ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಅರಮನೆಯಲ್ಲಿ ಇಂದು 5ನೇ ದಿನದ ನವರಾತ್ರಿ ಉತ್ಸವ ನಡೆಯಲಿದೆ. ಅರಮನೆಯ ಚಾಮುಂಡಿ ತೊಟ್ಟಿಯಲ್ಲಿ ರಾಜವಂಶಸ್ಥ ಯದುವೀರ್ ಒಡೆಯರ್‌ರಿಂದ ಸರಸ್ವತಿಗೆ ಪೂಜೆ ನಡೆಯಲಿದೆ. ಬೆಳ್ಳಿಗ್ಗೆ 9.45ರ ಸಮಯಕ್ಕೆ ಅರಮನೆ ಪುರೋಹಿತರಿಂದ ಪೂಜೆ ಪ್ರಾರಂಭವಾಗಲಿದೆ. ಅರಮನೆ ಸಂಪ್ರದಾಯದಂತೆ ರಾಜಮನೆತನದ ಪುರಾತನ ಗ್ರಂಥಗಳು, ಸಂಗೀತ ಉಪಕರಣಗಳಿಗೆ ಹಾಗೂ ಸರಳವಾಗಿ ಸರಸ್ವತಿ ಪೂಜೆ ಮಾಡಲಾಗುತ್ತೆ. ಸದ್ಯ ರಾಜವಂಶಸ್ಥರು ಹಾಗೂ ಪುರೋಹಿತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಇರುತ್ತದೆ. *ಹೆಚ್ಚಿನ …
Read More »ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು
ಹುಬ್ಬಳ್ಳಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ ಸಂಕನೂರು ಅವರ ಪರ ಪ್ರಚಾರದಲ್ಲಿ ಕೈಗೊಂಡ ನಂತರ ಮಾತನಾಡಿದ ಅವರು, ಯಡಿಯೂರಪ್ಪ ಅವರು ನಮ್ಮ ನಾಯಕ ಮತ್ತು ಪಕ್ಷವೇ ಅವರನ್ನು ಆಯ್ಕೆ ಮಾಡಿದೆ, ಸಿಎಂ ವಿರುದ್ಧ ಯತ್ನಾಳ್ ಯಾವುದೇ …
Read More »ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಮತ್ತು ಉದ್ಯೋಗ ಸೃಷ್ಟಿಗೆ ಅನುಕೂಲವಾಗಿದೆ’ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಗೋಕಾಕ: ‘ಕೇಂದ್ರ ಸರ್ಕಾರ ರೂಪಿಸಿರುವ ಕೃಷಿ ಸಂಬಂಧಿತ ತಿದ್ದುಪಡಿ ಮಸೂದೆಗಳಿಂದ ಕೃಷಿ ಭೂಮಿ ಖರೀದಿಗೆ ಹೆಚ್ಚಿನ ಅವಕಾಶವಿದೆ. ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಮತ್ತು ಉದ್ಯೋಗ ಸೃಷ್ಟಿಗೆ ಅನುಕೂಲವಾಗಿದೆ’ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅರಭಾವಿ ಮಂಡಲ ಬಿಜೆಪಿ ರೈತ ಮೋರ್ಚಾದಿಂದ ಹೊರವಲಯದ ಬಸವೇಶ್ವರ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ‘ಕೃಷಿ ಉತ್ಪನ್ನಗಳು, ವ್ಯಾಪಾರ ಮತ್ತು ವಾಣಿಜ್ಯ ಮಸೂದೆ, ರೈತರ ಬೆಲೆ …
Read More »ರಾಜ್ಯದಲ್ಲಿ 7,76,901 ಜನರಿಗೆ ಸೋಂಕು, 10,608 ಬಲಿ!
