ಬಸವೇಶ್ವರ ಏತ ನೀರಾವರಿ ಶೀಘ್ರ ಪೂರ್ಣ: “ಅನೇಕ ವರ್ಷಗಳಿಂದ ಆಮೆ ಗತಿಯಲ್ಲಿ ಸಾಗುತ್ತಿರುವ ಬಹು ನಿರೀಕ್ಷಿತ ಬಸವೇಶ್ವರ ಏತ ನೀರಾವರಿ ಯೋಜನೆಯು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು. ಈಗಾಗಲೇ ಶೇ 80ರಷ್ಟು ಅನುದಾನ ನೀಡಲಾಗಿದೆ. ಕೇವಲ ಶೇ 20 ರಷ್ಟು ಬಾಕಿಯಿದೆ. ಬೋರ್ಡ್ ಮೀಟಿಂಗ್ ನಡೆದ ಬಳಿಕ ಇನ್ನುಳಿದ ಅನುದಾನ ಒದಗಿಸಿ ತ್ವರಿತವಾಗಿ ಆ ಯೋಜನೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುತ್ತೇವೆ” ಎಂದು ಭರವಸೆ ನೀಡಿದರು. “ಇದೇ ವಿಚಾರಕ್ಕೆ ಶಾಸಕ ರಾಜು ಕಾಗೆ ಕೂಡ …
Read More »ಸಿಎಂ ಹುದ್ದೆಗಾಗಿ ಅಭಿಮಾನಿಗಳ ಪೂಜೆ ಹಳೆಯದಲ್ಲ :ಸತೀಶ್ ಜಾರಕಿಹೊಳಿ
ಚಿಕ್ಕೋಡಿ(ಬೆಳಗಾವಿ): “ವರಿಷ್ಠರ ತೀರ್ಮಾನದ ಹಿನ್ನೆಲೆ ಪಕ್ಷದಲ್ಲಿ ಎಲ್ಲವೂ ಶಾಂತವಾಗಿದೆ, ಹೈಕಮಾಂಡ್ ಆದೇಶದ ಮುಂದೆ ನಾನು ಕುಣಿದಾಡಲು ಸಾಧ್ಯವಿಲ್ಲ ಈಗ ಪಕ್ಷ ಸಂಘಟನೆಯಷ್ಟೇ ನನ್ನ ಗುರಿ” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬುಧವಾರ ಅಥಣಿ ಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ, “ಈಗ ನಮ್ಮ ಎದುರು ಯಾವುದೇ ಹುದ್ದೆಯ ಬದಲಾವಣೆ ಪ್ರಸ್ತಾಪ ಇಲ್ಲ. ನಾನು ವರಿಷ್ಠರ ನಿರ್ಧಾರಕ್ಕೆ ಬದ್ಧನಾಗಿ ಕೆಲಸ ಮಾಡುತ್ತೇನೆ ಎಂದರು. 2028 ರಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ …
Read More »ಯಮಕನಮರ್ಡಿಯಲ್ಲಿ ಸೈಬರ್ ಅಪರಾಧ ಜಾಗೃತಿ ಅಭಿಯಾನ
ಯಮಕನಮರ್ಡಿಯಲ್ಲಿ ಸೈಬರ್ ಅಪರಾಧ ಜಾಗೃತಿ ಅಭಿಯಾನ ಯಮಕನಮರ್ಡಿಯಲ್ಲಿ ಪೊಲೀಸ್ ಠಾಣೆಯ ವತಿಯಿಂದ ಜಾಗೃತಿ ಸೈಬರ್ ಅಪರಾಧ ಜಾಗೃತಿ ಅಭಿಯಾನ ಆನ್‌ಲೈನ್ ವಂಚನೆ, ಅಜ್ಞಾತ ಕರೆಗಳು, ವಂಚನೆ ಸಂದೇಶಗಳು ಇನ್ನುಳಿದ ವಂಚನೆಗಳ ಕುರಿತು ಮಾಹಿತಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರ್ಡಿಯ ಮಲ್ಲಿಕಾರ್ಜುನ ಐಟಿಐ ಕಾಲೇಜಿನ ವತಿಯಿಂದ ಬಸವೇಶ್ವರ ಸಹಕಾರಿ ಬ್ಯಾಂಕ್ ನಲ್ಲಿ ಸೈಬರ್ ಅಪರಾಧ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಎಚ್. ಕೆ. ಪಾಟೀಲ್. …
