Breaking News

ಕರ್ನಾಟಕದ ಬಸ್ ಗಳ ಮೇಲೆ ಮರಾಠಿ ಪೋಸ್ಟರ್ ಹಚ್ಚಿ ಪುಂಡರು ಉದ್ಧಟತನ

ಬೆಳಗಾವಿ: ಗಡಿ ವಿಚಾರವಾಗಿ ಮಹಾರಾಷ್ಟ್ರದ ಪುಂಡಾಟ ಮುಂದುವರೆದಿದ್ದು, ಕರ್ನಾಟಕದ ಬಸ್ ಗಳ ಮೇಲೆ ಮರಾಠಿ ಪೋಸ್ಟರ್ ಹಚ್ಚಿ ಪುಂಡರು ಉದ್ಧಟತನ ಮೆರೆದಿದ್ದಾರೆ. ಬೆಳಗಾವಿಯಿಂದ ಪುಣೆ ಹೋಗುವ ಬಸ್ ಗಳ ಮೇಲೆ‌ ಕಿಡಿಗೇಡಿಗಳು ಪೋಸ್ಟರಗಳನ್ನು ಅಂಟಿಸಿದ್ದಾರೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಸೇರಿ ಸಂಯುಕ್ತ ಮಹಾರಾಷ್ಟ್ರ ಆಗವುದು ಎಂದು ಪೋಸ್ಟರ್ ನಲ್ಲಿ ಬರೆಯಲಾಗಿದೆ. ರಾಷ್ಟ್ರವಾದಿ ಕಾಂಗ್ರೆಸ್ ಪಾರ್ಟಿ ಪುಣೆ ಹೆಸರಿನಲ್ಲಿ ಈ ಪೋಸ್ಟರಗಳನ್ನು ಬರೆಯಲಾಗಿದೆ. ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿಯೇ ತೀರುತ್ತೇವೆ ಎಂದು ಮಹಾರಾಷ್ಟ್ರ …

Read More »

ನನ್ನ ಮನೆಗೆ ಬೆಂಕಿ ಹಾಕಿದ್ರೂ ಸುಮ್ಮನಿದ್ರಿ: ಅಖಂಡ ಆಕ್ರೋಶ

ಬೆಂಗಳೂರು: ‘ಡಿ.ಜಿ.ಹಳ್ಳಿ ಗಲಭೆ ಸಂದರ್ಭದಲ್ಲಿ ನನ್ನ ಮನೆಗೆ ದುಷ್ಕರ್ಮಿಗಳು ಬೆಂಕಿ ಹಾಕಿದರೂ ನನ್ನ ಪರವಾಗಿ ಒಂದೂ ಹೇಳಿಕೆ ನೀಡಲಿಲ್ಲ. ಪ್ರತಿಭಟನೆ ಮಾಡಲಿಲ್ಲ. ಆದರೆ ಜಯನಗರ ಶಾಸಕಿ ಸೌಮ್ಯ ರೆಡ್ಡಿ ಪರವಾಗಿ ಹೇಳಿಕೆ ಮತ್ತು ಹೋರಾಟ ನಡೆಸುತ್ತಿದ್ದೀರಿ’ ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು ಎಂದು ಮೂಲಗಳು ಹೇಳಿವೆ. ಇತ್ತೀಚೆಗೆ ಕಾಂಗ್ರೆಸ್‌ ಪ್ರತಿಭಟನೆ ವೇಳೆ ಶಾಸಕಿ ಸೌಮ್ಯ ರೆಡ್ಡಿ ಮಹಿಳಾ ಪೊಲೀಸ್‌ವೊಬ್ಬರಿಗೆ ಹೊಡೆದಿದ್ದು ವಿವಾದಕ್ಕೆ …

Read More »

