ಬೆಂಗಳೂರು, ಏಪ್ರಿಲ್ 7: ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi), ಮಾಜಿ ವಯನಾಡ್ ಸಂಸದ ರಾಹುಲ್ ಗಾಂಧಿ (Rahul Gandhi) ಹಾಗೂ ಕೇರಳ ಸರ್ಕಾರದ (Kerala Government) ಲಾಬಿಗೆ ಮಣಿದು ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ವಾಹನ ಸಂಚಾರಕ್ಕೆ (Bandipura Forest Night Travaling) ಅವಕಾಶ ನೀಡಬಾರದು ಎಂದು ಬಿಜೆಪಿ ಸಂಸದ ಲಹರ್ ಸಿಂಗ್ ಸಿರೋಯಾ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿರುವ …
Read More »ಯತ್ನಾಳ್ಗೆ ಯಲ್ಲಮ್ಮನ ದರ್ಶನ
ಬೆಳಗಾವಿ, (ಏಪ್ರಿಲ್ 07): ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಹೈಕಮಾಂಡ್ ಪಕ್ಷದಿಂದಲೇ ಉಚ್ಚಾಟನೆ ಮಾಡಿದೆ. ಆದರೂ ಯತ್ನಾಳ್ ಅವರ ಮಾತಿನಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬೆಂಕಿ ಉಗುಳುತ್ತಲೇ ಇದ್ದಾರೆ. ಉಚ್ಛಾಟನೆ ಬೆನ್ನಲ್ಲೇ ಮತ್ತಷ್ಟು ಆ್ಯಕ್ಟೀವ್ ಆಗಿರುವ ಯತ್ನಾಳ್ ಎಲ್ಲೆಡೆ ಪ್ರವಾಸ ಕೈಗೊಂಡಿದ್ದಾರೆ. ಅದರಂತೆ ಇಂದು (ಏಪ್ರಿಲ್ 07) ಉತ್ತರ ಕರ್ನಾಟಕದ ಶಕ್ತಿದೇವಿ ಬೆಳಗಾವಿಯ ಶ್ರೀ ರೇಣುಕಾ ಯಲ್ಲಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ …
Read More »ಎರಡೇ ವಾರಕ್ಕೆ ಮುರಿದು ಬಿತ್ತು ಹಿಂದೂ ಯುವಕ, ಮುಸ್ಲಿಂ ಯುವತಿಯ ಪ್ರೇಮ ವಿವಾಹ
ಚಿಕ್ಕಬಳ್ಳಾಪುರ, (ಏಪ್ರಿಲ್ 07): ಮುಸ್ಲಿಂ ಯುವತಿ ಹಾಗೂ ಹಿಂದೂ ಯುವಕ ಪ್ರೇಮ ವಿವಾಹ (Love Marriage) ಎರಡೇ ವಾರಕ್ಕೆ ಮುರಿದುಬಿದ್ದಿದೆ. ಎದುರು ಬದುರು ಮನೆಯವರಾಗಿದ್ದ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಮೈಲಪನಹಳ್ಳಿ ಗ್ರಾಮದ ಫಸಿಯಾ ಹಾಗೂ ನಾಗಾರ್ಜುನ ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ, ಇಬ್ಬರ ಮದ್ವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಈ ಜೋಡಿ ಮನೆಬಿಟ್ಟು ಹೋಗಿ ಪ್ರೇಮ ವಿವಾಹವಾಗಿತ್ತು. ಆದ್ರೆ, ಇದೀಗ 15 ದಿನದಲ್ಲೇ ಈ ಪ್ರೇಮ ವಿವಾಹ ಅಂತ್ಯಕಂಡಿದೆ. ತಾಯಿಗೆ ಅನಾರೋಗ್ಯದ ಕಾರಣ ನೀಡಿ ಫಸಿಯಾ, …
Read More »ನಾಳೆ ದ್ವಿತೀಯ ಪಿಯು ಫಲಿತಾಂಶ:
ಬೆಂಗಳೂರು, (ಏಪ್ರಿಲ್ 07): ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾತರಿಂದ ಕಾಯುತ್ತಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ( 2nd PUC Students) ಗುಡ್ನ್ಯೂಸ್ ಸಿಕ್ಕಿದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (Karnataka 2nd PUC Exam 2025 Result ) ನಾಳೆ ಅಂದರೆ ಏಪ್ರಿಲ್ 08ರಂದು ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. …
Read More »ಕಾಫಿ, ಟೀ ಬೆಲೆ 3 ರಿಂದ 10 ರೂ ಹೆಚ್ಚಳ
ಬೆಂಗಳೂರು: ರಾಜ್ಯ ಸರ್ಕಾರ ಕೆಲವು ದಿನಗಳ ಹಿಂದೆ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ 4 ರೂಪಾಯಿ ಹೆಚ್ಚಿಸಿತ್ತು. ಏಪ್ರಿಲ್ 1ರಿಂದ ಪರಿಷ್ಕೃತ ದರ ಜಾರಿಗೆ ಬಂದಿದೆ. ಇದರ ಪರಿಣಾಮ, ಅನೇಕ ಹೋಟೆಲ್‌ಗಳು ಕಾಫಿ ಮತ್ತು ಚಹಾ ದರ ಏರಿಸಿವೆ. ಬೆಲೆ ಏರಿಕೆ ಬಿಸಿ ಇದೀಗ ಗ್ರಾಹಕರಿಗೆ ತಟ್ಟಿದೆ. ಬೆಂಗಳೂರಿನ ಬಹುತೇಕ ಹೋಟೆಲ್‌ಗಳು, ಕೆಫೆಗಳು ಮತ್ತು ಟೀ ಸ್ಟಾಲ್‌ಗಳಲ್ಲಿ ಒಂದು ಕಪ್ ಚಹಾ ಮತ್ತು ಕಾಫಿಯ ಬೆಲೆಯನ್ನು 3 ರೂ.ನಿಂದ 10 …
Read More »ರಸ್ತೆಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸಿಸಿಟಿವಿಯಲ್ಲಿ ಕಾಮುಕನ ದುಷ್ಕೃತ್ಯ ಸೆರೆ
ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರನ್ನು ಹಿಂಬಾಲಿಸಿದ ಕಾಮುಕನೊಬ್ಬ ಯುವತಿಯೋರ್ವಳ ಮೇಲೆರಗಿ ಆಕೆಯ ಖಾಸಗಿ ಅಂಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ 1ನೇ ಕ್ರಾಸ್‌ನಲ್ಲಿ ಏಪ್ರಿಲ್ 3ರಂದು ಮುಂಜಾನೆ ಸುಮಾರು 1.55ಕ್ಕೆ ಘಟನೆ ನಡೆದಿದೆ. ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಸ್ಥಳೀಯ ನಿವಾಸಿ ಲೋಕೇಶ್ ಗೌಡ ಎಂಬುವವರು ನೀಡಿದ ದೂರಿನನ್ವಯ ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. …
Read More »ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ಮುಂದುವರೆಸುವಂತೆ ಬೃಹತ್ ಜಾಥಾ
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ಮುಂದುವರೆಸಬೇಕು, ಯಾವುದೇ ಸಡಿಲಿಕೆ ಇರಬಾರದು ಎಂದು ಆಗ್ರಹಿಸಿ ಪರಿಸರಪ್ರೇಮಿಗಳು ಇಂದು ಬೃಹತ್ ಕಾಲ್ನಡಿಗೆ ಜಾಥಾ ನಡೆಸಿದರು. ಕೇರಳಕ್ಕೆ ಹಾದುಹೋಗುವ ಕಗ್ಗಳದಹುಂಡಿ ಗೇಟ್ನಿಂದ ಮದ್ದೂರು ಚೆಕ್ಪೋಸ್ಟ್ ವರೆಗೆ ಪರಿಸರ ಹೋರಾಟಗಾರರು, ರೈತರು, ಟೆಕ್ಕಿಗಳು, ಕೇರಳದ ಪರಿಸರ ಹೋರಾಟಗಾರರು, ಸ್ಥಳೀಯ ಯುವಕರು ಸೇರಿದಂತೆ ಸಹಸ್ರಾರು ಮಂದಿ ಜಾಥಾದಲ್ಲಿ ಭಾಗಿಯಾದರು. ಕೇರಳದ ವಯನಾಡ್ ಪ್ರಕೃತಿ ಸಂರಕ್ಷಣಾ ಸಮಿತಿಯ ಬಾದೂಷಾ ಮಾತನಾಡಿ, “ನಾವು ಕೂಡ ರಾತ್ರಿ ಸಂಚಾರ …
