Breaking News

ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ಯಾಕೇಜ್ ಘೋಷಣೆ: ಶಶಿಕಲಾ ಜೊಲ್ಲೆಯವರಿಂದ ಸಿಎಂಗೆ ಅಭಿನಂದನೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮುಂಚೂಣಿ ವಾರಿಯರ್ಸ್‌ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಪರಿಗಣಿಸಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಅಂಗನವಾಡಿ ಕಾರ್ಯಕರ್ತೆಯರಿಗೆ ತಲಾ 2000 ರೂ. ನೆರವು ಘೋಷಿಸಿದ್ದು, ಅಂಗನವಾಡಿ ಕಾರ್ಯಕರ್ತೆಯರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಾಣ ಇಲಾಖೆ ಸಚಿವೆಯಾಗಿರುವ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯದಲ್ಲಿ ಕೊರೊನಾ ನಿಯಂತ್ರಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು …

Read More »

ಬಿಜೆಪಿ ಸರ್ಕಾರ, ಪಕ್ಷದಲ್ಲಿ ಭಾರೀ ಬದಲಾವಣೆ.? ಕುತೂಹಲ ಮೂಡಿಸಿದ ವಿಜಯೇಂದ್ರ ವರಿಷ್ಠರ ಭೇಟಿ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಂತರ ಅನೇಕ ಬೆಳವಣಿಗೆ ನಡೆದಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮಾಲೋಚನೆ ನಡೆಸಿದ್ದಾರೆ. ಇವರ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಜೆ.ಪಿ. ನಡ್ಡಾ ಅವರೊಂದಿಗೆ ಸುಮಾರು 20 ನಿಮಿಷ ಕಾಲ ವಿಜಯೇಂದ್ರ ಮಾತುಕತೆ ನಡೆಸಿದ್ದು, ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತಂತೆ ಚರ್ಚೆ …

Read More »

ಸಂಪುಟ ಪುನಾರಚನೆ ಆಗುತ್ತಾ? ನಾಯಕತ್ವ ಬದಲಾವಣೆ ಇದೆಯಾ?

ಬೆಂಗಳೂರು: ರಾಜ್ಯದಲ್ಲಿ ಕರೊನಾ ಹಾವಳಿ ನಡುವೆಯೇ ರಾಜಕೀಯ ವಿಚಾರವೂ ಗರಿಗೆದರಿದ್ದು, ಸಂಪುಟ ಪುನಾರಚನೆ ಮತ್ತು ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ತುಂಬಾ ಮಾತುಗಳು ಕೇಳಿ ಬರುತ್ತಿವೆ. ಇವೆಲ್ಲದಕ್ಕೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಸ್ಪಷ್ಟನೆ ನೀಡಿದ್ದಾರೆ. ಸಂಪುಟ ಪುನಾರಚನೆ, ನಾಯಕತ್ವ ಬದಲಾವಣೆ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಿಎಂ, ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆ ಎರಡೂ ಊಹಾಪೋಹ ಎಂಬ ಸ್ಪಷ್ಟನೆ ನೀಡಿದ್ದಾರೆ. ಮಾತ್ರವಲ್ಲ, ಆ ಥರದ …

Read More »

ರಮೇಶ ಜಾರಕಿಹೊಳಿಗೆ ಪರಬಾಲಚಂದ್ರ ಜಾರಕಿಹೊಳಿಭರ್ಜರಿ ಬ್ಯಾಟಿಂಗ್ ಮತ್ತೆ B.S.Y. ಸಂಪುಟ ಸರ್ತಾರಾ ರಮೇಶ್ ಜಾರಕಿಹೊಳಿ…?

ಬೆಳಗಾವಿ; ಬೆಳಗಾವಿ ಜಿಲ್ಲೆಯ ಪ್ರಭಾವಿ ರಾಜಕಾರಣಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಜತೆಗೆ ಸಿಡಿ ಪ್ರಕರಣ ಬಹಿರಂಗದಿಂದ ಸರ್ಕಾರ ಹಾಗೂ ಪಕ್ಷಕ್ಕೆ ಮುಜುಗರ ತಂದಿಟ್ಟಿದ್ದರು. ಸಿಡಿ ಪ್ರಕರಣ ತನಿಖೆಯನ್ನು ಎಸ್ ಐಟಿ ತಂಡ ನಡೆಸುತ್ತಿದೆ. ಇತ್ತೀಚೆಗೆ ಪೊಲೀಸರ ವಿಚಾರಣೆ ವೇಳೆ ಸಿಡಿಯಲ್ಲಿ ಕಾಣಿಸಿಕೊಂಡಿ ರುವುದು ನಾನೇ, ಅದು ತಮ್ಮತಿ ಸೆಕ್ಸ್​ ಎಂದು ಒಪ್ಪಿಕೊಂಡಿದ್ದ ರಮೇಶ್ ಜಾರಕಿಹೊಳಿ, ಇದೀಗ ಮತ್ತೆ ಸಿಎಂ ಬಿ …