ಕಲಾಪ ಸಲಹಾ ಸಮಿತಿ ಸಭೆಯನ್ನು ಬಹಿಷ್ಕರಿಸಲು ಕಾಂಗ್ರೇಸ್ ನಿರ್ಧಾರ : ಸಿದ್ದರಾಮಯ್ಯ

ಬೆಂಗಳೂರು : ವಿಧಾನ ಮಂಡಲದ ಕಲಾಪ ಸಲಹಾ ಸಮಿತಿ ಸಭೆ ಬಹಿಷ್ಕರಿಸಲು ವಿಪಕ್ಷ ಕಾಂಗ್ರೆಸ್‌ ನಿರ್ಧರಿಸಿದೆ. ಕಳೆದ ಅಧಿವೇಶನ ಸಂದರ್ಭದಲ್ಲಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನವಾದಂತೆ ಸದನ ನಡೆಯಲಿಲ್ಲ. ಹೀಗಾಗಿ ಈ ಬಾರಿ ಸಭೆಗೆ ಹೋಗುವುದು ಬೇಡ ಎಂಬ ನಿರ್ಧಾರ ಕೈಗೊಳ್ಳಲಾಗಿದೆ. ಗುರುವಾರ ನಡೆದ ಕಾಂಗ್ರೆಸ್‌ ಶಾಸ ಕಾಂಗ ಸಭೆಯಲ್ಲಿ ಈ ತೀರ್ಮಾನಕ್ಕೆ ಬರ ಲಾಗಿದೆ. ಈ ಬಗ್ಗೆ ಸ್ಪೀಕರ್‌ ಅವರಿಗೂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಉಭಯ ಸದನಗಳ ಕಲಾಪದ …

Read More »

ಪ್ರತಿಭಟನಾ ಸ್ಥಳದಲ್ಲಿ ಮತ್ತೆ ರೈತರ ಜಮಾವಣೆ.. ಗಾಜಿಪುರ್ ಬಾರ್ಡರ್ ಕ್ಲೋಸ್

ನವದೆಹಲಿ: ದೆಹಲಿ- ಉತ್ತರಪ್ರದೇಶ ನಡುವಿನ ಗಡಿ ಪ್ರದೇಶ ಗಾಜಿಪುರ್ ಬಾರ್ಡರ್​ನಲ್ಲಿ ರಾತ್ರೋರಾತ್ರಿ ಮತ್ತೆ ರೈತರು ಜಮಾವಣೆಗೊಂಡಿದ್ದಾರೆ. ಉತ್ತರಪ್ರದೇಶದ ಮುಜಾಫ್ಪರ್​ನಗರ್​ನಿಂದ ರೈತರ ದಂಡು ಹರಿದುಬಂದ ಹಿನ್ನೆಲೆ ಗಾಜಿಪುರ್ ಬಾರ್ಡರ್​ ಕ್ಲೋಸ್ ಆಗಿದೆ. ಗಾಜಿಪುರ್​ ಬಾರ್ಡರ್ ಕ್ಲೋಸ್ ಆದ ಹಿನ್ನೆಲೆ ರಸ್ತೆ ಮಾರ್ಗವನ್ನ NH-24, NH-9, ರಸ್ತೆ ನಂಬರ್ 56, 57A, ಕೊಂಡ್ಲಿ, ಪೇಪರ್ ಮಾರ್ಕೆಟ್, ಟೆಲ್ಕೋ ಟಿ ಪಾಯಿಂಟ್, EDM ಮಾಲ್, ಅಕ್ಷರಧಾಮ್, ನಿಜಾಮುದ್ದೀನ್ ಖಟ್ಟಾ ಕಡೆಗೆ ಬದಲಿಸಲಾಗಿದೆ. ವಿಕಾಸ್ ಮಾರ್ಗ …

Read More »

