Breaking News

ಪ್ರಿಯಾಂಕಾ ಗಾಂಧಿ ಭದ್ರತಾ ವಾಹನಗಳು ಡಿಕ್ಕಿ

ಲಕ್ನೋ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಭದ್ರತಾ ವಾಹನಗಳು ಅಪಘಾತಕ್ಕೀಡಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಹಾಪುರದಲ್ಲಿ ಭದ್ರತಾ ವಾಹನಗಳು ಡಿಕ್ಕಿಯಾಗಿದ್ದು. ಅದೃಷ್ಟವಶಾತ್ ಭದ್ರತಾ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದಾರೆ. ಉತ್ತರಪ್ರದೇಶದ ರಾಮ್ ಪುರಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.

Read More »

ವಿದೇಶಿಯರ ಅಪಪ್ರಚಾರ ವಿರುದ್ಧ ಸಿಡಿದೆದ್ದ ಬಾಲಿವುಡ್, ಕ್ರೀಡಾ ತಾರೆಯರು

ನವದೆಹಲಿ: ಭಾರತದ ಆಂತರಿಕ ವಿಷಯಗಳ ಕುರಿತು ವಿದೇಶಿಯರ ಅಪಪ್ರಚಾರದ ವಿರುದ್ಧ ಬಾಲಿವುಡ್ ಹಾಗೂ ಕ್ರೀಡಾ ತಾರೆಗಳು ತೀವ್ರ ಖಂಡನೆಯನ್ನು ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಸಂಬಂಧ ಅಂತರರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಸೇರಿದಂತೆ ಅನೇಕ ವಿದೇಶಿ ಗಣ್ಯ ವ್ಯಕ್ತಿಗಳು ಪ್ರತಿಕ್ರಿಯಿಸಿದ್ದರು. ಭಾರತದ ವಿಷಯಗಳ ಬಗ್ಗೆ ವಿದೇಶಿಯರು ಮಾತನಾಡಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಭಾರತೀಯ ಸೆಲೆಬ್ರಿಟಿಗಳು, ದೇಶದ ಆಂತರಿಕ ವಿಷಯಗಳಲ್ಲಿ ವಿದೇಶಿಯರು ಅಪಪ್ರಚಾರ ನಡೆಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. …

Read More »

ಕಾಯ್ದೆ ಹಿಂದೆ ವಿದೇಶಿ ಕೈವಾಡ ಆರೋಪ: ಪರಿಸರ ಸಂಸ್ಥೆಗೆ ದಂಡ ಪಾವತಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು, ಫೆ.3: ಪರಿಸರ ಸಂರಕ್ಷಣೆ ಕಾಯ್ದೆಯನ್ನು ವಿದೇಶಿ ಪ್ರಭಾವಕ್ಕೆ ಒಳಗಾಗಿ ರೂಪಿಸಲಾಗಿದೆ ಎಂದು ಆಕ್ಷೇಪಾರ್ಹ ಹೇಳಿಕೆ ಸಲ್ಲಿಸಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ದಂಡ ವಿಧಿಸಲು ತೀರ್ಮಾನಿಸಿರುವ ಹೈಕೋರ್ಟ್ ದಂಡದ ಹಣವನ್ನು ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಗೆ ಪಾವತಿಸುವಂತೆ ಸೂಚಿಸಿದೆ. ನೂರು ಕಿ.ಮೀ ವರೆಗಿನ ರಾಷ್ಟ್ರೀಯ ಹೆದ್ದಾರಿಗಳ ವಿಸ್ತರಣೆಗೆ ಪರಿಸರ ಪರಿಣಾಮ ಅಧ್ಯಯನ (ಇಐಎ) ಅನ್ವಯಿಸದಿರಲು ಮುಂದಾಗಿರುವ ಕೇಂದ್ರ ಸರಕಾರದ ನಿರ್ಧಾರ ಪ್ರಶ್ನಿಸಿ ಯುನೈಟೆಡ್ ಕನ್ಸರ್ವೇಷನ್ ಟ್ರಸ್ಟ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ …

Read More »