Read More »

ಇಂದು ಕೊರೋನಾ ರಣಕೇಕೆ: 839 ಹೊಸ ಪ್ರಕರಣ, 10 ಸಾವು

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೋನಾ ಅಟ್ಟಹಾಸ ಮೆರೆದಿದೆ. ಇಂದು ಒಂದೇ ದಿನ ಹೊಸದಾಗಿ 839 ಜನರಲ್ಲಿ ಮಹಾಮಾರಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 10 ಸೋಂಕಿತರು ಬಲಿಯಾಗಿದ್ದಾರೆ.   ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಮತ್ತೆ 839 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 68,621 ಕ್ಕೆ ಏರಿಕೆಯಾಗಿದೆ. ಅಥಣಿ ತಾಲೂಕಿನಲ್ಲಿ 39, ಬೆಳಗಾವಿಯಲ್ಲಿ 291, …

Read More »

ಸಂಪೂರ್ಣ ಲಾಕ್ ಡೌನ್ ಅನಗತ್ಯ ಹೊರಗಡೆ ಬಂದ್ರೆ ಲಾಠಿ ಬಿಸಿ

ಗೋಕಾಕ: ಕೊರೋನಾ ಚೈನ್ ಬ್ರೇಕ್ ಮಾಡಲು ಜಿಲ್ಲಾಡಳಿತ ಮತ್ತು ತಾಲೂಕಾಡಳಿತ ವಾರದ ಕೊನೆಯ ಮೂರು,ದಿನ,ಶುಕ್ರವಾರದಿಂದ,ಸೋಮವಾರಮುಂಜಾನೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದು, ಇಂತಹ ಸಂದರ್ಭದಲ್ಲಿ ಯಾರು ಕೂಡಾ ಮನೆಯಿಂದ ಹೊರಗಡೆ ಬಾರದೆ ಸಹಕರಿಸುವಂತೆ ಗೋಕಾಕ ನಗರ ಠಾಣೆ ಪಿಎಸ್‌ಐ ಕೆ ವಾಲಿಕಾರ ಇವರು ಸಾರ್ವಜನಿಕರಿಗೆ ತಿಳಿಸಿದ್ದಾರೆ.   ಇನ್ನು ಕೊರೋನಾ ಸೋಂಕು ಹರಡದಂತೆ ಬೆಳಗಾವಿ ಜಿಲ್ಲಾ ಪೋಲಿಸ್ ಇಲಾಖೆಯಿಂದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು,ಕೊರೋನಾ ನಿಯಂತ್ರಿಸಲು ಪೊಲೀಸರು ಸಾಕಷ್ಟು …

Read More »

ಮೂಡಲಗಿಗೆ ಶೀಘ್ರ ಅಗ್ನಿಶಾಮಕ ಠಾಣೆ ಮಂಜೂರು : ಶಾಸಕ-ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಮೂಡಲಗಿಯಲ್ಲಿ ಹೊಸದಾಗಿ ಅಗ್ನಿಶಾಮಕ ಠಾಣೆಯನ್ನು ಮಂಜೂರಾತಿ ಪಡೆಯಲು ಇಷ್ಟರಲ್ಲಿಯೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲಾಗುವುದು ಎಂದು ಶಾಸಕ ಹಾಗೂ ಕಹಾಮ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದ್ದಾರೆ. ಕಳೆದ ಮಂಗಳವಾರದಂದು ಅಗ್ನಿಶಾಮಕ ಇಲಾಖೆಯೂ ಹೊರಡಿಸಿದ ನೂತನವಾಗಿ ರಚನೆಯಾಗಿರುವ ಅಗ್ನಿಶಾಮಕ ಠಾಣೆಯ ಪಟ್ಟಿಯಲ್ಲಿ ಮೂಡಲಗಿಯನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಮೂಡಲಗಿಯಲ್ಲಿ ಅತಿ ಶೀಘ್ರವೇ ಅಗ್ನಿಶಾಮಕ ಠಾಣೆಯ ಮಂಜೂರಾತಿ …

Read More »

ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತಿದೆ: ಎಚ್ ಡಿಕೆ

ಬೆಂಗಳೂರು: ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? ‘The ugliest language in India’ ಎಂಬ ಹುಡುಕಾಟಕ್ಕೆ ‘ಕನ್ನಡ’ ಎಂದು ಉತ್ತರ ನೀಡುತ್ತಿದ್ದ ವೆಬ್‌ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು ಗೂಗಲ್ ಗೆ ಅಸಾಧ್ಯವೇ ಎಂದು ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕನ್ನಡವೊಂದೇ ಅಲ್ಲ, ಯಾವ ಭಾಷೆಯೂ ಕೆಟ್ಟ, ಕುರೂಪವಲ್ಲ. …

