Breaking News

ಬಿಎಂಟಿಸಿ ಟಿಕೆಟ್ ದರ ಏರಿಕೆ ಸುಳಿವು ನೀಡಿದ ಸಚಿವ ಲಕ್ಷಣ ಸವದಿ

ಬೆಂಗಳೂರು (ಫೆ. 25): ಕೋವಿಡ್​ನಿಂದಾಗಿ ಬಿಎಂಟಿಸಿ ​ ನಷ್ಟ ಅನುಭವಿಸುತ್ತಿದ್ದು, ಟಿಕೆಟ್​ ದರ ಏರಿಕೆ ಪ್ರಸ್ತಾವನೆ ಬಂದಿದೆ. ಈ ಬಗ್ಗೆ ಚಿಂತನೆ ನಡೆಸಲಾಗಿದ್ದು,  ದರ ಏರಿಕೆ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿಗಳೇ ನಿರ್ಧರಿಸಲಿದ್ದಾರೆ ಎಂದು ಸಾರಿಗೆ ಸಚಿವರಾಗಿರುವ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಈ ಮೂಲಕ ಈ ಬಾರಿ ಬಜೆಟ್​ನಲ್ಲಿ ಬಿಎಂಟಿಸಿ ದರ ಏರಿಕೆ ಪ್ರಸ್ತಾಪ ಮುಂದಿಡುವ ಸುಳಿವು ನೀಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳ ಹಿಂದೆ ಕೆಎಸ್​ಆರ್​ಟಿಸಿ …

Read More »

ಪಂಚಮಸಾಲಿ ಮೀಸಲಾತಿ ಕುರಿತು ಸಂಜೆ ದುಂಡುಮೇಜಿನ ಸಭೆ

ಬೆಂಗಳೂರು,ಫೆ.25- ಶತಾಯಗತಾಯ ಲಿಂಗಾಯಿತ ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡಲೇಬೇಕೆಂಬ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಇಂದು ಸಂಜೆ ಮಹತ್ವದ ದುಂಡುಮೇಜಿನ ಸಭೆ ನಡೆಯಲಿದೆ. ಈ ಸಭೆಗೆ ಸಚಿವರು, ಶಾಸಕರು, ಸಮಾಜದ ಮುಖಂಡರು ಸೇರಿದಂತೆ ಅನೇಕರನ್ನು ಕೂಡಲಸಂಗಮ ಮಠದ ಜಯ ಮೃತ್ಯುಂಜಯ ಸ್ವಾಮೀಜಿಗಳೇ ಖುದ್ದು ಆಹ್ವಾನಿಸಿದ್ದಾರೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮಾಜಿ ಶಾಸಕ ಹಾಗೂ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ರಾಷ್ಟ್ರೀಯ ಘಟಕದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ಮಹತ್ವದ …

Read More »

ಕ್ರಿಕೆಟ್ ಬೆಟ್ಟಿಂಗ್ ಗೃಹ ಮಂತ್ರಿ‌ ಕಿವಿಗೂ ಬಿತ್ತು

ಬೆಳಗಾವಿ. ಕ್ರಿಕೆಟ್ ಬೆಟ್ಟಿಂಗ್ ಅಷ್ಟೇ ಅಲ್ಲ ಹವಾಲಾ ಮತ್ತಿತರ ದಂಧೆಗಳಿಗೆ ಕಡಿವಾಣ ಹಾಕಲು ಪೊಲೀಸರು ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ಈ ದಂಗೆಯನ್ನು ಮಟ್ಟ ಹಾಕಲು ಕೇವಲ ಜಿಲ್ಲಾ ಪೊಲೀಸರು‌ ಅಷ್ಟೇ  ಅಲ್ಲ ಬೆಳಗಾವಿ ನಗರ ಪೊಲೀಸರು ತಯಾರಾಗಿ ಕುಳಿತಿದ್ದಾರೆ. ಗಮನಿಸಬೇಕಾದ  ಸಂಗತಿ ಎಂದರೆ, ಬೆಟ್ಟಿಂಗ್ ದಂಧೆ ಸಮಗ್ರ ಮಾಹಿತಿ ಈಗ  ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಿವಿಗೂ ಬಿದ್ದಿದೆ. ಹೀಗಾಗಿ  ಈ ಪ್ರಕರಣ ತಾರ್ಕಿಕ ಅಂತ್ಯ ಕಾಣುವುದರಲ್ಲಿ ಎರಡು …

