Breaking News

ಜುಲೈ 7, 8ರಂದು ಸಿಇಟಿ ಪರೀಕ್ಷೆ, ಇಲ್ಲಿದೆ ವೇಳಾಪಟ್ಟಿ

ಬೆಂಗಳೂರು, ಫೆ. 20: ಪ್ರಸಕ್ತ 2021ನೇ ಸಾಲಿನ ವೃತ್ತಿಪರ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಜುಲೈ 7 ಮತ್ತು 8ರಂದು ನಡೆಯಲಿದ್ದು, ಪರೀಕ್ಷಾ ವೇಳಾಪಟ್ಟಿಯನ್ನು ಉನ್ನತ ಶಿಕ್ಷಣ ಇಲಾಖೆ ಪ್ರಕಟಿಸಿದೆ. ವೇಳಾಪಟ್ಟಿ ಹೀಗಿದೆ: * 07.07. 2021 ಬುಧವಾರ ಬೆಳಗ್ಗೆ 10.30ರಿಂದ 11.50: ಜೀವಶಾಸ್ತ್ರ * 07.07. 2021 ಬುಧವಾರ ಮಧ್ಯಾಹ್ನ 2.30ರಿಂದ 3.50: ಗಣಿತ * 08.07. 2021 ಗುರುವಾರ ಬೆಳಗ್ಗೆ 10.30ರಿಂದ 11.50: ಭೌತಶಾಸ್ತ್ರ * …

Read More »

ಡ್ರಗ್ಸ್‌ ಜೊತೆ ಸಿಕ್ಕಿಬಿದ್ದ ಪ್ರಕರಣ; ಸಿಐಡಿ ತನಿಖೆಗೆ ಪಮೇಲಾ ಗೋಸ್ವಾಮಿ ಒತ್ತಾಯ

ಕೋಲ್ಕತ್ತಾ, ಫೆಬ್ರವರಿ 20: ಪಶ್ಚಿಮ ಬಂಗಾಳದ ಬಿಜೆಪಿ ಯುವ ಘಟಕದ ನಾಯಕಿ ಪಮೇಲಾ ಗೋಸ್ವಾಮಿ, ಮಾದಕವಸ್ತುವಿನ ಸಮೇತ ಶುಕ್ರವಾರ ಸಿಕ್ಕಿಬಿದ್ದಿದ್ದು, ಕಾರ್‌ನಲ್ಲಿದ್ದ ಸುಮಾರು 10 ಲಕ್ಷ ರೂ ಮೌಲ್ಯದ 90 ಗ್ರಾಂ ಕೊಕೇನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಪಮೇಲಾ ಗೋಸ್ವಾಮಿ ಅವರನ್ನು ಶನಿವಾರ ಕೋಲ್ಕತ್ತಾದ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಲಾಗಿದೆ. ಈ ಸಂದರ್ಭ ಮಾತನಾಡಿರುವ ಪಮೇಲಾ ಗೋಸ್ವಾಮಿ, “ಇದು ನನ್ನ ವಿರುದ್ಧದ ಸಂಚು. ಇದರಲ್ಲಿ ಪಕ್ಷದ …

Read More »

ದಂಡ ಕಟ್ಟಿಸಿಕೊಳ್ಳುವ ಬದಲು ಯುವತಿಗೆ ಕಿಸ್ ಕೊಟ್ಟ ಪೊಲೀಸ್ ಅಧಿಕಾರಿ.!