Read More »ಲಾರಿ ಅಪಘಾತದಲ್ಲಿ ಮೃತಪಟ್ಟ 10 ಜನರ ಅಂತ್ಯಕ್ರಿಯೆಯು ಸವಣೂರು ಪಟ್ಟಣದ ಖಬರಸ್ತಾನಗಳಲ್ಲಿ
ಹಾವೇರಿ: ಲಾರಿ ಅಪಘಾತದಲ್ಲಿ ಮೃತಪಟ್ಟ 10 ಜನರ ಅಂತ್ಯಕ್ರಿಯೆಯು ಸವಣೂರು ಪಟ್ಟಣದ ಖಬರಸ್ತಾನಗಳಲ್ಲಿ ನಡೆಯಿತು. ಅದಕ್ಕೂ ಮುನ್ನ ಪಟ್ಟಣಕ್ಕೆ ಶಾಸಕ ಯಾಸೀರಖಾನ್ ಪಠಾಣ ನೇತೃತ್ವದಲ್ಲಿ ಎಲ್ಲ ಮೃತದೇಹಗಳನ್ನು ಘಟನಾ ಸ್ಥಳದಿಂದ ತರಲಾಯಿತು. ಮೃತದೇಹಗಳನ್ನು ಹೊತ್ತ ವಾಹನ ಪಟ್ಟಣ ತಲುಪುತ್ತಿದ್ದಂತೆ ದಾರಿ ಉದ್ದಕ್ಕೂ ಸಂಬಂಧಿಕರು, ನಿವಾಸಿಗಳು, ಸಾವಿರಾರು ಸಂಖ್ಯೆಯಲ್ಲಿ ನಿಂತು ಪಾರ್ಥಿವ ಶರೀರಗಳ ವೀಕ್ಷಣೆ ಮಾಡಿದರು. ನಂತರ ಮೃತರ ಮನೆಗಳಿಗೆ ಪಾರ್ಥಿವ ಶರೀರಗಳನ್ನು ತಗೆದುಕೊಂಡು ಹೋಗಲಾಯಿತು. ಮನೆಯಲ್ಲಿ ಮುಸ್ಲಿಂ ಸಂಪ್ರದಾಯದಂತೆ ವಿಧಿವಿಧಾನಗಳನ್ನು ಪೂರೈಸಲಾಯಿತು. …
Read More »ರಾಜ್ಯ ಬಿಜೆಪಿಯಲ್ಲಿ ಬಣ ಸಂಘರ್ಷ ಜೋರು
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ಸಂಘರ್ಷ ಜೋರಾಗಿರುವ ಬೆನ್ನಲ್ಲೇ ಒಂದು ಕಾಲದಲ್ಲಿ ಆತ್ಮೀಯ ಸ್ನೇಹಿತರಾಗಿದ್ದ ಮಾಜಿ ಸಚಿವ ಬಿ. ಶ್ರೀರಾಮುಲು ಮತ್ತು ಗಾಲಿ ಜನಾರ್ದನ ರೆಡ್ಡಿ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿದೆ. ಮೊದಲ ಬಾರಿಗೆ ಜನಾರ್ದನ ರೆಡ್ಡಿ ವಿರುದ್ಧ ಶ್ರೀರಾಮುಲು ಅವರು ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸಿರುವುದು ಅಚ್ಚರಿ ಮೂಡಿಸಿದೆ. ಮಂಗಳವಾರ ನಡೆದ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಶ್ರೀರಾಮುಲು ಅವರು ಆಕ್ರೋಶಗೊಂಡು ಬಿಜೆಪಿ ತೊರೆಯುವ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಭೆಯಲ್ಲೇ ರಾಜ್ಯ …
Read More »ನನ್ನ ಕರ್ತವ್ಯ ಮಾಡುತ್ತೇನೆ, ಮಿಕ್ಕಿದ್ದು ಪಕ್ಷ ತೀರ್ಮಾನ ಮಾಡುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್
