Breaking News

ಎದೆ ಝಲ್​ ಎನಿಸುವ ರೌಡಿಶೀಟರ್​ ಬಾಬ್ಲಿ ಕೊಲೆಯ ದೃಶ್ಯ

ಬೆಂಗಳೂರು: ರೌಡಿ ಶೀಟರ್ ಬಬ್ಲಿ ಕೊಲೆಯ ಭೀಕರತೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜುಲೈ19 ರಂದು ಕೋರಮಂಗಲ ಬ್ಯಾಂಕ್​ನಲ್ಲಿ ಕೊಲೆ ನಡೆದಿತ್ತು. ಆಡುಗೋಡಿ ರೌಡಿಶೀಟರ್ ಆಗಿದ್ದ ಬಬ್ಲಿ ಹೆಂಡತಿ ಜೊತೆ ಬ್ಯಾಂಕ್ ಗೆ ಬಂದಿದ್ದಾಗ ಅಟ್ಯಾಕ್ ನಡೆದಿತ್ತು. ಬ್ಯಾಂಕ್ ಒಳಗೆ ನುಗ್ಗಿ ರೌಡಿಗಳ ಗ್ಯಾಂಗ್ ಬಬ್ಲಿಯನ್ನ ಕೊಚ್ಚಿ ಕೊಲೆ ಮಾಡಿತ್ತು.. ಕೊಲೆಯ ನಂತರ ಬೈಕ್‌ ಮೇಲೆ ಮಚ್ಚು ಹಿಡಿದು ಗ್ಯಾಂಗ್ ಸಂಭ್ರಮಿಸಿತ್ತು.. ಈ ಭಯಾನಕ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿನ್ನೆ ಕೋರಮಂಗಲ ಪೊಲೀಸರು …

Read More »

ಜುಲೈ 30 ರ ಒಳಗೆ ಸರ್ಕಾರ ಶಾಲೆ ತೆರೆಯದಿದ್ದರೆ.. ಆಗಸ್ಟ್ 1 ಕ್ಕೆ ನಾವೇ ಆರಂಭಿಸ್ತೇವೆ- ರುಪ್ಸಾ ಎಚ್ಚರಿಕೆ

ಶಿಕ್ಷಣ ಇಲಾಖೆ ಹಾಗೂ ಸರ್ಕಾರಕ್ಕೆ ರುಪ್ಸಾ ಎಚ್ಚರಿಕೆ ನೀಡಿದ್ದು ಸರ್ಕಾರ ಶಾಲೆ ಆರಂಭಕ್ಕೆ ಅವಕಾಶ ಕೊಟ್ಟಿಲ್ಲ ಅಂದ್ರೆ ತಾವೇ ಸ್ವತಃ ಶಾಲೆ ಆರಂಭಕ್ಕೆ ಸಿದ್ಧ ಎಂದಿದೆ. ತಮ್ಮ ಶಾಲೆಯಲ್ಲಿ ಇರುವ ಪೋಷಕರ ಅಭಿಪ್ರಾಯ ಪಡೆದು ಶಾಲೆ ಆರಂಭಕ್ಕೆ ಚಿಂತನೆ ನಡೆಸಿದ್ದೇವೆ.. ಕಳೆದ ವರ್ಷದ SOPಗೆ ಅನುಗುಣವಾಗಿ ಆಗಸ್ಟ್ 1 ಕ್ಕೆ ಶಾಲೆ ಆರಂಭಿಸುತ್ತೇವೆ ಎಂದಿದೆ. ಶಾಲೆಗಳ ಆರಂಭಕ್ಕೆ ICMR ಗ್ರೀನ್ ಸಿಗ್ನಲ್ ಕೊಟ್ಟ ಬೆನ್ನಲ್ಲೇ ರುಪ್ಸಾ ವತಿಯಿಂದ ಸುದ್ದಿಗೋಷ್ಠಿ ನಡೆಸಲಾಯ್ತು.. …

Read More »

ಮಹಾರಾಷ್ಟ್ರ, ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮಳೆ – 8 ಸೇತುವೆಗಳು ಜಲಾವೃತ

ಚಿಕ್ಕೋಡಿ: ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿರುವ ಹಿನ್ನೆಲೆ ಕೃಷ್ಣಾ ನದಿ ನೀರಿನ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡಿದೆ. ಕೃಷ್ಣಾ, ದೂದಗಂಗಾ, ವೇದಗಂಗಾ ಹಾಗೂ ಹೀರಣ್ಯಕೇಶಿ ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಚಿಕ್ಕೋಡಿ ಉಪವಿಭಾಗದ ಎಂಟು ಸೇತುವೆಗಳು ಜಲಾವೃತವಾಗಿವೆ. ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ ತಾಲೂಕುಗಳ ಎಂಟು ಸೇತುವೆಗಳು ಜಲಾವೃತಗೊಂಡಿದ್ದು, ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಯಡೂರು-ಕಲ್ಲೋಳ ಸೇತುವೆ, ದೂದಗಂಗಾ, ವೇದಗಂಗಾ ಹಾಗೂ ಹೀರಣ್ಯಕೇಶಿ ನದಿಗಳಿಗೆ …