ಪೆರು:ವಿಲಕ್ಷಣ ಘಟನೆಯೊಂದರಲ್ಲಿ,ಪೆರುವಿನಲ್ಲಿ ದಂಡ ವಿಧಿಸುವ ಬದಲು ಪೊಲೀಸ್ ಅಧಿಕಾರಿ ಮಹಿಳೆಯೊಬ್ಬಳನ್ನು ಚುಂಬಿಸಿದ ಕಾರಣಕ್ಕಾಗಿ ಅಮಾನತುಗೊಳಿಸಲಾಗಿದೆ. ಈಗ ವೈರಲ್ ಆಗಿರುವ ಸಿಸಿಟಿವಿ ವಿಡಿಯೋ ತುಣುಕಿನಲ್ಲಿ, ಲಿಮಾದಲ್ಲಿ ಕೋವಿಡ್ ಕರ್ಫ್ಯೂ ಉಲ್ಲಂಘಿಸಿದ್ದಕ್ಕಾಗಿ ಅಧಿಕಾರಿ ಮಹಿಳೆಗೆ ದಂಡ ವಿಧಿಸುವುದಕ್ಕೆ ನಿಲ್ಲಿಸಿರುವುದನ್ನು ಕಾಣಬಹುದು. ದಂಡ ಕೊಡದೆ ಚುಂಬನ ಕೊಡುವಂತೆ ಅಧಿಕಾರಿ ಆಕೆಯ ಮನವೊಲಿಸಿದ್ದು ವೀಡಿಯೋದಲ್ಲಿ ಕಾಣುತ್ತದೆ. ದಂಡದ ಶುಲ್ಕ ವಿಧಿಸಲು ಪ್ರಾರಂಭಿಸಿದಾಗ ಮಹಿಳೆ ಅಧಿಕಾರಿಗೆ ಹತ್ತಿರವಾಗುವುದನ್ನು ಕಾಣಬಹುದು, ಆದರೆ ಕೆಲವು ಸೆಕೆಂಡುಗಳ ಹಿಂಜರಿಕೆಯ ನಂತರ, ಅಧಿಕಾರಿ …

Read More »

‘ಪೊಗರು ಚಿತ್ರ’ ವಿವಾದವೊಂದಕ್ಕೆ ಗುರಿ

ಬೆಂಗಳೂರು: ಮೊನ್ನೆಯಷ್ಟೆ ಭರ್ಜರಿ ಓಪನಿಂಗ್ ಕಂಡು ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಧ್ರುವ ಸರ್ಜಾ ಅಭಿನಯದ ‘ಪೊಗರು ಚಿತ್ರ’ ವಿವಾದವೊಂದಕ್ಕೆ ಗುರಿಯಾಗಿದೆ. ಈ ಚಿತ್ರದಲ್ಲಿ ಅರ್ಚಕರು ಹಾಗೂ ಪುರೋಹಿತರನ್ನು ಅವಹೇಳನಕಾರಿಯಾಗಿ ಚಿತ್ರೀಕರಿಸಿ ಪ್ರದರ್ಶಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದು ಖಂಡನೀಯವಾದದ್ದು ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದ ಮೂರ್ತಿ ಹೇಳಿದ್ದಾರೆ. ಯಾವುದೇ ಜಾತಿ ಧರ್ಮವನ್ನು ಅವಹೇಳನಕಾರಿಯಾಗಿ ತೋರಿಸುವುದು ಸರಿಯಾದ ಕ್ರಮವಲ್ಲ ಅದರಿಂದ ಸಾಮಾಜಿಕ ಸ್ವಾಸ್ಥ್ಯ ಹಾಳು …

Read More »

ಎಂಬಿಬಿಎಸ್​ ವಿದ್ಯಾರ್ಥಿನಿ ಸಾವಿನ ಮನೆಯ ಕದ ತಟ್ಟಿದ್ದೇಕೆ?

ಬಾಗಲಕೋಟೆ: ನಗರದ ಮೆಡಿಕಲ್​ ಕಾಲೇಜಿನಲ್ಲಿ ಓದುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ಸಿ.ಎಸ್.ಸಿಂಧುರೇಖಾ(25) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಬಾಗಲಕೋಟೆಯ ನವನಗರದ ಕುಮಾರೇಶ್ವರ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ಓದುತ್ತಿದ್ದಳು. ಕಾಲೇಜು ಆವರಣದಲ್ಲಿ ಬಾಡಿಗೆ ಮನೆಯಲ್ಲಿ ಪೋಷಕರೊಂದಿಗೆ ನೆಲೆಸಿದ್ದ ಸಿಂಧುರೇಖಾ, ತಡರಾತ್ರಿ ಸಾವಿನ ಮನೆಯ ಕದ ತಟ್ಟಿದ್ದಾಳೆ. ಸಿಂಧುರೇಖಾ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು ಎನ್ನಲಾಗಿದೆ. ತನಿಖೆ ಬಳಿಕ ನಿಖರ ಕಾರಣ ತಿಳಿಯಲಿದೆ. ಈಕೆಯ …

