Breaking News

ವಿಶ್ವ ಮಾರುಕಟ್ಟೆಗೆ Mi 11 ಸ್ಮಾರ್ಟ್ ಫೋನ್ ಎಂಟ್ರಿ; ವಿಶೇಷತೆಗಳೇನು?

ನವದೆಹಲಿ: ವಿಶ್ವದ ಸ್ಮಾರ್ಟ್ ಪೋನ್ ,ಮಾರುಕಟ್ಟೆಯಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಶಿಯೋಮಿ ಕಂಪನಿಯು ತನ್ನ Mi 11 ಸರಣಿಯ ಹೊಸ ಸ್ಮಾರ್ಟ್ ಫೋನ್ ಒಂದನ್ನು ವಿಶ್ವದಾದ್ಯಂತ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ್ದು, ಇದು ತನ್ನ ವಿಭಿನ್ನ ಫೀಚರ್ ಗಳ ಮೂಲಕ ಮಾರುಕಟ್ಟೆಯಲ್ಲಿ ದೂಳೆಬ್ಬಿಸುತ್ತಿದೆ. ಗ್ರಾಹಕ ಸ್ನೇಹಿ ಸ್ಮಾರ್ಟ್ ಪೋನ್ ಎಂಬ ಪ್ರಖ್ಯಾತಿಗೆ ಪಾತ್ರವಾಗಿರುವ Mi ಸ್ಮಾರ್ಟ್ ಪೋನ್ ಕಳೆದ ವರ್ಷದ ಕೊನೆಯಲ್ಲಿ ಈ ಹೊಸ ಆವೃತ್ತಿಯ Mi 11 ಮೊಬೈಲ್ ಪೋನ್ …

Read More »

ಹೆಚ್ಚುವರಿ ₹534 ಕೋಟಿಗೆ ಬೇಡಿಕೆ: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕಾಡುತ್ತಿರುವ ಅಪೌಷ್ಟಿಕತೆ ಮತ್ತು ರಕ್ತಹೀನತೆ ಸಮಸ್ಯೆಗಳನ್ನು ಹೋಗಲಾಡಿಸಲು ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು. ಇದಕ್ಕಾಗಿ ಬಜೆಟ್‌ನಲ್ಲಿ ₹534 ಕೋಟಿ ಹೆಚ್ಚುವರಿ ಹಣ ನೀಡಲು ಮುಖ್ಯಮಂತ್ರಿಯವರಿಗೆ ಮನವಿ ಮಾಡಿರುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು. ಇಲಾಖೆಗೆ ಪ್ರತಿ ವರ್ಷ ಸುಮಾರು ₹5,000 ಕೋಟಿ ಬಜೆಟ್‌ನಲ್ಲಿ ನೀಡಲಾಗುತ್ತದೆ. ಇದಲ್ಲದೇ ಕೇಂದ್ರ ಪ್ರಾಯೋಜಿತ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರವೇ ಅನುದಾನ ನೀಡುತ್ತದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ …

Read More »

ಪಿಎಂ ಆವಾಸ್ ಯೋಜನೆ, ಪಿಎಂ ಸ್ವನಿಧಿ ಯೋಜನೆ: ತ್ವರಿತ ಸಾಲ ವಿತರಣೆಗೆ ಸಿಎಂ ಸೂಚನೆ

ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವನಿಧಿ ಯೋಜನೆಗಳಡಿ ಬ್ಯಾಂಕುಗಳು ವಿಳಂಬ ಧೋರಣೆ ಅನುಸರಿಸದೆ ತ್ವರಿತವಾಗಿ ಸಾಲ ವಿತರಣೆ ಮಾಡಲು ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವ ನಿಧಿ ಯೋಜನೆಗಳ ಪ್ರಗತಿ ಕುರಿತು ಬ್ಯಾಂಕರುಗಳೊಂದಿಗೆ ಚರ್ಚಿಸಿದರು. ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಗಳು ಪ್ರಧಾನಿ ನರೇಂದ್ರ ಮೋದಿಯವರು …

Read More »

