ಬೆಂಗಳೂರು: ವಿಜಯನಗರ ನೂತನ ಜಿಲ್ಲೆಯಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ವಿಜಯನಗರ ಜಿಲ್ಲೆಗೆ ಹೊಸಪೇಟೆ ಕೇಂದ್ರ ಸ್ಥಾನವನ್ನಾಗಿ ಮಾಡಲಾಗಿದೆ. ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿದ್ದ ರಾಜ್ಯ ಸರ್ಕಾರ ವಿಜಯ ನಗರ ಪ್ರತ್ಯೇಕ ಜಿಲ್ಲೆ ಘೋಷಣೆ ಮಾಡಿತ್ತು. ಇದೀಗ ಅಧಿಕೃತ ಆದೇಶ ಹೊರಡಿಸಿದ್ದು, ವಿಜಯನಗರಕ್ಕೆ ಹೊಸಪೇಟೆ, ಕೂಡ್ಲಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನ ಹಡಗಲಿ, ಹರಪನಹಳ್ಳಿ ಸೇರಿ 6 ತಾಲೂಕುಗಳನ್ನು ಸೇರಿಸಿದೆ. ಬಳ್ಳಾರಿ ಜಿಲ್ಲೆಯಲ್ಲಿ ಬಳ್ಳಾರಿ, ಕುರುಗೋಡು, ಸಿರಗುಪ್ಪ, ಕಂಪ್ಲಿ, ಸಂಡೂರು …
Read More »ಬಿಜೆಪಿಗೆ ದಿಟ್ಟ ಸವಾಲು ಹಾಕಿದ ಮಮತಾ ಬ್ಯಾನರ್ಜಿ
ಕೋಲ್ಕತ್ತಾ, ಫೆಬ್ರುವರಿ 08: ಪಶ್ಚಿಮ ಬಂಗಾಳದಲ್ಲಿ ರಾಜ್ಯ ಬಜೆಟ್ ಮಂಡನೆಯಾಗಿದ್ದು, ಸಿಎಂ ಮಮತಾ ಬ್ಯಾನರ್ಜಿ ವಿಧಾನಸಭೆಯಲ್ಲಿ ಫೆಬ್ರುವರಿ 5ರಂದು ಬಜೆಟ್ ಮಂಡಿಸಿ, ರಾಜ್ಯ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂದು ಕರೆಸಿಕೊಂಡಿದ್ದಾರೆ. ಬಜೆಟ್ ನಲ್ಲಿ ಪಶ್ಚಿಮ ಬಂಗಾಳ ಜನರಿಗೆ ಹಲವು ಕೊಡುಗೆಗಳನ್ನೂ ನೀಡಿದ್ದಾರೆ. ಆದರೆ ರಾಜ್ಯ ಬಜೆಟ್ ಕುರಿತು ಟೀಕೆ ಮಾಡಿರುವ ಬಿಜೆಪಿ, “ಮಮತಾ ಬ್ಯಾನರ್ಜಿ ಮಂಡಿಸಿರುವ ಈ ರಾಜ್ಯ ಬಜೆಟ್ ವಾಸ್ತವಕ್ಕೆ ದೂರವಾದವು. ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು …
Read More »ಕೊನೆಗೂ ಬಳ್ಳಾರಿಯನ್ನು ವಿಭಜಿಸಿ ಹೊಸ ವಿಜಯನಗರ ಜಿಲ್ಲೆಯನ್ನು ಘೋಷಿಸಿದ ಸರ್ಕಾರ; ಹೊಸಪೇಟೆ ಕಾರ್ಯಸ್ಥಾನ!