ಮುಂಬೈ ನಮ್ದು, ನಮಗೇ ಸೇರಬೇಕು: ಡಿಸಿಎಂ ಸವದಿ ಹೇಳಿಕೆಯಿಂದ ಮಹಾರಾಷ್ಟ್ರದಲ್ಲಿ ಭಾರೀ ಸಂಚಲನ

ನಾವು ಮುಂಬೈ ಕರ್ನಾಟಕದವರಾಗಿದ್ದು, ನಮಗೆ ಮುಂಬೈ ಮೇಲೆ ಹಕ್ಕು ಇದೆ. ಮುಂಬೈಯನ್ನು ರಾಜ್ಯಕ್ಕೆ ಸೇರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಡಲಿದ್ದು, ಅಲ್ಲಿವರೆಗೂ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ ಒತ್ತಾಯಿಸುವುದಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದರು. ಅವರು ನೀಡಿದ ಈ ಹೇಳಿಕೆ ಮಹಾರಾಷ್ಟ್ರದಲ್ಲಿ ಸಂಚಲನ ಮೂಡಿಸಿದೆ. ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ಮುಂಬೈ ಮಹಾರಾಷ್ಟ್ರಕ್ಕೆ ಸೇರಿದ್ದು, ಅದು ಮಹಾರಾಷ್ಟ್ರದ ಅವಿಭಾಜ್ಯ ಅಂಗವಾಗಿದೆ ಎಂದು ತಿಳಿಸಿದ್ದಾರೆ. ಸಿಎಂ ಉದ್ಧವ್ ಠಾಕ್ರೆ ಅವರು ಮರಾಠಿ …

Read More »

ಸಂಸತ್‌ ಅಧಿವೇಶನ ಇಂದು ಶುರು

ಹೊಸದಿಲ್ಲಿ: ಎರಡು ಹಂತಗಳ ಸಂಸತ್‌ನ ಬಜೆಟ್‌ ಅಧಿವೇಶನ ಶುಕ್ರವಾರ ಶುರುವಾಗಲಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್‌ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆರ್ಥಿಕ ಸಮೀಕ್ಷೆಯೂ ಶುಕ್ರವಾರವೇ ಮಂಡನೆಯಾ ಗ ಲಿದೆ. ಫೆ.1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮುಂಗಡಪತ್ರ ಮಂಡಿಸಲಿದ್ದಾರೆ. ಕೊರೊನಾ ನಿಯಮದ ಹಿನ್ನೆಲೆಯಲ್ಲಿ ರಾಜ್ಯಸಭೆ ಮತ್ತು ಲೋಕಸಭೆಯ ಕಲಾಪಗಳು ತಲಾ ಐದು ಗಂಟೆಗಳಿಗೆ ನಿಗದಿಯಾಗಿವೆ. ರಾಜ್ಯಸಭೆಯ ಕಲಾಪಗಳು ಬೆಳಗ್ಗೆ, ಲೋಕಸಭೆ ಕಲಾಪಗಳು ಸಂಜೆ ವೇಳೆ ನಡೆಯಲಿವೆ. ಅಧಿವೇಶನದ ಮತ್ತೂಂದು ಪ್ರಮುಖ ಅಂಶವೆಂದರೆ ವಾರಾಂತ್ಯಗಳಲ್ಲಿ …

Read More »

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ತಿಮಿಂಗಲಗಳನ್ನು ಹಿಡಿಯುವುದು ಬಾಕಿಯಿದೆ

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಆದರೆ ದೊಡ್ಡ ತಿಮಿಂಗಲಗಳನ್ನು ಹಿಡಿಯುವುದು ಬಾಕಿಯಿದೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ನೋಟೀಸ್ ಹಿನ್ನೆಲೆಯಲ್ಲಿ ಮತ್ತೆ ವಿಚಾರಣೆಗೆ ಹಾಜರಾದ ಇಂದ್ರಜಿತ್ ಲಂಕೇಶ್ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ 6 ತಿಂಗಳಿಂದ ತನಿಖೆಗೆ ಸಹಕಾರ ನೀಡುತ್ತಾ ಬಂದಿದ್ದೇನೆ. ಸಿಸಿ ಅಧಿಕಾರಿಗಳು ಸಣ್ಣ ಸಣ್ಣ ಮೀನುಗಳನ್ನು ಹಿಡಿದಿದ್ದಾರೆ. ಇನ್ನು …

Read More »