Read More »

ಟ್ರಾಫಿಕ್​ ಪೊಲೀಸರು ದಂಡ ಹಾಕಿದ್ದಾರೆ ಪೊಲೀಸರಿಗೆ ಧನ್ಯವಾದಗಳನ್ನ ಸಮರ್ಪಿಸುತ್ತೇನೆ.: ವಿವೇಕ್​ ಒಬೆರಾಯ್​

ಮುಂಬೈ : ಮಾಸ್ಕ್​ ಧರಿಸದೇ ಬೈಕ್​ ರೈಡ್​ ಮಾಡಿದ್ದಕ್ಕೆ ಮುಂಬೈ ಪೊಲೀಸರು ದಂಡ ಹಾಕಿದ್ದಾರೆ. ಟ್ರಾಫಿಕ್​ ಪೊಲೀಸರು ಅವರ ಕೆಲಸ ಮಾಡಿದ್ದಾರೆ ಎಂದು ನಟ ವಿವೇಕ್​ ಒಬೆರಾಯ್​ ಹೇಳಿದ್ದಾರೆ. ಮುಂಬೈ ಪೊಲೀಸರಿಗೆ ಧನ್ಯವಾದಗಳನ್ನ ಸಮರ್ಪಿಸುತ್ತೇನೆ. ಅವರು ಸುರಕ್ಷತೆ ಬಹಳ ಮುಖ್ಯ ಎಂಬುದನ್ನ ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ಹಿನ್ನೆಲೆ ವಿವೇಕ್​ ಸುರಕ್ಷಿತವಾಗಿರಿ, ಮಾಸ್ಕ್​ ಧರಿಸಿ, ಹೆಲ್ಮೆಟ್​ ಹಾಕಿ ಎಂದು ಟ್ವೀಟ್​ ಮಾಡಿದ್ದಾರೆ. ವಿವೇಕ್​ ಪತ್ನಿ ಪ್ರಿಯಾಂಕಾ ಜತೆ ಹರ್ಲೆ ಡೇವಿಡ್ಸನ್​ ಬೈಕ್​ನಲ್ಲಿ …

Read More »

ವೈರಲ್ ಆಯ್ತು ಕೆ. ಎಲ್. ರಾಹುಲ್ ಹಾಗೂ ನಟಿ ಆಶಿಕಾ ರಂಗನಾಥ್ ಫೋಟೋ

ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್‌ ಕೆ.ಎಲ್. ರಾಹುಲ್ ಹಾಗೂ ಸ್ಯಾಂಡಲ್ ವುಡ್ ನ ಬ್ಯೂಟಿಫುಲ್ ನಟಿ ಆಶಿಕಾ ರಂಗನಾಥ್ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆಶಿಕಾ ರಂಗನಾಥ್ ಫ್ಯಾನ್ಸ್ ಪೇಜ್ ಗಳಲ್ಲಿ ಈ ಫೋಟೋ ಶೇರ್ ಆಗಿದೆ. ಕೆ.ಎಲ್. ರಾಹುಲ್ ಅವರನ್ನು ಭೇಟಿ ಮಾಡಿದಾಗ ಆಶಿಕಾ ರಂಗನಾಥ್ ಈ ಫೋಟೋ ತೆಗೆಸಿಕೊಂಡಿದ್ದಾರೆ. ಕೆ.ಎಲ್. ರಾಹುಲ್ ಟೀಮ್ ಇಂಡಿಯಾದ ಅತ್ಯುತ್ತಮ ಆಟಗಾರರಾದರೆ, ನಟಿ ಆಶಿಕಾ ರಂಗನಾಥ್ ಸ್ಯಾಂಡಲ್ ವುಡ್ ನ …

Read More »

