Breaking News

ಈ 6 ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರಿಗೆ ಕೋವಿಡ್-19 ನೆಗೆಟಿವ್ ರಿಪೋರ್ಟ್ ಕಡ್ಡಾಯ!

ಮುಂಬೈ: ಕೋವಿಡ್ ಹಾಟ್ ಸ್ಪಾಟ್ ಆಗಿರುವ ಮಹಾರಾಷ್ಟ್ರದಲ್ಲಿ ಸೋಂಕು ಪ್ರಸರಣ ತಡೆಯಲು ಅಲ್ಲಿನ ಸರ್ಕಾರ ಹರಸಾಹಸ ಪಡುತ್ತಿದ್ದು, ಇದೀಗ 6 ರಾಜ್ಯಗಳಿಂದ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರಿಗೆ ಕೋವಿಡ್-19 ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿದೆ. ಹೌದು…ಕೇರಳ, ಗೋವಾ, ರಾಜಸ್ಥಾನ, ದೆಹಲಿ, ಗುಜರಾತ್ ಮತ್ತು ಉತ್ತರಾಖಂಡ ಈ ಆರು ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು ಎಂದು ಮಹಾರಾಷ್ಟ್ರ ಸರ್ಕಾರ ಸೂಚಿಸಿದೆ. ಮಹಾರಾಷ್ಟ್ರದಲ್ಲಿ ಇತ್ತೀಚಿನ ದಿನಗಳಲ್ಲಿ ಕೊರೋನಾ …

Read More »

ಇಂದಿನಿಂದ ಮೇ 3 ರವರೆಗೆ ರಾಜಸ್ಥಾನ ಲಾಕ್

ಜೈಪುರ್: ರಾಜಸ್ಥಾನದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಅಲ್ಲಿಯ ರಾಜ್ಯ ಸರ್ಕಾರ, ಇವತ್ತಿಂದ ಮೇ. 3 ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ. ಈ ಲಾಕ್ ಡೌನ್ ಅವಧಿಯನ್ನು ‘ಜನ ಅನುಷನ್ ಪಖ್ವಾರ’ (ಸಾರ್ವಜನಿಕ ಶಿಸ್ತಿನ ಹದಿನೈದು ದಿನಗಳ) ಎಂದು ಹೇಳಲಾಗಿದ್ದು, ಎಲ್ಲಾ ವಾಣಿಜ್ಯ ಸಂಸ್ಥೆಗಳು, ಕಚೇರಿಗಳು ಮತ್ತು ಮಾರುಕಟ್ಟೆಗಳು ಮುಚ್ಚಿರುತ್ತವೆ. ಆದರೆ ಅಗತ್ಯ ಸೇವೆಗಳಿಗೆ ಲಾಕ್ ಡೌನ್ ನಿಂದ ರಿಯಾಯಿತಿ ನೀಡಲಾಗಿದೆ. ಬ್ಯಾಂಕುಗಳು, …

Read More »

ಕೊರೊನಾ ಬಗ್ಗೆ ಟಿವಿಯಲ್ಲಿ ತೋರಿಸೋದು ಸುಳ್ಳು ಅಂದುಕೊಳ್ಳಬೇಡಿ: ಸಾಧುಕೋಕಿಲ ಎಚ್ಚರಿಕೆ

ಕೊರೊನಾ ವೈರಸ್​ ಕಾಟಕ್ಕೆ ಲಕ್ಷಾಂತರ ಜನರು ತೊಂದರೆ ಅನುಭವಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರ ಪರಿಸ್ಥಿತಿ ಚಿಂತಾಜನಕ ಆಗಿದೆ. ಆಸ್ಪತ್ರೆಗಳಲ್ಲಿ ಬೆಡ್​ ಸಿಗದೇ ಸಾವಿರಾರು ಜನರು ಪರದಾಡುತ್ತಿದ್ದಾರೆ. ದಿನ ಕಳೆದಂತೆಲ್ಲ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಇಂಥ ಸಂದರ್ಭದಲ್ಲಿ ಜನರು ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದು ನಟ ಸಾಧುಕೋಕಿಲ ಹೇಳಿದ್ದಾರೆ. ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಸಾಧುಕೋಕಿಲ ಆತಂಕ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಅವರ ಅಣ್ಣ …

Read More »