ಪೊಲೀಸರಿಗೆ ವಾರದ ರಜೆ ಕಡ್ಡಾಯ:ಪ್ರವೀಣ್‌ ಸೂದ್‌

ಬೆಂಗಳೂರು –  ಪೊಲೀಸರಿಗೆ ವಾರದ ರಜೆ ನೀಡುತ್ತಿಲ್ಲವೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಅವರು ಕಡ್ಡಾಯವಾಗಿ ಸಿಬ್ಬಂದಿಗೆ ವಾರದ ರಜೆ ನೀಡುವಂತೆ ಗುರುವಾರ ತುರ್ತು ಸುತ್ತೋಲೆ ಹೊರಡಿಸಿದ್ದಾರೆ. ”ರಾಜ್ಯ ಪೊಲೀಸ್‌ ಸಿಬ್ಬಂದಿಗೆ ವಾರದಲ್ಲಿ ಒಂದು ದಿನ ಕಡ್ಡಾಯ ರಜೆ ನೀಡಲು ಸೂಚಿಸಿದ್ದು ತಪ್ಪಿದರೆ, ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ಸುತ್ತೋಲೆಯಲ್ಲಿ ಎಚ್ಚರಿಸಿದ್ದಾರೆ. ರಾಜ್ಯದ ಪೊಲೀಸ್‌ ಕಮಿಷನರ್‌ಗಳು, ಐಜಿಪಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಈ …

Read More »

ಸಚಿವ ಮಾಧುಸ್ವಾಮಿಗೆ ಹಿಂದಿನ ಸಾಲು!

ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ.ವಿಜಯೇಂದ್ರ ವಿರುದ್ಧ ವಿರೋಧ ಪಕ್ಷಗಳು ನಿರಂತರ ನಡೆಸುತ್ತಿದ್ದ ವಾಗ್ದಾಳಿಗೆ ಗುರಾಣಿಯಂತೆ ನಿಲ್ಲುತ್ತಿದ್ದ ಸಚಿವ ಜೆ.ಸಿ.ಮಾಧುಸ್ವಾಮಿಗೆ ಈಗ ‘ಹಿಂಬಡ್ತಿ’ ಆಗಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವರಾಗಿದ್ದಾಗ ಅವರಿಗೆ ಮೊದಲ ಸಾಲಿನಲ್ಲಿ ಆಸನ ವ್ಯವಸ್ಥೆ ಇತ್ತು. ಸಂಪುಟ ವಿಸ್ತರಣೆ ಮತ್ತು ಖಾತೆ ಬದಲಾವಣೆ ಬಳಿಕ ಇದೀಗ ಎರಡನೇ ಸಾಲಿನಲ್ಲಿ ವ್ಯವಸ್ಥೆ ಮಾಡಲಾಗಿದೆ. ಮಾಧುಸ್ವಾಮಿ ಅವರು ಈ …

Read More »

C.M.ಕುರ್ಚಿ ಖಾಲಿಯಾಗುತ್ತದೆ ನಾನೇ ಸಿಎಂ ಆಗುತ್ತೇನೆ: ಯತ್ನಾಳ್

ದಾವಣಗೆರೆ : ಪಂಚಮಸಾಲಿ ಲಿಂಗಾಯತ ಸಮುದಾಯದ ಪಾದಯಾತ್ರೆ ಬೆಂಗಳೂರು ಸೇರುವ ಮುನ್ನ 2 ಎ ಘೋಷಿಸದಿದ್ದರೆ ನಿಮ್ಮ ಕುರ್ಚಿ ಖಾಲಿಯಾಗುತ್ತದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಹರಿಹರದಲ್ಲಿ ಮಾತನಾಡಿದ ಯತ್ನಾಳ್, ನಮ್ಮ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರಿಸಿ, ನಾನೇ ನಿಮಗೆ ಕೋಟಿಗಟ್ಟಲೆ ಹಣ ಕೊಡುತ್ತೇನೆ. ಮೀಸಲಾತಿ ಕೊಡುತ್ತೇನೆ ಎಂದು ಸುಮ್ಮನೆ ಯಾಕೆ ಮಾಡುತ್ತೀರಿ? ನಾನು ಮಂತ್ರಿ ಆಗಬೇಕೆಂದು ಯಾರ ಕೈ …

Read More »