ಕಲ್ಲು ಕ್ವಾರಿಗಳಲ್ಲಿ ಸುರಕ್ಷತಾ ನಿಯಮಗಳ ಪಾಲನೆ: ವರದಿ ಸಲ್ಲಿಸಲು ಹೈಕೋರ್ಟ್‌ ಆದೇಶ

ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ಕ್ವಾರಿಗಳಲ್ಲಿ ಸುರಕ್ಷತಾ ನಿಯಮಾವಳಿ ಪಾಲಿಸಲಾಗುತ್ತಿದೆಯೇ ಎಂಬ ಬಗ್ಗೆ ಸರ್ವೇ ನಡೆಸಿ ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸರಕಾರಕ್ಕೆ ಹೈಕೋರ್ಟ್‌ ಆದೇಶಿಸಿದೆ. ಸಮಾಜ ಪರಿವರ್ತನಾ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌ ಓಕ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ಈ ನಿರ್ದೇಶನ ನೀಡಿದೆ. ರಾಜ್ಯದಲ್ಲಿರುವ ಕ್ವಾರಿಗಳ ಸರ್ವೇ ನಡೆಸಿ ಸುರಕ್ಷತಾ ನಿಯಮಾವಳಿ ಪಾಲಿಸ ಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸ ಬೇಕು. ಒಂದೊಮ್ಮೆ …

Read More »

ಗ್ಯಾಸ್ ಟ್ಯಾಂಕರ್ – ಕಂಟೈನರ್ ನಡುವೆ ಢಿಕ್ಕಿ ರಸ್ತೆ ಸಂಚಾರ ಅಸ್ತವ್ಯಸ್ತ

ಬಂಟ್ವಾಳ, ಫೆ.03. ಗ್ಯಾಸ್ ಟ್ಯಾಂಕರ್ ಹಾಗೂ ಕಂಟೈನರ್ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕೆಲಕಾಲ ರಸ್ತೆ ಸಂಚಾರದಲ್ಲಿ ಅಡಚಣೆಯುಂಟಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಬುಧವಾರ ರಾತ್ರಿ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕಂಟೈನರ್ ಲಾರಿ ನಡುವೆ ಕಲ್ಲಡ್ಕ ಎಂಬಲ್ಲಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಎರಡೂ ಲಾರಿಗಳ ಚಾಲಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ …

Read More »

ದಲಿತ ಮಕ್ಕಳಿಗೆ ನಾಲ್ಕು ಸೈನಿಕ ಶಾಲೆ: ಗೋವಿಂದ ಕಾರಜೋಳ

ಬೆಂಗಳೂರು: ಎಸ್ಸಿ, ಎಸ್ಟಿ ಸಮುದಾಯದ ಮಕ್ಕಳಿಗೆ ರಾಜ್ಯದಲ್ಲಿ ನಾಲ್ಕು ಸೈನಿಕ ವಸತಿ ಶಾಲೆಗಳನ್ನು ಸ್ಥಾಪಿಸಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯ ಅನುದಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸದಸ್ಯ ಅರವಿಂದ ಕುಮಾರ್‌ ಅರಳಿ ಪ್ರಶ್ನೆಗೆ ಉತ್ತರಿಸಿ, ವಿಜಯಪುರ ಹಾಗೂ ಮಡಿಕೇರಿಯಲ್ಲಿರುವ ಸೈನಿಕ ಶಾಲೆಗಳ ಮಾದರಿಯಲ್ಲಿ ಎಸ್ಸಿ, ಎಸ್ಟಿ ಸಮುದಾಯದ ಮಕ್ಕಳಿಗೆ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ತಲಾ ಒಂದೊಂದು ಸೈನಿಕ ವಸತಿ ಶಾಲೆ …

Read More »

ಏ.1ರಿಂದ ಸೀಮೆಎಣ್ಣೆ ಸಬ್ಸಿಡಿ ರದ್ದು..! ಕೇಂದ್ರ ಸರ್ಕಾರದ ಆದೇಶ..!

ಫೆಬ್ರುವರಿ 1ರಂದು ಸಂಸತ್ತಿನಲ್ಲಿ ಮಂಡಿಸಲಾದ ಬಜೆಟ್ ದಾಖಲೆಗಳ ಪ್ರಕಾರ, ಏಪ್ರಿಲ್ನಿಂದ ಪ್ರಾರಂಭವಾಗುವ ಹಣಕಾಸು ರ‍್ಷದಲ್ಲಿ ಸೀಮೆಎಣ್ಣೆಗೆ ಸಬ್ಸಿಡಿ ಪಾವತಿಸಲು ಅವಕಾಶ ನೀಡೋದಿಲ್ಲ ಎಂದಿದೆ. ಅದ್ರಂತೆ, ಮರ‍್ಚ್ 31ಕ್ಕೆ ಮುಕ್ತಾಯವಾಗಲಿರುವ ಪ್ರಸಕ್ತ ಹಣಕಾಸು ರ‍್ಷದಲ್ಲಿ ಸೀಮೆಎಣ್ಣೆ ಸಬ್ಸಿಡಿ 2,677.32 ಕೋಟಿ ರೂಪಾಯಿ ಆಗಿತ್ತು. ಹಿಂದಿನ ಹಣಕಾಸು ರ‍್ಷದಲ್ಲಿ ರೂ4,058 ಕೋಟಿ ಆಗಿತ್ತು ಎಂದು ದಾಖಲೆಗಳಲ್ಲಿ ಉಲ್ಲೇಖಿಸಲಾಗಿದೆ. ಕೇಂದ್ರ ರ‍್ಕಾರ ಸೀಮೆಎಣ್ಣೆ ದರವನ್ನ ಏರಿಕೆ ಮಾಡಿರೋದ್ರ ಜೊತೆಗೆ ಇದ್ರ ಮೇಲೆ ಸಿಗ್ತಿದ್ದ ಸಬ್ಸಿಡಿಯನ್ನೂ …