Read More »

ಬಸ್ ನಲ್ಲಿ ಯುವತಿಯ ಮೈಮುಟ್ಟಿ ಕಿರುಕುಳ ಆರೋಪ.. ಠಾಣೆಯ ಮುಂಭಾಗದಲ್ಲಿ ಬಸ್​!

ಉಪ್ಪಿನಂಗಡಿ, ಫೆಬ್ರವರಿ 24: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಮೈಮುಟ್ಟಿ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಬಸ್ ಚಾಲಕ ಮತ್ತು ನಿರ್ವಾಹಕ ಸೇರಿ ಉಪ್ಪಿನಂಗಡಿ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ನಡೆದಿದೆ. ಪೊಲೀಸರ ವಶದಲ್ಲಿರುವ ಯುವಕನನ್ನು ಚಿಕ್ಕಮಗಳೂರು ನಿವಾಸಿ ಮೊಹಮ್ಮದ್ ಸೈಫುಲ್ಲಾ ಎಂದು ಗುರುತಿಸಲಾಗಿದ್ದು. ಆರೋಪಿಯು ಮಂಗಳವಾರ ಬೆಳಗ್ಗೆ ಧರ್ಮಸ್ಥಳದಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದಾಗ ಕೆಎಸ್​ಆರ್​ಟಿಸಿಯ ಬಸ್​ನಲ್ಲಿ ವಿದ್ಯಾರ್ಥಿನಿಯ ಮೈಮುಟ್ಟಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿನಿಯು ಬಸ್ ಚಾಲಕ, ನಿರ್ವಾಹಕರಲ್ಲಿ ಈ ವಿಚಾರ …

Read More »

2 ದಿನ ಫಾರ್ಮ್ ಹೌಸ್ ನಲ್ಲಿರಿಸಿ ಯುವತಿ ಮೇಲೆ ಅತ್ಯಾಚಾರ :ಬಿಜೆಪಿ ನಾಯಕ ಸೇರಿ ನಾಲ್ವರು ಅರೆಸ್ಟ್

ಮಧ್ಯಪ್ರದೇಶ : ಶಾಲಾ ಶಿಕ್ಷಕ ಹಾಗೂ ಸ್ಥಳೀಯ ಬಿಜೆಪಿ ನಾಯಕ ಸೇರಿ ನಾಲ್ವರು ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಹೀನ ಕೃತ್ಯ ಬೆಳಕಿಗೆ ಬಂದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.20 ವರ್ಷದ ಯುವತಿಯನ್ನು 2 ದಿನ ಫಾರ್ಮ್​ ಹೌಸ್​ನಲ್ಲಿರಿಸಿ ನಾಲ್ವರು ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಫೆ. 18ರಂದು ಈ ಘಟನೆ ನಡೆದಿದ್ದು, ದಿನಸಿ ಸಾಮಾನುಗಳನ್ನು ತರಲು ಯುವತಿ ಹೋಗಿದ್ದಳು. ಈ ವೇಳೆ ಅಡ್ಡಗಟ್ಟಿದ ಕಾಮುಕರು ಆಕೆಯನ್ನು ಫಾರ್ಮ್​ …

Read More »

ಐತಿಹಾಸಿಕ ಶ್ರೀಗುರು ಕೊಟ್ಟೂರೇಶ್ವರ ರಥೋತ್ಸವ ರದ್ದು;

