Breaking News

ಆಸ್ತಿ ವಿವಾದ : ಬೆಳಗಾವಿಯಲ್ಲಿ 4 ವರ್ಷದ ಬಾಲಕನ ಕೊಲೆಗೈದ ಪಾಪಿ

    ಬೆಳಗಾವಿ : ಆಸ್ತಿ ವಿವಾದಕ್ಕೆ ಸಮಂಧಿಸಿದಂತೆ 4 ವರ್ಷದ ಬಾಲಕನನ್ನ ಕೊಲೆ ಮಾಡಿದ ಘಟನೆ ಸವದತ್ತಿ ತಾಲ್ಲೂಕಿನ ಹಾರುಗೊಪ್ಪ ಗ್ರಾಮದಲ್ಲಿ ನಡೆದಿದೆ. ಮಾರುತಿ ವಿರೇಶ್ ಸಂಕಣ್ಣವರ ಹತ್ಯೆಯಾದ ಬಾಲಕ. ಈರಪ್ಪ ಬಸಪ್ಪ ಸಂಕಣ್ಣ(35) ಕೊಲೆ ಆರೋಪಿಯಾಗಿದ್ದು, ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದು ಬರಬೇಕಿದೆ. ಸ್ಥಳಕ್ಕೆ ಮುರಗೋಡ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ತನಿಖೆ‌ ನಡೆಸಿದ್ದಾರೆ.

Read More »

ವೈದ್ಯರೇ ನಿರ್ಮಿಸುತ್ತಿರುವ ಸಿನಿಮಾದಲ್ಲಿ ಬಿಳಿ ಕೋಟು ಧರಿಸಲಿದ್ದಾರೆ ಗಣೇಶ್

ವೈದ್ಯರಿಗೂ ಸಿನಿಮಾಕ್ಕೂ ಎತ್ತಣಿಂದೆತ್ತ ಸಂಬಂಧ?! ಎನ್ನುವಂತಿಲ್ಲ, ಏಕೆಂದರೆ ವೈದ್ಯರಿಬ್ಬರು ಸೇರಿ ನಿರ್ಮಿಸುತ್ತಿರುವ ಸಿನಿಮಾದಲ್ಲಿ ಕನ್ನಡದ ಸ್ಟಾರ್ ನಟರಲ್ಲೊಬ್ಬರಾದ ಗಣೇಶ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. 25 ವರ್ಷ ವೈದ್ಯೆಯಾಗಿ ಸೇವೆ ಸಲ್ಲಿಸಿರುವ ಶಶಿಕಲಾ ಪುಟ್ಟಸ್ವಾಮಿ ನಿರ್ದೇಶಿಸುತ್ತಿರುವ ಮತ್ತೊಬ್ಬ ವೈದ್ಯ ಶೈಲೇಶ್ ನಿರ್ಮಾಣ ಮಾಡುತ್ತಿರುವ ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಿನಿಮಾದಲ್ಲಿ ಅವರದ್ದು ವೈದ್ಯನ ಪಾತ್ರ. 25 ವರ್ಷಗಳ ಹಿಂದೆ ಶಶಿಕಲಾ ಹಾಗೂ ಶೈಲೇಶ್ ಒಟ್ಟಿಗೆ ವೈದ್ಯಕೀಯ ಶಿಕ್ಷಣವನ್ನು ಪಡೆದವರು. …

Read More »

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು ಕಾಂಗ್ರೆಸ್​ನಿಂದ ರಾಜಭವನ ಚಲೋ ರ್‍ಯಾಲಿ

ಬೆಂಗಳೂರು; ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನ ವಿರೋಧಿಸಿ ಇಂದು ಕಾಂಗ್ರೆಸ್ ವತಿಯಿಂದ ರಾಜಭವನ ಚಲೋ ರ್ಯಾಲಿ ನಡೆಯಲಿದೆ. ಕಾಂಗ್ರೆಸ್ ರ್ಯಾಲಿ ಹಿನ್ನೆಲೆಯಲ್ಲಿ ನಗರದ ಹೃದಯ ಭಾಗ ಮೆಜೆಸ್ಟಿಕ್ ಸುತ್ತಮುತ್ತ ಸಂಚಾರ ದಟ್ಟಣೆ ಹೆಚ್ಚುವ ಸಾಧ್ಯತೆ ಇದೆ. ಬೆಂಗಳೂರಿನ ಹೃದಯ ಭಾಗ ಸ್ತಬ್ಧವಾಗುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಜನರು ಇಂದು ರಸ್ತೆಗಿಳಿಯುವ ಮುನ್ನ ಎಚ್ಚರ ವಹಿಸಬೇಕಿದೆ. ಇಂದು ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ರ್ಯಾಲಿ ಮೆಜೆಸ್ಟಿಕ್​ನ ಕೆಎಸ್‌ಆರ್ ರೈಲು ನಿಲ್ದಾಣದಿಂದ ಆರಂಭವಾಗಲಿದೆ. …

