Breaking News

“ಸಿದ್ದರಾಮಯ್ಯಗೆ ಕೆಲಸ ಇಲ್ಲದೆ ಜ್ಯೋತಿಷ್ಯ ಕಲಿಯುತ್ತಿರಬೇಕು”

ಮೈಸೂರು,ಜ.19- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವಾಗ ಜ್ಯೋತಿಷ್ಯ ಹೇಳುತ್ತಿದ್ದರೋ ಗೊತ್ತಿಲ್ಲ. ಈಗ ವಿರೋಧ ಪಕ್ಷದ ನಾಯಕರಾಗಿದ್ದರೂ ಕೆಲಸ ಇಲ್ಲದೆ ಜ್ಯೋತಿಷ್ಯ ಕಲಿಯುತ್ತಿರಬೇಕು. ಅದಕ್ಕೆ ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಮಾತನಾಡುತ್ತಿರಬೇಕು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು. ಸಿದ್ದರಾಮಯ್ಯ ಅವರಿಗೆ ಈಗ ಪುರುಸೊತ್ತು ಇರಬೇಕು. ವಿರೋಧ ಪಕ್ಷದ ನಾಯಕರಾಗಿ ಮಾಡಬೇಕಾದ ಕೆಲಸವನ್ನು ಮಾಡುವುದು ಬಿಟ್ಟು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಮೊದಲಿಗೆ ಅವರ ಪಕ್ಷದಲ್ಲಾಗುತ್ತಿರುವುದನ್ನು …

Read More »

ಜನವರಿ 16ರಿಂದ ಕೊರೊನಾ ಲಸಿಕೆ ನೀಡಿಕೆ ಆರಂಭವಾಗಿದ್ದು, ಮೂರು ದಿನಗಳಲ್ಲಿ 580 ಜನರಿಗೆ ಸೈಡ್ ಎಫೆಕ್ಟ್ !

ನವದೆಹಲಿ: ದೇಶಾದ್ಯಂತ ಜನವರಿ 16ರಿಂದ ಕೊರೊನಾ ಲಸಿಕೆ ನೀಡಿಕೆ ಆರಂಭವಾಗಿದ್ದು, ಮೂರು ದಿನಗಳಲ್ಲಿ 580 ಜನರಿಗೆ ಸೈಡ್ ಎಫೆಕ್ಟ್ ಆರಂಭವಾಗಿದೆ. ಸೋಮವಾರ ದೇಶಾದ್ಯಂತ 1,48,266 ಲಕ್ಷ ಆರೋಗ್ಯ ಕಾರ್ಯಕರ್ತರು ಲಸಿಕೆ ಪಡೆದಿದ್ದು, 133 ಜನರಿಗೆ ಅಡ್ಡಪರಿಣಾಮವುಂಟಾಗಿದೆ. 7 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ದಿನಗಳಲ್ಲಿ 3,81,305 ಆರೋಗ್ಯ ಕಾರ‍್ಯಕರ್ತರಿಗೆ ಲಸಿಕೆ ನೀಡಲಾಗಿದ್ದು, ಈ ಪೈಕಿ 580 ಜನರಲ್ಲಿ ಅಡ್ದ ಪರಿಣಾಮ ಉಂಟಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಉತ್ತರ …

Read More »

ಮಹಾರಾಷ್ಟ್ರ ಉದ್ಭವವಾಗಿದ್ದೆ ಕನ್ನಡ ನೆಲದಿಂದ’

ಬೆಳಗಾವಿ: ‘ಬೆಳಗಾವಿಯೂ ಐತಿಹಾಸಿಕ ಕಾಲದಿಂದಲೂ, ವರ್ತಮಾನದಲ್ಲೂ ಹಾಗೂ ಭವಿಷ್ಯದಲ್ಲೂ ಕನ್ನಡಿಗರದೆ. ಇದರಲ್ಲಿ ಯಾವುದೇ ಸಂಶಯ ಬೇಡ. ಹಾಗೆ ನೋಡಿದರೆ ಇಂದಿನ ಮಹಾರಾಷ್ಟ್ರವು ಹಿಂದೊಮ್ಮೆ ಕನ್ನಡ ನೆಲವಾಗಿತ್ತು’ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಹೇಳಿದ್ದಾರೆ. ‘ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುತ್ತೇವೆ’ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ‍ಪ್ರಕಟಣೆ ನೀಡಿರುವ ಅವರು, ‘ಮಹಾರಾಷ್ಟ್ರ ಹಾಗೂ ಮರಾಠಿ ಭಾಷೆ ಉದ್ಭವವಾಗಿದ್ದೆ ಕನ್ನಡ …

Read More »

ಕಳ್ಳರ ಕೈಚಳಕ, ಹಣದ ಸಮೇತ ಎಂಟಿಎಂ ಯಂತ್ರ ಮಾಯ..!

