ಮೂಡುಬಿದಿರೆ: ಬಿಲ್ಲವರ ಆರಾಧ್ಯ ದೈವಗಳಾದ ಕೋಟಿ ಚೆನ್ನಯರ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಜಗದೀಶ್ ಅಧಿಕಾರಿ, ಮಂಗಳವಾರ ಕೆಲ್ಲಪುತ್ತಿಗೆಯ ಪುರಾತನ ಕ್ಷೇತ್ರ ಭೂತರಾಜಗುಡ್ಡೆಯ ಧರ್ಮರಸು ದೈವ, ಕುಕ್ಕಿನಂತಾಯ, ಕೊಡಮಣಿತ್ತಾಯ, ಬ್ರಹ್ಮ ಬೈದರ್ಕಳ ಗರಡಿಗೆ ಭೇಟಿ ನೀಡಿ, ತಪ್ಪು ಕಾಣಿಕೆ ಸಲ್ಲಿಸಿ, ಕ್ಷಮೆಯಾಚಿಸಿದರು. ‘ನನ್ನಿಂದಾದ ತಪ್ಪಿಗೆ ಕೋಟಿ ಚೆನ್ನಯರ ಗರಡಿಯಲ್ಲಿ ಕ್ಷಮೆಯಾಚಿಸಿ, ತಪ್ಪು ಕಾಣಿಕೆ ಸಲ್ಲಿಸಿ ವಿವಾದಗಳಿಗೆ ಇತಿಶ್ರೀ ನೀಡಲು ನಿರ್ಧರಿಸಿದ್ದೇನೆ. ಕಾಂಗ್ರೆಸ್ …
Read More »ಜಾತ್ರೆ, ಉತ್ಸವಗಳಿಗೆ ನಿರ್ಬಂಧ ತೆರವು
ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ, ಉತ್ಸವ, ವಿಶೇಷ ಪೂಜೆ, ಅನ್ನದಾಸೋಹ, ಪ್ರಸಾದ ವಿತರಣೆಗೆ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಿ ಧಾರ್ಮಿಕ ದತ್ತಿ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ. ಕೋವಿಡ್ ಕಾರಣದಿಂದ ದೇವಾಲಯಗಳು, ಧಾರ್ಮಿಕ ಸಂಸ್ಥೆಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಿ 2020ರ ಮಾರ್ಚ್ 20ರಂದು ಆದೇಶ ಹೊರಡಿಸಲಾಗಿತ್ತು. ಸೆಪ್ಟೆಂಬರ್ 1ರಿಂದ ಕೆಲವು ಷರತ್ತಿಗಳೊಂದಿಗೆ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಸೇವೆ ಆರಂಭಿಸಲು ಅವಕಾಶ …
Read More »ಜಾನುವಾರು ಹತ್ಯೆ ಪ್ರತಿಬಂಧಕ ಮಸೂದೆ ಅಂಗೀಕಾರ ಸರಿಯಾಗಿದೆ: ಸಭಾಪತಿ ರೂಲಿಂಗ್
ಬೆಂಗಳೂರು: ಕಾಂಗ್ರೆಸ್ ಸದಸ್ಯರ ಧರಣಿ ಮಧ್ಯೆಯೇ, ‘ಧ್ವನಿ ಮತದಿಂದ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಮಸೂದೆಗೆ ನೀಡಿರುವ ಅನುಮೋದನೆ ಸರಿಯಾಗಿದೆ’ ಎಂದು ಸಭಾಪತಿ ಬಸವರಾಜ ಹೊರಟ್ಟಿ ರೂಲಿಂಗ್ ನೀಡಿದರು. ಅಲ್ಲದೆ, ಕಾಂಗ್ರೆಸ್ ಸದಸ್ಯ ಧಿಕ್ಕಾರ ಘೋಷಣೆಯ ನಡುವೆಯೇ ರಾಜ್ಯಪಾಲರ ಭಾಷಣ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಉತ್ತರ ನೀಡಿದರು. ಆ ಬಳಿಕ, ಕಲಾಪವನ್ನು ಸಭಾಪತಿ ಅನಿರ್ದಿಷ್ಟ ಅವಧಿಗೆ ಮುಂದೂಡಿದರು. …
Read More »ನರ್ಸಿಂಗ್: ಸಿಗದ ಆನ್‌ಲೈನ್ ಅರ್ಜಿ, ‘ಸರ್ಕಾರಿ ಕೋಟ’ ವಿದ್ಯಾರ್ಥಿಗಳಿಗೆ ಅನ್ಯಾಯ!
ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯು ನರ್ಸಿಂಗ್ ಕೋರ್ಸ್‌ಗ ಳಿಗಾಗಿ ‘ಸರ್ಕಾರಿ ಕೋಟಾ’ದಡಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆದರೆ, ಅರ್ಜಿ ಸಲ್ಲಿಕೆಗೆ ಎರಡೇ ದಿನಗಳು ಬಾಕಿ ಉಳಿದಿದ್ದರೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ (kea.kar.nic.in) ಆನ್‌ಲೈನ್ ಅರ್ಜಿ ನಮೂನೆ, ಮಾಹಿತಿ ಪತ್ರ ಸೇರಿ ಯಾವುದೂ ಲಭ್ಯವಿಲ್ಲ! ಇದರಿಂದ ನರ್ಸಿಂಗ್ ಕೋರ್ಸ್‌ಗಳಿಗೆ ದಾಖಲಾಗಬೇಕು ಎಂದು ಬಯಸಿರುವ ರಾಜ್ಯದ ಗ್ರಾಮಾಂತರ ಪ್ರದೇಶದ ಸಾವಿರಾರು ವಿದ್ಯಾರ್ಥಿಗಳು ಅತಂತ್ರರಾಗಿದ್ದಾರೆ. ಪರೀಕ್ಷಾ ಪ್ರಾಧಿಕಾರದ ಸಿಬ್ಬಂದಿ ತಮ್ಮ ಅಳಲಿಗೆ ಕಿವಿಗೊಡುತ್ತಿಲ್ಲ …
Read More »ಕೃಷಿ ಕಾಯ್ದೆ ವಿರುದ್ಧ ನಕಲಿ ರೈತರ ಹೋರಾಟ
ಶಿವಮೊಗ್ಗ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವುದು ನಕಲಿ ರೈತರ ಹೋರಾಟ. ವಿದೇಶಿ ಶಕ್ತಿಗಳ ಕಪಿಮುಷ್ಠಿಯಲ್ಲಿ ರೈತ ಮುಖಂಡರು ಸಿಲುಕಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು. ನಿಜವಾದ ರೈತರು ಹೋರಾಟ ನಡೆಸುತ್ತಿಲ್ಲ. ಕೆಲವು ಹಿತಾಸಕ್ತಿಗಳು ರೈತರ ದಾರಿ ತಪ್ಪಿಸುತ್ತಿವೆ. ಕೃಷಿ ಕಾಯ್ದೆಯಿಂದ ರೈತರಿಗೆ ಆಗುವ ಅನುಕೂಲಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಸ್ಪಷ್ಟಪಡಿಸಿದ್ದಾರೆ. ರೈತರ ಗೊಂದಲಗಳನ್ನು ನಿವಾರಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಮುಂದುವರಿಸುವ ಭರವಸೆ ನೀಡಿದ್ದಾರೆ …
Read More »ದಲಿತರು, ಅಲ್ಪ ಸಂಖ್ಯಾತರಿಗೆ ಅನ್ಯಾಯವಾದರೆ ರಸ್ತೆಗಿಳಿದು ಹೋರಾಟ; ಸಿದ್ದರಾಮಯ್ಯ ಎಚ್ಚರಿಕೆ
ಮೈಸೂರು (ಫೆ. 10): ರಾಜ್ಯದಲ್ಲಿ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರಿಗೆ ಅನ್ಯಾಯವಾದರೆ ರಸ್ತೆಗಿಳಿದು ಹೋರಾಟ ಮಾಡುವುದಾಗಿ ಮೈಸೂರಿನ ಸುತ್ತೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ರಾಜ್ಯ ಬಿಜೆಪಿ ಸರ್ಕಾರಗಳು ಮೀಸಲಾತಿ ವಿರುದ್ದ ಇವೆ. ಖಾಸಗೀಕರಣದ ಹೆಸರಿನಲ್ಲಿ ಮೀಸಲಾತಿಯನ್ನು ಕಿತ್ತುಕೊಳ್ಳುತ್ತಿವೆ. ಅಂತಹ ಪರಿಸ್ಥಿತಿ ಬಂದರೆ ಅಹಿಂದ ಪರವಾಗಿ ಹೋರಾಟ ನಡೆಸಲು ಸಿದ್ಧನಿದ್ದೇನೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ. ಕುರುಬರಿರಲಿ ಅಥವಾ ಯಾರೇ ಇರಲಿ ಅವರಿಗೆ ಸಂವಿಧಾನಾತ್ಮಕವಾಗಿ ಮೀಸಲಾತಿ …
Read More »ಸವದತ್ತಿ ಯಲ್ಲಮ್ಮ ಭಕ್ತರ ದರ್ಶನಕ್ಕೆ ಮುಕ್ತ , ಶುಕ್ರವಾರ ಒಂದು ಲಕ್ಷ ಭಕ್ತರು ದೇವಸ್ಥಾನಕ್ಕೆ ಬರುತ್ತಿದ್ದಾರೆ.