ಜೀವ ಪಣಕ್ಕಿಟ್ಟು ಮಗುವನ್ನು ರಕ್ಷಿಸಿದ ರೈಲ್ವೆ ನೌಕರ: ಮೈ ನವಿರೇಳಿಸುವ ವಿಡಿಯೋ

ಮುಂಬೈ, ಏಪ್ರಿಲ್ 19: ರೈಲಿನಡಿ ಸಿಕ್ಕಿ ಛಿದ್ರವಾಗುವಂತಿದ್ದ ಮಗುವನ್ನು ಕಣ್ರೆಪ್ಪೆ ಮಿಟುಕಿಸುವುದರೊಳಗೆ ರಕ್ಷಿಸಿದ ಕೇಂದ್ರ ರೈಲ್ವೆಯ (ಮುಂಬೈ ವಿಭಾಗ) ಪಾಯಿಂಟ್ಸ್‌ಮ್ಯಾನ್ ಮಯೂರ್ ಶೆಲ್ಖೆ ಅವರು ‘ಹೀರೋ’ ಆಗಿ ಹೊರಹೊಮ್ಮಿದ್ದಾರೆ. ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಪುಟಾಣಿಯ ಜೀವ ಉಳಿಸಿದ ಮಯೂರ್ ಅವರ ಶೌರ್ಯವನ್ನು ಎಲ್ಲರೂ ಕೊಂಡಾಡುತ್ತಿದ್ದಾರೆ. ಮಹಾರಾಷ್ಟ್ರದ ಮುಂಬೈನಲ್ಲಿರುವ ವಾಂಗಾನಿ ಉಪನಗರ ರೈಲ್ವೆ ನಿಲ್ದಾಣದಲ್ಲಿ ನಡೆದ ಈ ರೋಮಾಂಚನಕಾರಿ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶನಿವಾರ ಸಂಜೆ 5 ಗಂಟೆ ಸುಮಾರಿಗೆ …

Read More »

ಆರೋಗ್ಯ ಕ್ಷೇತ್ರಕ್ಕೆ ₹30 ಸಾವಿರ ಕೋಟಿ ಮೀಸಲಿಡಬೇಕು : ಡಿ.ಕೆ. ಶಿವಕುಮಾರ್

ಬೆಂಗಳೂರು : ಕೊರೋನಾ ಎರಡನೇ ಅಲೆ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಕ್ಷೇತ್ರಕ್ಕೆ 30 ಸಾವಿರ ಕೋಟಿ ರುಪಾಯಿ ಮೀಸಲಿಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ದಿನೇ ದಿನೇ ಗಂಭೀರವಾಗುತ್ತಿದೆ. ಸೋಂಕಿತರಿಗೆ ಬೆಡ್ ಗಳು ಸಿಗುತ್ತಿಲ್ಲ. ಐಸಿಯು, ರೆಮ್ ಡಿಸಿವಿಯರ್ ಲಸಿಕೆ, ಆಮ್ಲಜನಕ ಅಭಾವ ಸೃಷ್ಟಿಯಾಗಿವೆ. ಪ್ರತಿ ವಿಚಾರದಲ್ಲೂ ಪರಿಸ್ಥಿತಿ ಬಿಗಡಾಯಿಸುತ್ತಿದ್ದು, ಸರ್ಕಾರ ಕೂಡಲೇ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸಿ, ಆ …

Read More »

ವೆಂಟಿಲೇಟರ್ ಸಿಗದೆ ಸಚಿವರ ಪಿಎ ಕೊರೆನಾಗೆ ಬಲಿ

ಬೆಂಗಳೂರು – ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪರಿಸ್ಥಿತಿ ಗಂಭೀರವಾಗುತ್ತಿದೆ. ಇಂದು ಶಿಕ್ಷಣ ಸಚಿವ ಸುರೇಶ ಕುಮಾರ ಅವರ ಪಿಎ ರಮೇಶ್ ಕೊರೋನಾದಿಂದ ಬಲಿಯಾಗಿದ್ದಾರೆ. ರಮೇಶ ಒಂದು ವಾರದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಪರಿಸ್ಥಿತಿ ಗಂಭೀರವಾದರೂ ವೆಂಟಿಲೇಟರ್ ಸಿಗದೆ ಸಾವನ್ನಪ್ಪಿದ್ದಾರೆ. ರಮೇಶ 8 ವರ್ಷದಿಂದ ಸಚಿವರ ಜೊತೆ ಕೆಲಸ ಮಾಡುತ್ತಿದ್ದರು. ಅವರಿಗೆ 55 ವರ್ಷ ವಯಸ್ಸಾಗಿತ್ತು. ಸಚಿವರ ಪಿಎಗೇ ವೆಂಟಿಲೇಟರ್ ಸಿಗದಿರುವುದು ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುತ್ತಿದೆ.

Read More »

