Breaking News

#KarnatakaWithFarmersProtest ಎಂಬ ಟ್ವಿಟರ್ ಅಭಿಯಾನವನ್ನು ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿದೆ.

ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ವ್ಯಕ್ತಪಡಿಸಿದೆ. ಆ ಮೂಲಕ ಟ್ವಿಟರ್‌ ಅಭಿಯಾನಕ್ಕೆ ಕರವೇ ಸಿದ್ಧತೆ ನಡೆಸಿದೆ. ಶನಿವಾರ(ಫೆ.06) ಸಂಜೆ ಐದು ಗಂಟೆಯಿಂದ #ರೈತಹೋರಾಟದೊಂದಿಗೆಕರ್ನಾಟಕ ಮತ್ತು #KarnatakaWithFarmersProtest ಎಂಬ ಟ್ವಿಟರ್ ಅಭಿಯಾನವನ್ನು ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ, ‘ಇದೊಂದು ಐತಿಹಾಸಿಕ ಸಂದರ್ಭವಾಗಿದೆ. ನಮ್ಮ ನಾಡು ರೈತರ ಜತೆ …

Read More »

86ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ: ಅರವಿಂದ ಲಿಂಬಾವಳಿ

ಬೆಂಗಳೂರು: ಫೆಬ್ರವರಿ ತಿಂಗಳ ಕೊನೆಯಲ್ಲಿ ಹಾವೇರಿಯಲ್ಲಿ ನಡೆಸಲು ಉದ್ದೇಶಿಸಲಾಗಿದ್ದ 86ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ. ಕನ್ನಡ ಹಬ್ಬದ ಸಿದ್ಧತೆ ಇನ್ನೂ ಪೂರ್ಣಗೊಂಡಿಲ್ಲ. ಅಲ್ಲದೆ, ಹೆಚ್ಚಿನ ಸಂಖ್ಯೆಯ ಜನರು ಸೇರುವುದರಿಂದ, ಕೋವಿಡ್ ನಿಯಮ ಪಾಲನೆ ಕಷ್ಟವಾಗಲಿದೆ. ಫೆಬ್ರವರಿ ಅಂತ್ಯದಲ್ಲಿ ಕೋವಿಡ್ ಹೊಸ ನಿಯಮಾವಳಿ ಜಾರಿಗೆ ಬಂದ ಬಳಿಕ ಮಾರ್ಚ್ 9ಕ್ಕೆ ಮತ್ತೊಂದು ಸಭೆ ನಡೆಸಿ, ಸಮ್ಮೇಳನ ದಿನಾಂಕ …

Read More »

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ: B,S,Y,- ಯತ್ನಾಳ ಜಟಾಪಟಿ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ‘ಪ್ರವರ್ಗ 2 ಎ’ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಿಜೆಪಿ ಸದಸ್ಯ ಬಸನಗೌಡ ಯತ್ನಾಳ ನಡುವಿನ ಜಟಾಪಟಿಗೆ ವಿಧಾನಸಭೆ ಶುಕ್ರವಾರ ಸಾಕ್ಷಿಯಾಯಿತು. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಪ್ರಸ್ತಾವಕ್ಕೆ ಮುಖ್ಯಮಂತ್ರಿ ಉತ್ತರ ನೀಡಿ ಕೂತರು. ಈ ವೇಳೆ ಬಸನಗೌಡ ಯತ್ನಾಳ, ‘ಪಂಚಮಸಾಲಿ ಹಾಗೂ ಹಾಲುಮತ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಮೂರು ಪಕ್ಷಗಳ ಸದಸ್ಯರು ಸದನದಲ್ಲಿ ಧರಣಿ ನಡೆಸಿದ್ದೇವೆ. ಆದರೆ, …

Read More »

ಬಿಪಿಎಲ್‌ ಕಾರ್ಡ್‌ಗೆ ಆನ್‌ಲೈನ್ ಮೂಲಕ ಅರ್ಜಿ: ಉಮೇಶ ಕತ್ತಿ

ಬಿಪಿಎಲ್‌ ಕಾರ್ಡ್‌ ಪಡೆಯಲು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು ಎಂದು ಆಹಾರ ಸಚಿವ ಉಮೇಶ ಕತ್ತಿ ತಿಳಿಸಿದರು. ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸುವುದಕ್ಕೆ ತಡೆ ನೀಡಲಾಗಿತ್ತು. ಈಗ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಒಂದು ವೇಳೆ ಸರ್ವರ್‌ನಲ್ಲಿ ಯಾವುದೇ ಸಮಸ್ಯೆ ಇದ್ದರೆ ಇದೇ 15 ರೊಳಗೆ ಸರಿಪಡಿಸಿ ಬಿಪಿಎಲ್‌ ಕಾರ್ಡ್‌ ವಿತರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

Read More »

