Breaking News

ರಾಜ್ಯದಲ್ಲಿ ಇರೋದು ಬಿಜೆಪಿ ಸರ್ಕಾರವಲ್ಲ‌, ಕಾಂಗ್ರೇಸ್ – ಬಿಜೆಪಿ ಸರಕಾರ : ಡಿಕೆಶಿ ವ್ಯಂಗ್ಯ

ಮೈಸೂರು: ನಮ್ಮ ಸದಸ್ಯರನ್ನು ಕರೆದುಕೊಂಡು ಹೋಗಿ ಸರ್ಕಾರ ರಚಿಸಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ಇರೋದು ಬಿಜೆಪಿ ಸರ್ಕಾರವಲ್ಲ‌. ಕಾಂಗ್ರೆಸ್- ಬಿಜೆಪಿ ಸರ್ಕಾರ ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ನಮ್ಮವರನ್ನು ಕರೆದುಕೊಂಡು ಹೋಗಿ ಗಿಫ್ಟ್ ಕೊಟ್ಟಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ಸುಭದ್ರವಾಗಿದೆ. ಎಲ್ಲರೂ ಅತ್ಯಂತ ಒಗ್ಗಟ್ಟಿನಿಂದ ಸಹಕಾರ ಕೊಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಲೇವಡಿ‌ ಮಾಡಿದರು. ಈ ಸರ್ಕಾರ ಬಲಿಷ್ಠವಾಗಿದೆ. ಬಹಳಷ್ಟು ಸಂಖ್ಯಾ ಬಲವಿದೆ. ಸರ್ಕಾರದಲ್ಲಿರುವವರು ಎಲ್ಲರೂ ತುಂಬಾ ಒಗ್ಗಟ್ಟಾಗಿದ್ದಾರೆ. ಸರ್ಕಾರದಲ್ಲಿ ಏನೇನು ಗೊಂದಲವಿಲ್ಲ. …

Read More »

ಬೆಳಗಾವಿ ಸೇರಿ ರಾಜ್ಯದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ

ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ ನೀಡಲಾಗುವ ರಾಷ್ಟ್ರಪತಿ ಪ್ರಶಂಸನೀಯ ಸೇವಾ ಪದಕಕ್ಕೆ ಕರ್ನಾಟಕದ 19 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಜನರಾಗಿದ್ದಾರೆ. ರಾಜ್ಯ ಗುಪ್ತದಳ ಐಜಿಪಿ ಡಾ.ಸುಬ್ರಹ್ಮಣ್ಯೇಶ್ವರ ರಾವ್ ಅಯ್ಯಂಕಿ, ಬೆಳಗಾವಿ ಉತ್ತರ ವಲಯದ ಎಸಿಬಿಯ ಎಸ್ಪಿ ಬಿ.ಎಸ್‍. ನೇಮೆಗೌಡ, ಬೆಂಗಳೂರಿನ ಸಿಐಡಿಯ ಆರ್ಥಿಕ ಅಪರಾಧಗಳ ಘಟಕದ ಡಿವೈಎಸ್ಪಿ ಬಸವಣ್ಣಪ್ಪ ರಾಮಚಂದ್ರ, ಬೆಂಗಳೂರು ರೈಲ್ವೆ ವಿಭಾಗದ ಡಿವೈಎಸ್‍ಪಿ ಡಿ.ಅಶೋಕ್, ಬಿಡಿಎ ವಿಶೇಷ ಕಾರ್ಯಪಡೆಯ ಡಿವೈಎಸ್‍ಪಿ ಸಿ.ಬಾಲಕೃಷ್ಣ, ಪೊಲೀಸ್ ಕೇಂದ್ರ ಕಚೇರಿಯ ಅಪರಾಧ …

Read More »

ಮಾರ್ಚ್ ನಂತರ ಶಾಸಕ ಮಹೇಶ್ ಕುಮಠಳ್ಳಿ ಸಚಿವರಾಗ್ತಾರೆ : ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ : ರಾಜ್ಯದಲ್ಲಿ ಖಾತೆ ಕ್ಯಾತೆ ಬೆನ್ನಲ್ಲೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಪರಮ ಆಪ್ತ ಶಾಸಕ ಮಹೇಶ್ ಕುಮಠಳ್ಳಿ ಕುರಿತು ರಾಜಕೀಯ ಭವಿಷ್ಯ ನುಡಿದ್ದಿದ್ದು, ಮಾರ್ಚ್ ಬಳಿಕ ಅವರು ಕೂಡ ಸಚಿವರಾಗ್ತಾರೆ ಎಂದು ಹೇಳಿದ್ದಾರೆ. ಅಥಣಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರುವ ಮಾರ್ಚ್ ಬಳಿಕ ಮಹೇಶ್ ಕುಮಟಳ್ಳಿಗೂ ಸಚಿವ ಸ್ಥಾನ ಸಿಗಲಿದೆ ಎಂದು ಭವಿಷ್ಯ ನುಡಿದಿದ್ದು, ಈ ವಿಚಾರವಾಗಿ ಶಿಷ್ಯನಿಗೆ ಸಚಿವ ಸ್ಥಾನ ಕೊಡಿಸಲು ತಲೆ …