ರಾಜಸ್ಥಾನದಲ್ಲಿ ಲಾಕ್ ಡೌನ್ ತರಹದ ನಿರ್ಬಂಧ:ಇಲ್ಲಿದೆ ನೋಡಿ ಮಾರ್ಗಸೂಚಿ

ಜೈಪುರ : ಕೊರೊನಾ ಎರಡನೇ ಅಲೆ ಆತಂಕದ ಹಿನ್ನೆಲೆ ಮೇ 3 ರ ವರೆಗೆ ಶಾಲೆಗಳನ್ನು ಬಂದ್​ ಮಾಡುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮಾರ್ಗಸೂಚಿಯ ಪ್ರಕಾರ, ಮನೆಯಿಂದ ಕೆಲಸ ಮಾಡಲು ಶಿಕ್ಷಕರಿಗೆ ಸೂಚಿಸಲಾಗಿದ್ದು, ವರ್ಕ್​ ಫ್ರಮ್​ ಹೋಮ್​ ನೀಡಲಾಗಿದೆ. ಇದರ ಜತೆ ಶಿಕ್ಷಕರು ಕೊರೊನಾ ವಾರಿಯರ್ಸ್​ ಆಗಿಯೂ ಕಾರ್ಯ ನಿರ್ವಹಿಸಬೇಕಿದೆ. ಶಿಕ್ಷಣ ಇಲಾಖೆ ನಿರ್ದೇಶಕ ಸೌರಭ್ ಸ್ವಾಮಿ ಈ ಆದೇಶ ಹೊರಡಿಸಿದ್ದಾರೆ. ಕೊರೊನಾ ವೈರಸ್‌ ಪ್ರಕರಣಗಳ ಬಗ್ಗೆ ಆತಂಕಗೊಂಡ …

Read More »

ಸಾರಿಗೆ ನೌಕರರಿಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಬಿಎಂಟಿಸಿ

ಬೆಂಗಳೂರು, ಏ.19-ಮುಷ್ಕರದಲ್ಲಿ ಭಾಗಿಯಾಗಿರುವ ಕೆಲವು ಉದ್ಯೋಗಿಗಳ ಅಮಾನತು ಆದೇಶಗಳನ್ನು ಹಿಂತೆಗೆದುಕೊಳ್ಳುವ ಮತ್ತು ಭವಿಷ್ಯದಲ್ಲಿ ವಜಾಗೊಳಿಸಿದ ಆದೇಶಗಳನ್ನು ರದ್ದುಗೊಳಿಸುವಂತಹ ಯಾವುದೇ ನಿಬಂಧನೆ ಅಥವಾ ಆಲೋಚನೆ ಸರ್ಕಾರದ ಮಟ್ಟದಲ್ಲಿ ಇಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸ್ಪಷ್ಟಪಡಿಸಿದೆ. ಮುಷ್ಕರವನ್ನು ಪ್ರೋತ್ಸಾಹಿಸುವ ಮತ್ತು ಕರ್ತವ್ಯಕ್ಕೆ ಗೈರುಹಾಜರಾದವರ ವಿರುದ್ಧ ಬಿಎಂಟಿಸಿ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಅಮಾನತು ಅಥವಾ ವಜಾಗೊಳಿಸಿದ ನಂತರ ಅನೇಕ ಉದ್ಯೋಗಿಗಳು ಯೂನಿಯನ್ ಭಯದಿಂದಾಗಿ ಕೆಲಸಕ್ಕೆ ಬರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಕೆಲಸಕ್ಕೆ ಮರಳುವ …

Read More »

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಮುಂದೂಡಿಕೆ..?

ಬೆಂಗಳೂರು,ಏ.19-ರಾಜ್ಯದಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಮುಂದೂಡುವುದು ಖಚಿತವಾಗಿದೆ. ಬೆಂಗಳೂರಿನಲ್ಲಿ ಈ ಬಗ್ಗೆ ಸುಳಿವು ನೀಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ , ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಯನ್ನು ಮುಂದೂಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ನಮ್ಮ ನಿರೀಕ್ಷೆಗೂ ಮೀರಿ …

Read More »

ನಿಷ್ಠಾವಂತ ಸಿಬ್ಬಂದಿಗಳ ರಕ್ಷಣೆಗೆ ಬದ್ಧ: ಕೆಎಸ್‌ಆರ್‌ಟಿಸಿ

ಬೆಂಗಳೂರು, ಏ.19-ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಗಳ ಮೇಲೆ ಹಲ್ಲೆ ಹಾಗೂ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸುವ ದುಷ್ಕರ್ಮಿಗಳು ಕಠಿಣ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಕರ್ತವ್ಯಕ್ಕೆ ಹಾಜರಾಗುವ ನಮ್ಮ ನಿಷ್ಠಾವಂತ ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ನೀಡಲಾಗುವುದುಎಂದು ಕೆಎಸ್‌ಆರ್‌ಟಿಸಿ ಅಧಿಕೃತ ಪ್ರಕಟಣೆ ತಿಳಿಸಿದೆ. ಬಸ್ಸುಗಳ ಕಾರ್ಯಾಚರಣೆಯಲ್ಲಿನ ಏರಿಕೆಯಿಂದಾಗಿ ಮುಷ್ಕರ ನಿರತರು ವಿಚಲಿತರಾಗಿದ್ದಾರೆ. ನಿಷ್ಠಾವಂತ ಸಿಬ್ಬಂದಿಗಳ ಮೇಲೆ ಹಲ್ಲೇ , ಬಸ್ಸುಗಳಿಗೆ ಕಲ್ಲು ಹೊಡೆಯುವುದನ್ನು ಹೆಚ್ಚು ಮಾಡುತ್ತಿದ್ದಾರೆ ಎಂದು ಆರೋಪಿಸಿದೆ. ಈ …

Read More »