Read More »

ಪೊಲೀಸರು ತಡೆದರೆ ರಸ್ತೆ ಬಂದ್ ಮಾಡಿ: ಕಾಂಗ್ರೆಸ್ ಕಾರ್ಯಕರ್ತರು, ರೈತರಿಗೆ ಡಿಕೆಶಿ ಕರೆ

ಬೆಂಗಳೂರು: ‘ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಜನರ ಪ್ರತಿಭಟನೆ ಹಕ್ಕನ್ನು ಕಸಿಯುವ ಪ್ರಯತ್ನ ಮಾಡುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ಮತ್ತು ಜನ ವಿರೋಧಿ ಕಾಯ್ದೆಗಳ ವಿರುದ್ಧದ ‘ರಾಜಭವನ ಚಲೋ’ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸುತ್ತಿರುವ ರೈತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ನಿನ್ನೆ ರಾತ್ರಿಯಿಂದಲೇ ಪೊಲೀಸರು ಮಾರ್ಗ ಮಧ್ಯದಲ್ಲೇ ತಡೆಯುತ್ತಿದ್ದಾರೆ. ಆ ಮೂಲಕ ರಾಜ್ಯ …

Read More »

ಉತ್ತಮ ಸಂಸದೀಯ ಪಟು ಗುರುತಿಸಲು ಸಮಿತಿ ರಚನೆ

ಬೆಂಗಳೂರು : ರಾಜ್ಯ ವಿಧಾನಸಭೆಯ ಸದಸ್ಯರೊಬ್ಬರಿಗೆ ಪ್ರತಿ ವರ್ಷ ಅತ್ಯುತ್ತಮ ಸಂಸದೀಯ ಪಟು ಅಥವಾ ಅತ್ಯುತ್ತಮ ಶಾಸಕ ಎಂಬ ಪ್ರಶಸ್ತಿ ನೀಡಲು ವಿಧಾನಸಭಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚನೆ ಮಾಡಲಾಗಿದೆ. ಸಮಿತಿಯಲ್ಲಿ ಉಪಸಭಾಧ್ಯಕ್ಷರು, ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರು, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರು, ಸಭಾಧ್ಯಕ್ಷರು ನಾಮ ನಿರ್ದೇಶನ ಮಾಡುವ ಒಬ್ಬರು ಸದಸ್ಯರಾಗಿ ರುತ್ತಾರೆ. ಸಮಿತಿಯ ಶಿಫಾರಸ್ಸಿನ ಮೇಲೆ ಪ್ರಶಸ್ತಿಗೆ ಆಯ್ಕೆಯಾದ ಶಾಸಕರ ಒಪ್ಪಿಗೆಯನ್ನು ಪಡೆಯಬೇಕು. ಒಬ್ಬ ಶಾಸಕರಿಗೆ …

Read More »

