Breaking News

ಅನುಶ್ರೀ ಮೊಬೈಲ್ ತಪಾಸಣೆ ನಡೆಸಿದಾಗ ಅನುಶ್ರೀ ಕಾಲ್ ಲಿಸ್ಟ್ ನಲ್ಲಿದ್ದ ಹೆಸರು ಕಂಡು ಸ್ವತಃ ಸಿಸಿಬಿ ಅಧಿಕರಿಗಳೇ ದಂಗಾಗಿದ್ದಾರೆ.

ಮಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದ ನಿರೂಪಕಿ ಅನುಶ್ರೀ ಅವರ ಮೊಬೈಲ್ ಪರಿಶೀಲಿಸಿದ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಪ್ರಕರಣದಲ್ಲಿ ತಮ್ಮ ಹೆಸರು ಹೊರ ಬರುತ್ತಿದ್ದಂತೆಯೇ ಅನುಶ್ರೀ ಪ್ರಭಾವಿ ನಾಯಕರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ. ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಅನುಶ್ರೀಗೆ ನೋಟಿಸ್ ನೀಡುತ್ತಿದ್ದಂತೆಯೇ ಅನುಶ್ರೀ ಮೂವರು ಪ್ರಭಾವಿ ರಾಜಕಾರಣಿಗಳಿಗೆ ಕರೆ ಮಾಡಿದ್ದಾರೆ. ವಿಚಾರಣೆ ವೇಳೆ ಅನುಶ್ರೀ ಮೊಬೈಲ್ ತಪಾಸಣೆ ನಡೆಸಿದಾಗ ಅನುಶ್ರೀ ಕಾಲ್ ಲಿಸ್ಟ್ ನಲ್ಲಿದ್ದ ಹೆಸರು …

Read More »

ಕರೊನಾ ಬಂದ್ರೆ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುತ್ತಿದ್ದೆ ಎಂದ ಸಂಸದನಿಗೆ ಕರೊನಾ ಪಾಸಿಟಿವ್​!

ಕೋಲ್ಕತಾ: ಕರೊನಾ ಬಂದ್ರೆ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುತ್ತಿದ್ದೆ ಎಂದ ಸಂಸದನಿಗೆ ಕರೊನಾ ಪಾಸಿಟಿವ್​! ನನಗೇನಾದರೂ ಕರೊನಾ ಪಾಸಿಟಿವ್​ ಬಂದಿದ್ದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ತಬ್ಬಿಕೊಳ್ಳುತ್ತಿದೆ ಎಂದು ಹೇಳಿದ್ದ ಬಿಜೆಪಿ ಮುಖಂಡ ಅನುಪಮ್ ಹಜ್ರಾ ಅವರಿಗೆ ಕರೊನಾ ಪಾಸಿಟಿವ್​ ವರದಿ ಬಂದಿದೆ. ಟಿಎಂಸಿಯ ಸಂಸದರಾಗಿದ್ದ ಹಜ್ರಾ, ಕಳೆದ ವರ್ಷ ಬಿಜೆಪಿಗೆ ಸೇರಿದ್ದಾರೆ. ಇತ್ತೀಚೆಗೆ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಅವರು ಮಮತಾ ಬ್ಯಾನರ್ಜಿ ವಿರುದ್ಧ ತಬ್ಬಿಕೊಳ್ಳುವ ಮಾತನಾಡಿ ವಿವಾದ ಸೃಷ್ಟಿಸಿದ್ದಾರೆ. …

Read More »

ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ಗೆ ಪೈಪೋಟಿ : ಮುನ್ನೀರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ಗೆ ಪೈಪೋಟಿ ಏರ್ಪಟ್ಟಿದೆ. ಮಾಜಿ ಶಾಸಕ ಮುನಿರತ್ನ ಹಾಗೂ ತುಳಸಿ ಮುನಿರಾಜು ಗೌಡ ಅವರ ಹೆಸರುಗಳನ್ನು ಪರಿಗಣಿಸಿದ ಕೋರ್ ಕಮಿಟಿ ಸಭೆ ಕೇಂದ್ರ ಚುನಾವಣಾ ಸಮಿತಿಗೆ ರವಾನಿಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಸರ್ಕಾರ ರಚನೆಯಲ್ಲಿ ಸಹಕಾರ ನೀಡಿದ ಮುನಿರತ್ನ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕೆಂದು ಹೇಳಿದ್ದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ತುಳಸಿ ಮುನಿರಾಜು …

Read More »

