುಮಾರ್ ಅವರ ವಿರುದ್ಧದ ತನಿಖೆಯ ಒಪ್ಪಿಗೆಯನ್ನು ವಾಪಸ್​ ಪಡೆದಿದ್ದನ್ನು ಪ್ರಶ್ನಿಸಿದ್ದರ ಹಿಂದೆ ಯಾವ ರಾಜಕೀಯ ದುರುದ್ದೇಶವಿದೆ ಎಂದು ನ್ಯಾಯಮೂರ್ತಿ ಸೂರ್ಯಕಾಂತ್​ ಮತ್ತು ಎನ್​ ಕೋಟೀಶ್ವರ್​ ಸಿಂಗ್​ …

Read More »

ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ, 55 ಸಾವಿರ ರೂ. ದಂಡ

ಮಂಗಳೂರು: 15 ವರ್ಷದ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 55 ಸಾವಿರ ರೂಪಾಯಿ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಎಫ್.ಟಿ.ಎಸ್.ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶಿಸಿದೆ. ಬೆಳ್ತಂಗಡಿ ತಾಲೂಕಿನ 43 ವರ್ಷದ ವ್ಯಕ್ತಿ ಶಿಕ್ಷೆಗೊಳಗಾದ ಅಪರಾಧಿ. ಆರೋಪಿ 15 ವರ್ಷದ ಅಪ್ರಾಪ್ತ ಬಾಲಕಿಯ ಮನೆಗೆ ಹೆಚ್ಚಾಗಿ ಬಂದು ಹೋಗಿ ಮನೆಯವರೊಂದಿಗೆ ಆತ್ಮೀಯನಾಗಿದ್ದನು. ಬಾಲಕಿ ಮನೆಯವರು ಇಲ್ಲದ ವೇಳೆ ಮನೆಗೆ …

Read More »

ವಿಜಯೇಂದ್ರ ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ: ಸಂಸದ ಡಾ.ಕೆ.ಸುಧಾಕರ್

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡಿದ್ದು, ಒಬ್ಬರಾದ ಮೆಲೆ ಒಬ್ಬರು ಬಹಿರಂಗವಾಗಿಯೇ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಶ್ರೀರಾಮುಲು ನಂತರ ಇದೀಗ ವಿಜಯೇಂದ್ರ ವಿರುದ್ಧ ಮತ್ತೊಬ್ಬ ಮಾಜಿ ಸಚಿವ ಹಾಗೂ ಹಾಲಿ ಸಂಸದ ಡಾ. ಕೆ. ಸುಧಾಕರ್ ಬಹಿರಂಗವಾಗಿಯೇ ಗುಡುಗಿದ್ದಾರೆ. ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸಂದೀಪ್ ಅವರನ್ನು ಆಯ್ಕೆ ಮಾಡಿರುವುದರಿಂದ ಸಿಡಿದೆದ್ದಿರುವ ಸುಧಾಕರ್, …

Read More »

ಮಹಾಕುಂಭ ಮೇಳ – ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟ 30 ಜನರ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ ಘೋಷಣೆ ಮಾಡಿದ ಸಿಎಂ ಯೋಗಿ

ಪ್ರಯಾಗ್​ರಾಜ್(ಉತ್ತರ ಪ್ರದೇಶ)/ಬೆಳಗಾವಿ: ಪವಿತ್ರ ಮಹಾಕುಂಭ ಮೇಳ ನಡೆಯುತ್ತಿರುವ ಇಲ್ಲಿನ ತ್ರಿವೇಣಿ ಸಂಗಮದ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 30 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ ಹಾಗೂ 90ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಡಿಐಜಿ ವೈಭವ್ ಕೃಷ್ಣ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ. 90 ಜನರನ್ನು ಆಸ್ಪತ್ರೆಗೆ ಕರೆತರಲಾಗಿದೆ. 60 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 25 ಮೃತರನ್ನು ಗುರುತಿಸಲಾಗಿದೆ. ಭಾರೀ ಜನಸಂದಣಿಯಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇನ್ನೂ …