Read More »

ಬುಲ್​ಬುಲ್’​ ಸಿನಿಮಾ ನಟಿ ಜತೆ ಅನುಷ್ಕಾ ಶರ್ಮಾ ಸಹೋದರನ ಡೇಟಿಂಗ್

ಸೆಲೆಬ್ರಿಟಿಗಳು ಮಾತ್ರವಲ್ಲ ಅವರ ಕುಟುಂಬದವರ ಮೇಲೂ ಅಭಿಮಾನಿಗಳು ಕಣ್ಣಿಟ್ಟಿರುತ್ತಾರೆ. ತಮ್ಮಿಷ್ಟದ ನಟ/ನಟಿಯ ಕುಟುಂಬದವರು ಏನು ಮಾಡುತ್ತಾರೆ? ಯಾರ ಜತೆ ಸುತ್ತಾಟ ನಡೆಸುತ್ತಾರೆ ಎಂಬುದನ್ನು ತಿಳಿದುಕೊಳ್ಳಲು ಹೆಚ್ಚು ಆಸಕ್ತಿ ಹೊಂದಿರುತ್ತಾರೆ. ಈಗ ನಟಿ ಅನುಷ್ಕಾ ಶರ್ಮಾ ಅವರ ಸಹೋದರ ಕರ್ಣೇಶ್​ ಶರ್ಮಾ ಮೇಲೆ ಅಭಿಮಾನಿಗಳ ಕಣ್ಣುಬಿದ್ದಿದೆ. ಅಷ್ಟೇ ಅಲ್ಲ ಅವರ ಡೇಟಿಂಗ್​ ವಿಚಾರವನ್ನು ಅಭಿಮಾನಿಗಳು ಬಯಲಿಗೆಳೆದಿದ್ದಾರೆ. ನೆಟ್​​ಫ್ಲಿಕ್ಸ್​ನಲ್ಲಿ ರಿಲೀಸ್​ ಆದ ಬುಲ್​ಬುಲ್​ ಸಿನಿಮಾ ನಟಿ ತೃಪ್ತಿ ದಿಮ್ರಿ ನಟಿಸಿದ್ದರು. ಈಗ ಅವರ …

Read More »

ಆಸ್ಪತ್ರೆಯಲ್ಲಿ ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ ಪ್ರೇಮಿಗಳು! ಇವರ ಕೃತ್ಯ ಕೇಳಿದ್ರೆ ಹಿಡಿಶಾಪ ಹಾಕೋದು ಗ್ಯಾರಂಟಿ

ಹುಬ್ಬಳ್ಳಿ: ಮಹಾಮಾರಿ ಕರೊನಾ ಮರಣಮೃದಂಗ ಬಾರಿಸುತ್ತಲೇ ಇದೆ. ಲೆಕ್ಕವಿಲ್ಲದಷ್ಟು ಸೋಂಕಿತರಿಗೆ ಸಮಯಕ್ಕೆ ಸರಿಯಾಗಿ ಆಸ್ಪತ್ರೆ ಬಳಿ ಬೆಡ್​, ಆಕ್ಸಿಜನ್​, ವೆಂಟಿಲೇಟರ್ ಬೆಡ್​​, ಔಷಧ, ರೆಮಿಡಿಸಿವರ್​ ಇಂಜಕ್ಷನ್​ ಸಿಗದೆ ಸಾಯುತ್ತಿದ್ದಾರೆ. ಇಂತಹ ಸಂಕಷ್ಟ ಕಾಲದಲ್ಲೂ ಇಲ್ಲೊಂದು ಜೋಡಿ ಅಮಾನವೀಯವಾಗಿ ವರ್ತಿಸಿ ಜೈಲು ಸೇರಿದ್ದಾರೆ. ಹುಬ್ಬಳ್ಳಿಯ ವೆಂಕಟೇಶ್ವರ ಕಾಲನಿಯ ಸಿದ್ದನಗೌಡಾ ಪಾಟೀಲ್ ಮತ್ತು ವಿನಾಯಕನಗರದ ರಿಯಾ ಬಂಧಿತರು. ಸುಚಿರಾಯು ಆಸ್ಪತ್ರೆಯಲ್ಲಿ ಕ್ಲೀನರ್​ ಆಗಿ ಸಿದ್ದನಗೌಡ ಕೆಲಸ ಮಾಡುತ್ತಿದ್ದ. ಹುಬ್ಬಳ್ಳಿ ನಗರದ ತತ್ವದರ್ಶಿ ಆಸ್ಪತ್ರೆಯ …

Read More »