ಬೆಂಗಳೂರು (ಫೆಬ್ರವರಿ 08); ಸಚಿವ ಆನಂದ್ ಸಿಂಗ್ ಅವರ ಮನವಿಗೆ ಕೊನೆಗೂ ಮನ್ನಣೆ ನೀಡಿರುವ ರಾಜ್ಯ ಸರ್ಕಾರ ಬಳ್ಳಾರಿ ಜಿಲ್ಲೆಯನ್ನು ಒಡೆದು ಹೊಸ ವಿಜಯನಗರ ಜಿಲ್ಲೆಯನ್ನು ಇಂದು ವಿಧಾನ ಮಂಡಲ ಅಧಿವೇಶನದಲ್ಲಿ ಘೋಷಿಸಿದೆ. ಆ ಕುರಿತು ಅಧಿಕೃತ ಆದೇಶವನ್ನೂ ಸಹ ರಾಜ್ಯ ಸರ್ಕಾರ ಹೊರಡಿಸಿದೆ. ಹೊಸಪೇಟೆಯನ್ನು ಕಾರ್ಯಸ್ಥಾನವನ್ನಾಗಿಸಿ ವಿಜಯನಗರ ಎಂಬ ಹೊಸ ಜಿಲ್ಲೆಯನ್ನು ಘೋಷಿಸಬೇಕು ಎಂಬ ಕೂಗು ಬಹುದಿನಗಳಿಂದಲೂ ಇದೆ. ಕೊಪ್ಪಳವನ್ನು ಹೊಸ ಜಿಲ್ಲೆಯನ್ನಾಗಿ ಘೋಷಿಸಿದ ಸಂದರ್ಭದಲ್ಲೇ ಈ ಕೂಗು …
Read More »ವಾಲ್ಮೀಕಿ ಜಾತ್ರೆಯಲ್ಲಿ ಮೀಸಲಾತಿ ಹೆಚ್ಚಳ ಕುರಿತು ಚರ್ಚೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಗೋಕಾಕ : ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಹೆಚ್ಚಳ ಮಾಡಬೇಕು ಎಂಬ ಒತ್ತಾಯ ಹಲವು ವರ್ಷಗಳಿಂದಲೂ ಇದೆ. ಆ ವಿಷಯವಾಗಿ ವಾಲ್ಮೀಕಿ ಜಾತ್ರೆಯಲ್ಲಿ ಚರ್ಚೆ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ಬಾರಿಯೂ ಸಹ ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮದಲ್ಲಿರುವ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರವರಿ 8 ಮತ್ತು 9 ರಂದು ಮಹರ್ಷಿ ವಾಲ್ಮೀಕಿ …
Read More »ತಮಿಳು, ತೆಲುಗಿನಿಂದಾಗಿ ಕನ್ನಡ ಚಿತ್ರರಂಗ ಉದ್ದಾರ ಆಗಿಲ್ಲ: ಸುದೀಪ್ ಖಡಕ್ ಮಾತು
ಬೆಂಗಳೂರು: ಬೇರೆ ಭಾಷೆಯಿಂದಾಗಿ ನಮ್ಮ ಚಿತ್ರರಂಗ ಇತ್ತೀಚೆಗಿನ ದಿನಗಳಲ್ಲಿ ಬೇರೆ ಲೆವೆಲ್ ಗೆ ಹೋಗಿಲ್ಲ. ಕನ್ನಡಕ್ಕೆ ಕನ್ನಡದ್ದೇ ಆದ ನೆಲೆ, ಸ್ಥಾನ-ಮಾನವಿದೆ ಎಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೇಳಿದ್ದಾರೆ. ತಮ್ಮ ಚಿತ್ರಜೀವನಕ್ಕೆ 25 ವರ್ಷ ತುಂಬಿದ ಹಿನ್ನಲೆಯಲ್ಲಿ ಮಾಧ‍್ಯಮಗಳೊಂದಿಗೆ ಮಾತನಾಡಿದ ಸುದೀಪ್, ಕನ್ನಡ ಸಿನಿಮಾ ಈಗ ಬೇರೆ ಭಾಷೆಗಳಲ್ಲೂ ಮಿಂಚುತ್ತಿದೆ. ಇದರಿಂದಾಗಿ ನಮ್ಮ ಸಿನಿಮಾದ ಲೆವೆಲ್ ಬೇರೆಯಾಗಿದೆ ಎಂದು ನಿಮಗನಿಸುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು ತಮಿಳು, ತೆಲುಗು, …
Read More »LPG ಸಿಲಿಂಡರ್ ಪಡೆಯಲು ಸರ್ಕಾರ ನೀಡುತ್ತೆ 1600 ರೂಪಾಯಿ
ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಒಂದು ಕೋಟಿ ಹೊಸ ಸಿಲಿಂಡರ್ ಸಂಪರ್ಕ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಉಜ್ವಲಾ ಯೋಜನೆಯಡಿ ಅನಿಲ ಸಂಪರ್ಕ ನೀಡಲಾಗುವುದು. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಕ್ಕೆ ಸಿಲಿಂಡರ್ ಸಂಪರ್ಕ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಪಿಎಂ ಉಜ್ವಾಲಾ ಯೋಜನೆಯಡಿ ಬಡ ಕುಟುಂಬಗಳಿಗೆ ಸರ್ಕಾರ ಆರ್ಥಿಕ ನೆರವು ನೀಡುತ್ತದೆ. ಇದರಲ್ಲಿ 1600 ರೂಪಾಯಿಗಳನ್ನು ಸರ್ಕಾರ ನೀಡುತ್ತಿದೆ. ಎಲ್‌ಪಿಜಿ ಗ್ಯಾಸ್ ಸಂಪರ್ಕವನ್ನು ಖರೀದಿಸಲು …
Read More »ಪಡಿತರದಾರ’ರಿಗೆ ಗುಡ್ ನ್ಯೂಸ್ : ’31 ರಾಜ್ಯ’ಗಳಲ್ಲಿ ‘ಒನ್ ನೇಷನ್, ಒನ್ ರೇಷನ್ ಕಾರ್ಡ್’ ಜಾರಿ
ನವದೆಹಲಿ : ಈಗಾಗಲೇ ದೇಶದ ಕೆಲ ರಾಜ್ಯಗಳಲ್ಲಿ ಮಾತ್ರವೇ ಒನ್ ನೇಷನ್ ಒನ್ ರೇಷನ್ ಕಾರ್ಡ್ ಜಾರಿಯಲ್ಲಿದೆ. ಇಂತಹ ಯೋಜನೆಯನ್ನು ಇದೀಗ 31 ರಾಜ್ಯಗಳಲ್ಲಿ ಜಾರಿಗೊಳಿಸಲಾಗುತ್ತಿದೆ. ಹೀಗಾಗಿ ಪಡಿತರದಾರರು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಗಳಿಗೆ ತೆರಳಿದ್ರೂ, ಪಡಿತರ ಧಾನ್ಯಗಳನ್ನು ಇರುವ ಸ್ಥಳದಲ್ಲಿಯೇ ಪಡೆಯಬಹುದಾಗಿದೆ. ಈ ಬಗ್ಗೆ ಇಂದು ಕೇಂದ್ರ ಬಜೆಟ್-2021 ಮಂಡಿಸುತ್ತಾ ತಿಳಿಸಿದಂತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕುಟುಂಬದ ಪ್ರತಿ ಸದಸ್ಯರ ಆಧಾರದ ಮೇಲೆ ಪಡಿತರ ವಿತರಣೆ …
Read More »ಗಣಿಗಾರಿಕೆಗೆ ಸಂಬಂಧಿಸಿದ ಪ್ರಸ್ತಾವನೆಗಳಿಗೆ ಸುಲಭ ಹಾಗೂ ಸರಳ ಅನುಮೋದನೆ:
ಬೆಂಗಳೂರು- ಗಣಿಗಾರಿಕೆಗೆ ಸಂಬಂಧಿಸಿದ ಪ್ರಸ್ತಾವನೆಗಳಿಗೆ ಸುಲಭವಾಗಿ ಹಾಗೂ ಸರಳವಾಗಿ ಅನುಮೋದನೆ ನೀಡಲು ಸಾಧ್ಯವಾಗುವಂತಹ ‘ಏಕಗವಾಕ್ಷಿ ‘ಪದ್ದತಿಯನ್ನು ಅಳವಡಿಸಲು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರೇಶ್ ನಿರಾಣಿ ಅವರು ತೀರ್ಮಾನಿಸಿದ್ದಾರೆ.ಆ ಮೂಲಕ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬರುವ ಉದ್ದಿಮೆದಾರರಿಗೆ ಸುಲಭವಾಗಿ ಹಾಗೂ ಸುಲಲಿತವಾಗಿ ವ್ಯಾಪಾರ, ವಹಿವಾಟು ನಡೆಸಲು ಅನುಕೂಲವಾಗುವಂತೆ ಈ ಪದ್ದತಿಯನ್ನು ಜಾರಿ ಮಾಡಲು ಮುಂದಾಗಿದ್ದಾರೆ. ಈ ಸಂಬಂಧ ಇತ್ತೀಚಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ …
Read More »ಲಕ್ಷ್ಮೀನ ಶಿಕ್ಷಣ ಸಂಸ್ಥೆಯಿಂದ ಕ್ರೀಡೋ ಸಂಸ್ಥೆಯ ಮಾರ್ಗದರ್ಶನದಲ್ಲಿ ಆರಂಭಗೊಂಡ ಆಂಗ್ಲ ಮಾಧ್ಯಮ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪ್ರೀ-ಪ್ರಾಯಮರಿ ಶಾಲೆಯ ಉದ್ಘಾಟನೆಯನ್ನು ಸುವರ್ಣಾ ಭೀಮಶಿ ಜಾರಕಿಹೊಳಿ ನೆರವೇರಿಸಿದರು.