ಇನ್ನು ಮುಂದೆ ಉಚಿತವಾಗಿ ಸಿಗಲ್ಲ ಅನ್ನಭಾಗ್ಯದ ಅಕ್ಕಿ

ಬೆಂಗಳೂರು : ಬಡತನ ರೇಖೆಗಿಂತ ಕೆಳಗಿರುವ(ಬಿಪಿಎಲ್) ಕುಟುಂಬಗಳಿಗೆ ಅನ್ನಭಾಗ್ಯ ಯೋಜನೆಯಡಿ ಈವರೆಗೂ ನೀಡಲಾಗುತ್ತಿದ್ದ ಉಚಿತ ಅಕ್ಕಿಗೆ ಇನ್ನು ಮುಂದೆ ಹಣ ಪಾವತಿಸಬೇಕಾಗುತ್ತದೆ. ಅನ್ನಭಾಗ್ಯ ಯೋಜನೆಯಿಂದ ಸರಕಾರಕ್ಕೆ ಪ್ರತಿ ತಿಂಗಳು 120 ಕೋಟಿ ರೂ. ವೆಚ್ಚವಾಗುತ್ತಿದೆ. ಆದರೆ ಇಷ್ಟೆಲ್ಲಾ ವೆಚ್ಚ ಮಾಡಿದರೂ ಯೋಜನೆ ದುರ್ಬಳಕೆ ಆಗುತ್ತಿದ್ದು, ಅಕ್ಕಿ ದರ ವಿಧಿಸಿ ಪ್ರಯೋಗಿಸಿದರೆ ಹೇಗೆ ಎಂಬ ಚಿಂತನೆಯಲ್ಲಿ ತೊಡಗಿದೆ. ಈಗಾಗಲೇ ಇಲಾಖೆ ಮಟ್ಟದಲ್ಲಿ ಚರ್ಚೆ ನಡೆಸಲಾಗಿದ್ದು, ಅಂತಿಮವಾಗಿ ಮುಖ್ಯ ಮಂತ್ರಿ ಯಡಿಯೂರಪ್ಪ ಅವರು …

Read More »

ಗಣರಾಜ್ಯೋತ್ಸವ ಪರೇಡ್‌ಗೆ ಮೊದಲ ಮಹಿಳಾ ಫೈಟರ್‌ ಪೈಲಟ್‌!

ಹೊಸದಿಲ್ಲಿ: ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ಪಾಲ್ಗೊಳ್ಳುತ್ತಿರುವ “ಪ್ರಪ್ರಥಮ ಮಹಿಳಾ ಫೈಟರ್‌ ಪೈಲಟ್‌’ ಎಂಬ ಹೆಗ್ಗಳಿಕೆಗೆ ಫ್ಲೈಟ್‌ ಲೆಫ್ಟಿನೆಂಟ್‌ ಭಾವನಾ ಕಾಂತ್‌ ಪಾತ್ರರಾಗಿದ್ದಾರೆ. ಜ. 26ರಂದು ಐಎಎಫ್ನ ಟ್ಯಾಬ್ಲೊ ಜತೆ ಅವರು ಸಂಚರಿಸಲಿದ್ದಾರೆ. ಹಗುರ ಯುದ್ಧವಿಮಾನ, ಹಗುರ ಯುದ್ಧ ಹೆಲಿಕಾಪ್ಟರ್‌ ಮತ್ತು ಸುಖೋಯ್‌-30 ಯುದ್ಧ ವಿಮಾನಗಳ ಅಣಕು ಸ್ತಬ್ಧಚಿತ್ರದೊಂದಿಗೆ ಭಾವನಾ ಪರೇಡ್‌ ನಡೆಸಲಿದ್ದಾರೆ. ಪ್ರಸ್ತುತ ಇವರು ರಾಜಸ್ಥಾನದ ವಾಯುನೆಲೆಯೊಂದರಲ್ಲಿ ಮಿಗ್‌-21 ಬೈಸನ್‌ ಫೈಟರ್‌ ಪ್ಲೇನ್‌ಗೆ ಪೈಲಟ್‌. 2016ರಲ್ಲಿ ವಾಯುಪಡೆಗೆ ಆಯ್ಕೆಯಾದ “ಮೊದಲ ಫೈಟರ್‌ …

Read More »

