Breaking News

ಶಾರ್ಜಾ ತಲುಪಿದ ಬಿಸಿಸಿಐ ಬಿಗ್ ಬಾಸ್ ಸೌರವ್ ಗಂಗೂಲಿ

ದುಬೈ,  ಐಪಿಎಲ್ ಪಂದ್ಯಗಳು ಸುಲಲಿತವಾಗಿ ನಡೆಯುವ ನಿಟ್ಟಿನಲ್ಲಿ ಎಲ್ಲ ತಯಾರಿಗಳ ನಡುವೆಯೇ ನಾಲ್ಕು ದಿನ ಮುಂಚಿತವಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಶಾರ್ಜಾಗೆ ಬಂದಿಳಿದಿದ್ದಾರೆ. ಭಾರತ ಕ್ರಿಕೆಟ್ ತಂಡದ ಆಟಗಾರನಾಗಿ, ನಾಯಕನಾಗಿ ಹಲವು ಕೀರ್ತಿ ಸಾಸಿದ ಮತ್ತು ಐಪಿಎಲ್‍ನಲ್ಲೂ ತನ್ನ ಖದರ್ ತೋರಿಸಿದ್ದ ಸೌರವ್ ಗಂಗೂಲಿ ಈಗ ಭಾರತ ಕ್ರಿಕೆಟ್‍ನ ಬಿಗ್‍ಬಾಸ್. ಮೈದಾನದಿಂದ ಹೊರಗೆ ಆಡಳಿತ ನಡೆಸುವ ಚಾಕಚಕ್ಯತೆಯನ್ನು ಕಲಿಯುತ್ತಿರುವ ಗಂಗೂಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಈಗ ತಮ್ಮ ಛಾಪು ಒತ್ತಲು …

Read More »

ಸಿಗರೇಟು ಸೇದುವ ಚಟಕ್ಕೆ ಜೀವ ಕಳೆದುಕೊಂಡ ಬಾಲಕರು..!

ಕುಣಿಗಲ್,  ಕದ್ದುಮುಚ್ಚಿ ಸಿಗರೇಟ್ ಸೇದಲು ಹೋದ ಬಾಲಕರ ಮೇಲೆ ಇಟ್ಟಿಗೆ ಗೂಡು ಕುಸಿದು ಸಾವನ್ನಪ್ಪಿರುವ ಘಟನೆ ಅಮೃತೂರು ಪೊಲೀಸ್ ಠಾಣಾವ್ಯಾಪ್ತಿಯ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ, ಸೂಯಾನ್(15) ಹಾಗೂ ಪರ್ವೆಜ್(17) ಮೃತಪಟ್ಟ ಬಾಲಕರು. ಗ್ರಾಮದ ಹೊರವಲಯಲ್ಲಿರುವ ಇಟ್ಟಿಗೆ ಗೂಡಿನಲ್ಲಿ ಯಾರಿಗೂ ಕಾಣದಂತೆ ಸಿಗರೇಟ್ ಸೇದಲು ಹೋಗಿದ್ದು, ಇಟ್ಟಿಗೆ ಗೂಡಿನೊಳಗೆ ಸಿಗರೇಟ್ ಸೇದುತ್ತಿದ್ದ ಸಂದರ್ಭದಲ್ಲಿ ಮಳೆಯಿಂದ ತೇವವಾಗಿದ್ದ ಉಳಿದ ಇಟ್ಟಿಗೆಗಳು ಬಾಲಕರ ಮೇಲೆ ಕುಸಿದು ಬಿದ್ದಿವೆ. ಪರಿಣಾಮ ಇಟ್ಟಿಗೆಗಳ ಮಧ್ಯೆ ಸಿಲುಕಿ ಉಸಿರು …

Read More »