ತುಮಕೂರು,ಜ.19- ಎಂಟಿಎಂ ಕೇಂದ್ರವೊಂದಕ್ಕೆ ನುಗ್ಗಿರುವ ಕಳ್ಳರು ಹಣದ ಸಮೇತ ಎಟಿಎಂ ಯಂತ್ರವನ್ನು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನ ಹೆಗ್ಗೆರೆಯಲ್ಲಿ ನಡೆದಿದೆ. ನಗರದ ಹೊರವಲಯದ ಹೆಗ್ಗೆರೆಯಲ್ಲಿರುವ ಇಂಡಿಯನ್ ಓವರ್‍ಸಿಸ್ ಬ್ಯಾಂಕ್‍ನ ಎಟಿಎಂ ಕೇಂದ್ರದಲ್ಲಿ ಈ ಕಳ್ಳತನ ನಡೆದಿದೆ. ಮಧ್ಯರಾತ್ರಿ ನಾಲ್ಕು ಚಕ್ರದ ವಾಹನದ ಬಂದಿರುವ ಕಳ್ಳರು ಎಟಿಎಂ ಕೇಂದ್ರಕ್ಕೆ ನುಗ್ಗಿ ಚಾಣಾಕ್ಷತನದಿಂದ ಹಣದ ಸಮೇತ ಎಟಿಎಂ ಯಂತ್ರವನ್ನು ಕದ್ದೊಯ್ದಿದ್ದಾರೆ. ಬ್ಯಾಂಕ್ ಬಳಿಯೇ ಎಟಿಎಂ ಕೇಂದ್ರ ಹಾಗೂ …

Read More »

“ಮದುವೆಯಾಗುವುದಾಗಿ ನಂಬಿಸಿ ರೇಪ್ ಮಾಡಿದ್ದಾನೆ” : ಪೈಲಟ್ ವಿರುದ್ ನಟಿ ದೂರು

ಮುಂಬೈ, ಜ.19- ವೃತ್ತಿಪರ ಪೈಲಟ್ ತನ್ನನ್ನು ವಿವಾಹವಾಗುವುದಾಗಿ ನಂಬಿಸಿ ತನ್ನ ಮೇಲೆ ಅತ್ಯಾಚಾರ ನಡೆಸಿ, ಮೋಸಗೊಳಿಸಿದ್ದಾನೆ ಎಂದು ಹಿಂದಿ ಕಿರುತೆರೆ ನಟಿ ಮತ್ತು ಮಾಡೆಲ್ ಪೊಲೀಸರಿಗೆ ದೂರು ನೀಡಿರುವ ಘಟನೆ ಇಲ್ಲಿ ನಡೆದಿದೆ. ಆಕೆ ಸಲ್ಲಿಸಿರುವ ದೂರಿನ ಮೇರೆಗೆ ಓಶಿವಾರ ಪೊಲೀಸರು ಆರೋಪಿ ಪೈಲಟ್ ಮೇಲೆ ಎಫ್‍ಐಆರ್ ದಾಖಲಿಸಿದ್ದಾರೆ. ಕಳೆದ ಡಿಸೆಂಬರ್‍ನಲ್ಲಿ ಆರೋಪಿಯನ್ನು ಮ್ಯಾಟ್ರಿಮೋನಿಯಲ್ ಸೈಟ್‍ನಲ್ಲಿ ಪರಿಚಯ ಮಾಡಿಕೊಂಡಿದ್ದಾಳೆ. ಆರೋಪಿ ವೃತ್ತಿಪರ ಪೈಲಟ್ ಎಂದು ಹೇಳಿಕೊಂಡು ಈಕೆ ಸಂಬಂಧ ಬೆಳೆಸಿ, …

Read More »