Read More »ಮೇಕೆದಾಟು ಯೋಜನೆ ಜಾರಿ ಮಾಡುವುದು ರಾಜ್ಯ ಕಾಂಗ್ರೆಸ್ಗೆ 5 ನಿಮಿಷದ ಕೆಲಸ: ಬೊಮ್ಮಾಯಿ
ಮೇಕೆದಾಟು ಯೋಜನೆ ಜಾರಿ ಮಾಡುವುದು ರಾಜ್ಯ ಕಾಂಗ್ರೆಸ್ಗೆ 5 ನಿಮಿಷದ ಕೆಲಸ: ಬೊಮ್ಮಾಯಿ ಹಾವೇರಿ: “ಮೇಕೆದಾಟು ಯೋಜನೆ ಜಾರಿ ಮಾಡುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಕೇವಲ ಐದು ನಿಮಿಷದ ಕೆಲಸ. ಆದರೆ ಅದನ್ನು ಜಾರಿ ಮಾಡುವ ಇಚ್ಛಾಶಕ್ತಿ ರಾಜ್ಯ ಸರ್ಕಾರಕ್ಕೆ ಇಲ್ಲ” ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ತಮಿಳುನಾಡಿನಲ್ಲಿ ಇವರದೇ ಮಿತ್ರ ಪಕ್ಷ ಡಿಎಂಕೆ ಅಡಳಿತದಲ್ಲಿದೆ. ಇವರು ಮನಸ್ಸು ಮಾಡಿದರೆ …
Read More »ಹಾವೇರಿಯಲ್ಲಿ ಹಾಲು ಉತ್ಪಾದಕರ ಆಕ್ರೋಶಕ್ಕೆ ಮಣಿದ ಹಾವೆಮುಲ್: ಹಾಲಿಗೆ 2.50ರೂ. ಹೆಚ್ಚಳ (
ಹಾವೇರಿ: ಹಾವೇರಿ ಹಾಲು ಉತ್ಪಾದಕರ ಆಕ್ರೋಶಕ್ಕೆ ಮಣಿದ ಹಾವೆಮುಲ್ ಒಕ್ಕೂಟ ಹಾಲಿನ ದರವನ್ನು 2.50 ರೂ.ಗೆ ಏರಿಸಿ ಏಪ್ರಿಲ್ 1 ರಿಂದ ಜಾರಿಗೊಳಿಸಿದೆ. ಈ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿರುವ ಹಾವೆಮುಲ್ನ ಅಧ್ಯಕ್ಷ ಮಂಜನಗೌಡ ಪಾಟೀಲ್ ಹಾಲಿನ ದರ ಏರಿಕೆ ಬಗ್ಗೆ ವಿವರಿಸಿದ್ದಾರೆ. “ಹಾವೇರಿ ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘ ಒಕ್ಕೂಟ 28/03/25ರ ಹಾಲಿನ ದರ ಪರಿಷ್ಕರಣೆ ಆದೇಶವನ್ನು ಹಿಂಪಡೆದು ದಿನಾಂಕ 1/04/25 ರಿಂದ ಅನ್ವಯವಾಗುವಂತೆ ಪ್ರತಿ ಲೀಟರ್ ಹಾಲಿಗೆ 34.05 …
Read More »‘ರಾಜೀನಾಮೆ ಕೊಟ್ಟು ಚುನಾವಣೆ ಎದುರಿಸೋಣ,
ಹುಬ್ಬಳ್ಳಿ: “ನೀನು ರಾಜೀನಾಮೆ ಕೊಡು, ನಾನು ರಾಜೀನಾಮೆ ಕೊಡ್ತೀನಿ. ಚುನಾವಣೆಗೆ ಹೋಗೋಣ, ಯಾರು ಗೆಲ್ಲುತ್ತಾರೆ ನೋಡೋಣ” ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ಸವಾಲು ಹಾಕಿದ್ದಾರೆ. ನಗರದ ಮೂರುಸಾವಿರ ಮಠದ ಸ್ವಾಮೀಜಿ ಭೇಟಿ ಮಾಡಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನಾನು ಕೇವಲ ಭಗವಾ ಧ್ವಜದ ಮೇಲೆ ಗೆಲ್ಲುತ್ತೇನೆ. ನನಗೆ ಮುಸ್ಲಿಮರ ವೋಟ್ ಬೇಡ. ವಿಜಯೇಂದ್ರ ನಿನಗೆ ತಾಕತ್ ಇದೆಯಾ? ಎಂದು …
Read More »
Laxmi News 24×7