Read More »

ಜಲಜೀವನ ಮಿಷನ್ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಚಾಲನೆ ಧರ್ಮಟ್ಟಿ-ಪಟಗುಂದಿ ಗ್ರಾಮದಲ್ಲಿ 2.36 ಕೋಟಿ ರೂ. ವೆಚ್ಚದ ಕಾಮಗಾರಿ

ಮೂಡಲಗಿ : ತಮ್ಮ-ತಮ್ಮಲ್ಲಿಯ ವೈಯಕ್ತಿ ಮನಸ್ತಾಪಗಳನ್ನು ಮರೆತು ಗ್ರಾಮದ ಅಭಿವೃದ್ಧಿಗೆ ಒಂದಾಗಿ ಶ್ರಮಿಸುವಂತೆ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ-ಪಟಗುಂದಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಿಂದ 2.36 ಕೋಟಿ ರೂ. ವೆಚ್ಚದಲ್ಲಿ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಒಂದಾಗಿ ದುಡಿದರೆ ಮಾತ್ರ ಗ್ರಾಮಾಭಿವೃದ್ಧಿ ಸಾಧ್ಯ ಎಂದು ಅವರು ಹೇಳಿದರು. ಧರ್ಮಟ್ಟಿ-ಪಟಗುಂದಿ ಗ್ರಾಮದ ಮನೆ-ಮನೆಗೆ ಗಂಗೆ …

Read More »

ಖೀಳೆಗಾಂವ್ ಬಸವೇಶ್ವರ ಏತ ನೀರಾವರಿ ಕಾಮಗಾರಿ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ‌

ಅಥಣಿ: ತಾಲೂಕಿನ ಖಿಳೇಗಾವ ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆಯ ಕಾಮಗಾರಿಗಳನ್ನು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಪರಿಶೀಲನೆ ನಡೆಸಿದರು. ನಾಪುರದ ಮುಖ್ಯ ಜಾಕ್ ವೆಲ್ ಗೆ ಭೇಟಿನೀಡಿ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು, ಆದಷ್ಟು ಶೀಘ್ರದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದರು. ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ್, ಅಥಣಿ ಶಾಸಕ ಮಹೇಶ ಕುಮಟಳ್ಳಿ ಮತ್ತು …

Read More »

ಪುತ್ರಿಯರನ್ನು ಹೊಡೆದು ಕೊಂದ ದಂಪತಿ ವಿದ್ಯಾವಂತ ದಂಪತಿಯಿಂದ ಕೃತ್ಯ, ಚಿತ್ತೂರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ

ಚಿತ್ತೂರ್: ಮೂಢನಂಬಿಕೆಗೆ ಮೊರೆ ಹೋದ ದಂಪತಿ ತಮ್ಮಿಬ್ಬರು ವಿದ್ಯಾವಂತ ಪುತ್ರಿಯರನ್ನು ಹೊಡೆದು ಸಾಯಿಸಿದ ಆಘಾತಕಾರಿ ಘಟನೆ ಆಂಧ್ರ ಪ್ರದೇಶ ಚಿತ್ತೂರ್ ಜಿಲ್ಲಿಯ ಮದನಪಲ್ಲಿ ಸಮೀಪದ ಶಿವನಗರ್ ಪ್ರದೇಶದಲ್ಲಿ ನಡೆದಿದೆ. ಹೆತ್ತವರ ಕೈಯಿಂದಲೇ ದುರಂತ ಅಂತ್ಯ ಕಂಡ ಪುತ್ರಿಯರನ್ನು ಅಲೇಖ್ಯಾ(27) ಮತ್ತು ಸಾಯಿ ದಿವ್ಯಾ ಎಂದು ಗುರುತಿಸಲಾಗಿದೆ. ಆರೋಪಿ ದಂಪತಿ ಪುರುಷೋತಮ್ಮ ನಾಯ್ಡು, ಪದ್ಮಜಾ ಎಂದು ಗುರುತಿಸಲಾಗಿದೆ. ಪದ್ಮಜಾ ಖಾಸಗಿ ಶಾಲೆಯ ಸಂಚಾಲಕಿಯಾದ್ರೆ ಪುರುಷೋತ್ತಮ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲರಾಗಿದ್ದಾರೆ. ಅಲೇಖ್ಯಾ …

Read More »

ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ನೇಣಿಗೆ ಶರಣು !

ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ನಿನ್ನೆ ರಾತ್ರಿ ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವಂತ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.   ಈ ಹಿಂದೆ ಫೇಸ್​ಬುಕ್​ ಪೋಸ್ಟ್​ ನಲ್ಲಿಯೂ ನಟಿ ಜಯಶ್ರೀ ರಾಮಯ್ಯ ತಮಗೆ ದಯಾಮರಣ ಕೊಡಿ ಅಂತಾ ಹಾಕಿಕೊಂಡಿದ್ದರು. ಆ ವೇಳೆಯೇ ಜಯಶ್ರೀ ರಾಮಯ್ಯ ಎಷ್ಟರ ಮಟ್ಟಿಗೆ ಅವರು ಖಿನ್ನತೆಗೆ ಒಳಗಾಗಿದ್ದಾರೆ ಅನ್ನೋದು ಭಾರೀ ಚರ್ಚೆಗೆ ಕಾರಣವಾಗಿತ್ತು.   ತಮ್ಮ ಫೇಸ್​​ಬುಕ್​​ನಲ್ಲಿ …

Read More »

ಬಸವಕಲ್ಯಾಣ ಉಪ ಚುನಾವಣೆ: ಡಿಸಿಎಂ ಸವದಿಯತ್ತ ಬಿಜೆಪಿ ಒಲವು, ಕೈ ನಿಂದ ಧರ್ಮಸಿಂಗ್‌ ಪುತ್ರ?

ಬೆಂಗಳೂರು: ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಗೆ ಡಿಸಿಎಂ ಲಕ್ಷ್ಮಣ ಸವದಿ ಹೆಸರು ಕೇಳಿ ಬರುತ್ತಿದೆ. ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಜೆಪಿ ಹೇಗಾದರೂ ಮಾಡಿ ಗೆಲುವು ಸಾಧಿಸಲು ಸೂಕ್ತ ಅಭ್ಯರ್ಥಿಯ ಹುಡುಕಾಟದಲ್ಲಿದ್ದು, ಈಗ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೆಸರು ಮುನ್ನೆಲೆಗೆ ಬಂದಿದೆ. ಲಕ್ಷ್ಮಣ ಸವದಿ ಗಡಿ ಭಾಗದಲ್ಲಿ ಮರಾಠ ಸಮುದಾಯದೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವುದರಿಂದ ಬಸವ ಕಲ್ಯಾಣ ಕ್ಷೇತ್ರದಲ್ಲಿ ಆ ಸಮುದಾಯದ ಮತಗಳನ್ನು ಸೆಳೆಯಬಹುದು ಎಂಬ …

Read More »

BREAKING : ಕೋಲಾರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿ, 15ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

ಕೋಲಾರ : ಜಿಲ್ಲೆಯ ಮುಳುಬಾಗಿಲು ತಾಲೂಕಿನ ಸೀಗೇಹಳ್ಳಿ ಗೇಟ್ ಬಳಿ, ಇಂದು ಬೆಳಿಗ್ಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದಂತ ಶಾಲಾ ವಾಹನ ಪಲ್ಟಿ ಆಗಿದೆ. ಶಾಲಾ ವಾಹನ ಪಲ್ಟಿಯಾಗಿದ್ದರಿಂದ ಅದರಲ್ಲಿದ್ದಂತ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸೀಗೇಹಳ್ಳಿ ಗೇಟ್ ಬಳಿ ಇಂದು ಬೆಳಿಗ್ಗೆ ನಂಗಲಿಯಿಂದ ಮುಳಬಾಗಿಲು ಪಟ್ಟಣದ ಶ್ರೀಸಾಯಿ ಇಂಟರ್ ನ್ಯಾಷನಲ್ ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದಂತ ವಾಹನ ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದಾಗಿ ವಾಹನದಲ್ಲಿದ್ದಂತ …

Read More »

BIG NEWS : ಸುಧಾಕರ್ ಒತ್ತಡಕ್ಕೆ ಮಣಿದ ಸಿಎಂ, ಒಂದೇ ವಾರದಲ್ಲಿ 3 ಬಾರಿ ಖಾತೆ ಬದಲು..!

ಬೆಂಗಳೂರು,ಜ.25-ಕೊನೆಗೂ ಮುನಿಸಿಕೊಂಡಿದ್ದ ಕೆಲವು ಸಚಿವರ ಅಸಮಾಧಾನವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಮತ್ತೆ ಖಾತೆಗಳನ್ನು ಬದಲಾವಣೆ ಮಾಡಲಾಗಿದೆ. ಸಚಿವ ಡಾ.ಕೆ.ಸುಧಾಕರ್ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಗೆ ಜೊತೆಗೆ ವೈದ್ಯಕೀಯ ಖಾತೆಯನ್ನು ಮತ್ತೆ ಅವರಿಗೇ ನೀಡಿದ್ದಾರೆ. ಜೊತೆಗೆ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದ ಜೆ.ಸಿ.ಮಾಧುಸ್ವಾಮಿಗೆ ಈಗ ಪ್ರವಾಸೋದ್ಯಮ ಖಾತೆಯನ್ನು ನೀಡಲಾಗಿದೆ. ಕಳೆದ ವಾರ ನೂತನ ಸಚಿವರನ್ನು ಖಾತೆ ಹಂಚಿಕೆ ಮಾಡುವ ವೇಳೆ ವೈಜ್ಞಾನಿಕ ಶಿಕ್ಷಣ ಖಾತೆಯನ್ನು ಡಾ.ಕೆ.ಸುಧಾಕರ್ ಅವರಿಂದ …

Read More »