ಟೀಂ ಇಂಡಿಯಾದ ಮಾಜಿ ಆಲ್‌ರೌಂಡರ್ ಸದಾಶಿವ್ ಪಾಟೀಲ್ ನಿಧನ

ನವದೆಹಲಿ: ಟೀಂ ಇಂಡಿಯಾ ಮಾಜಿ ಆಲ್‌ರೌಂಡರ್ ಸದಾಶಿವ್ ಪಾಟೀಲ್(86) ಅವರು ಕೊಲ್ಹಾಪುರದ ತಮ್ಮ ನಿವಾಸದಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರಿದ್ದಾರೆ. ವೇಗದ ಬೌಲಿಂಗ್ ಆಲ್‌ರೌಂಡರ್ ಸದಾಶಿವ್ ಅವರು 1955ರ ಡಿಸೆಂಬರ್‌ನಲ್ಲಿ ಬಾಂಬೆಯಲ್ಲಿ(ಈಗಿನ ಮುಂಬೈ) ನ್ಯೂಜಿಲೆಂಡ್ ವಿರುದ್ಧ ಭಾರತದ ಪರ ಏಕೈಕ ಟೆಸ್ಟ್ ಆಡಿದರು. ಇದರಲ್ಲಿ ಅವರು ಒಟ್ಟು 51 ರನ್‌ಗಳಿಗೆ ಎರಡು ವಿಕೆಟ್ ಪಡೆದರು ಮತ್ತು 14 ರನ್ ಬಾರಿಸಿದರು. ಇದರ ನಂತರ ಅವರು ಮತ್ತೆ ಭಾರತ …

Read More »

70,000ಕ್ಕೂ ಅಧಿಕ ಉದ್ಯೋಗ: ನಿರುದ್ಯೋಗಿಗಳಿಗೆ ಇದು ಬಿಗ್​ ​ಡೇಸ್​

ನವದೆಹಲಿ : ಆನ್‌ಲೈನ್ ಗ್ರಾಹಕರು ಪ್ರತಿವರ್ಷವೂ ಕುತೂಹಲದಿಂದ ಕಾಯುವಂತಹ ಫ್ಲಿಪ್​ಕಾರ್ಟ್​ ಬಿಗ್​ ಬಿಲಿಯನ್​ ಡೇಸ್​ ಸೇಲ್​ ಮತ್ತೆ ಬಂದಿದೆ. ಈ ಸಂದರ್ಭದಲ್ಲಿ ದೇಶಾದ್ಯಂತ 70,000ಕ್ಕೂ ಅಧಿಕ ಉದ್ಯೋಗ ಸೃಷ್ಟಿಗೆ ನೆರವಾಗಲಿದೆ. ಇದೇ ಸೆ.18ರಿಂದ 20ರವರೆಗೆ ಬಿಗ್​ ಬಿಲಿಯನ್​ ಡೇಸ್​ ಸೇಲ್​ ಪ್ರಾರಂಭವಾಗುತ್ತಿದ್ದು, ಫ್ಲಿಪ್​ಕಾರ್ಟ್​ ಡೆಲಿವರಿ ಎಕ್ಸಿಕ್ಯೂಟಿವ್​, ಪಿಕ್ಕರ್​, ಪ್ಯಾಕರ್​ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಹುಡುಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ನಿರುದ್ಯೋಗಿಗಳು ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ: …

Read More »

ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿರುವ ಶಿವಸೇನೆ-ಎನ್​ಸಿಪಿ-ಕಾಂಗ್ರೆಸ್ ಮೈತ್ರಿ ಸರ್ಕಾರದ ಅದೃಷ್ಟವೇ ಸರಿ ಇಲ್ಲ ಅನಿಸುತ್ತೆ.

ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿರುವ ಶಿವಸೇನೆ-ಎನ್​ಸಿಪಿ-ಕಾಂಗ್ರೆಸ್ ಮೈತ್ರಿ ಸರ್ಕಾರದ ಅದೃಷ್ಟವೇ ಸರಿ ಇಲ್ಲ ಅನಿಸುತ್ತೆ. ಕಳೆದ ಮೂರು ತಿಂಗಳಿನಿಂದ ಸರ್ಕಾರದ ವಿರುದ್ಧ ಒಂದಾದ ಮೇಲೊಂದರಂತೆ ಆರೋಪ ಕೇಳಿ ಬರ್ತಿದೆ. ಸುಶಾಂತ್ ಸಿಂಗ್ ಪ್ರಕರಣದಿಂದ ಹಿಡಿದು ನೌಕಾಪಡೆಯ ಮಾಜಿ ಅಧಿಕಾರಿ ಮೇಲಿನ ಹಲ್ಲೆವರೆಗೆ ಸಾಕಷ್ಟು ಘಟನೆಗಳು ಮಹಾರಾಷ್ಟ್ರ ಸರ್ಕಾರವನ್ನು ಪ್ರಶ್ನಿಸುವಂತೆ ಮಾಡಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅನ್ನೋ ಆರೋಪಗಳನ್ನ ಮಾಡಲಾಗ್ತಿದೆ. ಇದೆಲ್ಲದರ ನಡುವೆ ನೌಕಾಪಡೆಯ ಮಾಜಿ ಅಧಿಕಾರಿ ಮದನ್ ಶರ್ಮಾ ಇವತ್ತು ಮಹಾರಾಷ್ಟ್ರ ರಾಜ್ಯಪಾಲ …

Read More »

ಮನೆಯ ಹಿತ್ತಲಲ್ಲೇ ಅಕ್ರಮ ಗಾಂಜಾ ಗಿಡ ಬೆಳೆಸಿದ ಆರೋಪಿಗಳು: ಓರ್ವನ ಬಂಧನ

ಮಂಡ್ಯ: ತಮ್ಮ ಮನೆಯ ಹಿತ್ತಲಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಇಬ್ಬರು ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿರುವ ಕೆ.ಆರ್.ಪೇಟೆ ಗ್ರಾಮಾಂತರ ಪೋಲೀಸರು ಒಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕಿನ ಬೂಕನಕೆರೆ ಹೋಬಳಿಯ ಬಳ್ಳೆಕೆರೆ ನಾಟನಹಳ್ಳಿಯ ಜೇಟ್ ಕುಂಟಣ್ಣನ ಬೋರೇಗೌಡರ ಮಗ ಮಂಜೇಗೌಡ(45) ಬಂಧಿತ ಆರೋಪಿಯಾಗಿದ್ದು ಇದೇ ಗ್ರಾಮದ ಮತ್ತೊಬ್ಬ ಆರೋಪಿ ರಾಜೇಗೌಡ ಬಿನ್ ಲೇಟ್ ಈರೇಗೌಡ(58) ತಲೆ ಮರೆಸಿಕೊಂಡಿದ್ದಾನೆ. ಘಟನೆಯ ವಿವರ: ಆರೋಪಿಗಳಾದ ಮಂಜೇಗೌಡ ಮತ್ತು ರಾಜೇಗೌಡ ಅವರು ತಮ್ಮ ವಾಸದ ಮನೆಯ …

Read More »

ಕೋವಿಡ್ ಕಳವಳ- ಸೆ.15: 7576 ಹೊಸ ಪ್ರಕರಣ ; 7406 ಡಿಸ್ಚಾರ್ಜ್ ; 97 ಸಾವು

ಬೆಂಗಳೂರು: ಸೋಮವಾರ ಸಾಯಂಕಾಲದಿಂದ ಮಂಗಳವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7576 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ. ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7406 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 97 ಸೋಂಕಿತರು ಮೃತಪಟ್ಟಿದ್ದಾರೆ. ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 4,75,265ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಇದೀಗ ಒಟ್ಟು 3,69,229 ಕೋವಿಡ್ ಸೊಂಕಿತರು …

Read More »