ಸಾಮೂಹಿಕ ಅತ್ಯಾಚಾರ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ

ಬೆಳಗಾವಿ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟ ಯುವ ಘಟಕದ ಮುಖಂಡರು ಮತ್ತು ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಅವರು, ಆ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಕೂಡಲೆ ತಪ್ಪಿತಸ್ಥರನ್ನು ಬಂಧಿಸಲು ಕ್ರಮ ಕೈಗೊಳ್ಳಬೇಕು. …

Read More »

ರಾಹುಲ್ ಗಾಂಧಿ ಅವರನ್ನು ತಡೆದು, ಬಂಧಿಸಿದ ಉತ್ತರ ಪ್ರದೇಶದ ಪೊಲೀಸರ ಕ್ರಮ ಸರಿಯಲ್ಲ: ದೇವೇಗೌಡ

ಬೆಂಗಳೂರು : ಅತ್ಯಾಚಾರ ಸಂತ್ರಸ್ತೆಯ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಲು ಉತ್ತರ ಪ್ರದೇಶದ ಹತ್ರಾಸ್‍ಗೆ ತೆರಳುತ್ತಿದ್ದ ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರನ್ನು ತಡೆದು, ಬಂಧಿಸಿದ ಉತ್ತರ ಪ್ರದೇಶದ ಪೊಲೀಸರ ಕ್ರಮ ಸರಿಯಲ್ಲ ಎಂದು ಆಕ್ಷೇಪಿಸಿರುವ ಜೆಡಿಎಸ್ ವರಿಷ್ಟ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಗುರುವಾರ ಟ್ವೀಟ್ ಮಾಡಿರುವ ದೇವೇಗೌಡರು, ಎಐಸಿಸಿ ಮುಖಂಡ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು …

Read More »

ಕುಟುಂಬದ ಆಸ್ತಿಪಾಸ್ತಿ ವಿಚಾರದಲ್ಲಿ ಮನನೊಂದು ಯುವಕ ಆತ್ಮಹತ್ಯೆ

ಕೋಲಾರ: ಹಣದ ವಿಚಾರವಾಗಿ ಮನನೊಂದು ವ್ಯಕ್ತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲ್ಲೂಕು ಮದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್ (33) ಆತ್ಮಹತ್ಯೆ ಮಾಡಿಕೊಂಡವರು. ಜಮೀನು ಹಾಗೂ ಹಣದ ವಿಚಾರಕ್ಕೆ ಸಂಬಂಧಿಸಿ ಕುಟುಂಬದಲ್ಲೇ ಅನೇಕ ಮನಸ್ಥಾಪಗಳು ಉಂಟಾಗಿದ್ದವು. ಇದೆಲ್ಲದರಿಂದ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ‌ ಮುನ್ನ ವಿಡಿಯೋ ಹಾಗೂ ಡೆತ್ ನೋಟ್ ಬರೆದಿಟ್ಟಿದ್ದು, ತನ್ನ ಸಂಬಂಧಿ ರಮೇಶ್ ಎಂಬುವವರಿಂದ ಮನನೊಂದು ಆತ್ಮಹತ್ಯೆ ಮಡಿಕೊಂಡಿರುವ ಬಗ್ಗೆ …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು (ಆರ್‌ಸಿಯು) ಕೋವಿಡ್-19 ಕಾರಣದಿಂದ ಅನುಸರಿಸುತ್ತಿರುವ ‘ಮಿತವ್ಯಯ ಉದ್ದೇಶ’ದ ಕ್ರಮವು ‘ಯುಜಿಸಿಯೇತರ ಉಪನ್ಯಾಸಕ’ರಿಗೆ ಸಿಗುತ್ತಿದ್ದ ಭತ್ಯೆಗೆ ಕತ್ತರಿ ಹಾಕಿದೆ.

ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು (ಆರ್‌ಸಿಯು) ಕೋವಿಡ್-19 ಕಾರಣದಿಂದ ಅನುಸರಿಸುತ್ತಿರುವ ‘ಮಿತವ್ಯಯ ಉದ್ದೇಶ’ದ ಕ್ರಮವು ‘ಯುಜಿಸಿಯೇತರ ಉಪನ್ಯಾಸಕ’ರಿಗೆ ಸಿಗುತ್ತಿದ್ದ ಭತ್ಯೆಗೆ ಕತ್ತರಿ ಹಾಕಿದೆ. ಈಚೆಗೆ ನಡೆದ ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳ ವಿವಿಧ ವಿಷಯಗಳ ಅಂತಿಮ ವರ್ಷದ ಪದವಿ ಪರೀಕ್ಷೆಯ ಉತ್ತರಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಅರಂಭವಾಗಿದೆ. ಈ ಕರ್ತವ್ಯಕ್ಕೆ ಯುಜಿಸಿ ಉಪನ್ಯಾಸಕರಿಗೆ ಮಾತ್ರವೇ ಅನುಮತಿಸಿರುವುದು ಯುಜಿಸಿಯೇತರ ಉಪನ್ಯಾಸಕರ ಆಕ್ಷೇಪಕ್ಕೆ ಕಾರಣವಾಗಿದೆ. ಇಲ್ಲಿನ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ …

Read More »

ಅತ್ಯಾಚಾರ ಎಸಗಿದವರ ವಿರುದ್ಧ ಕಠಿಣ

ಬೆಳಗಾವಿ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟ ಯುವ ಘಟಕದ ಮುಖಂಡರು ಮತ್ತು ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಅವರು, ಆ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಕೂಡಲೆ ತಪ್ಪಿತಸ್ಥರನ್ನು ಬಂಧಿಸಲು ಕ್ರಮ ಕೈಗೊಳ್ಳಬೇಕು. …

Read More »

ರಾಜ್ಯದಲ್ಲಿ ಶಾಲೆ ಆರಂಭ ಕುರಿತು ಅಕ್ಟೋಬರ್‌ 10ಕ್ಕೆ ಸ್ಪಷ್ಟ ಚಿತ್ರಣ ನೀಡುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಎಸ್‌.ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಶಾಲೆ ಆರಂಭ ಕುರಿತು ಅಕ್ಟೋಬರ್‌ 10ಕ್ಕೆ ಸ್ಪಷ್ಟ ಚಿತ್ರಣ ನೀಡುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಎಸ್‌.ಸುರೇಶ್‌ ಕುಮಾರ್‌ ತಿಳಿಸಿದ್ದಾರೆ. ಶಾಲಾ ಕಾಲೇಜುಗಳನ್ನು ಆರಂಭಿಸುವ ವಿಚಾರ ಕುರಿತು ರಾಜ್ಯ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆ ಶಿಕ್ಷಕರು ಹಾಗೂ ಪದವಿ ಕಾಲೇಜುಗಳ ಉಪನ್ಯಾಸಕರ ಸಂಘಟನೆಗಳ ಜಿಲ್ಲಾ ಪ್ರತಿನಿಧಿಗಳೊಂದಿಗೆ ಗುರುವಾರ ವೆಬಿನಾರ್‌ ಸಂವಾದ ನಡೆಸಿ ಮಾತನಾಡಿದ ಅವರು ಈ ವಿಷಯ ತಿಳಿಸಿದರು. ಸರ್ಕಾರಕ್ಕೂ ವಿದ್ಯಾರ್ಥಿಗಳ ಆರೋಗ್ಯ, ಸುರಕ್ಷತೆಯೇ ಮೊದಲ ಆದ್ಯತೆ. …

Read More »

ಮಹಾತ್ಮ ಗಾಂಧೀಜಿ ಅವರು ತಾಲ್ಲೂಕಿನ ನವಲಿಹಾಳ ಗ್ರಾಮದಲ್ಲಿ ಎರಡು ದಿನ ವಾಸ್ತವ್ಯ ಹೂಡಿದ್ದಲ್ಲದೇ, ಪಟ್ಟಣಕ್ಕೂ ಭೇಟಿ ನೀಡಿದ್ದರು.

ಚಿಕ್ಕೋಡಿ: ಮಹಾತ್ಮ ಗಾಂಧೀಜಿ ಅವರು ತಾಲ್ಲೂಕಿನ ನವಲಿಹಾಳ ಗ್ರಾಮದಲ್ಲಿ ಎರಡು ದಿನ ವಾಸ್ತವ್ಯ ಹೂಡಿದ್ದಲ್ಲದೇ, ಪಟ್ಟಣಕ್ಕೂ ಭೇಟಿ ನೀಡಿದ್ದರು. 1934ರ ಫೆಬ್ರುವರಿ ಮತ್ತು ಮಾರ್ಚ್‌ನಲ್ಲಿ ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಸಂಚಿರಿಸಿದ್ದರು. 1934ರ ಮಾರ್ಚ್‌ 7 ಮತ್ತು 8ರಂದು ತಾಲ್ಲೂಕಿನ ನವಲಿಹಾಳದ ಅಕ್ಕಾಚಂದ್ ಮೆಹತಾ ಎನ್ನುವವರ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಆ ಮನೆ ಇಂದು ಪಾಳು ಬಿದ್ದಿದೆ. ‘ರಾಷ್ಟ್ರಪಿತನ ಪಾದಸ್ಪರ್ಶದಿಂದ ಪಾವನಗೊಂಡಿರುವ ಗ್ರಾಮದಲ್ಲಿ ಗಾಂಧಿ ಸ್ಮಾರಕ ನಿರ್ಮಿಸಬೇಕು’ ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ. …

Read More »