Breaking News

ಯತ್ನಾಳ್ ಇನ್ನು ಮುಂದೆ ಬಾಯಿ ಮುಚ್ಚದಿದ್ರೆ ಕೇಂದ್ರ ನಾಯಕರು ಸೂಕ್ತ ಕ್ರಮ ಕೈಗೊಳ್ಳುವುದು ನಿಶ್ಚಿತ: ಡಿ.ವಿ.ಸದಾನಂದ ಗೌಡ

ಮಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇನ್ನು ಮುಂದೆ ಬಾಯಿ ಮುಚ್ಚದಿದ್ರೆ ಕೇಂದ್ರ ನಾಯಕರು ಸೂಕ್ತ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಎಚ್ಚರಿಸಿದ್ದಾರೆ. ಪುತ್ತೂರಿನಲ್ಲಿ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಪಕ್ಷದ ರಾಜ್ಯಾಧ್ಯಕ್ಷನಾಗಿದ್ದ ಸಂದರ್ಭದಲ್ಲೂ ಯತ್ನಾಳ್ ಇದೇ ರೀತಿ ಹೇಳಿಕೆ ನೀಡುತ್ತಿದ್ದರು. ಹಲವು ಎಚ್ಚರಿಕೆಯ ಬಳಿಕವೂ ಅವರು ತಮ್ಮ ವರ್ತನೆ ಸರಿಪಡಿಸಿಕೊಳ್ಳದ ಕಾರಣ ನಾನೇ ಅವರನ್ನು 6 …

Read More »

ಪ್ರಾಣ ಉಳಿಸೋ ಸಂಜೀವಿನಿ, ಜೀವಾಮೃತ ಅಂತೆಲ್ಲಾ ಕರೆಸಿಕೊಳ್ತಿದ್ದ ವ್ಯಾಕ್ಸಿನ್‍ಗೆ ಡಿಮ್ಯಾಂಡೇ ಇಲ್ಲ.

ಬೆಂಗಳೂರು: ಆಬಾಲ ವೃದ್ಧರಾದಿಯಾಗಿ ಎಲ್ಲರನ್ನೂ ಹಿಂಡಿ ಹಿಪ್ಪೆ ಮಾಡಿರೋ ‘ಚೀನಿ ವೈರಸ್’ ಕೊರೊನಾಗೆ ಇಷ್ಟು ದಿನ ವ್ಯಾಕ್ಸಿನ್ ಬಂದ್ರೆ ಸಾಕಪ್ಪಾ ಅಂತ ಜನ ಕಾಯುತ್ತಿದ್ದರು. ಆದ್ರೆ ಕೊವಿಶೀಲ್ಡ್ ವ್ಯಾಕ್ಸಿನ್ ವಿತರಣೆಯ ಮಹಾಯಜ್ಞಕ್ಕೆ ಚಾಲನೆ ಸಿಕ್ಕು ನಾಲ್ಕನೇ ದಿನ ಆದರೂ ಟಾರ್ಗೆಟ್ ರೀಚ್ ಆಗೋಕೆ ಒದ್ದಾಡುವಂತಾಗಿದೆ. ಪ್ರಾಣ ಉಳಿಸೋ ಸಂಜೀವಿನಿ, ಜೀವಾಮೃತ ಅಂತೆಲ್ಲಾ ಕರೆಸಿಕೊಳ್ತಿದ್ದ ವ್ಯಾಕ್ಸಿನ್‍ಗೆ ಡಿಮ್ಯಾಂಡೇ ಇಲ್ಲ. ರಾಜ್ಯವೂ ಸೇರಿದಂತೆ ದೇಶಾದ್ಯಂತ ಮೊದಲ ಹಂತದ ಕೊರೋನಾ ವಾರಿಯರ್ಸ್ ವ್ಯಾಕ್ಸಿನೇಷನ್‍ಗೆ ನಿರೀಕ್ಷಿತ …

Read More »