ವಿಜಯನಗರ: ಜಿಲ್ಲೆಯ ಕೊಟ್ಟೂರಿನ ಐತಿಹಾಸಿಕ ಶ್ರೀ ಗುರು ಕೊಟ್ಟೂರೇಶ್ವರ ರಥೋತ್ಸವ ರದ್ದು ಮಾಡಲು ನಿರ್ಧರಿಸಲಾಗಿದ್ದು, ಮಾ.7ರಂದು ನೆರವೇರಬೇಕಿದ್ದ ರಥೋತ್ಸವ ನಡೆಯುತ್ತಿಲ್ಲ. ಪ್ರತಿ ವರ್ಷವೂ ಲಕ್ಷಾಂತರ ಭಕ್ತರು ರಥೋತ್ಸವಕ್ಕೆ ಆಗಮಿಸುತ್ತಾರೆ. ಆದರೆ ಈ ಸಲ ಕರೊನಾ ಕರಿನೆರಳಿನ ಹಿನ್ನೆಲೆಯಲ್ಲಿ ರಥೋತ್ಸವ ರದ್ದು ಮಾಡಲಾಗಿದ್ದು, ಹೊರಗಿನ ಭಕ್ತರಿಗೂ ಪ್ರವೇಶ ನಿಷೇಧಿಸಲಾಗಿದೆ. ಬರೀ ಪೂಜಾ-ಕೈಂಕರ್ಯಗಳಿಗೆ ಮಾತ್ರ ಅವಕಾಶ ಕಲ್ಪಿಸಲು ಇಂದಿನ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎಸ್. ಮಂಜುನಾಥ್, …

Read More »

10 ರೂಪಾಯಿ ನೋಟು ಎಸೆದು 92 ಸಾವಿರ ಹಣ ದೋಚಿದ ಖದೀಮ! ಸಿಸಿ ಕ್ಯಾಮರಾದಲ್ಲಿ ಕೃತ್ಯ ಸೆರೆ

ಬೆಂಗಳೂರು: ಸಿಟಿ ಮಾರುಕಟ್ಟೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಚಾಲಕನ ಗಮನ ಬೇರೆಡೆ ಸೆಳೆದು ಕಾರಿನ ಹಿಂಬದಿ ಸೀಟಿನಲ್ಲಿ ಇರಿಸಿದ್ದ 92 ಸಾವಿರ ರೂ. ಮೌಲ್ಯದ ಬ್ಯಾಗ್​ ಅನ್ನು ಖದೀಮ ಹೊತ್ತೊಯ್ದಿದ್ದಾನೆ. ಶಾಂತಿನಗರದ ನಿವಾಸಿ ಉದ್ಯಮಿ ಸುನೀಲ್​ ನೀಡಿದ ದೂರಿನ ಆಧಾರದ ಮೇರೆಗೆ ಸಿಟಿ ಮಾರುಕಟ್ಟೆ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಫೆ.18ರಂದು ಸುನೀಲ್​ ತಮ್ಮ ಕಾರು ಚಾಲಕ ಸೀಬಾ ಅಲ್ಡರ್​ ಜತೆ ಬಿವಿಕೆ ಐಯ್ಯಂಗಾರ್​ ರಸ್ತೆಗೆ ಬಂದು ಎಸ್​ಜೆಪಿ …

Read More »

ಅಭಿಮಾನಿಗಳ ವರ್ತನೆಗೆ ಕ್ಷಮೆ ಕೋರಿದ ‘ಡಿ ಬಾಸ್​’

ಬೆಂಗಳೂರು: ಅಭಿಮಾನಿಗಳ ವರ್ತನೆಗೆ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಕ್ಷಮೆ ಕೇಳಿದ್ದು, ನವರಸ ನಾಯಕ ಜಗ್ಗೇಶ್​ ಮತ್ತು ಡಿ ಬಾಸ್​ ಅಭಿಮಾನಿಗಳ ವಿವಾದ ಸುಖಾಂತ್ಯ ಕಂಡಿದೆ. ಜಗ್ಗೇಶ್ ಅವ್ರು ಹಿರಿಯರು. ಅವರೇ ಮುಂದಿರಲಿ. ಅವರ ಮೇಲೆ ಅಭಿಮಾನಿಗಳು ಮುತ್ತಿಗೆ ಹಾಕಿರೋದು ನನಗೆ ಗೊತ್ತಿರಲಿಲ್ಲ. ಅದು ಹೇಗೆ ಶುರುವಾಯ್ತು ಎಂಬುದೂ ನನಗೆ ಗೊತ್ತಿಲ್ಲ ಎಂದ ದರ್ಶನ್, ನನ್ನ ಫ್ಯಾನ್ಸ್ ನಿಂದ ನಿಮಗೆ ನೋವಾಗಿದೆ. ಅವರ ಪರವಾಗಿ ನಾನು ಕ್ಷಮೆ ಕೇಳುತ್ತೇನೆ ಎಂದು ದರ್ಶನ್ …