ಪರಿಶಿಷ್ಟರಿಗೆ ಶೇ 75 ರಿಯಾಯ್ತಿ ದರದಲ್ಲಿ ಕೈಗಾರಿಕಾ ಜಮೀನು‌: ಜಗದೀಶ ಶೆಟ್ಟರ್‌

ಬೆಂಗಳೂರು: ಪರಿಶಿಷ್ಟಜಾತಿ ಮತ್ತು ಪಂಗಡದವರಿಗೆ ಕೈಗಾರಿಕೆಗಳನ್ನು ಸ್ಥಾಪಿಸಲು ಜಮೀನು ಅಥವಾ ಕೈಗಾರಿಕಾ ಶೆಡ್‌ಗಳನ್ನು ಶೇ 75 ರಷ್ಟು ರಿಯಾಯ್ತಿ ದರದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಅವರು ವಿಧಾನಸಭೆಯಲ್ಲಿ ತಿಳಿಸಿದರು. ಈಗ ಶೇ 50 ರಷ್ಟು ರಿಯಾಯ್ತಿ ದರದಲ್ಲಿ ಜಮೀನು ಮತ್ತು ಕೈಗಾರಿಕಾ ಶೆಡ್‌ಗಳನ್ನು ಹಂಚಿಕೆ ಮಾಡಲಾಗುತ್ತಿದೆ. ರಿಯಾಯ್ತಿ ಪ್ರಮಾಣವನ್ನು ಶೇ 75 ಕ್ಕೆ ಹೆಚ್ಚಿಸಲು ಮುಖ್ಯಮಂತ್ರಿಯವರು ಒಪ್ಪಿಕೊಂಡಿದ್ದಾರೆ ಎಂದು ಅವರು ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ …

Read More »

ವಯೋಮಿತಿ ಮೀರದ ಅಭ್ಯರ್ಥಿಗಳಿಗೆ ಇನ್ನೊಮ್ಮೆ ಪರೀಕ್ಷೆ (UPSC)ಬರೆಯಲು ಅನುಮತಿ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸುವ ನಾಗರಿಕ ಸೇವಾ ಪರೀಕ್ಷೆ(CSE)ಗಳಲ್ಲಿ ಪಾಲ್ಗೊಳ್ಳಲು 2020 ಕೊನೆಯ ದಿನವಾಗಿದ್ದು ವಯೋಮಿತಿ ಮೀರದ ಅಭ್ಯರ್ಥಿಗಳಿಗೆ ಇನ್ನೊಮ್ಮೆ ಪರೀಕ್ಷೆ ಬರೆಯಲು ಅನುಮತಿ ನೀಡಲು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ. ಈ ನಿಯಮ ಸಡಿಲಿಕೆ ನಾಗರಿಕ ಸೇವಾ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಅರ್ಹ ಅಭ್ಯರ್ಥಿಗಳಿಗೆ ಇನ್ನೊಂದು ಅವಕಾಶ ಒದಗಿಸಲು ಮಾತ್ರ ಸೀಮಿತವಾಗಿರುತ್ತದೆ. ಪರೀಕ್ಷೆ ತೆಗೆದುಕೊಳ್ಳಲು 2020 ಕೊನೆಯ ಅವಕಾಶವಾಗಿದ್ದ ಮತ್ತು ವಯೋಮಿತಿ ಮೀರದ ಅಭ್ಯರ್ಥಿಗಳಿಗೆ ಮಾತ್ರ ಈ …

Read More »

BSYಗೆ ಬುದ್ಧಿಸ್ಥಿಮಿತದಲ್ಲಿಲ್ಲ,ವಯಸ್ಸಾಗಿದೆ.C.M. ಸ್ಥಾನದಿಂದ ಕೆಳಗಿಳಿಸಿ:

ಚಿತ್ರದುರ್ಗ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೇಂದ್ರ ಸರ್ಕಾರದ ನಿರ್ಧಾರ ಎಂಬ ಸಿಎಂ ಬಿ.ಎಸ್.ಯಡಿಯೂರಪ್ಪನವರ ಹೇಳಿಕೆಗೆ ಕಿಡಿಕಾರಿರುವ ಜಯಮೃತ್ಯುಂಜಯ ಸ್ವಾಮೀಜಿ ಯಡಿಯೂರಪ್ಪನವರಿಗೆ ಬುದ್ಧಿ ಸ್ಥಿಮಿತದಲಿಲ್ಲ, ಅವರಿಗೆ ವಯಸ್ಸಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ಯಡಿಯೂರಪ್ಪ, ನಿನ್ನೆ ಸರ್ಕಾರದ ನಿಯೋಗ ಕಳುಹಿಸಿ ಭರವಸೆ ನೀದಿದರು. ಇಂದು ವಿಧಾನಸಭೆಯಲ್ಲಿ ಮೀಸಲಾತಿ ಬಗ್ಗೆ ಕೇಂದ್ರದತ್ತ ಬೆರಳು ತೋರುತ್ತಿದ್ದಾರೆ. ಹೀಗಾಗಿ ಬಿಎಸ್ ವೈ ಅವರಿಗೆ …

Read More »