ಗೋಕಾಕ: ಮಕ್ಕಳಿಗೆ ಉಪಕರಣಗಳೊಂದಿಗೆ ಪ್ರಾಯೋಗಿಕವಾಗಿ ಕಲಿಸುವ ಕಲಿಕಾ ಕ್ರಮವು ಅತ್ಯಂತ ಪರಿಣಾಮಕಾರಿ ಆಗಿರುತ್ತದೆ ಎಂದು ಬೆಂಗಳೂಇನ ಕ್ರೀಡೋ ಸಂಸ್ಥೆಯ ಆಯೇಷಾ ಶೇಖ ಹೇಳಿದರು. ಶನಿವಾರ ನಗರದ ಲಕ್ಷ್ಮೀ ಎಜ್ಯುಕೇಶನ್ ಟ್ರಸ್ಟಿನಿಂದ ಕ್ರೀಡೋ ಸಂಸ್ಥೆಯ ಮಾರ್ಗದರ್ಶನದಲ್ಲಿ ಆರಂಭಗೊಂಡ ಆಂಗ್ಲ ಮಾಧ್ಯಮ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪ್ರೀ-ಪ್ರಾಯಮರಿ ಶಾಲೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು, ಇಂದಿನ ತಾಂತ್ರಿಕ ಯುಗದಲ್ಲಿ ಮಕ್ಕಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸಲು ಅಧುನಿಕ ಕಲಿಕಾ ಕ್ರಮಗಳನ್ನು …
Read More »ಪರಿಷತ್‍ನ ಸಭಾಪತಿ ಚುನಾವಣೆಗೆ ಹೊರಟ್ಟಿ- ನಜೀರ್ ಅಹಮ್ಮದ್ ನಾಮಪತ್ರ ಸಲ್ಲಿಕೆ
ಬೆಂಗಳೂರು,ಫೆ.8- ನಾಳೆ ನಡೆಯಲಿರುವ ವಿಧಾನಪರಿಷತ್‍ನ ಸಭಾಪತಿ ಚುನಾವಣೆಗೆ ಮಾಜಿ ಸಚಿವರಾದ ಬಸವರಾಜ್ ಹೊರಟ್ಟಿ ಹಾಗೂ ನಜೀರ್ ಅಹಮ್ಮದ್ ಸ್ಪರ್ಧೆಗಿಳಿದಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಹಾಗೂ ಕಾಂಗ್ರೆಸ್‍ನಿಂದ ನಜೀರ್ ಅಹಮ್ಮದ್ ನಾಮಪತ್ರ ಸಲ್ಲಿಸಿದ್ದು, ಚುನಾವಣೆ ನಾಳೆ ನಡೆಯಲಿದೆ. ಪರಿಷತ್‍ನ ಸಭಾಪತಿಯಾಗಿದ್ದ ಪ್ರತಾಪ್‍ಚಂದ್ರ ಶೆಟ್ಟಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದೆ.ಈಗಿನ ಪರಿಷತ್ ಬಲಾಬಲದ ಪ್ರಕಾರ ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ …
Read More »