ಹುಬ್ಬಳ್ಳಿ : “ನಾನು ನನ್ನ ಕರ್ತವ್ಯ ಮಾಡುತ್ತೇನೆ. ಮಿಕ್ಕಿದ್ದು ಪಕ್ಷ ತೀರ್ಮಾನ ಮಾಡುತ್ತದೆ” ಎಂದು ತಿಳಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ನೀವು ಸಿಎಂ ಆಗಲಿ ಎಂದು ಸ್ವಾಮೀಜಿಗಳು ಆಶೀರ್ವಾದ ಮಾಡಿದ್ದಾರೆ ಎಂದು ಕೇಳಿದ ಪ್ರಶ್ನೆಗೆ “ಧರ್ಮಗುರುಗಳು ಆಶೀರ್ವಾದ ಮಾಡುವಾಗ ನಾವು ಏನು ಹೇಳಲು ಸಾಧ್ಯ? ಅದು ಅವರ ಇಚ್ಛೆ. ಏನೇ ಇದ್ದರೂ ನಮ್ಮ ಪಕ್ಷವಷ್ಟೇ. ಪಕ್ಷ ಮುಖ್ಯ. ಪಕ್ಷ ಏನು …
Read More »ಕೊಟ್ಟಿಗೆಯಲ್ಲಿದ್ದ ಖೋಟಾ ನೋಟು ಪ್ರಿಂಟಿಂಗ್ಗೆ ಬಳಸುತ್ತಿದ್ದ ಎಲ್ಲ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮೈಸೂರು: ಜಿಲ್ಲೆಯ ಮಾದಾಪುರ ಬಳಿ ದನದ ಕೊಟ್ಟಿಗೆಯಲ್ಲಿ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಟಿ. ನರಸೀಪುರ ಪೊಲೀಸರು ದಾಳಿ ಮಾಡಿ ಕೃತ್ಯದಲ್ಲಿ ತೊಡಗಿದ್ದ ತಂದೆ ಮತ್ತು ಮಗನನ್ನು ಬಂಧಿಸಿರುವ ಘಟನೆ ಟಿ. ನರಸೀಪುರ ತಾಲ್ಲೂಕಿನ ಹಿರಿಯೂರು ಗ್ರಾಮದಲ್ಲಿ ನಡೆದಿದೆ. ಕೊಟ್ಟಿಗೆಯಲ್ಲಿದ್ದ ನೋಟು ಪ್ರಿಂಟ್ ಮಾಡಲು ಬಳಸುತ್ತಿದ್ದ ಸಾಮಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹಿರಿಯೂರು ಗ್ರಾಮದ ನಾಗೇಶ್ (25) ಹಾಗೂ ಶಿವಪ್ರಸಾದ್ (48) ಬಂಧಿತ ಆರೋಪಿಗಳು. ಖಚಿತ ಮಾಹಿತಿಯ ಮೇರೆಗೆ ಟಿ. …
Read More »ನನ್ನ ಕರ್ತವ್ಯ ಮಾಡುತ್ತೇನೆ, ಮಿಕ್ಕಿದ್ದು ಪಕ್ಷ ತೀರ್ಮಾನ ಮಾಡುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್
ಹುಬ್ಬಳ್ಳಿ : “ನಾನು ನನ್ನ ಕರ್ತವ್ಯ ಮಾಡುತ್ತೇನೆ. ಮಿಕ್ಕಿದ್ದು ಪಕ್ಷ ತೀರ್ಮಾನ ಮಾಡುತ್ತದೆ” ಎಂದು ತಿಳಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ನೀವು ಸಿಎಂ ಆಗಲಿ ಎಂದು ಸ್ವಾಮೀಜಿಗಳು ಆಶೀರ್ವಾದ ಮಾಡಿದ್ದಾರೆ ಎಂದು ಕೇಳಿದ ಪ್ರಶ್ನೆಗೆ “ಧರ್ಮಗುರುಗಳು ಆಶೀರ್ವಾದ ಮಾಡುವಾಗ ನಾವು ಏನು ಹೇಳಲು ಸಾಧ್ಯ? ಅದು ಅವರ ಇಚ್ಛೆ. ಏನೇ ಇದ್ದರೂ ನಮ್ಮ ಪಕ್ಷವಷ್ಟೇ. ಪಕ್ಷ ಮುಖ್ಯ. ಪಕ್ಷ ಏನು …