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸವಂತೂ ಕಡಿಮೆಯಾಗೋ ಯಾವ ಲಕ್ಷಣಗಳೂ ಕಾಣ್ತಿಲ್ಲ. ಬದಲಾಗಿ ಪರಿಸ್ಥಿತಿ ಕೈ ಮೀರಿ ಹೋಗೋ ಎಲ್ಲಾ ಲಕ್ಷಣಗಳೂ ಎದ್ದು ಕಾಣ್ತಿದೆ. ಯಾಕಂದ್ರೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ವೈರಸ್ ಎಲ್ಲೆ ಮೀರಿ ಅರ್ಭಟಿಸ್ತಿದೆ. ಅಟ್ಯಾಕ್.. ಡೆಡ್ಲಿ ಅಟ್ಯಾಕ್.. ಯಾರೂ ಊಹಿಸಿಕೊಳ್ಳಲಾಗದಂತಹ ಅಟ್ಯಾಕ್.. ಜಿಲ್ಲೆ ಜಿಲ್ಲೆಗಳಲ್ಲಿ.. ನಗರ ನಗರಗಳಲ್ಲಿ.. ಗಲ್ಲಿ ಗಲ್ಲಿಯಲ್ಲಿ ಹೆಮ್ಮಾರಿಯ ಡೆಡ್ಲಿ ದಾಳಿ. ಕರುನಾಡಲ್ಲಿ ಹೆಮ್ಮಾರಿ ವೈರಸ್ನ ಅಟ್ಟಹಾಸ ಮಿತಿ ಮೀರ್ತಿದೆ. ಸೋಂಕಿನ ವಿಷ …
Read More »ಹಲವೆಡೆ ರಾತ್ರಿ ಸುರಿದ ಮಳೆ ಭಾರಿ ಅವಾಂತರವನ್ನೇ ಸೃಷ್ಟಿಸಿದೆ.
ಬೆಂಗಳೂರು: ನಗರದ ಹಲವೆಡೆ ರಾತ್ರಿ ಸುರಿದ ಮಳೆ ಭಾರಿ ಅವಾಂತರವನ್ನೇ ಸೃಷ್ಟಿಸಿದೆ. ಆರ್.ಆರ್.ನಗರದ ಮೀನಾಕ್ಷಿ ಕಲ್ಯಾಣ ಮಂಟಪ ಜಲಾವೃತಗೊಂಡಿದೆ. ನೀರು ಹೊರಹಾಕಲು ಕಲ್ಯಾಣ ಮಂಟಪ ಸಿಬ್ಬಂದಿ ಪರದಾಡುತ್ತಿದ್ದಾರೆ. ಇನ್ನು ಕಲ್ಯಾಣ ಮಂಟಪಕ್ಕೆ ನೀರು ನುಗ್ಗಿ ನಿನ್ನೆ ನಡೆಯಬೇಕಿದ್ದ ರಿಸೆಪ್ಷನ್ ರದ್ದಾಗಿತ್ತು. ಆದರೆ ಇಂದೂ ಕೂಡ ಇದೇ ಪರಿಸ್ಥಿತಿ ಇದ್ದು, ಡೈನಿಂಗ್ ಹಾಲ್ನಲ್ಲಿ ನಿಂತಿರುವ ನೀರನ್ನು ಸಿಬ್ಬಂದಿ ಹೊರ ಹಾಕುವ ಪ್ರಯತ್ನದಲ್ಲಿರುವ ದೃಶ್ಯ ಕಂಡು ಬಂದಿದೆ. ಬೈಕ್ ಸವಾರ ಅಪಾಯದಿಂದ ಪಾರು: …
Read More »ಕಳ್ಳತನಕ್ಕೆ ಬಂದಿದ್ದ ದುಷ್ಕರ್ಮಿಗಳು ಮಹಿಳೆ ಕಿವಿ ಕಟ್ ಮಾಡಿರುವ ಘಟನೆ ಕುಕನೂರು ಗ್ರಾಮದಲ್ಲಿ ನಡೆದಿದೆ.