ಸ್ಮಶಾನಕ್ಕಾಗಿ ತಹಶೀಲ್ದಾರ್ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ

ಮಂಡ್ಯ: ಸ್ಮಶಾನಕ್ಕಾಗಿ ಆಗ್ರಹಿಸಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕಾರೇಕುರ ಗ್ರಾಮಸ್ಥರು ತಹಶೀಲ್ದಾರ್ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಜರುಗಿದೆ. ಕಾರೇಕುರ ಗ್ರಾಮದ ಪುಟ್ಟಮ್ಮ ಎಂಬವರು ಅನಾರೋಗ್ಯಕ್ಕೆ ತುತ್ತಾಗಿ ಸೋಮವಾರ ಮೃತಪಟ್ಟಿದ್ದರು. ಐದಾರು ದಶಕಗಳಿಂದ ಅಂತ್ಯಸಂಸ್ಕಾರ ನಡೆಸುತ್ತಿದ್ದ ಬೆಳಗೋಳ ಗ್ರಾಮ ವ್ಯಾಪ್ತಿಯ ಸರ್ವೆ ನಂ. 342ರ ಜಾಗದಲ್ಲಿ ಅಂತ್ಯಕ್ರಿಯೆ ನಡೆಸಲು ಮುಂದಾದಾಗ ಥಾಮಸ್ ಮ್ಯಾಥ್ಯೂ ಎಂಬವರು ತಡೆದಿದ್ದಾರೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಶವವನ್ನು ಶ್ರೀರಂಗಪಟ್ಟಣ ತಹಶೀಲ್ದಾರ್ ಕಚೇರಿ …

Read More »

ಉದ್ಧವ್​ ಠಾಕ್ರೆ ಬೆಳಗಾವಿಗೆ ಕಾಲಿಟ್ಟು ನೋಡಲಿ; ಕನ್ನಡಿಗರೇನು ಕೈಗೆ ಬಳೆ ತೊಟ್ಟುಕೊಂಡು ಕೂತಿಲ್ಲ; ಶಾಸಕ ಶರಣಬಸ್ಸಪ್ಪಗೌಡ ಎಚ್ಚರಿಕೆ

ಯಾದಗಿರಿ(ಜ.19): ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಹೇಳಿಕೆಗೆ ಶಾಸಕ ಶರಣಬಸ್ಸಪ್ಪಗೌಡ ದರ್ಶನಾಪುರ ಅವರು ಸವಾಲ್ ಹಾಕಿದ್ದಾರೆ. ಉದ್ದವ್ ಠಾಕ್ರೆ ಕರ್ನಾಟಕಕ್ಕೆ  ಬಂದು, ಬೆಳಗಾವಿಯಲ್ಲಿ ಒಂದಿಂಚು ಜಾಗ ತೆಗೆದುಕೊಂಡು ನೋಡಲಿ,  ಸಿಎಂ ಉದ್ದವ್ ಠಾಕ್ರೆ ಅವರು ಮಹಾರಾಷ್ಟ್ರದಿಂದ ಜನರನ್ನು ಕರೆದುಕೊಂಡು ಬರಲಿ ಎಂದು ಸವಾಲು ಹಾಕಿದ್ದಾರೆ. ಕನ್ನಡಿಗರೇನು ಕೈಗೆ ಬಳೆ ತೊಟ್ಟುಕೊಂಡಿಲ್ಲ‌.ಕನ್ನಡಿಗರು ಸುಮ್ಮನೆ ಇದ್ದರೆ ಸುಮ್ಮನೆ ಇರುತ್ತೇವೆ. ನಮಗೆ ತೊಂದರೆ ಕೊಟ್ಟರೆ ನಾವೇನು ಮಾಡುತ್ತೀವಿ ಅಂತ ಇತಿಹಾಸ ತಿಳಿಸುತ್ತದೆ ಎಂದರು. ಮುಖ್ಯಮಂತ್ರಿ …

Read More »

ಕನ್ನಡಿಗರ ತಾಳ್ಮೆ ಕೆಣಕಿದ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಆಕ್ರೋಶ