ಕುರುಬ ಸಮುದಾಯವನ್ನು ಒಡೆಯುವುದೇ ಬಿಜೆಪಿಯವರ ಮುಖ್ಯ ಉದ್ದೇಶ: ಸಿದ್ದರಾಮಯ್ಯ

ಹುಬ್ಬಳ್ಳಿ: ಕುರುಬ ಸಮುದಾಯವನ್ನು ಒಡೆಯುವುದೇ ಆರ್‌ಎಸ್‌ಎಸ್‌ ಮತ್ತು ಬಿಜೆಪಿಯವರ ಮುಖ್ಯ ಉದ್ದೇಶ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕುರುಬ ಸಮುದಾಯದ ಮೀಸಲಾತಿ ಹೋರಾಟದ ವಿಚಾರವಾಗಿ ಗುರುವಾರ ಸರಣಿ ಟ್ವೀಟ್‌ ಮಾಡಿರುವ ಅವರು, ‘ಕುರುಬರ ಮೀಸಲಾತಿ ಹೋರಾಟದಲ್ಲಿ ಆರ್.ಎಸ್.ಎಸ್ ಮತ್ತು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಕುರುಬ ಸಮುದಾಯವನ್ನು ಒಡೆಯುವುದೇ ಅವರ ಮುಖ್ಯ ಉದ್ದೇಶ’ ಎಂದು ಹರಿಹಾಯ್ದಿದ್ದಾರೆ. ‘ಬಿಜೆಪಿ ಮುಖಂಡ ಈಶ್ವರಪ್ಪನವರು ಹೋರಾಟ ಮಾಡುತ್ತಿರೋದು ಯಾರ ವಿರುದ್ಧ? ತಮ್ಮದೇ ಸರ್ಕಾರದ …

Read More »

ಆಸ್ಕರ್‌ನಿಂದ ಹೊರಬಿದ್ದ ಜಲ್ಲಿಕಟ್ಟು ಸಿನಿಮಾ..!

ನವದೆಹಲಿ : ವಿಶ್ವ ಪ್ರಸಿದ್ಧ ಆಸ್ಕರ್ ಸ್ಪರ್ಧೆಯಿಂದ ಭಾರತೀಯ ಚಿತ್ರರಂಗದ ಪ್ರತಿಷ್ಠೆಯ ಗುರುತಾಗಿ, ಅತ್ಯುತ್ತಮ ಅಂತಾರಾಷ್ಟ್ರೀಯ ವೈಶಿಷ್ಟ್ಯ ವಿಭಾಗದಲ್ಲಿ ಪ್ರವೇಶ ಪಡೆದಿದ್ದ ಮಲೆಯಾಳಂ ಚಿತ್ರ ಜಲ್ಲಿಕಟ್ಟು ಮುಂದಿನ ಹಂತಕ್ಕೆ ತಲುಪುವಲ್ಲಿ ಸೋತು ಸ್ಪರ್ಧೆಯಿಂದ ಹೊರಬಿದ್ದಿದೆ. 93ನೇ ಅಕಾಡೆಮಿ ಪ್ರಶಸ್ತಿಯಿಂದ ಜಲ್ಲಿಕಟ್ಟು ಹೊರಬಿದ್ದರೂ, ದೇಶದ ಮತ್ತೊಂದು ಅತುತ್ತಮ ಲೈವ್ ಆಯಕ್ಷನ್ ಶಾರ್ಟ್ ಫಿಲಂ ‘ಬಿಟ್ಟು’ ಮುಂದಿನ ಹಂತಕ್ಕೆ ತಲುಪಿ ಆಶ್ಚರ್ಯ ಮೂಡಿಸಿದೆ. ಶಾರ್ಟ್ ಫಿಲಂ ವಿಭಾಗದಲ್ಲಿ ಬಿಟ್ಟು ತೀವ್ರ ಸ್ಪರ್ಧೆ ನೀಡುತ್ತಿದೆ. …

Read More »

