ಬೆಂಗಳೂರು: ಪಕ್ಷ ಹಾಗೂ ಸರ್ಕಾರದಲ್ಲಿನ ಬೆಳವಣಿಗೆಗಳ ಕುರಿತು ಚರ್ಚಿಸಲು ಬಿಜೆಪಿಯ ಪಕ್ಷ ನಿಷ್ಠ ಶಾಸಕರು ಖಾಸಗಿ ಹೋಟೆಲ್ ಸಭೆ ನಡೆಸುವ ಬದಲು ಮಧ್ಯಾಹ್ನ ವಿಧಾನಸೌಧದಲ್ಲಿಯೇ ಭೋಜನದ ನೆಪದಲ್ಲಿ ಸಭೆ ನಡೆಸಿದ್ದಾರೆ. ಅಸಮಾಧಾನಿತರ ವಿಶ್ವಾಸಗಳಿಸಲು ಸಿಎಂ ಯಡಿಯೂರಪ್ಪ ಇಂದು ಭೋಜನ ಕೂಟ ಏರ್ಪಡಿಸಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಸಚೇತಕ ಸುನಿಲ್ ಕುಮಾರ್ ಅವರ ಕಚೇರಿಯಲ್ಲಿ ಭೋಜನದ ಜೊತೆ ಅನೌಪಚಾರಿಕ ಸಭೆ ನಡೆಸಿದ್ದಾರೆ ಎನ್ನಲಾಗಿದ್ದು, ಜಿ.ಎಚ್.ತಿಪ್ಪಾರೆಡ್ಡಿ, ಸಿದ್ದು ಸವದಿ, ಅಪ್ಪಚ್ಚು ರಂಜನ್ …
Read More »ಹಿಮಪಾತದಿಂದ ರಸ್ತೆ ಬಂದ್; ಸೇನಾ ವಾಹನದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
ನವದೆಹಲಿ: ಆಸ್ಪತ್ರೆಗೆ ತೆರಳುವಾಗಲೇ ಭಾರಿ ಹಿಮಪಾತವಾದ್ದರಿಂದ, ಮಹಿಳೆಯೊಬ್ಬರು ಭಾರತೀಯ ಸೇನೆಯ ಆಂಬ್ಯುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ಜಮ್ಮು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ನಡೆದಿದೆ. ಕುಪ್ವಾರದ ನರಿಕೂಟ್ ನಲ್ಲಿ ಭಾರಿ ಹಿಮಪಾತವಾಗುತ್ತಿದ್ದರಿಂದ ಆಶಾ ಕಾರ್ಯಕರ್ತೆಯೊಬ್ಬರು ಸೇನಾ ಆಯಂಬುಲೆನ್ಸ್ ಗೆ ಕರೆ ಮಾಡಿ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವಂತೆ ಕೋರಿಕೊಂಡಿದ್ದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಸೇನಾ ಆಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಹೋಗುವಾಗ ಗರ್ಭಿಣಿ ಮಹಿಳೆಯ ಮಗುವಿಗೆ ಜನ್ಮ ನೀಡಿದ್ದಾರೆ. ನಂತರ …
Read More »ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿ, ಗರಿಗೆದರಿದ ರಾಜಕೀಯ
– ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಯಾಗುತ್ತಿದ್ದಂತೆ ಮಂಡ್ಯ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಗರಿಗದರಿವೆ. ಜತೆಗೆ ಪಂಚಾಯಿತಿ ಗಾದಿಯ ಆಕಾಂಕ್ಷಿತರು ತಮ್ಮ ನಾಯಕರ ಮನೆಯಲ್ಲಿ ಸರ್ಕಸ್ ನಡೆಸುತ್ತಿದ್ದಾರೆ. ಇನ್ನು ಮೂರ್ನಾಲ್ಕು ತಿಂಗಳಲ್ಲಿ ತಾಪಂ ಮತ್ತು ಜಿಪಂ ಚುನಾವಣೆಯೂ ಎದುರಾಗಲಿದೆ. ಹೀಗಾಗಿ ಈ ಗ್ರಾಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಮೂರು ಪಕ್ಷದ ಶಾಸಕರು ಮತ್ತು ಮಾಜಿ ಶಾಸಕರು, ಜಿಪಂ ಸದಸ್ಯರಿಗೆ ಪ್ರತಿಷ್ಠೆಯ ಸಂಕೇತವಾಗಿದ್ದು, ಹಾಲಿ …
Read More »ಸಂಕಷ್ಟದ ಮಧ್ಯೆಯೂ ಕನಿಷ್ಠ ಬೆಂಬಲ ಬೆಲೆ ಶ್ಲಾಘನೀಯ
