ಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ರಾಮಲಿಂಗಾರೆಡ್ಡಿ ಅವರ ಮಗಳು, ಶಾಸಕಿ ಸೌಮ್ಯ ರೆಡ್ಡಿ, ಇವತ್ತು ನಡೆದ ಕಾಂಗ್ರೆಸ್ ಪಕ್ಷದ ನಾಟಕೀಯ ಪ್ರತಿಭಟನೆ ಸಂದರ್ಭದಲ್ಲಿ ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ನಡೆಸುವ ಕೀಳು ಮಟ್ಟದ ವರ್ತನೆಯನ್ನು ತೋರಿದ್ದಾರೆ. ಇದು ಖಂಡನೀಯ ವಿಷಯ ಎಂದು, ಭಾರತೀಯ ಜನತಾ ಪಕ್ಷದ ರಾಜ್ಯ ವಕ್ತಾರರು ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯರೂ ಆದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಮಲ್ಲೇಶ್ವರಂನ ಬಿಜೆಪಿ ಕಾರ್ಯಾಲಯ …
Read More »ಅಂತರ್‌ರಾಜ್ಯ ಕಾರ್ ಲೋನ್ ಜಾಲ ಬೇಧಿಸಿದ ಪೊಲೀಸ್
ಮುಂಬೈ: ಅಂತರ್ ರಾಜ್ಯ ಕಾರ್ ಲೋನ್ ವಂಚನೆ ಜಾಲವನ್ನು ಮುಂಬೈ ಕ್ರೈ ಬ್ರ್ಯಾಂಚ್ ಬೇಧಿಸಿದ್ದು, 19 ಲಕ್ಷುರಿ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ 7 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಬ್ಯಾಂಕ್ ಒಂದರ ಮಾಜಿ ಲೋನ್ ಎಕ್ಸಿಕ್ಯೂಟಿವ್ ಕೂಡ ಸೇರಿದ್ದಾನೆ. ಆರೋಪಿಗಳು ಈ ಕಾರುಗಳನ್ನು ಮುಂಬೈ ಅಲ್ಲದೆ ಬೆಂಗಳೂರು, ಅಹ್ಮದಾಬಾದ್‌ನಲ್ಲಿ ಅಡ ಇಟ್ಟಿರುವ ಸಂಗತಿ ಕೂಡ ಬೆಳಕಿಗೆ ಬಂದಿದೆ. ಮರ್ಸಿಡಿಸ್ ಬೆನ್ l, ಆಡಿ, ಟೊಯೊಟಾ ಇನ್ನೋವಾ, ಫಾರ್ಚೂನರ್, ಫೋರ್ಡ್, ಮಿನಿಕೂಪರ್‌ನಂಥ …
Read More »ರೈತರ ಹಣದೊಂದಿಗೆ ವ್ಯಾಪಾರಿ ನಾಪತ್ತೆ
ಸಿರುಗುಪ್ಪ :ರೈತರ ಹಣದೊಂದಿಗೆ ವ್ಯಾಪಾರಿ ನಾಪತ್ತೆ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಕರ್ಚಿಗನೂರು ಶಾನವಾಸಪುರ,ಸೂಗೂರು, ಹಚ್ಚೊಳ್ಳಿ, ಅರಳಿಗನೂರು ಸೇರಿದಂತೆ ಹಲವು ಗ್ರಾಮಗಳ.35ಕ್ಕೂ ಹೆಚ್ಚು ರೈತರಿಂದ18 ಕೋಟಿ 30 ಲಕ್ಷ ರೂ ಮೌಲ್ಯದ ಭತ್ತವನ್ನು ಮಾರುಕಟ್ಟೆ ಧರಕ್ಕಿಂತ ಹೆಚ್ಚಿನ ಧರದಲ್ಲಿ ಖರೀದಿಸಿದ ವ್ಯಕ್ತಿ ಈಗ ಕಳೆದ ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದಾನಂತೆ. ಮೂಲತಃ ಕಾರಟಿಗಿಯ ಮೆಹಬೂಬ್ ಭಾಷಾ ಎನ್ನುವಾತ ಸಿರುಗುಪ್ಪದಲ್ಲಿ ವಾಸವಾಗಿದ್ದ ಕಳೆದ ವರ್ಷ ಭತ್ತ ಖರೀದಿಸಿ ರೈತರಿಗೆ ಸಮರ್ಪಕವಾಗಿ ಹಣ ಪಾವತಿ …
Read More »ಈ ಬಾರಿ ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಇಲ್ಲ?