Read More »

ಸಿಎಂ ಬದಲಾಗೋ ಮುನ್ನ ಪಂಚಮಸಾಲಿಗೆ ಒಬಿಸಿ ಮೀಸಲಾತಿ ಕೊಡಿ ಎಂದ ಸ್ವಾಮೀಜಿ

ಬೆಂಗಳೂರು: ಲಿಂಗಾಯಿತ ಪಂಚಮಸಾಲಿ ಸಮಯದಾಯಕ್ಕೆ ಒಬಿಸಿ(2ಎ) ಮೀಸಲಾತಿ ನೀಡುವುದಾಗಿ ಭರವಸೆ ನೀಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಸಿಎಂ ಸ್ಥಾನ ಬದಲಾಗುವ ಮುನ್ನ ಕೊಟ್ಟ ಭರವಸೆ ಈಡೇರಿಸಬೇಕು ಎಂದು ಲಿಂಗಾಯತ ಪಂಚಮಸಾಲಿ ಪೀಠಾಧ್ಯಕ್ಷ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ. ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗದ ಮೀಸಲಾತಿಗೆ ಸೇರಿಸಬೇಕೆಂದು 39 ದಿನ ಪಾದಯಾತ್ರೆ ಕೈಗೊಂಡು ಒತ್ತಾಯಿಸಲಾಗಿತ್ತು. ಆಗ ಮುಂದಿನ 6 ತಿಂಗಳಲ್ಲಿ ಮೀಸಲಾತಿ ನೀಡುವುದಾಗಿಸಿಎಂ ಯಡಿಯೂರಪ್ಪ ಅವರು ಸದನದಲ್ಲಿ ಭರವಸೆ ಕೊಟ್ಟಿದ್ದ, ಹಿನ್ನೆಲೆಯಲ್ಲಿ ಮಾ. …

Read More »

ಬಿಜೆಪಿಯಲ್ಲಿ ಜೋರಾಯ್ತು ಹಂಗಾಮಿ ಸಿಎಂ ಚರ್ಚೆ..!

ಬೆಂಗಳೂರು,ಜು.22- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತವಾಗುತ್ತಿದ್ದಂತೆ ತೆರವಾಗಲಿರುವ ಈ ಸ್ಥಾನಕ್ಕೆ ಯಾರು ಎಂಬ ಮಿಲಿಯನ್ ಡಾಲರ್ ಪ್ರಶ್ನೆ ರಾಜ್ಯದ ಜನತೆಯನ್ನು ಕಾಡುತ್ತಿದೆ. ಇದೇ 26ರಂದು ಸಿಎಂ ಬಿಎಸ್‍ವೈ ಅವರು ಸಂಜೆ ರಾಜ್ಯಪಾಲ ತಾವರ್ ಚಂದ್ರ ಗೆಲ್ಹೋಟ್ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಹೊಸ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವವರೆಗೂ ಹಂಗಾಮಿ ಸಿಎಂ ಆಗಿ ನೀವೇ ಮುಂದುವರೆಯಬೇಕೆಂದು ರಾಜ್ಯಪಾಲರು ಅವರಿಗೆ ನಿರ್ದೇಶನ ನೀಡುವರು. ಬಳಿಕ ಶಾಸಕಾಂಗ ಸಭೆ …

Read More »

ಕಾಂಗ್ರೆಸ್ ನ ಮಂಗಳೂರು ಸಭೆ ರದ್ದು: ಆಸ್ಕರ್ ಆರೋಗ್ಯ ವಿಚಾರಿಸಲು ಡಿಕೆ ಶಿವಕುಮಾರ್ ಮಂಗಳೂರಿಗೆ

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳೂರಿನಲ್ಲಿ ಶುಕ್ರವಾರ ನಡೆಸಬೇಕಿದ್ದ ಸಭೆಯನ್ನು ರದ್ದುಗೊಳಿಸಲಾಗಿದೆ. ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ ಮಂಗಳೂರಿಗೆ ತೆರಳಲಿದ್ದಾರೆ. ಉಳಿದಂತೆ ತುಮಕೂರಿನಲ್ಲಿ ಶನಿವಾರ ನಡೆಯಲಿರುವ ಸಭೆ ನಿಗದಿಯಂತೆ ಮುಂದುವರಿಯಲಿದೆ.

