Breaking News

ಚಳಿಗಾಲದಲ್ಲಿ ಕೊರೊನಾ ಹಬ್ಬುವ ಬಗ್ಗೆ ಎಚ್ಚರಿಕೆ: ಸುಧಾಕರ್

ಬೆಂಗಳೂರು: ಮುಂದಿನ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಿನಲ್ಲಿ ಅತಿಯಾದ ಚಳಿ ಇರುವ ತಿಂಗಳಾಗಿದ್ದು, ಈ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗ ಹಾಗೂ ಕೋವಿಡ್ ಹೆಚ್ಚುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಆರೋಗ್ಯ ಇಲಾಖೆ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಬೆಂಗಳೂರಿನಲ್ಲಿ ಮೊದಲ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸುಧಾಕರ್ ಅವರು, ನವೆಂಬರ್, ಡಿಸೆಂಬರ್ ತಿಂಗಳಿನಲ್ಲಿ ಅತಿಯಾದ ಚಳಿ ಇರುವ ಕಾರಣ ಸೋಂಕು ಹೆಚ್ಚಾಗುವ ಕುರಿತು …

Read More »

ವರ್ಷದೊಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಆರಂಭ :B.S.Y.

ಶಿವಮೊಗ್ಗ: ಜಿಲ್ಲೆಯ ಸೋಗಾನೆ ಬಳಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದ್ದು, 2022ರ ಜನವರಿ ಅಥವಾ ಫೆಬ್ರವರಿ ತಿಂಗಳಿನಿಂದ ವಿಮಾನ ಹಾರಾಟ ಆರಂಭವಾಗುವ ನಿರೀಕ್ಷೆ ಇರುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ, ಆರಂಭದಲ್ಲಿ 2050 ಮೀಟರ್ ರನ್ ವೇ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಏರ್ ಬಸ್ ಸೇರಿದಂತೆ ದೊಡ್ಡ …

Read More »

ಹೆದರಿಸಿ, ಬೆದರಿಸಿ ರಾಜಕಾರಣ ಮಾಡೋದು ಕನಕಪುರ ಸ್ಟೈಲ್.:ಸಿ.ಟಿ.ರವಿ

ಚಿತ್ರದುರ್ಗ: ಹೆದರಿಸಿ, ಬೆದರಿಸಿ ರಾಜಕಾರಣ ಮಾಡೋದು ಕನಕಪುರ ಸ್ಟೈಲ್. ಪ್ರಜಾಪ್ರಭುತ್ವದಲ್ಲಿ ಹೆದರಿಸಿ ರಾಜಕಾರಣ ಮಾಡೋಕಾಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿ ರಾಷ್ಟ್ರೀಯಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ಚಿತ್ರದುರ್ಗದ ಮುರುಘಾ ಮಠದ ಶರಣರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಳಿಕ ಮಾತನಾಡಿದ ಸಿ.ಟಿ.ರವಿ, ಅಟ್ರಾಸಿಟಿ ಹಾಕಿಸುವುದು, ಮನೆ ಮೇಲೆ ಕಲ್ಲು ಹೊಡಿಸುವುದು. ನಮ್ಮ ಸಂಸ್ಕೃತಿ ಅಲ್ಲ. ಅದು ಕನಕಪುರದ ಸಂಸ್ಕೃತಿಯಾಗಿದೆ. ಹೀಗಾಗಿ ಕನಕಪುರದ ಸಂಸ್ಕೃತಿಯನ್ನು ರಾಜ್ಯಕ್ಕೆ ವಿಸ್ತರಿಸಲು ಅವಕಾಶ ಕೊಡಲ್ಲವೆಂದು …

Read More »