ರಾಯಚೂರು: ಕಳ್ಳತನಕ್ಕೆ ಬಂದಿದ್ದ ದುಷ್ಕರ್ಮಿಗಳು ಮಹಿಳೆ ಕಿವಿ ಕಟ್ ಮಾಡಿರುವ ಘಟನೆ ಕುಕನೂರು ಗ್ರಾಮದಲ್ಲಿ ನಡೆದಿದೆ. ಹನುಮಂತರಾಯ ಮನೆಗೆ ಕಳ್ಳತನಕ್ಕೆ ಬಂದಿದ್ದ ಮೂವರು ಕಿರಾತಕರು ಕಳ್ಳತನಕ್ಕೆ ಮಹಿಳೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಕಿವಿ ಕತ್ತರಿಸಿ ಪರಾರಿಯಾಗಲು ಯತ್ನಿಸಿದ್ದಾರೆ. ಗ್ರಾಮದಲ್ಲಿ ಭಾರಿ ಮಳೆ ಸುರಿದ ಪರಿಣಾಮ ವಿದ್ಯುತ್ ಕಡಿತಗೊಂಡಿತ್ತು. ಈ ವೇಳೆ ಮೂವರು ಖದೀಮರು ಕಳ್ಳತನಕ್ಕೆ ಬಂದಿದ್ದರು. ಹನುಮಂತರಾಯನ ಮನೆಯಲ್ಲಿ ನಗದು, ಚಿನ್ನಾಭರಣ ಕದ್ದಿದ್ದಾರೆ. ಈ ವೇಳೆ ಅವರ ಕೃತ್ಯಕ್ಕೆ ಅಡ್ಡಿಪಡಿಸಿದ್ದಕ್ಕೆ ಮಹಿಳೆಯ …
Read More »ಬೆಂಗಳೂರಲ್ಲಿ ಹಾಡಹಗಲೇ ಇಂಥಾ ಘಟನೆ ನಡೆಯುತ್ತಾ ಅನ್ನೋ ಭಯ ಹುಟ್ಟಿಸುತ್ತಿದೆ.
ಬೆಂಗಳೂರು: ಇತ್ತೀಚೆಗಷ್ಟೇ ಚಾಕು ಹಿಡಿದ ವ್ಯಕ್ತಿಯೊಬ್ಬ ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿ ಇಬ್ಬರ ಕೊಂದು ಹಾಕಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಅಂಥದ್ದೇ ಭಯಾನಕ ವಿಡಿಯೋವೊಂದು ವೈರಲ್ ಆಗಿದೆ. ಬೆಂಗಳೂರಿನಲ್ಲಿ ಸದ್ಯ ವೈರಲ್ ಆಗಿರೋ ವಿಡಿಯೋ ನೋಡ್ತಿದ್ರೆ ನಿಜಕ್ಕೂ ಬೆಂಗಳೂರಲ್ಲಿ ಹಾಡಹಗಲೇ ಇಂಥಾ ಘಟನೆ ನಡೆಯುತ್ತಾ ಅನ್ನೋ ಭಯ ಹುಟ್ಟಿಸುತ್ತಿದೆ. ಕೈಯಲ್ಲಿ ಡ್ಯಾಗರ್ ಹಿಡಿದು ಡರೋಡೆಗೆ ಸ್ಕೆಚ್! ಯೆಸ್.. ಸಿಟಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ಲೈವ್ ರಾಬರಿಯ …
Read More »ಹೆಣ್ಣುಮಕ್ಕಳ ತಂದೆತಾಯಿಗಳೇ ಕಾರಣ ಎಂಬ ಆಘಾತಕಾರಿ ಹೇಳಿಕೆ ನೀಡಿ ತಮ್ಮ ಸರ್ಕಾರವನ್ನು ಮುಜುಗರಕ್ಕೆ ನೂಕಿದ್ದಾರೆ .