ಬೆಳಗಾವಿ (ಫೆ. 9); ಉತ್ತರ ಕರ್ನಾಟಕದ ಶಕ್ತಿ ದೇವತೆ ಸವದತ್ತಿ ಯಲ್ಲಮ್ಮ. 11 ತಿಂಗಳ ಬಳಿಕ ದೇವಾಲಯ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಭಕ್ತ ಸಾಗರ ಹರಿದು ಬರುತ್ತಿದೆ. ಪ್ರತಿ ಮಂಗಳವಾರ, ಶುಕ್ರವಾರ ಒಂದು ಲಕ್ಷ ಭಕ್ತರು ದೇವಸ್ಥಾನಕ್ಕೆ ಬರುತ್ತಿದ್ದಾರೆ. ಪ್ರತಿ ದಿನ ದೇವಿಯ ದರ್ಶನ ಪಡೆಯಲು 20 ಸಾವಿರ ಜನ ಬರುತ್ತಿದ್ದಾರೆ. ಭಕ್ತರನ್ನು ನಿಯಂತ್ರಿಸಲು ಆಡಳಿತ ಮಂಡಳಿ ಎಲ್ಲಾ ವ್ಯವಸ್ಥೆ ಮಾಡಿಕೊಂಡಿದೆ. ಬೆಳಗಾವಿ ಜಿಲ್ಲೆಯ …
Read More »ಮತ್ತೆ 10 ದಿನ ಪ್ರಕೃತಿ ಚಿಕಿತ್ಸೆ ಕೇಂದ್ರ ಸೇರಲಿದ್ದಾರೆ ಸಿದ್ದರಾಮಯ್ಯ..!
ಬೆಂಗಳೂರು, ಫೆ.10- ವಿಧಾನ ಮಂಡಲ ಅವೇಶನದ ಬಳಿಕ ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಳ್ಳಲಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅದಕ್ಕೂ ಮೊದಲು ಸದೃಢ ಆರೋಗ್ಯಕ್ಕಾಗಿ 10 ದಿನಗಳ ಕಾಲ ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯಲು ಮುಂದಾಗಿದ್ದಾರೆ. ಇಂದು ಸಂಜೆಯಿಂದ ಎರಡು ದಿನಗಳ ಕಾಲ ಸ್ವಕ್ಷೇತ್ರ ಬಾದಾಮಿಯಲ್ಲಿ ಪ್ರವಾಸ ನಡೆಸಲಿರುವ ಸಿದ್ದರಾಮಯ್ಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಅನಂತರ ಫೆ.25ರಿಂದ 10 ದಿನಗಳ ಕಾಲ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ …
Read More »ರಾಜ್ಯ ಸರ್ಕಾರದಿಂದಲೂ ತೆರಿಗೆ ಬರೆ..! ಬಿಎಸ್‌ವೈ ಬಜೆಟ್‌ನಲ್ಲಿ ಕಾದಿದೆ ಶಾಕ್..?
ಬೆಂಗಳೂರು,ಫೆ.10- ಈ ಬಾರಿ ಕೋವಿಡ್-19 ಬಂದ ಹಿನ್ನೆಲೆಯಲ್ಲಿ ಸರ್ಕಾರದ ಬೊಕ್ಕಸಕ್ಕೆ ನಿರೀಕ್ಷಿತ ಪ್ರಮಾಣದ ತೆರಿಗೆ ಸಂಗ್ರಹವಾಗದಿರುವ ಕಾರಣ ಈ ಬಾರಿಯ ಬಜೆಟ್‍ನಲ್ಲಿ ತೆರಿಗೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಜನಸಾಮಾನ್ಯರಿಗೆ ಮತ್ತಷ್ಟು ಹೊರೆಯಾಗಲಿದೆ. ಮಾರ್ಚ್ ತಿಂಗಳ ಎರಡನೇ ವಾರದಲ್ಲಿ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2021-22ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದು ಈಗಾಗಲೇ ಇಲಾಖಾವಾರು ಸಭೆಗಳನ್ನು ನಡೆಸುತ್ತಿದ್ದಾರೆ. ಕಳೆದ ವರ್ಷ ಸರ್ಕಾರ ಇಟ್ಟುಕೊಂಡಿದ್ದ ತೆರಿಗೆ ಸಂಗ್ರಹಣೆ …
Read More »ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗೆ ಬೆಳಗಾವಿ ಹುಕ್ಕೇರಿ ಹಿರೇಮಠದಿಂದ ಗೌರವ
ಹರಿಹರ (ರಾಜನಹಳ್ಳಿ): ವಾಲ್ಮೀಕಿ ಜಾತ್ರಾ ಮಹೋತ್ಸವವನ್ನು ಯಶಸ್ವಿಯಾಗಿ ಸಂಘಟಿಸುತ್ತಿರುವ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರಿಗೆ ಬೆಳಗಾವಿಯ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರು ಸ್ವಾಮೀಜಿ ಯವರನ್ನು ಸನ್ಮಾನಿಸಿ ಮಾತನಾಡಿ, “ಬೆಳಗಾವಿ ಹುಕ್ಕೇರಿ ಹಿರೇಮಠ ಎಲ್ಲ ಸಮುದಾಯದೊಂದಿಗೆ ಬೆರೆತು ಕಾರ್ಯವನ್ನು ಮಾಡುತ್ತಿದೆ. ವಾಲ್ಮೀಕಿ ಪೀಠದ ಗುರುಗಳಿಗೆ ಗೌರವಿಸಿದ್ದು ನನಗೆ ಅತೀವ ಸಂತಸ ತಂದಿದೆ” ಎಂದು ಹೇಳಿದರು. ಹುಕ್ಕೇರಿ ಹಿರೇಮಠದ …
Read More »