ಬೆಳಗಾವಿ,ಜ.19-ಸಮಾಜ ಸೇವೆಯ ಹೆಸರೇಳಿಕೊಂಡು ಬಿಜೆಪಿ ಸೇರಿ ಆಕಸ್ಮಿಕವಾಗಿ ಮಂತ್ರಿ ಪದವಿ ಪಡೆದುಕೊಂಡಿರುವ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮತ್ತೊಮ್ಮೆ ಕನ್ನಡಿಗರ ತಾಳ್ಮೆ ಕೆಣಕುವ ಪ್ರಯತ್ನಕ್ಕೆ ಕೈ ಹಾಕಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ದಶಕಗಳಿಂದ ಭಾಷಾ ಮತ್ತು ಭೂಪ್ರದೇಶ ವಿಚಾರದಲ್ಲಿ ಕರ್ನಾಟಕ- ಮಹಾರಾಷ್ಟ್ರ ನಡುವೆ ಗುz್ದÁಟ ನಡೆದಿದ್ದರೂ, ತನ್ನ ಸ್ವಾರ್ಥಕ್ಕಾಗಿ ತಮಾಷೆಯ ರಾಜಕಾರಣ ಮಾಡುತ್ತಿರುವ ಜೊಲ್ಲೆ ಅವರು ತಮ್ಮ ಮರಾಠಿ ಪ್ರೇಮ ಮುಂದುವರೆಸಿದ್ದಾರೆಮಹಾರಾಷ್ಟ್ರ ಮುಖ್ಯಮಂತ್ರಿ ಕನ್ನಡ ಭಾಷೆ ಮತ್ತು ನೆಲದ ಬಗ್ಗೆ …

Read More »

ಮುಡಾ ನಿವೇಶನಗಳ ಅಭಿವೃದ್ಧಿಗೆ ಒನ್ ಟೈಂ ಸೆಟ್ಲಮೆಂಟ್

ಮೈಸೂರು, ಜನವರಿ 19: “ಮೈಸೂರು ನಗರಾಭಿವೃದ್ಧಿಗೆ ನಮ್ಮ ಸರ್ಕಾರದಿಂದ ಏನಾಗಬೇಕು ಎಂಬುದನ್ನು ನೋಡಿಕೊಳ್ಳುತ್ತೇವೆ. ಮುಡಾಕ್ಕೆ ಇರುವ ಅಡೆತಡೆಯನ್ನು ತೊಡೆದುಹಾಕುವ ವಿಷಯದಲ್ಲಿ ನಾನು ಪರವಾಗಿರುತ್ತೇನೆ” ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಹೇಳಿದರು. ಮಂಗಳವಾರ ವಿಜಯನಗರ ಬಡಾವಣೆ ಪರಿಶೀಲನೆ ಬಳಿಕ ಮಾತನಾಡಿದ ಸಚಿವರು, “ಒಂದು ವೇಳೆ ಈಗಿರುವ ಅಡೆತಡೆಗಳನ್ನು ತೆಗೆದರೆ ಬಹುತೇಕ ಎಲ್ಲ ಸಮಸ್ಯೆಗಳಿಗೆ ಶೀಘ್ರದಲ್ಲಿಯೇ ಪರಿಹಾರ ಸಿಗಲಿದೆ. ಅಲ್ಲದೆ, ವಿಜಯನಗರ ಬಡಾವಣೆಯನ್ನು ಕಾರ್ಪೋರೇಶನ್‌ಗೆ ಸೇರಿಸಬೇಕು ಎಂಬ …

Read More »

ಗಡಿ ಉಸ್ತುವಾರಿ ಸಚಿವರನ್ನು ನೇಮಿಸುವಂತೆ ಕನ್ನಡಪರ ಹೋರಾಟಗಾರರ ಒತ್ತಾಯ

ಬೆಳಗಾವಿ,ಜ.19- ರಾಜ್ಯ ಸರಕಾರಕ್ಕೆ ನಾಚಿಕೆ, ಮಾನ ಮರ್ಯಾದೆ ಇದ್ದರೆ ಗಡಿ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಿ. ಬೆಂಗಳೂರಿನ ಎಂಎಸ್ ಬಿಲ್ಡಿಂಗ್ ನಲ್ಲಿರುವ ಗಡಿ ಅಭಿವೃದ್ಧಿ ಪ್ರಾಧಿಕಾರ ಮತ್ತು ಗಡಿ ಸಂರಕ್ಷಣಾ ಆಯೋಗ ಬೆಳ ಗಾವಿಯ ಸುವರ್ಣ ಸೌಧಕ್ಕೆ ಕೊಡ ಬೇಕು ಎಂದು ಹಿರಿಯ ಕನ್ನಡಪರ ಹೋರಾಟಗಾರ ಅಶೋಕ ಚಂದರಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿಭಾಗದ ಬಗ್ಗೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಹೇಳಿಕೆ ಸಾಕಷ್ಟು ವಿವಾದಕ್ಕೆ …