ಜಾರ್ಖಂಡ್ನಲ್ಲಿ ಆಡಳಿತರೂಢ ಜೆಎಮ್ಎಮ್ ಪಕ್ಷದ ಲೊಮಿನ್ ಹೆಂಬ್ರೊಮ್ ಎಂಬ ಹೆಸರಿನ ಶಾಸಕ ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಅಪಹರಣದಂಥ ಪ್ರಕರಣಗಳು ಹೆಚ್ಚಾಗಲು ಹೆಣ್ಣುಮಕ್ಕಳ ತಂದೆತಾಯಿಗಳೇ ಕಾರಣ ಎಂಬ ಆಘಾತಕಾರಿ ಹೇಳಿಕೆ ನೀಡಿ ತಮ್ಮ ಸರ್ಕಾರವನ್ನು ಮುಜುಗರಕ್ಕೆ ನೂಕಿದ್ದಾರೆ . ಕಳೆದ ವಾರ ರಾಜ್ಯದ ದುಮ್ಕಾ ಎಂಬಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಉಲ್ಲೇಖಿಸಿ ಹೆಂಬ್ರೊಮ್ ಹಾಗೆ ಹೇಳಿದ್ದಾರೆ . ಇದೇ ಕ್ಷೇತ್ರದಲ್ಲಿ ವಿಧಾನಸಭೆಗೆ ಉಪಚುನಾವಣೆ ನಡೆಯುತ್ತಿರುವುದರಿಂದ ಜೆ …
Read More »ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಖಂಗಾಂ ಎಂಬ ಪುಟ್ಟ ಹಳ್ಳಿಯಿಂದ ವೃದ್ಧೆಯೊಬ್ಬರು ಬರೋಬ್ಬರಿ 2,200 ಕಿ.ಮೀ ದೂರವಿರುವ ಮಾತಾ ವೈಷ್ಣೋದೇವಿಯ ದೇವಸ್ಥಾನಕ್ಕೆ ತೆರಳಲು ಮುಂದಾಗಿದ್ದಾರೆ.
ಮುಂಬೈ: ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಖಂಗಾಂ ಎಂಬ ಪುಟ್ಟ ಹಳ್ಳಿಯಿಂದ ವೃದ್ಧೆಯೊಬ್ಬರು ಬರೋಬ್ಬರಿ 2,200 ಕಿ.ಮೀ ದೂರವಿರುವ ಮಾತಾ ವೈಷ್ಣೋದೇವಿಯ ದೇವಸ್ಥಾನಕ್ಕೆ ತೆರಳಲು ಮುಂದಾಗಿದ್ದಾರೆ. ಅದು ಬಸಲ್ಲಿ ಅಥವಾ ಕಾರಿನಲ್ಲಿ ಅಲ್ಲ; ಬದಲಿಗೆ ಸೈಕಲ್ನಲ್ಲಿ. ಹೌದು, ರೇಖಾ ದೇವ್ಭಂಕರ್ ಎಂಬುವ 68 ವರ್ಷದ ವೃದ್ಧೆ ಮಹಾರಾಷ್ಟ್ರದ ತಮ್ಮ ಹಳ್ಳಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿರುವ ವೈಷ್ಣೋದೇವಿಯ ಸನ್ನಿಧಾನಕ್ಕೆ ಹೋಗಿ ದೇವಿಯ ದರ್ಶನ ಪಡೆಯಲು ಮುಂದಾಗಿದ್ದಾರೆ. ಪ್ರಯಾಣದ ವೇಳೆ ತಮಗೆ ಬೇಕಾಗುವ ಅಗತ್ಯ ವಸ್ತುಗಳನ್ನ …
Read More »ಸಿಡಿಲು ಬಡಿದು ಕುರಿಗಾರರ 45 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ.
ಸವದತ್ತಿ : ಇಂದು ತಾಲೂಕಿನಾದ್ಯಂತ ಸುರಿದ ಗುಡುಗು ಸಹಿತ ಸಿಡಿಲು ಭಾರಿ ಮಳೆಗೆ ನವಿಲುತೀರ್ಥ ಡ್ಯಾಮ್ ಹತ್ತಿರ ಸಿಡಿಲು ಬಡಿದು ಕುರಿಗಾರರ 45 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಸ್ಥಳಕ್ಕೆ ಶಾಸಕ ಹಾಗೂ ವಿಧಾನಸಭೆಯ ಉಪಸಭಾದ್ಯಕ್ಷ ಆನಂದ ಮಾಮನಿ ಹಾಗೂ ತಾಲೂಕು ದಂಡಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ನಂತರ ಕುರಿಗಾರರಿಗೆ ಸೂಕ್ತ ಪರಿಹಾರ ನೀಡುವಂತೆ ತಾಲೂಕು ದಂಡಾಧಿಕಾರಿಗಳಿಗೆ ಆನಂದ ಮಾಮನಿ ಸೂಚಿಸಿದರು.
Read More »