ಶಿಲ್ಪಕಲಾ ಅಕಾಡೆಮಿ: ಐವರಿಗೆ ಗೌರವ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ 2020ನೇ ಸಾಲಿನ ಗೌರವ ಪ್ರಶಸ್ತಿಗೆ ಐವರು ಕಲಾವಿದರು ಹಾಗೂ ವಾರ್ಷಿಕ ಶಿಲ್ಪಕಲಾ ಪ್ರದರ್ಶನ ಬಹುಮಾನಕ್ಕೆ 6 ಮಂದಿಯ ಶಿಲ್ಪ ಕಲಾಕೃತಿಗಳು ಆಯ್ಕೆಯಾಗಿವೆ. ಪ್ರಶಸ್ತಿಗೆ ಭಾಜನರಾದವರ ಪಟ್ಟಿಯನ್ನು ಅಕಾಡೆಮಿ ಬುಧವಾರ ಬಿಡುಗಡೆ ಮಾಡಿದೆ. ಗದಗದ ನಾಗರಾಜ ಎಸ್‌. ಬೆಟಗೇರಿ (ಸಾಂಪ್ರದಾಯಿಕ ಶಿಲ್ಪ), ಶಿವಮೊಗ್ಗದ ಜೆ.ಸಿ. ಗಂಗಾಧರ (ಸಾಂಪ್ರದಾಯಿಕ ಶಿಲ್ಪ), ಧಾರವಾಡದ ರುದ್ರಪ್ಪ ಮಾನಪ್ಪ ಬಡಿಗೇರ (ಜಾನಪದ ಶಿಲ್ಪ), ಬೆಂಗಳೂರಿನ ಉಲ್ಲಾಸ್ಕರ್ ಡೇ (ಟೆರ್ರಾಕೋಟಾ) ಹಾಗೂ ಉಡುಪಿಯ …

Read More »

ಎಲ್‌ಐಸಿ ಐಪಿಒದೊಡ್ಡ ಸಂಚಲನಎಲ್ಲಾ ಐಪಿಒಗಳಿಗಿಂತ ದೊಡ್ಡದಾಗಿ ಹೊರಹೊಮ್ಮುವ ಸಾಧ್ಯತೆ

ನವದೆಹಲಿ, ಫೆಬ್ರವರಿ 10: ಎಲ್‌ಐಸಿ ಐಪಿಒ ಈಗಾಗಲೇ ದೊಡ್ಡ ಸಂಚಲನವನ್ನು ಸೃಷ್ಟಿಸಿದೆ. ಏಕೆಂದರೆ ಇದುವರೆಗಿನ ಎಲ್ಲಾ ಐಪಿಒಗಳಿಗಿಂತ ದೊಡ್ಡದಾಗಿ ಹೊರಹೊಮ್ಮುವ ಸಾಧ್ಯತೆಯಿದೆ. ಇದರ ಜೊತೆಗೆ ಎಲ್‌ಐಸಿ ಐಪಿಒಗಿಂತ ಮುಂಚೆ ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದ ವಿಮಾ ಪಾಲಿಸಿಗಳನ್ನು ಹೊಂದಿರುವವರಿಗೆ ಗುಡ್‌ನ್ಯೂಸ್ ಇಲ್ಲಿದೆ. ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರು ಎಲ್‌ಐಸಿ ಐಪಿಒ ವಿತರಣೆಯ ಗಾತ್ರದ ಶೇಕಡಾ 10 ರಷ್ಟು ಎಲ್‌ಐಸಿ ಪಾಲಿಸಿದಾರರಿಗೆ ಮೀಸಲಿಡುತ್ತಾರೆ ಎಂಬುದನ್ನು ಖಚಿತಪಡಿಸಿದ್ದಾರೆ. …

Read More »

5 ತಿಂಗಳಿನ ಟೀರಾಗೆ ಬೇಕಿರುವ ‘ಜೀವೌಷಧಿ’ ಮೇಲಿನ 6 ಕೋಟಿ ರೂ. ಜಿಎಸ್‍ಟಿ ಮನ್ನಾ ಮಾಡಿದ ಪಿಎಂ ಮೋದಿ!

ಮುಂಬೈ: ಜೀವನ್ಮರಣ ಹೋರಾಟ ನಡೆಸುತ್ತಿರುವ ಐದು ತಿಂಗಳ ಟೀರಾ ಕಾಮತ್‌ಳ ಜೀವ ಉಳಿಸುವ ಔಷಧಿ ಆಮದಿನ ಮೇಲಿನ ತೆರಿಗೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮನ್ನಾ ಮಾಡಿದ್ದು ಈ ನಿರ್ಧಾರ ಮಗುವಿನ ಪೋಷಕರಿಗೆ ಹೊಸ ಆಶಾಕಿರಣ ಮೂಡಿಸಿದೆ. ಅಪರೂಪದ ಆನುವಂಶಿಕ ಕಾಯಿಲೆಯಿಂದ ಬಳಲುತ್ತಿರುವ ಟೀರಾ ಕಾಮತ್ ಗೆ 16 ಕೋಟಿ ರೂ. ಮೌಲ್ಯದ ಔಷಧಿಯನ್ನು ಆಮದು ಮಾಡಿಕೊಳ್ಳುತ್ತಿದ್ದು ಇದರ ಮೇಲಿನ 6 ಕೋಟಿ ರೂ.ಗಳ ಜಿಎಸ್ಟಿ ಮೊತ್ತವನ್ನು ಪಿಎಂ ಮೋದಿ …