Read More »

ಮೊದಲ ಬಾರಿಗೆ ರಾಜೀನಾಮೆ ವಿಚಾರವಾಗಿ ಮಾತನಾಡಿರುವ ಸಿಎಂ

ಬೆಂಗಳೂರು: ಮೊದಲ ಬಾರಿಗೆ ರಾಜೀನಾಮೆ ವಿಚಾರವಾಗಿ ಮಾತನಾಡಿರುವ ಸಿಎಂ ಯಡಿಯೂರಪ್ಪ ಜುಲೈ 26ರ ಕಾರ್ಯಕ್ರಮದ ಬಳಿಕ ಹೈಕಮಾಂಡ್ ಸೂಚನೆಯಂತೆ ಮುಂದಿನ ನಿರ್ಧಾರ ಕೈಗೊಳ್ಳಲಿದ್ದೇನೆ. ಪಕ್ಷವನ್ನ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿದ್ದೇನೆ. ವರಿಷ್ಠರ ಸೂಚನೆಯಂತೆ 26ರಿಂದ ಕೆಲಸ ಆರಂಭಿಸಲಿದ್ದೇನೆ ಎಂದಿದ್ದಾರೆ. ಧನ್ವಂತರಿ ಯಾಗದಲ್ಲಿ ಭಾಗಿಯಾದನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಯಾರಿಗೂ 75 ವರ್ಷ ದಾಟಿದವರಿಗೆ ಯಾವುದೇ ಸ್ಥಾನಮಾನ ಕೊಟ್ಟಿಲ್ಲ ಆದರೆ ನನ್ನ ಕೆಲಸವನ್ನು ಮೆಚ್ಚಿ ಪ್ರಧಾನಿ ಮೋದಿ, ಅಮಿತ್ ಶಾ, …

Read More »

ಮಹಾರಾಷ್ಟ್ರ, ಬೆಳಗಾವಿ ಭಾಗದಲ್ಲಿ ಧಾರಾಕಾರ ಮಳೆ: ನಾರಾಯಣಪುರ ಜಲಾಶಯಕ್ಕೆ ಹೆಚ್ಚಿದ ಒಳಹರಿವು!

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*?? *ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576* *Laxmi News*  

Read More »

ಮಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಗೆ ಎದುರಾಯ್ತು ಮತ್ತೊಂದು ಸಮಸ್ಯೆ!

ಬೆಂಗಳೂರು, ಜು. 22: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬದಲಾವಣೆ ಚರ್ಚೆ ಬಿಜೆಪಿಯಲ್ಲಿ ಹೆಚ್ಚಾಗುತ್ತಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಲಿಂಗಾಯತ ಸಮುದಾಯದ ನಾಯಕರು ಪಕ್ಷಬೇಧ ಮರೆತು ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಬಾರದು ಎಂದು ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ಹಾಕಿದ್ದಾರೆ. ಅದರೊಂದಿಗೆ ಈಗ ಮತ್ತೊಂದು ಒತ್ತಡ ಯಡಿಯೂರಪ್ಪ ಅವರಿಗೆ ಎದುರಾಗಿದೆ. ಈ ಹಿಂದೆ ಸಿಎಂ ಯಡಿಯೂರಪ್ಪ ಅವರೇ ಕೊಟ್ಟಿದ್ದ ಭರವಸೆಯನ್ನು ಈಡೇರಿಸಬೇಕೆಂದು ಲಿಂಗಾಯತ ಪಂಚಮಸಾಲಿ ಸಮುದಾಯ ಆಗ್ರಹಿಸಿದೆ. ಪಂಚಮಸಾಲಿ ಸಮುದಾಯಕ್ಕೆ 2ಎ …

Read More »

ಡಿಕೆಶಿ ಬಿಟ್ಟು ಸಿದ್ದು ಜತೆ ರಾಹುಲ್‌ ಪ್ರತ್ಯೇಕ ಮಾತುಕತೆ : ರಾಜ್ಯ ಕಾಂಗ್ರೆಸ್‌ನಲ್ಲಿ ಸಂಚಲನ

ಬೆಂಗಳೂರು: ರಾಜ್ಯ ರಾಜಕೀಯ ವಿದ್ಯಮಾನಗಳ ವಿಚಾರವಾಗಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ಗಾಂಧಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜತೆ ಪ್ರತ್ಯೇಕ ಮಾತುಕತೆ ನಡೆಸಿರುವುದು ಕಾಂಗ್ರೆಸ್‌ ವಲಯದಲ್ಲಿ ಸಂಚಲನ ಮೂಡಿಸಿದೆ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯಾದರೆ ಕಾಂಗ್ರೆಸ್‌ ಯಾವ ರೀತಿಯ ಹೆಜ್ಜೆ ಇಡಬಹುದು. ಮುಂದಿನ ಕಾರ್ಯತಂತ್ರ ಹಾಗೂ ಆಪರೇಷನ್‌ ಕಮಲ ಕಾರ್ಯಾಚರಣೆಯಡಿ ಬಿಜೆಪಿ ಸೇರಿ ಸಚಿವರಾಗಿರುವವರ ಮನಸ್ಥಿತಿ ಮತ್ತಿತರ ವಿಷಯಗಳ ಬಗ್ಗೆ ಸಿದ್ದರಾಮಯ್ಯ ಅವರಿಂದ ಮಾಹಿತಿ ಪಡೆದಿರುವುದ ಕುತೂಹಲಕ್ಕೆ ಕಾರಣವಾಗಿದೆ. ಯಡಿಯೂರಪ್ಪ ಬದಲಾವಣೆಯಾದರೆ ಆರು …

Read More »