13 ವರ್ಷಗಳ ಬಳಿಕ ರಾಜಸ್ಥಾನದ ಅಪರೂಪದ ಸಾಧನೆ- ಅಂಕಪಟ್ಟಿಯಲ್ಲಿ ಕೊನೆ ಸ್ಥಾನಕ್ಕೆ ಜಾರಿದ CSK

ಅಬುಧಾಬಿ: 2020ರ ಐಪಿಎಲ್ ಆವೃತ್ತಿಯಲ್ಲಿ ಪ್ಲೇ ಆಫ್ ಪ್ರವೇಶ ಮಾಡಲು ಗೆಲುವು ಪಡೆಯಲೇ ಬೇಕಿದ್ದ ಪಂದ್ಯದಲ್ಲಿ ಚೆನ್ನೈ ತಂಡ ಸೋಲುಂಡಿದೆ. ಧೋನಿ ಬಳಗದ ವಿರುದ್ಧ ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡಲ್ಲೂ ಉತ್ತಮ ಪ್ರದರ್ಶನ ತೋರಿದ ರಾಜಸ್ಥಾನ ರಾಯಲ್ಸ್ ತಂಡ 15 ಎಸೆತ ಬಾಕಿ ಇರುವಂತೆ 7 ವಿಕೆಟ್‍ಗಳ ಭರ್ಜರಿ ಗೆಲುವು ಪಡೆದುಕೊಂಡಿದೆ. 126 ರನ್ ಗಳ ಸುಲಭ ಗುರಿ ಬೆನ್ನಟ್ಟಿದ್ದ ರಾಜಸ್ಥಾನ ತಂಡ ಉತ್ತಮ ಆರಂಭವನ್ನು ಪಡೆಯಲಿಲ್ಲ. ತಂಡ 26 …

Read More »

ಬಿಜೆಪಿ ಶಿಸ್ತಿನ ಪಕ್ಷ ಈ ಪಕ್ಷದಲ್ಲಿ ಕಾರ್ಯಕರ್ತರಿಗಿರುವ ಗೌರವ ಯಾವ ಪಕ್ಷದಲ್ಲಿಯೂ ಇಲ್ಲ: ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಈ ಪಕ್ಷದಲ್ಲಿ ಕಾರ್ಯಕರ್ತರಿಗಿರುವ ಗೌರವ ಯಾವ ಪಕ್ಷದಲ್ಲಿಯೂ ಇಲ್ಲ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ ಸಭಾ ಭವನದಲ್ಲಿ ಜರುಗಿದ ಅರಭಾವಿ ಮಂಡಲ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಜವಾಬ್ದಾರಿ ವಹಿಸಿಕೊಂಡಿರುವ ಹೊಸ ಪದಾಧಿಕಾರಿಗಳು ಸಂಘಟನಾತ್ಮಕವಾಗಿ ದುಡಿದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳನ್ನು ಜನರ …

Read More »

ಬೆಳಗಾವಿ ನದೀಮ ಅವರಿಗೆ ಕಾವ್ಯ ಮಾಣಿಕ್ಯ ಪ್ರಶಸ್ತಿ

ನದೀಮ ಅವರಿಗೆ ಕಾವ್ಯ ಮಾಣಿಕ್ಯ ಪ್ರಶಸ್ತಿ ಬೆಳಗಾವಿ ೧೯:ಹಾಸನದ ಮಾಣಿಕ್ಯ ಪ್ರಕಾಶನ ನೀಡುವ ಕಾವ್ಯ ಮಾಣಿಕ್ಯರಾಜ್ಯಪ್ರಶಸ್ತಿಗೆ ಬೆಳಗಾವಿಯ ಯುವ ಕವಿ ನದೀಮ ಸನದಿ ಅವರ ಪ್ರಥಮ ಕೃತಿ ಹುಲಿಯ ನೆತ್ತಿಗೆ ನೆರಳು ಕವನ ಸಂಕಲನ ಆಯ್ಕೆಯಾಗಿದೆ. ನಿನ್ನೆ ರವಿವಾರ ದಿ.೧೮ ರಂದು ಹಾಸನದ ಸಂಸ್ಕೃತ ಭವನದಲ್ಲಿ ನಡೆದ ಸಮಾರಂಭದಲ್ಲಿ ಪದ್ಮಶ್ರೀ ಪುರಸ್ಕೃತ ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡ ಅವರು ನದೀಮ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ನದೀಮ ಸನದಿ ಬಿ.ಇ, ಎಂ.ಟೆಕ್.ಪದವೀಧರರಾಗಿದ್ದು,ಸಧ್ಯ …

Read More »