ಶಿವಮೊಗ್ಗ : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಶಾಲಾ, ಕಾಲೇಜು ವಿಳಂಬವಾಗಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೇಸಿಗೆ ರಜೆ ಬಳಸಿಕೊಂಡು ಮೇ ತಿಂಗಳವರವರೆಗೆ ತರಗತಿಗಳನ್ನು ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಶಾಲಾ-ಕಾಲೇಜುಗಳು ವಿಳಂಬವಾಗಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೇಸಿಗೆ ರಜೆ ಬಳಸಿಕೊಂಡು ಮೇ ವರೆಗೆ ಶಾಲೆಗಳನ್ನು ನಡೆಸುವ ಚಿಂತನೆ ಇದೆ. ಜೂನ್ ನಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆಗಳು ನಡೆಯಲಿವೆ. ಈಗಾಗಲೇ ಸಾಕಷ್ಟು ರಜೆ …
Read More »SSLC ಪರೀಕ್ಷೆಗೆ ಹಾಜರಾತಿ ವಿನಾಯಿತಿ: ಪರೀಕ್ಷಾ ಮಂಡಳಿ
ಬೆಂಗಳೂರು: ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ ಕುರಿತ ಮಾರ್ಗಸೂಚಿ ಬಿಡುಗಡೆ ಮಾಡಿರುವ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ವಿದ್ಯಾರ್ಥಿಗಳಿಗೆ ಕನಿಷ್ಠ ಹಾಜರಾತಿಯಿಂದ ವಿನಾಯಿತಿ ನೀಡಿದೆ. ಈ ವರ್ಷ ಪರೀಕ್ಷೆಗೆ ಕನಿಷ್ಠ ಹಾಜರಾತಿ ಇರುವುದಿಲ್ಲ. ಎಲ್ಲ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು ಎಂಬ ಬಗ್ಗೆ ಜ.11ರಂದು ಉದಯವಾಣಿ’ ವಿಸ್ತೃತ ವರದಿ ಪ್ರಕಟಿಸಿತ್ತು. ಈಗ ಮಂಡಳಿ ಬಿಡುಗಡೆ ಮಾಡಿರುವ ಅಧಿಸೂಚನೆಯಲ್ಲಿ ಅದನ್ನು ಸ್ಪಷ್ಟವಾಗಿ ತಿಳಿಸಲಾಗಿದೆ. ಜೂನ್ ತಿಂಗಳಲ್ಲಿ ನಡೆಯಲಿರುವ ವಾರ್ಷಿಕ ಪರೀಕ್ಷೆಯ ಪ್ರಕ್ರಿಯೆ ಹೇಗಿರಬೇಕು …
Read More »ನೋ ಪ್ರೊಟೆಸ್ಟ್ ನಥಿಂಗ ಡಿಸಿಪಿ ವಿಕ್ರಂ ಅಮಟೆ ಖಡಕ್ ಎಚ್ಚರಿಕೆ ಪ್ರತಿಭಟನೆ ಕೈ ಬಿಟ್ಟ ಎಂಇಎಸ್
ಬೆಳಗಾವಿ – ಯಾವುದೇ ಕಾರಣದಿಂದ ಪ್ರತಿಭಟನೆಗೆ ಅವಕಾಶವಿಲ್ಲ. ಹಾಗೊಮ್ಮೆ ಪ್ರತಿಭಟನೆಗಿಳಿದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಡಿಸಿಪಿ ವಿಕ್ರಂ ಅಮಟೆ ನೀಡಿದ ಗಂಭೀರ ಎಚ್ಚರಿಕೆಗೆ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಬಾಲ ಮುದುಡಿಕೊಂಡಿದೆ. ಗುರುವಾರ ಬೆಳಗಾವಿಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ಪ್ರತಿಭಟನೆ ಕೈ ಬಿಟ್ಟಿವೆ. ಬೆಳಗಾವಿ ಮಹಾನಗರ ಪಾಲಿಕೆ ಮುಂದೆ ಕನ್ನಡ ಧ್ವಜ ಹಾಕಿರುವುದನ್ನು ಪ್ರತಿಭಟಿಸಿ ಎಂಇಎಸ್ ಗುರುವಾರ ಬೃಹತ್ ಪ್ರತಿಭಟನೆ ಮಾಡುವುದಾಗಿ ಹೇಳಿತ್ತು. ಇದಕ್ಕಾಗಿ ಎಲ್ಲ ಕಡೆ ಸಿದ್ಧತೆ …
Read More »ಬೆಳಗಾವಿಯ ಶ್ರೀನಿವಾಸ ತಾಳೂಕರ ಕನ್ನಡ ನಿಷ್ಠೆಗೆ ಒಲಿದು ಬಂತು ನಾಡೋಜ ಜೋಶಿಯವರಿಂದ ಅಭಿಮಾನದ ಸನ್ಮಾನ
ದೂರದರ್ಶನ ಚಂದನ ಕೇಂದ್ರದ ನಿರ್ದೇಶಕರಾಗಿ ಅತ್ಯಂತ ಜವಾಬ್ದಾರಿಯುತವಾಗಿ, ಪ್ರಾಮಾಣಿಕ ನಿಷ್ಠೆಯಿಂದ ಸೇವೆ ಸಲ್ಲಿಸಿ ಪ್ರತಿಷ್ಠಿತ,ನಾಡೋಜ ಪ್ರಶಸ್ತಿಗೆ ಭಾಜನರಾಗಿ, #ಸಂತ ಶಿಶುನಾಳ ಶರೀಫರ ಗುರುಗಳಾದ #ಗುರುಗೋವಿಂದ #ಭಟ್ಟರ ವಂಶಸ್ಥರಾಗಿ ಸದಾ ಕನ್ನಡ ಮಂತ್ರವನ್ನು ಜಪಿಸುತ್ತಾ ವಿವಿಧ ರೀತಿಯಲ್ಲಿ ಕನ್ನಡಮ್ಮನ ಸೇವೆ ಸಲ್ಲಿಸುತ್ತಿರುವ ದೂರದರ್ಶನ ಕೇಂದ್ರ ಚಂದನದ ವಿಶ್ರಾಂತ ಹೆಚ್ಚುವರಿ ಮಹಾ ನಿರ್ದೇಶಕರಾದ ನಾಡೋಜ ಡಾ. ಮಹೇಶ್ ಜೋಶಿ ಅವರ ಸರಳತೆಯನ್ನು ಯಾವ ಕನ್ನಡಿಗನೂ ಸಹ ಮೆಚ್ಚದೆ ಇರಲಾರ. ಎಲ್ಲೋ ದೂರಿನ ಬೆಂಗಳೂರಿನಲ್ಲಿದ್ದುಕೊಂಡು …
Read More »ಕಾಕತಿ ವ್ಯಾಪ್ತಿಯಲ್ಲಿ ಬಿಂದಾಸ್ ಕಳ್ಳತನ..!