ಬೆಂಗಳೂರು: ಗೌರಿ ಲಂಕೇಶ್ ಹಂತಕರ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

ಬೆಂಗಳೂರು, ಫೆ. 21. ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ 6 ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಪ‍್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ತಿರಸ್ಕರಿಸಿದೆ. ಆರ್‌.ಆರ್‌ ನಗರದ ಐಡಿಯಲ್ ಹೋಮ್ಸ್ ಟೌನ್‌ ಶಿಪ್‌ ನಲ್ಲಿರುವ ಮನೆಯ ಎದುರೇ 2017ರ ಸೆಪ್ಟೆಂಬರ್ 5ರಂದು ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಕುರಿತು ತನಿಖೆ ನಡೆಸಿದ್ದ ವಿಶೇಷ ತನಿಖಾ ದಳದ ಅಧಿಕಾರಿಗಳು, …

Read More »

ಅಮಿತ್‌ ಶಾ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ ದೀದಿ ಸೋದರಳಿಯ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಹಾಗೂ ಸಂಸದ ಅಭಿಷೇಕ್ ಬ್ಯಾನರ್ಜಿ ಮಾನಹಾನಿ ಮೊಕದ್ದಮೆ ದಾಖಲಿಸಿದ್ದಾರೆ. ಪ್ರಕರಣದ ಆಲಿಕೆಗೆ ಅಮಿತ್‌ ಶಾ ಖುದ್ದಾಗಿ ಅಥವಾ ವಕೀಲರ ಮೂಲಕ ಫೆಬ್ರವರಿ 22ರಂದು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ಇಲ್ಲಿನ ಬಿಧಾನನಗರದ ಸಂಸದ/ಶಾಸಕರ ಕೋರ್ಟ್‌ನ ವಿಶೇಷ ನ್ಯಾಯಾಧೀಶರು ನಿರ್ದೇಶನ ನೀಡಿದ್ದಾರೆ. ಭಾರತೀಯ ದಂಡ ಸಂಹಿತೆಯ 500ನೇ ವಿಧಿ ಅಡಿ ಮಾನಹಾನಿ ಪ್ರಕರಣ ದಾಖಲಿಸಲಾಗಿದ್ದು, ಅಮಿತ್‌ …

Read More »

ಆನೆಯ ಬೆನ್ನ ಮೇಲೆ ಬೆತ್ತಲೆ ಮಲಗಿ ಫೋಟೋಶೂಟ್

ಮಾಡೆಲ್​ ಒಬ್ಬರು ಆನೆಯ ಬೆನ್ನ ಮೇಲೆ ಬೆತ್ತಲೆ ಮಲಗಿ ಫೋಟೋಶೂಟ್​ ಮಾಡಿಸಿಕೊಳ್ಳುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ಅನೇಕರು ಮಾಡೆಲ್​ ಮಾಡಿದ ಅವಾಂತರ ಕಂಡು ಗರಂ ಆಗಿದ್ದಾರೆ. ಮಾತ್ರವಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಬಗೆ ಬಗೆಯ ಕಾಮೆಂಟ್​ ಬರೆಯುವ ಮೂಲಕ ಮಾಡೆಲ್​ಗೆ ಬೈಗುಳಗಳ ಸುರಿಮಳೆ ಸುರಿಸಿದ್ದಾರೆ. ರಷ್ಯಾ ಮೂಲದ ಮಾಡೆಲ್​ ಅಲೆಸ್ಯ ಕಾಫೆಲ್ನಿಕೋವಾ ಬೆತ್ತಲೆಯಾಗಿ ಫೋಟೋ ಕ್ಲಿಕ್ಕಿಸಲು ಆನೆ ಬೆನ್ನೇರಿದ್ದಾರೆ. ಸುಮಾತ್ರನ್​ ಎಂಬ ಅಳಿವಿನಂಚಿನಲ್ಲಿರುವ ಆನೆಯನ್ನು ಫೋಟೋಶೂಟ್​ಗಾಗಿ ಬಳಸಿಕೊಂಡಿದ್ದಾರೆ. ಮಾಡೆಲ್​ ಅಲೆಸ್ಯ ಇತ್ತೀಚೆಗೆ …

Read More »