ಬೆಳಗಾವಿ: ಕೋವಿಡ್ ನಿಂದಾಗಿ ಉಂಟಾದ ಭಾರಿ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಯಾವುದೇ ತೆರಿಗೆ ವಿಧಿಸದೇ ಉದ್ಯಮ ಸ್ನೇಹಿ ಬಜೆಟ್ ನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನೀಡಿದ್ದು ಇದು ಸರ್ವ ವ್ಯಾಪಿ ಮತ್ತು ಸರ್ವ ಸ್ಪರ್ಶಿಯಾಗಿದೆ ಎಂದು ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಕೇಂದ್ರ ಬಜೆಟ್ ನ್ನು ಸ್ವಾಗತಿಸಿ ಮಾತನಾಡಿದ ಅವರು, ದೇಶಾದ್ಯಂತ 15,000 ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ತೀರ್ಮಾನಿಸಿರುವುದು ಸ್ವಾಗತಾರ್ಹ ಎಂದಿದ್ದಾರೆ. ಕೋವಿಡ್ …
Read More »ವಿಮಾ ಕ್ಷೇತ್ರದಲ್ಲಿ ಎಫ್‍ಡಿಐ ಶೇ.49ರಿಂದ ಶೇ.ಶೇ.74ಕ್ಕೆ ಹೆಚ್ಚಳ
ನವದೆಹಲಿ, ಫೆ.1- ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯನ್ನು ಶೇ.49ರಿಂದ ಶೇ.74ರಷ್ಟಕ್ಕೆ ಹೆಚ್ಚಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ಹೆಚ್ಚಿಸಲು ವಿಮಾ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದು ಘೋಷಿಸಿದರು. ವಿದೇಶಿ ಸಂಸ್ಥೆಗಳು ಭಾರತದಲ್ಲಿ ಕಾರ್ಯಾರಂಭ ಮಾಡಲು ಷರತ್ತುಬದ್ಧ ಒಪ್ಪಿಗೆ ನೀಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ವಿವರಿಸಿದರು. ವಿಮಾ ಕ್ಷೇತ್ರದಲ್ಲಿ ಶೇ.100ರಷ್ಟು …
Read More »ನರೇಂದ್ರ ಮೋದಿ ಸರಕಾರ ಬಡವರ ವಿರೋಧಿ ಸರಕಾರ ಎನ್ನುವುದನ್ನು ಈ ಬಜೆಟ್ ಮತ್ತೊಮ್ಮೆ ಸಾಬೀತು: ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ – ಕೇಂದ್ರ ಸರಕಾರ ಸೋಮವಾರ ಮಂಡಿಸಿರುವ ಬಜೆಟ್ ಬಡವರ ಬೆನ್ನಿಗೆ ಚಿನ್ನದ ಚೂರಿ ಹಾಕಿದಂತಿದೆ ಎಂದು ಶಾಸಕಿ, ಕೆಪಿಸಿಸಿ ವಕ್ತಾರೆ ಲಕ್ಷ್ಮಿ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ. ಬಡವರು ಬಳಸುವ ಬಹುತೇಕ ಉತ್ಪನ್ನಗಳ ಮೇಲೆ ಸೆಸ್ ವಿಧಿಸಲಾಗಿದೆ. ಕೊರೋನಾದಿಂದ ಕಂಗೆಟ್ಟಿರುವ ರೈತರು, ಜನಸಾಮಾನ್ಯರಿಗೆ ವಿಶೇಷ ಪ್ಯಾಕೇಜ್ ಏನನ್ನಾದರೂ ಘೋಷಿಸಬಹುದು. ಮುಳುಗಿರುವ ಬಡವರನ್ನು ಮೇಲೆತ್ತುವ ಯೋಜನೆ ಜಾರಿಗೊಳಿಸಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ ಈ ಹಿಂದೆ ಘೋಷಿಸಿದ್ದ 20 ಲಕ್ಷ ರೂ. ಕೃಷಿ …
Read More »ಕೇಂದ್ರ ಬಜೆಟ್ ಬಗ್ಗೆಬಾಲಚಂದ್ರ ಜಾರಕಿಹೊಳಿ ಅವರ ಪ್ರಶಂಸೆ
ಗೋಕಾಕ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಬಗ್ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದು, ಸಮಾಜದ ಪ್ರತಿಯೊಬ್ಬರಿಗೂ ಈ ಬಜೆಟ್ ಸಹಕಾರಿಯಾಗಿದೆ ಎಂದು ಶ್ಲಾಘಿಸಿದ್ದಾರೆ. ಕೃಷಿ ಹಾಗೂ ರೈತರನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ. ಎಲ್ಲ ನಾಗರೀಕರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಜನಪರ ಹಾಗೂ ರೈತಪರ ಬಜೆಟ್ ಇದಾಗಿದೆ ಎಂದು ಅವರು ಹೇಳಿದ್ದಾರೆ. ಆರ್ಥಿಕತೆಗೆ ಚೈತನ್ಯ ತುಂಬಲು ಇನ್ನೂ ಎರಡು ಆತ್ಮನಿರ್ಭರ ಪ್ಯಾಕೇಜ್ ಘೋಷಿಸಲಾಗಿದೆ. …