ಫೆಬ್ರುವರಿ 6 ರಂದು ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ* 6 ನೇ ತಾರೀಕು 12ಗಂಟೆಯಿಂದ 2ಗಂಟೆ ವರೆಗೆ *

ದೆಹಲಿ ಸಂಯುಕ್ತ ಕಿಸಾನ ಮೋರ್ಚ ಸಂದೇಶ ಆತ್ಮೀಯ ರೈತ ಮುಖಂಡರೇ, ರೈತ, ದಲಿತ,ಕಾರ್ಮಿಕ, ಐಕ್ಯ ಹೋರಾಟದ ಸಂದೇಶ* ರಾಜ್ಯ ಜಿಲ್ಲಾ, ತಾಲೂಕು, ಗ್ರಾಮ ಘಟಕ ಪದಾಧಿಕಾರಿಗಳೇ* , ದಿಲ್ಲಿಯಲ್ಲಿ ರೈತರ ಹೋರಾಟ ಬೆಂಬಲಿಸಿ, ರೈತರ ಬೇಡಿಕೆಗಳನ್ನು ಈಡೇರಿಸಲು ಮತ್ತು ಹೋರಾಟ ನಿರತ ರೈತರ ಮೇಲಿನ ದೌರ್ಜನ್ಯ ಖಂಡಿಸುತ್ತಾ ದೆಹಲಿಯ ಸಂಯುಕ್ತ ಕಿಸಾನ ಮೋರ್ಚಾ ಕರೆ ಮೇರೆಗೆ ದಿನಾಂಕ ಪೆಬ್ರುವರಿ 6, ರಂದು 12 ಗಂಟೆಯಿಂದ 2ಗಂಟೆ ತನಕ ಬೆಳಗಾವಿಯ ಹಿರೇಬಾಗೇವಾಡಿ …

Read More »

ಸಭಾಪತಿ ಸ್ಥಾನಕ್ಕೆ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ: ಫೆಬ್ರವರಿ 10ರವರೆಗೆ ವಿಧಾನಪರಿಷತ್ ಕಲಾಪ ವಿಸ್ತರಣೆ

ಬೆಂಗಳೂರು: ಸಭಾಪತಿ ಸ್ಥಾನಕ್ಕೆ ಪ್ರತಾಪ್ ಚಂದ್ರ ಶೆಟ್ಟಿಯವರು ರಾಜೀನಾಮೆ ನೀಡಿದ ಬೆನ್ನಲ್ಲೇ ನೂತನ ಸಭಾಪತಿ ಆಯ್ಕೆ ಮಾಡುವ ಅಗತ್ಯವಿದ್ದು, ಈ ಹಿನ್ನೆಲೆಯಲ್ಲಿ ವಿಧಾನಪರಿಷತ್ ಕಲಾಪವನ್ನು ಫೆ.10ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂರು ದಿನಗಳ ಕಾಲ ಪರಿಷತ್ ಕಲಾಪವನ್ನು ವಿಸ್ತರಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ, ಈ ನಿರ್ಧಾರವನ್ನು ರಾಜ್ಯಪಾಲರಿಗೆ ರವಾನೆ ಮಾಡಿರುವ ಸರ್ಕಾರ, ಅನುಮತಿ ನೀಡುವಂತೆ …

Read More »

ಕೋವಿಡ್‌ ಸಂದರ್ಭದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ: ಎಚ್‌.ಕೆ. ಪಾಟೀಲ

ಬೆಂಗಳೂರು: ಕೋವಿಡ್‌-19 ಸಂದರ್ಭದಲ್ಲಿ ‘ನಂಬರ್‌ 1 ಭ್ರಷ್ಟ ರಾಜ್ಯ’ ಎಂಬ ಅಪಕೀರ್ತಿಗೆ ಕರ್ನಾಟಕ ಒಳಗಾಗಿದೆ. ಶೇ 63 ರಷ್ಟು ಜನ ಸರ್ಕಾರಿ ಸೇವೆಗೆ ಲಂಚ ನೀಡಬೇಕಾಗಿ ಬಂತು ಎಂದು ಸಮೀಕ್ಷೆಯೊಂದರಿಂದ ಬಯಲಿಗೆ ಬಂದಿದೆ ಎಂದು ಕಾಂಗ್ರೆಸ್‌ನ ಹಿರಿಯ ಶಾಸಕ ಎಚ್‌.ಕೆ.ಪಾಟೀಲ ವಿಧಾನಸಭೆಯಲ್ಲಿ ಹೇಳಿದರು. ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಮಾತನಾಡಿದ ಪಾಟೀಲ, ಒಂದು ವರ್ಷದ ಹಿಂದೆ ಸರ್ಕಾರದಲ್ಲಿ ಭ್ರಷ್ಟಾಚಾರ ಇದೆ ಎನ್ನುವವರ ಸಂಖ್ಯೆ ಶೇ 43 ಇತ್ತು. ಕೇವಲ ಒಂದು …

Read More »