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು,ರೌಡಿ ಕಾಲಿಗೆ ಪೊಲೀಸರಿಂದ ಗುಂಡೇಟು

ಬೆಂಗಳೂರು (ಜ. 19): ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಮತ್ತೆ ಗುಂಡಿನ ಸದ್ದು ಕೇಳಿಬಂದಿದೆ. ರೌಡಿಶೀಟರ್ ಜೊತೆ ಗುರುತಿಸಿಕೊಂಡಿದ್ದ ಆರೋಪಿಯೊಬ್ಬನ ಮೇಲೆ ಕೊಲೆ ಪ್ರಯತ್ನದ ಆರೋಪವಿತ್ತು. ಆತನನ್ನು ಬಂಧಿಸಲು ಹೋದಾಗ ಇಂದು ಮುಂಜಾನೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದ.  ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಕೊಲೆಗೆ ಸಂಚು ರೂಪಿಸಿದ ಪ್ರಕರಣದ ಆರೋಪಿ 22 ವರ್ಷದ ಪ್ರವೀಣ್ ಕಾಲಿಗೆ ಪೀಣ್ಯ ಪೊಲೀಸ್ ಠಾಣೆ ಸಬ್​ ಇನ್​ಸ್ಪೆಕ್ಟರ್ ಮಾಯಣ್ಣ ಬಿರಾಣೆ ಗುಂಡು ಹಾರಿಸಿದ್ದಾರೆ. …

Read More »

ರೈತ ಸಂಘಟನೆ – ಕೇಂದ್ರದ ನಡುವಿನ 10ನೇ ಸುತ್ತಿನ ಮಾತುಕತೆ ನಾಳೆಗೆ ಮುಂದೂಡಿಕೆ

ನವದೆಹಲಿ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಇದರ ಮಧ್ಯೆ ಇಂದು ನಡೆಯಬೇಕಾಗಿದ್ದ 10ನೇ ಸುತ್ತಿನ ಮಾತುಕತೆ ನಾಳೆಗೆ ಮುಂದೂಡಲಾಗಿದೆ. . ಕೃಷಿ ಸಂಘಟನೆಗಳು ಹಾಗೂ ಕೇಂದ್ರ ಸರ್ಕಾರದ ನಡುವೆ ಈಗಾಗಲೇ ನಡೆದಿರುವ ಎಲ್ಲ ಸಭೆಗಳು ವಿಫಲಗೊಂಡಿರುವ ಕಾರಣ ಇಂದು 10ನೇ ಸುತ್ತಿನ ಮಾತುಕತೆಗೆ ದಿನ ನಿಗದಿ ಮಾಡಲಾಗಿತ್ತು. ಆದರೆ ಇದನ್ನ ನಾಳೆಗೆ ಮುಂದೂಡಿಕೆ ಮಾಡಲಾಗಿದೆ. ನಾಳೆ ಮಧ್ಯಾಹ್ನ 2 ಗಂಟೆಗೆ ದೆಹಲಿಯ …

Read More »

34 ವರ್ಷಗಳಿಂದ ದಿನಗೂಲಿಯಾಗಿ ಕೆಲಸ ಮಾಡುತ್ತಿದ್ದರೂ ಸೇವೆ ಕಾಯಂಗೊಳಿಸಿಲ್ಲ ಎಂದು ಮುಖ್ಯಮಂತ್ರಿಗೆ ಪತ್ರ ಬರೆದಿಟ್ಟು, ಆತ್ಮಹತ್ಯೆ