ನನಗೆ ಅಭಿನವ್ ಶುಕ್ಲಾ ಸ್ಪರ್ಮ್ ದಾನ ಕೊಡಲಿ.:ರಾಖಿ ಸಾವಂತ್

ಮುಂಬೈ: ನನಗೆ ಅಭಿನವ್ ಶುಕ್ಲಾ ಸ್ಪರ್ಮ್ ದಾನ ಕೊಡಲಿ. ಬಿಗ್‍ಬಾಸ್ ಮನೆಯಿಂದ ಹೊರ ಹೋದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ ಎಂದು ಬಾಲಿವುಡ್ ನಟಿ ರಾಖಿ ಸಾವಂತ್ ಹೇಳಿದ್ದಾರೆ. ಈ ಬಾರಿ ಬಿಗ್‍ಬಾಸ್ ಮನೆಗೆ ರಾಖಿ ಸಾವಂತ್ ಎಂಟ್ರಿ ನೀಡಿದಾಗಿನಿಂದ ಶೋಗೆ ಹೊಸ ಲುಕ್ ಬಂದಿದೆ. ರಾಖಿಯ ಜಗಳ, ಫನ್ನಿ ಮಾತುಗಳು, ಡ್ಯಾನ್ಸ್ ನೋಡುಗರನ್ನ ಸೆಳೆಯುವಲ್ಲಿ ಯಶಸ್ವಿಯಾಗಿವೆ. ವಾಹಿನಿ ಸಹ ರಾಖಿಯ ಮಾತುಗಳನ್ನ ಕೇಂದ್ರಿಕರಿಸಿ ಸಂಚಿಕೆಯ ಪ್ರೋಮೋಗಳನ್ನ ಸೋಶಿಯಲ್ ಮೀಡಿಯಾದಲ್ಲಿ …

Read More »

ಸಚಿವರಾಗಿ 20 ತಿಂಗಳು ಪೂರೈಸಿದವರನ್ನು ಕೈ ಬಿಡಿ. 32 ಹೊಸಬರಿಗೆ ಸಂಪುಟದಲ್ಲಿ ಅವಕಾಶ ಕೊಡಿ

ಬೆಂಗಳೂರು: ಹೊಸ ಸಚಿವರಿಗೆ ಖಾತೆ ಹಂಚಿಕೆ ಕಸರತ್ತಿನ ಹೊತ್ತಲ್ಲೇ ಇಡೀ ಸಂಪುಟವನ್ನೇ ವಿಸರ್ಜಿಸಿ, ಹೊಸದಾಗಿ ಸಂಪುಟ ರಚಿಸಿ ಅನ್ನೋ ಕೂಗು ಎದ್ದಿದೆ. ಸಂಪುಟ ಪುನಾರಚನೆ ಮಾಡುವುದು ಒಳ್ಳೆಯದು. ಹಳಬರನ್ನ ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕು. ಆಗ ಮುಂದೆ 150 ಸೀಟು ಬರೋಕೆ ಸಾಧ್ಯ. ಉತ್ತಮ ಆಡಳಿತ ಕೊಡೋಕೆ ಸಾಧ್ಯ ಅಂತ ಶಾಸಕ ತಿಪ್ಪಾರೆಡ್ಡಿ ಆಗ್ರಹಿಸಿದ್ದಾರೆ.ಸಚಿವರಾಗಿ 20 ತಿಂಗಳು ಪೂರೈಸಿದವರನ್ನು ಕೈ ಬಿಡಿ. 32 ಹೊಸಬರಿಗೆ ಸಂಪುಟದಲ್ಲಿ ಅವಕಾಶ ಕೊಡಿ ಅಂತ …

Read More »

35 ಲಕ್ಷ ಲೂಟಿ ಮಾಡಿದ್ದ ಆರೋಪಿಗಳು ಅಂದರ್

ಹುಬ್ಬಳ್ಳಿ: ಎರಡು ವರ್ಷದ ಹಿಂದೆ ಪ್ರಯಾಣಿಕರೊಬ್ಬರ ಜೊತೆ ಗಲಾಟೆ ಮಾಡಿ 35 ಲಕ್ಷ ರೂಪಾಯಿ ದೋಚಿ ಪರಾರಿಯಾಗಿದ್ದ ಆರೋಪಿಗಳನ್ನು ಹಿಡಿಯುವಲ್ಲಿ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. 2019 ರಲ್ಲಿ ಕಾರವಾರದ ಅಡಿಕೆ ಗೋದಾಮಿನ ನೌಕರ ಅಹ್ಮದ್ ತಮ್ಮ ಮಾಲೀಕ ಹೇಳಿದ ಹಾಗೇ ಹುಬ್ಬಳ್ಳಿಯ ದುರ್ಗದ ಬೈಲಿನ ಬಂಗಾರದ ಅಂಗಡಿಯಲ್ಲಿ 35 ಲಕ್ಷ ಹಣವನ್ನು ಪಡೆದು ತಮ್ಮ ಊರಿಗೆ ಬಸ್ ನಲ್ಲಿ ಪ್ರಯಾಣವನ್ನು ಮಾಡುತ್ತಿದ್ದರು. ಈ ವೇಳೆ ಆರೋಪಿಗಳು …

Read More »