Read More »

ಸಂಸದ ಜಗದೀಶ್​ ಶೆಟ್ಟರ್​, ಸಚಿವ ಕೃಷ್ಣ ಬೈರೇಗೌಡ ಹಾಗೂ ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ

ಬೆಂಗಳೂರು: ರಾಜ್ಯದ ವಿಪತ್ತು ನಿರ್ವಹಣಾ ತಂಡ ಉತ್ತರಪ್ರದೇಶ ಸರ್ಕಾರದ ಜೊತೆ ನಿರಂತರ ಸಂಪರ್ಕದಲ್ಲಿದೆ. ಆದರೆ, ಉತ್ತರಪ್ರದೇಶ ಸರ್ಕಾರ ಪ್ರಯಾಗ್​ರಾಜ್ ಕುಂಭಮೇಳ ದುರುಂತದಲ್ಲಿ ರಾಜ್ಯದ ಎಷ್ಟು ಜನ ಮೃತಪಟ್ಟಿದ್ದಾರೆ, ಎಷ್ಟು ಜನ ಗಾಯಾಳುಗಳಾಗಿದ್ದಾರೆ ಎಂಬ ಕುರಿತು ಯಾವುದೇ ಮಾಹಿತಿ ನೀಡುತ್ತಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ವಿಕಾಸಸೌಧದ ಕಚೇರಿಯಲ್ಲಿ ಇಂದು ಸಂಜೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಪ್ರಯಾಗ್​ರಾಜ್​ ಕುಂಭಮೇಳ ಕಾಲ್ತುಳಿತ ದುರಂತದಲ್ಲಿ ರಾಜ್ಯದ ನಾಲ್ಕು ಜನ ಮೃತಪಟ್ಟಿರುವ ಬಗ್ಗೆ ಶಂಕೆ …

Read More »

ಆನೆ ಕಂದಕ, ಸೌರ ಬೇಲಿಗಳ ಸಮರ್ಪಕ ನಿರ್ವಹಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಮೈಸೂರು: ಮೈಸೂರು ಅರಣ್ಯ ವೃತ್ತದಲ್ಲಿ ಆನೆ ಹಾವಳಿ ಇರುವ ಪ್ರದೇಶಗಳಲ್ಲಿ ತೋಡಲಾಗಿರುವ ಆನೆ ಕಂದಕಗಳ ಮತ್ತು ಅಳವಡಿಸಲಾದ ಸೌರ ಬೇಲಿಗಳ ಸಮರ್ಪಕ ನಿರ್ವಹಣೆ ಮಾಡಿ, ವರದಿ ಸಲ್ಲಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಮೈಸೂರು ಅರಣ್ಯ ಭವನದಲ್ಲಿಂದು ಅರಣ್ಯ ಮತ್ತು ಪರಿಸರ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕಾಗಿ ಕಾಡಿನಂಚಿನಲ್ಲಿ ಬಿದಿರು ಬೆಳೆಸುವುದು ಮತ್ತು ಅರಣ್ಯದೊಳಗಿನ ನೀರು ಗುಂಡಿಗಳು …

Read More »

23 ಜಿಲ್ಲಾಧ್ಯಕ್ಷರ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಬಿಜೆಪಿ

ಬೆಂಗಳೂರು : ಕರ್ನಾಟಕ ರಾಜ್ಯ ಬಿಜೆಪಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಮೊದಲ ಹಂತದಲ್ಲಿ 23 ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಿ, ಇಂದು ಜಿಲ್ಲಾ ಚುನಾವಣಾಧಿಕಾರಿಗಳು ಘೋಷಣೆ ಮಾಡಿದ್ದಾರೆ. ಈ ಕೆಳಕಂಡ ಜಿಲ್ಲೆಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. 1. ಮೈಸೂರು ನಗರ – ಎಲ್. ನಾಗೇಂದ್ರ 2. ಚಾಮರಾಜನಗರ – ಸಿ.ಎಸ್. …

Read More »