Read More »

IND vs AUS| ಟೀಂ ಇಂಡಿಯಾ ಸಾಧನೆ ಕೊಂಡಾಡಿದ ರಾಷ್ಟ್ರಪತಿ, ಪ್ರಧಾನಿ

ನವದೆಹಲಿ: ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್‌ ಕ್ರಿಕೆಟ್‌ ಸರಣಿ ಗೆದ್ದು ತ್ರಿವಿಕ್ರಮ ಮೆರೆದಿರುವ ಭಾರತೀಯ ಕ್ರಿಕೆಟ್‌ ತಂಡವನ್ನು ದೇಶದ ಪ್ರಮುಖರು ಹಾಡಿ ಹೊಗಳಿದ್ದಾರೆ. ಅವರ ಸಾಧನೆಯನ್ನು ಕೊಂಡಾಡಿದ್ದಾರೆ. ರಾಷ್ಟ್ರ ಹೆಮ್ಮೆ ಪಟ್ಟಿದೆ- ರಾಮನಾಥ ಕೋವಿಂದ್‌ ‘ಆಸ್ಟ್ರೇಲಿಯಾದಲ್ಲಿ ಇದು ಐತಿಹಾಸಿಕ ಕ್ರಿಕೆಟ್‌ ದಿಗ್ವಿಜಯ. ಕಠಿಣ ಟೆಸ್ಟ್ ಸರಣಿಯನ್ನು ಗೆದ್ದ ಭಾರತದ ಪ್ರತಿಭಾವಂತ ಯುವ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ತಂಡವು ಅಸಾಧಾರಣ ಕೌಶಲ ಮತ್ತು ಸ್ಥಿತಿಸ್ಥಾಪಕತೆ ಪ್ರದರ್ಶಿಸಿದೆ. ಅವರ ಸಾಧನೆಯ ಬಗ್ಗೆ ರಾಷ್ಟ್ರ ಹೆಮ್ಮೆಪಡುತ್ತದೆ,’ …

Read More »

GST ನೋಂದಣಿಗಾಗಿ ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ಎಸಿಬಿ ಬಲೆಗೆ

ಶಿವಮೊಗ್ಗ: ಜಿಎಸ್ ಟಿ ನೋಂದಣಿಗಾಗಿ ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ಒಬ್ಬಾತ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿರುವ ಘಟನೆ ಭದ್ರಾವತಿಯ ಕಮರ್ಷಿಯಲ್ ಟ್ಯಾಕ್ಸ್ ಕಚೇರಿಯಲ್ಲಿ ಮಂಗಳವಾರ ನಡೆದಿದೆ. ವೇಣು (36) ಎಸಿಬಿ ಬಲೆಗೆ ಬಿದ್ದ ಡಾಟಾ ಎಂಟ್ರಿ ಆಪರೇಟರ್. ಶಾಮಿಯಾನ ಅಂಗಡಿ ಮಾಲೀಕರೊಬ್ಬರ ಜಿಎಸ್ಟಿ ನೋಂದಣಿ ಮಾಡಲು ವೇಣು ಲಂಚ ಕೇಳಿದ್ದು, ಇಂದು 2500 ರೂ. ಹಣ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. …

Read More »

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಐದು ವರ್ಷ ಜೈಲು ಶಿಕ್ಷೆ

ಧಾರವಾಡ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ನಗರದ 2ನೇ ವಿಶೇಷ ಜಿಲ್ಲಾ ಹಾಗೂ ಪೋಕ್ಸೋ ನ್ಯಾಯಾಲಯವು 5 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿ ಸೋಮವಾರ ಆದೇಶ ಹೊರಡಿಸಿದೆ. ಇಲ್ಲಿನ ಶೀಲವಂತರ ಓಣಿಯ ಮಾಬೂಲಿ ಶೇಖ್‌ ಶಿಕ್ಷೆಗೆ ಗುರಿಯಾದವ. ಈತ ಈ ಪ್ರದೇಶದ ಅಪ್ರಾಪೆ¤ಯನ್ನು 2019ರ ಮಾ.27ರಂದು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ತನಿಖೆ ಮಾಡಿದ್ದ ಪೊಲೀಸರು, …

Read More »