Read More »

ಪೊಗರು ಸಿನಿಮಾ ವಿವಾದ ಸುಖಾಂತ್ಯದ ಬಳಿಕ ಲಿಖಿತ ರೂಪದಲ್ಲಿ ಕ್ಷಮೆ ಕೇಳಿದ ಧ್ರುವ ಸರ್ಜಾ

ಬೆಂಗಳೂರು: ‘ಪೊಗರು’ ಸಿನಿಮಾ ವಿವಾದ ಸುಖಾಂತ್ಯದ ಬಳಿಕ ನಟ ಧ್ರುವ ಸರ್ಜಾ, ಲಿಖಿತ ರೂಪದಲ್ಲಿ ಬ್ರಾಹ್ಮಣ ಸಮುದಾಯದ ಬಳಿ ಕ್ಷಮೆ ಕೇಳಿದ್ದಾರೆ. ‘ನಮ್ಮ ಇಡೀ ಕುಟುಂಬ ಹನುಮ ಭಕ್ತರು. ಆಂಜನೇಯನ ಆಶೀರ್ವಾದವೇ ನಮಗೆ ಶ್ರೀರಕ್ಷೆ. ನಮ್ಮ ಇಡೀ ವಂಶವೇ ಹಿಂದುತ್ವದ ಪದ್ಧತಿಯನ್ನು ಆಚರಿಸುತ್ತಾ ಗೌರವಿಸುತ್ತಾ ಬದುಕುತ್ತಿದ್ದೇವೆ. ತಾತನವರ ಕಾಲದಿಂದಲೂ ಹಿಂದುತ್ವದ ಪ್ರತಿಪಾದಕರಾಗಿಯೇ ಬದುಕಿದ್ದೇವೆ. ಕಲೆಯೇ ಧರ್ಮ. ನಾವು ಎಲ್ಲ ಧರ್ಮಗಳನ್ನು ಗೌರವಿಸಿದ್ದೇವೆ. ಚಿತ್ರದ ಕಥೆ, ಪಾತ್ರಪೋಷಣೆಯಲ್ಲಿ ಯಾವುದೇ ಸಮುದಾಯಕ್ಕೆ ಎನ್ನುವಂತಹ …

Read More »

ರಾತ್ರೋರಾತ್ರಿ ಕಾರ್ಯಾಚರಣೆ, ಬಿಜೆಪಿ ಮುಖಂಡ ನಾಗರಾಜ್ ಸೇರಿ ಇಬ್ಬರು ಅರೆಸ್ಟ್

ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವೇಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಹಾಗೂ ಕ್ವಾರಿ ಮಾಲೀಕ ನಾಗರಾಜ್ ನನ್ನು ಬಂಧಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಕರಣದ ಪ್ರಮುಖ ಆರೋಪಿ ನಾಗರಾಜ್ ನನ್ನು ಬಂಧಿಸಿದ್ದಾರೆ. ನಿನ್ನೆ ನಾಲ್ವರನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿಯಾಗಿರುವ ಭ್ರಮರವಾಸಿನಿ ಕ್ರಷರ್ಸ್ ಮಾಲೀಕ ಜಿ.ಎಸ್. ನಾಗರಾಜ್ ಹಾಗೂ ಸ್ಪೋಟಕ ಸರಬರಾಜು ಮಾಡಿದ ಮತ್ತೋರ್ವ ಆರೋಪಿ ಗಣೇಶ್ ಎಂಬುವನನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಸ್ಫೋಟ ಪ್ರಕರಣದ ನಂತರ ಆರೋಪಿಗಳು …

Read More »