Read More »ಆರ್ಥಿಕತೆಗೆ ಚೈತನ್ಯ ತುಂಬುವ ಬಜೆಟ್ : ಬಾಲಚಂದ್ರ ಜಾರಕಿಹೊಳಿ
ಗೋಕಾಕ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಬಗ್ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದು, ಸಮಾಜದ ಪ್ರತಿಯೊಬ್ಬರಿಗೂ ಈ ಬಜೆಟ್ ಸಹಕಾರಿಯಾಗಿದೆ ಎಂದು ಶ್ಲಾಘಿಸಿದ್ದಾರೆ. ಕೃಷಿ ಹಾಗೂ ರೈತರನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ. ಎಲ್ಲ ನಾಗರೀಕರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಜನಪರ ಹಾಗೂ ರೈತಪರ ಬಜೆಟ್ ಇದಾಗಿದೆ ಎಂದು ಅವರು ಹೇಳಿದ್ದಾರೆ. ಆರ್ಥಿಕತೆಗೆ ಚೈತನ್ಯ ತುಂಬಲು ಇನ್ನೂ ಎರಡು ಆತ್ಮನಿರ್ಭರ ಪ್ಯಾಕೇಜ್ ಘೋಷಿಸಲಾಗಿದೆ. …
Read More »ಕೇಂದ್ರ ಸರಕಾರ ಮಂಡಿಸಿರುವ ಬಜೆಟ್ ವಿಶ್ವಗುರು ಸ್ಥಾನದತ್ತ ಕೊಂಡೊಯ್ಯುವ ಅತ್ಯದ್ಭುತ ಆಯವ್ಯಯವಾಗಿದೆ: ಡಾ.ಸೋನಾಲಿ
– ಕೇಂದ್ರ ಸರಕಾರದ ಸೋಮವಾರ ಮಂಡಿಸಿರುವ ಮೊದಲ ಡಿಜಿಟಲ್ ಬಜೆಟ್ ಆತ್ಮನಿರ್ಭರ ಮತ್ತು ಆಯುಷ್ಮಾನ್ ಭಾರತ್ ಕೇಂದ್ರೀಕೃತ ಬಜೆಟ್ ಆಗಿದ್ದು, ಭಾರತವನ್ನು ವಿಶ್ವಗುರು ಸ್ಥಾನದತ್ತ ಕೊಂಡೊಯ್ಯುವ ಅತ್ಯದ್ಭುತ ಆಯವ್ಯಯವಾಗಿದೆ ಎಂದು ಲಲಿತಕಲಾ ಅಕಾಡೆಮಿ ಸದಸ್ಯರೂ, ಕರ್ನಾಟರ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರೂ ಆಗಿರುವ ಡಾ.ಸೋನಾಲಿ ಸರ್ನೋಬತ್ ಪ್ರತಿಕ್ರಿಯಿಸಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ಶಕ್ತಿ ತುಂಬುವುದಲ್ಲದೆ ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ದೇಶದ ಸದೃಢ ಬೆಳವಣಿಗೆಗೂ ಕಾರಣವಾಗಲಿದೆ ಎಂದು …
Read More »ಅರ್ಥವ್ಯವಸ್ಥೆಯ ಪುನಶ್ಚೇತನದ ಬಜೆಟ್ ಎಂದ ಸಿಎಂ; ಆತ್ಮ ಬರ್ಬಾದ್ ಬಜೆಟ್ ಎಂದ ಸಿದ್ದರಾಮಯ್ಯ
ಬೆಂಗಳೂರು (ಫೆ.1): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಬಸವಳಿದಿರುವ ಭಾರತೀಯ ಅರ್ಥವ್ಯವಸ್ಥೆಯ ಪುನಶ್ಚೇತನಕ್ಕೆ ಸಂಜೀವಿನಿಯಂತಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯಿಸಿದ ಅವರು, ಕೊರೋನಾ ಸಾಂಕ್ರಾಮಿಕದಿಂದ ಸ್ಥಗಿತಗೊಂಡ ಅರ್ಥವ್ಯವಸ್ಥೆ ಮತ್ತೆ ಮೇಲೆರಲು ವೇಗವರ್ಧಕವಾಗಿದೆ. ಕೋವಿಡ್ ಸಂಕಷ್ಟದ ನಡುವೆ ಮಂಡನೆಯಾಗಿರುವ ಈ ಬಜೆಟ್ ಉತ್ತಮವಾಗಿದೆ ಎಂದಿದ್ದಾರೆ. ಕೋವಿಡ್ ಲಸಿಕೆ ಅಭಿಯಾನಕ್ಕೆ 35,000 ಕೋಟಿ ರೂ, ಕೃಷಿ ಬಲವರ್ಧನೆ, ಅನ್ನದಾತ ರೈತರ ಅಭಿವೃದ್ಧಿಗೆ ಪ್ರಾಮುಖ್ಯತೆ, ಕೌಶಲ್ಯ …
Read More »