Read More »

Ration Rice ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸ್ತಿದ್ದ ಪಡಿತರ ಅಕ್ಕಿ ಜಪ್ತಿ.. ಲಾರಿ ಚಾಲಕ ಅರೆಸ್ಟ್

ವಿಜಯಪುರ: ಬಸವನಬಾಗೇವಾಡಿ ತಹಶೀಲ್ದಾರ್‌ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ಸಾಗಿಸ್ತಿದ್ದ 589 ಮೂಟೆ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಸುಮಾರು ₹7.99 ಲಕ್ಷ ಮೌಲ್ಯದ ಪಡಿತರ ಅಕ್ಕಿ ಜಪ್ತಿಯಾಗಿದೆ. ಬಾಗಲಕೋಟೆಯಿಂದ ವಿಜಯಪುರ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಪಡಿತರ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ನಂಬರ್ KA29 B 8299 ನೋಂದಣಿ ಹೊಂದಿರುವ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಒಟ್ಟು 589 ಮೂಟೆ ಪಡಿತರ ಅಕ್ಕಿಯನ್ನು ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ …

Read More »

ಕರ ವಸೂಲಿಗಾರ ಹಾಗೂ ಗುಮಾಸ್ತರಿಗೆ ಭಡ್ತಿ ನೀಡಲು ಕ್ರಮ: ಕೆ.ಎಸ್‌. ಈಶ್ವರಪ್ಪ

ಬೆಂಗಳೂರು: ಜಿಲ್ಲಾ ಪಂಚಾಯಿತಿ ವತಿಯಿಂದ ಅನುಮೋದನೆಗೊಂಡು ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ ವಸೂಲಿಗಾರ ಹಾಗೂ ಗುಮಾಸ್ತರಿಗೆ ಭಡ್ತಿ ನೀಡುವ ಕುರಿತಾಗಿ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್‌ನ ಕೆ.ವೈ.ನಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕರವಸೂಲಿಗಾರ ಹಾಗೂ ಗುಮಾಸ್ತ ಹುದ್ದೆಯಲ್ಲಿ 20 ರಿಂದ 25 ವರ್ಷಗಳಿಂದ ಕೆಲಸ ಮಾಡುತ್ತಿರುವವರಿಗೆ ಮುಂಬಡ್ತಿ ಸಿಕ್ಕಿಲ್ಲ ಎಂಬ …

Read More »

ಗರ್ಭಿಣಿಯರು, ಬಾಣಂತಿಯರಿಗೆ ‘ಸಿಹಿ ಸುದ್ದಿ’ ನೀಡಿದ ಸಚಿವೆ ಶಶಿಕಲಾ ಜೊಲ್ಲೆ..!

ಬೆಂಗಳೂರು: ಗರ್ಭಿಣಿಯರು ಬಾಣಂತಿಯರಿಗೆ ಮನೆ ಬಾಗಿಲಿಗೆ ಪೌಷ್ಟಿಕಾಂಶವುಳ್ಳ ಆಹಾರ ಪೂರೈಕೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಸಬಲೀಕರಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ(Shashikala Jolle), ಗರ್ಭಿಣಿಯರು ಮತ್ತು ಬಾಣಂತಿಯರ ಮನೆಬಾಗಿಲಿಗೆ ಪೌಷ್ಟಿಕಾಂಶ ಆಹಾರ ಪೂರೈಕೆ ಬಗ್ಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ. ಶಾಸಕ ಸಂಜೀವ್ ಮಠಂದೂರು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಉತ್ತರ ಕನ್ನಡ, …

Read More »