Read More »

ಮದ್ಯಪ್ರಿಯರಿಗೆ ಮತ್ತೆ ಮತ್ತೆ ಆಘಾತ: ಬೆಲೆಯಲ್ಲಿ ಭಾರೀ ಹೆಚ್ಚಳ?

ಬೆಂಗಳೂರು, ಫೆ 11: ಕಳೆದ ಕೇಂದ್ರ ಬಜೆಟ್ ನಲ್ಲಿ ನರೇಂದ್ರ ಮೋದಿ ಸರಕಾರ ಮದ್ಯಪ್ರಿಯರಿಗೆ ಶಾಕ್ ನೀಡಿತ್ತು, ಈಗ, ರಾಜ್ಯ ಬಜೆಟ್ ಸರದಿ. ಮೂಲಗಳ ಪ್ರಕಾರ, ಮತ್ತೆ ಮದ್ಯದ ಬೆಲೆ ಹೆಚ್ಚಾಗಲಿದೆ. ದಿನೋಪಯೋಗಿ ವಸ್ತುಗಳ ಬೆಲೆಯನ್ನು ಹೆಚ್ಚಿಸಿದರೆ ಸಾರ್ವಜನಿಕರು ಸಿಟ್ಟಾಗುವುದರಿಂದ ಸರಕಾರ ಅವುಗಳ ಬೆಲೆಯನ್ನು ಹೆಚ್ಚಿಸುವ ಮುನ್ನ ಹಲವು ಬಾರಿ ಆಲೋಚಿಸುತ್ತದೆ. ಆದರೆ, ಮದ್ಯದ ಬೆಲೆಯನ್ನು ಹೆಚ್ಚಿಸಿದರೆ ಬಹಿರಂಗವಾಗಿ ಯಾರೂ ದೂರುವಂತಿಲ್ಲ. ಇದರ ಲಾಭವನ್ನೇ ಪಡೆದುಕೊಳ್ಳುವ ಸರಕಾರ ಮದ್ಯದ ಮೇಲೆ …

Read More »

ಬಜೆಟ್ ಪೂರ್ವಭಾವಿ ಸಭೆ,ಜನಾರ್ದನ ಹೋಟೆಲ್​​ನಲ್ಲಿ ಬಿಸಿ ಬಿಸಿ ಮಸಾಲೆ ದೋಸೆ ಹಾಗೂ ಬಿಸಿ ಬಿಸಿ ಕಾಫಿ

ಬೆಂಗಳೂರು: ಮುಂದಿನ ತಿಂಗಳು ಬಜೆಟ್ ಮಂಡಿಸಲು ಸಿದ್ಧವಾಗಿರುವ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬುಧವಾರ ಬಜೆಟ್ ಪೂರ್ವ ತಯಾರಿ ಸಭೆಗೂ ಮುನ್ನ ನಗರದ ಶಿವಾನಂದ ಸರ್ಕಲ್ ನಲ್ಲಿರುವ ಜನಾರ್ದನ ಹೋಟೆಲ್​​ನಲ್ಲಿ ಬಿಸಿ ಬಿಸಿ ಮಸಾಲೆ ದೋಸೆ ಹಾಗೂ ಬಿಸಿ ಬಿಸಿ ಕಾಫಿ ಸವಿದರು. ಇಂದು ಬೆಳಗ್ಗೆ ವಿಧಾನಸೌಧದಲ್ಲಿ ಕೆಂಗಲ್ ಹನುಮಂತಯ್ಯ ಜನ್ಮದಿನಾಚರಣೆ ಪ್ರಯುಕ್ತ ಮಾಲಾರ್ಪಣೆ ನೆರವೇರಿಸಿದ ನಂತರ ಬಜೆಟ್ ಪೂರ್ವ ಸಿದ್ಧತಾ ಸಭೆ ನಡೆಸಲು ಶಕ್ತಿಭವನಕ್ಕೆ …

Read More »