ತಮ್ಮನೊಬ್ಬ ರಾಡ್ ನಿಂದ ಅಣ್ಣನ ತಲೆಗೆ ಹೊಡೆದು ಹತ್ಯೆ

ಬೆಳಗಾವಿ- ತಮ್ಮನೊಬ್ಬ ರಾಡ್ ನಿಂದ ಅಣ್ಣನ ತಲೆಗೆ ಹೊಡೆದು ಹತ್ಯೆ ಮಾಡಿದ ಘಟನೆ ಮಾರಿಹಾಳ ಪೋಲೀಸ್ ಠಾಣೆ ವ್ಯಾಪ್ತಿಯ ಅಷ್ಟೇ ಗ್ರಾಮದ ಪಕ್ಕದಲ್ಲಿರುವ ಚಂದಗಡ ಗ್ರಾಮದಲ್ಲಿ ನಡೆದಿದೆ. ಕೃಷ್ಣಾ ಕಾಲಕುಂದ್ರಿ30 ಹತ್ಯೆಯಾದ ದುರ್ದೈವಿಯಾಗಿದ್ದಾನೆ ಇತನ ತಮ್ಮ ಮಿಥುನ ಶಿವಾಜಿ ಕಾಲಕುಂದ್ರಿ ಕೊಲೆ ಮಾಡಿದ ಆರೋಪಿಯಾಗಿದ್ದು ಮಾರಿಹಾಳ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಿಥುನ ಕಾಲಕುಂದ್ರಿ ಪ್ರತಿದಿನ ಕುಡಿದ ಅಮಲಿನಲ್ಲಿ ಮನೆಯವರ ಜೊತೆ ನಿತ್ಯ ಜಗಳಾಡುತ್ತಿದ್ದ ಇವತ್ತು ಅಣ್ಣನ ಜೊತೆ ಜಗಳಕ್ಕಿಳಿದು ಅಣ್ಣನಿಗೆ …

Read More »

ಯತ್ರೀಂದ್ರ ಸಿದ್ದರಾಮಯ್ಯ ಅವರು ಆಪ್ತ ಸ್ನೇಹಿತನ ವಿರುದ್ಧವೇ ಪ್ರಚಾರ

ತುಮಕೂರು: ಜಿಲ್ಲೆಯ ಶಿರಾ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಇದರ ಮಧ್ಯೆ ಸಿದ್ದರಾಮಯ್ಯನವರ ಪುತ್ರ ಯತ್ರೀಂದ್ರ ಸಿದ್ದರಾಮಯ್ಯ ಅವರು ಆಪ್ತ ಸ್ನೇಹಿತನ ವಿರುದ್ಧವೇ ಪ್ರಚಾರಕ್ಕಿಳಿದಿದ್ದಾರೆ. ಹೌದು….ಶಿರಾದ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರು ಯತೀಂದ್ರ ಅವರ ಆಪ್ತ ಸ್ನೇಹಿತರು. ಆದರೂ ಇಂದು (ಸೋಮವಾರ) ಯತೀಂದ್ರ ಅವರು ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರನವರ ಪರವಾಗಿ ಶಿರಾ ನಗರ ಮತ್ತು ಗೌಡಗೆರೆಯಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಈ ಮೂಲಕ ವೈಯಕ್ತಿಕ ಸಂಬಂಧಗಳೇ ಬೇರೆ, …

Read More »

20 ವರ್ಷದ ಮಹಿಳೆ ಮೇಲೆ ಪೊಲೀಸ್ ರಿಂದ ಗ್ಯಾಂಗ್ ರೇಪ್

ಭೋಪಾಲ್ : ಐವರು ಪೊಲೀಸರು ಲಾಕಪ್‍ನಲ್ಲಿಯೇ 20 ವರ್ಷದ ಮಹಿಳೆ ಮೇಲೆ ಹತ್ತು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಮಧ್ಯ ಪ್ರದೇಶದ ರೇವಾ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಸ್ಟೇಷನ್ ಇನ್‍ಚಾರ್ಜ್ ಸೇರಿ ಐವರು ಪೊಲೀಸರು 10 ದಿನಗಳ ಕಾಲ ಲಾಕಪ್‍ನಲ್ಲಿಯೇ ನನ್ನ ಮೇಲೆ ನಿರಂತರವಾಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾಳೆ. ಮಹಿಳೆ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು ಆಕೆಯನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ …

Read More »

ಚಕ್ರವ್ಯೂಹ ದಿಂದ ಹೊರಬರಲೂ ಡಿಕೆಶಿಗೆ ಸಾಧ್ಯವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಭವಿಷ್ಯ ನುಡಿದರು

ಗದಗ : ಈ ಬಾರಿ ಎರಡು‌ ವಿಧಾನಸಭಾ ಉಪಚುನಾವಣೆ ಹಾಗೂ ನಾಲ್ಕು ವಿಧಾನ ಪರಿಷತ್ ಚುನಾವಣೆಗಳು ಎನ್ನುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪಾಲಿಗೆ ಚಕ್ರವ್ಯೂಹ ಆಗಿದೆ. ಅದರಿಂದ ಹೊರಬರಲೂ ಡಿಕೆಶಿಗೆ ಸಾಧ್ಯವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಭವಿಷ್ಯ ನುಡಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ಏಳೂ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ದಾಖಲಿಸಿವುದು ನಿಶ್ಚಿತ. ಅವರು ಸೋತರೆ ಡಿಕೆಶಿ ಬಗ್ಗೆ …

Read More »