ಮಾಲೀಕ ಸತ್ತನೆಂದು ಆಹಾರ ತ್ಯಜಿಸಿ ಪ್ರಾಣಬಿಟ್ಟ ನಾಯಿ: ಬೆಳಗಾವಿಯಲ್ಲಿ ಮನಕಲಕುವ ಘಟನೆ

ಬೆಳಗಾವಿ: ನಾಯಿಯನ್ನು ನಿಯತ್ತಿಗೆ ಹೋಲಿಸಲಾಗುತ್ತದೆ. ಅದರ ಪ್ರೀತಿ, ನಿಯತ್ತು ಮನುಷ್ಯನಿಗೂ ಇಲ್ಲ ಎಂದೇ ಬಿಂಬಿತವಾಗಿದೆ. ಒಂದೇ ಒಂದು ಹೊತ್ತು ಊಟ ಹಾಕಿದರೂ, ಅವರ ಮನೆಯನ್ನು ಜೀವನಪೂರ್ತಿ ಕಾಯುವ ಏಕೈಕ ನಿಯತ್ತಿನ ಪ್ರಾಣಿ ನಾಯಿ ಎಂದೇ ಹೇಳಲಾಗುತ್ತದೆ. ಅಂಥದರಲ್ಲಿ ಜೀವನಪೂರ್ತಿ ಸಾಕಿ ಸಲುಹಿದ ಮಾಲೀಕನ ಮೇಲೆ ಅದೆಷ್ಟು ಪ್ರೀತಿ ಇರಬೇಡ ಈ ನಾಯಿಗೆ. ಇಂಥದ್ದೇ ಪ್ರೀತಿ, ವಿಶ್ವಾಸಹೊಂದಿದ ಬೆಳಗಾವಿಯ ನಾಯಿಯೊಂದು ತನ್ನ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಗಲಿದ ಮಾಲೀಕನ ನೆನಪಲ್ಲಿ …

Read More »

ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಹೆಚ್ಚಾಗ್ತಿರುವ ಬೆನ್ನಲ್ಲೆ ಭಾರತಕ್ಕೆ ನೆಮ್ಮದಿ ಸುದ್ದಿಯೊಂದು ಸಿಕ್ಕಿದೆ.

ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಹೆಚ್ಚಾಗ್ತಿರುವ ಬೆನ್ನಲ್ಲೆ ಭಾರತಕ್ಕೆ ನೆಮ್ಮದಿ ಸುದ್ದಿಯೊಂದು ಸಿಕ್ಕಿದೆ. ಕೊರೊನಾ ಗೆದ್ದು ಬಂದ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಈ ವಿಷ್ಯದಲ್ಲಿ ಭಾರತ ಬ್ರೆಜಿಲ್ ಹಿಂದಿಕ್ಕಿ ವಿಶ್ವದ ಅಗ್ರ ಸ್ಥಾನವನ್ನು ತಲುಪಿದೆ. ಇಲ್ಲಿಯವರೆಗೆ ಭಾರತದಲ್ಲಿ 38 ಲಕ್ಷ 59 ​​ಸಾವಿರ 399 ರೋಗಿಗಳು ಕೊರೊನಾ ಸೋಲಿಸಿದ್ದಾರೆ. ಅಮೆರಿಕದ ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಪ್ರಕಾರ, ಬ್ರೆಜಿಲ್ ನಲ್ಲಿ 37 ಲಕ್ಷ 23 ಸಾವಿರ 206 ಸೋಂಕಿತರು ಗುಣಮುಖರಾಗಿದ್ದಾರೆ. ಬ್ರೆಜಿಲ್ …

Read More »

ನಾಲ್ವರು ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು  : ರಾಜ್ಯ ಸರ್ಕಾರವು ಸೋಮವಾರ ಎಂ.ಎಸ್‌. ಶ್ರೀಕರ, ಟಿ.ಎಚ್‌.ಎಂ. ಕುಮಾರ್‌ ಸೇರಿದಂತೆ ನಾಲ್ಕು ಮಂದಿ ಐಎಎಸ್‌ ಅಧಿಕಾರಿಗಳನ್ನು ವಿವಿಧ ಹುದ್ದೆಗಳಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವಾಣಿಜ್ಯ ತೆರಿಗೆಗಳ ಆಯುಕ್ತರಾಗಿದ್ದ ಎಂ.ಎಸ್‌. ಶ್ರೀಕರ ಅವರನ್ನು ಕರ್ನಾಟಕ ರಾಜ್ಯ ಕೈಗಾರಿಕೆಗಳ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ಹಾಗೂ ಉಳಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತ ಟಿ.ಎಚ್‌.ಎಂ. ಕುಮಾರ್‌ ಅವರನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು …

Read More »