ಗಂಗಾವತಿ: ಅರಣ್ಯ ಇಲಾಖೆಯಲ್ಲಿ 34 ವರ್ಷಗಳಿಂದ ದಿನಗೂಲಿಯಾಗಿ ಕೆಲಸ ಮಾಡುತ್ತಿದ್ದರೂ ಸೇವೆ ಕಾಯಂಗೊಳಿಸಿಲ್ಲ ಎಂದು ಮುಖ್ಯಮಂತ್ರಿಗೆ ಪತ್ರ ಬರೆದಿಟ್ಟು, ಪ್ರಾದೇಶಿಕ ವಲಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಆವರಣದಲ್ಲಿ ದಿನಗೂಲಿ ನೌಕರ ಮಲ್ಲಿಕಾರ್ಜುನ (59) ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ಯೋಜನೆ ಅಡಿ ನೇಮಕವಾದ ನೌಕರರನ್ನು ಕಾಯಂ ಮಾಡಿಲ್ಲ. ಕೆಲವರು ಇದೇ ವರ್ಷ ನಿವೃತ್ತಿಯಾಗಲಿದ್ದಾರೆ. ನಾನೂ ಮೇ ತಿಂಗಳಿನಲ್ಲಿ ನಿವೃತ್ತಿಯಾಗಲಿದ್ದೇನೆ. ಭವಿಷ್ಯ ಕಷ್ಟವಾಗಲಿದೆ. ಹಾಗಾಗಿ ನೇಣಿಗೆ ಶರಣಾಗುತ್ತಿದ್ದೇನೆ. ಕೂಡಲೇ …

Read More »

ಕೆಜಿಎಫ್ ಶೂಟಿಂಗ್ ಬಳಿಕ ಮಕ್ಕಳ ಜೊತೆ ಮಾಲ್ಡೀವ್ಸ್‌ಗೆ ಹಾರಿದ ಯಶ್

ಬೆಂಗಳೂರು: ಕೆಜಿಎಫ್-2 ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದ ರಾಕಿಂಗ್ ಸ್ಟಾರ್ ಇದೀಗ ವಿಶ್ರಾಂತಿಗೆಂದು ಕುಟುಂಬ ಸಮೇತ ಮಾಲ್ಡೀವ್ಸ್‌ಗೆ ತೆರಳಿದ್ದಾರೆ. ಕೋವಿಡ್ 19 ಲಾಕ್‍ಡೌನ್ ತೆರವಾದ ಬಳಿಕ ಯಶ್ ಕೆಜಿಎಫ್ ಶೂಟಿಂಗ್‍ನಲ್ಲಿ ಭಾಗಿಯಾಗಿದ್ದರು. ಈ ಸಮಯದಲ್ಲಿ ಕುಟುಂಬದ ಜೊತೆ ಹೆಚ್ಚು ಸಮಯವನ್ನು ಕಳೆಯಲಾಗಿರಲಿಲ್ಲ. ಆದರೆ ಈಗ ಇಬ್ಬರು ಮಕ್ಕಳೊಂದಿಗೆ ಯಶ್ ಮಾಲ್ಡೀವ್ಸ್‌ ತಾಣದಲ್ಲಿದ್ದಾರೆ. ಕುಟುಂಬದೊಂದಿಗೆ ಸಂಭ್ರಮಿಸುತ್ತಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಯಶ್, ಸ್ವರ್ಗ ಯಾವುದಾದರೂ ಇದ್ದರೆ ಅದು ಮಾಲ್ಡೀವ್ಸ್‌ ಮಾತ್ರ ಎಂದು ಬರೆದಿದ್ದಾರೆ. …

Read More »

ಮದುವೆ ಆಗಬೇಕಿದ್ದ ಯುವಕ ಮಸಣಕ್ಕೆ

ರಾಯಚೂರು: ಮದುವೆ ಆಮಂತ್ರಣ ಪತ್ರಿಕೆ ಕೊಡಲು ಬೈಕಿನಲ್ಲಿ ಹೊರಟಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಸ್ಕಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಬೈಕ್ ಸವಾರ ಹಾಗೂ ಆತನೊಂದಿಗಿದ್ದ ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನ ಮಸ್ಕಿ ತಾಲೂಕಿನ ಅಡವಿಭಾವಿ ಗ್ರಾಮದ ಅರುಣಾಕ್ಷಿ (22), ರಜಿಯಾ ಬೇಗಂ (22) ಹಾಗೂ ವಿರೇಶ್ (23) ಎಂದು ಗುರುತಿಸಲಾಗಿದೆ. ಅತೀ ವೇಗದಲ್ಲಿ ಬೈಕ್ ರೈಡ್ ಮಾಡಿದ್ದರಿಂದ ಅಪಘಾತ ಸಂಭವಿಸಿದೆ.ಮಸ್ಕಿಯಿಂದ ಲಿಂಗಸುಗೂರಿಗೆ ತೆರಳುತ್ತಿದ್ದ ವೇಳೆ ಸಾರಿಗೆ ಬಸ್ …

Read More »