Read More »ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕಗೊಳಿಸಿ ಆದೇಶ: ಆಕ್ಷೇಪಣೆಗೆ ಕಾಲಾವಕಾಶ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕಗೊಳಿಸಿದ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಧಾರವಾಡ ಮಹಾನಗರ ಪಾಲಿಕೆ ರಚಿಸಿ ಸರ್ಕಾರಿ ರಾಜ್ಯ ಪತ್ರದಲ್ಲಿ ಮಂಗಳವಾರ ಅಧಿಕೃತ ಅಧಿಸೂಚನೆ ಪ್ರಕಟಿಸಿದ್ದು, ಆಕ್ಷೇಪಣೆ/ಸಲಹೆಗೆ 30 ದಿನಗಳ ಕಾಲಾವಕಾಶ ಕೂಡ ನೀಡಿದೆ. ಹುಬ್ಬಳ್ಳಿ – ಧಾರವಾಡ ಅವಳಿನಗರದ ಜನಸಂಖ್ಯೆ, ಜನಸಾಂದ್ರತೆ, ತೆರಿಗೆ, ತೆರಿಗೇತರ ಸಂಪನ್ಮೂಲ, ವಾರ್ಷಿಕ ತಲಾ ಆದಾಯ, ಕೃಷಿಯೇತರ ಚಟುವಟಿಕೆಗಳಲ್ಲಿನ ಶೇಕಡಾವಾರು, ಉದ್ಯೋಗ ಪ್ರಮಾಣವನ್ನು ಪರಿಗಣಿಸಿ ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕಗೊಳಿಸಿ ಪದನಾಮೀಕರಣಗೊಳಿಸಲಾಗಿದೆ. ಹುಬ್ಬಳ್ಳಿ – …
Read More »ಶ್ರೀ ಶಿವಕುಮಾರಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದ ಗೃಹ ಸಚಿವ ಡಾ. ಜಿ. ಪರಮೇಶ್ವರ್
ತುಮಕೂರು: “ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಮತ್ತು ಕಿರುಕುಳದಲ್ಲಿ ಸಿಕ್ಕಿಹಾಕಿಕೊಂಡಿರುವವರು ಪೊಲೀಸರಿಗೆ ದೂರು ನೀಡಿದ್ದಾರೆ. ಅದರ ಬಗ್ಗೆ ಕ್ರಮವನ್ನು ಪೊಲೀಸರು ತೆಗೆದುಕೊಂಡಿದ್ದಾರೆ” ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ತುಮಕೂರು ಜಿಲ್ಲೆಯಲ್ಲಿ ಅಂತಹ ಕಿರುಕುಳ ಆಗಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು. ತಿಪಟೂರಿನಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ತಪ್ಪಿತಸ್ಥರ ವಿರುದ್ಧ ಕ್ರಮ ಈಗಾಗಲೇ ತೆಗೆದುಕೊಳ್ಳಲಾಗಿದೆ” ಎಂದು ತಿಳಿಸಿದರು.ಮುಂದುವರೆದು, ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ …
Read More »