ಬೆಳಗಾವಿಯಲ್ಲಿ ಕಳ್ಳರ ಕೈಚಳಕ ಮತ್ತಷ್ಟು ಬಲಗೊಳ್ಳುತ್ತಿದೆ. ಮನೆಗಳ್ಳತನಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಅದರಲ್ಲೂ ಕಾಕತಿ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಕಳ್ಳರು ಮಾತ್ರ ಬಿಂದಾಸ್ ಆಗಿ ಕಳ್ಳತನ ಮಾಡುತ್ತಿದ್ದಾರೆ. ಯಾಕೆಂದರೆ ಬಹುಶಃ ಇಲ್ಲಿಯವರೆಗೆ ಆಗಿರುವ ಕಳ್ಳತನಗಳಲ್ಲಿ ಒಂದೇ ಒಂದು ಕಳ್ಳತನ ಪ್ರಕರಣವನ್ನು ಅಲ್ಲಿನ ತನಿಖಾಧಿಕಾರಿಗಳು ಪತ್ತೆ ಹಚ್ಚಿಲ್ಲ. ಹೀಗಾಗಿ ಬಹುಶಃ ಕಳ್ಳರು ಇಲ್ಲಿ ಬಿಂದಾಸಾಗಿ ಹಾಡಹಗಲೇ ಮನೆಗಳಿಗೆ ಕನ್ನ ಹಾಕಿ ದೊಚುತ್ತಿದ್ದಾರೆ. ನಿನ್ನೆ (ಮಂಗಳವಾರ 19) ಮಧ್ಯಾಹ್ನ 12 ಗಂಟೆ ಸುಮಾರಿಗೆ …
Read More »ಸಿಎಂ ತೋರಿಕೆಗಷ್ಟೇ ಹಸಿರು ಶಾಲು ಹಾಕ್ತಾರೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೋರಿಕೆಗಷ್ಟೇ ಹಸಿರು ಶಾಲು ಹಾಕ್ತಾರೆ. ಆದ್ರೆ ಯಾವುದೇ ರೀತಿ ರೈತರ ಬಗ್ಗೆ ಕಾಳಜಿ ಅವರಿಗಿಲ್ಲ. ಬಿಜೆಪಿ ಕಾರ್ಪೊರೇಟರ್ ಪರ ಇರುವುದರಿಂದ ಕಾಯ್ದೆ ಹಿಂಪಡೆಯಲು ಹಿಂದೆಟು ಹಾಕುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ಇಂದು ನಡೆದ ರಾಜಭವನ ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ಕಾರ್ಪೊರೇಟರ್ ಪರ ಇವೆ. ಆದ ಕಾರಣ ಸರ್ಕಾರ …
Read More »ಕಾಂಗ್ರೆಸ್ ನ ಮತ್ತಿಬ್ಬರು ನಾಯಕರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಪಟ್ಟ !
ಬೆಂಗಳೂರು : ಮಾಜಿ ಸಂಸದ ಧ್ರುವ ನಾರಾಯಣ್ ಹಾಗೂ ಮಾಜಿ ಸಚಿವ, ಶಾಸಕ ರಾಮಲಿಂಗಾ ರೆಡ್ಡಿ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಗೆ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಆದೇಶ ನೀಡಿದ್ದಾರೆ. ಮೂವರು ನಾಯಕರಾದ ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ಸಲೀಂ ಅಹಮ್ಮದ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಈಗಾಗಲೇ ನೇಮಕ ಮಾಡಲಾಗಿದೆ. ನಾಯಕರು ಸಹ ರಾಜ್ಯಾದ್ಯಂತ …
Read More »