Breaking News

ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಶಾಸಕ ಸಿದ್ದು ಸವದಿ ಅಸಮಾಧಾನ ಸ್ಪೋಟ

ಬೆಂಗಳೂರು : ರಾಜ್ಯ ಸಚಿವ ಸಂಪುಟದ ಬೆನ್ನಲ್ಲೇ ಹಲವು ಶಾಸಕರು ಅಸಮಾಧಾನ ಹೊರಹಾಕಿದ್ದು, ಇದೀಗ ಶಾಸಕ ಸಿದ್ದು ಸವದಿ ಕೂಡ ಇದೀಗ ಸಿಡಿದೆದ್ದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕಿರುವ ಸಿದ್ದು ಸವದಿ, ಹಿರಿತನ, ಪಕ್ಷನಿಷ್ಠೆ, ಸಿದ್ಧಾಂತಕ್ಕೆ ಬದ್ಧರಾಗಿ ಪ್ರಾಣಹೋದರು ಪಕ್ಷಕ್ಕೆ ದ್ರೋಹ ಮಾಡದೇ ಪಕ್ಷಕ್ಕಾಗಿ ಮತ್ತು ಪಕ್ಷದ ಬಲವರ್ಧನೆಗಾಗಿ ಹಗಲು ರಾತ್ರಿ ದುಡಿದು ಯಾವುದೇ ಗಾಡ್ ಫಾದರ್ ಬೆಂಬಲವಿಲ್ಲದೆ ಪಕ್ಷವನ್ನು ಎಲ್ಲಾ ಹಂತದಲ್ಲಿ ಅಧಿಕಾರಕ್ಕೆ ತರುವ ಪಕ್ಷದ …

Read More »

ಬಿಗ್ ನ್ಯೂಸ್: ಸಚಿವ ಸ್ಥಾನ ವಂಚಿತರಿಗೆ ಸಿಹಿ ಸುದ್ದಿ, ಸಂಪುಟ ಪುನಾರಚನೆ ಮಾಹಿತಿ ನೀಡಿದ ರಮೇಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿ 7 ಮಂದಿ ನೂತನ ಸಚಿವರು ಸಿಎಂ ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಮಾರ್ಚ್ ಅಥವಾ ಏಪ್ರಿಲ್ ನಲ್ಲಿ ಸಂಪುಟ ಪುನಾರಚನೆ ಪ್ರಕ್ರಿಯೆ ದೊಡ್ಡಮಟ್ಟದಲ್ಲಿ ನಡೆಯಲಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಸಚಿವ ಸ್ಥಾನ ಕೈತಪ್ಪಿದವರಿಗೆ ಮಾರ್ಚ್ ಅಥವಾ ಏಪ್ರಿಲ್ ನಲ್ಲಿ ಸಂಪುಟ ಪುನಾರಚನೆ ವೇಳೆ ಅವಕಾಶ ಸಿಗಲಿದೆ ಎಂದು ಹೇಳಿದ್ದಾರೆ. ಹೆಚ್. ವಿಶ್ವನಾಥ್, ಮಹೇಶ್ …

Read More »

‘ಅಂಬೇಡ್ಕರ್ ಅಭಿವೃದ್ಧಿ ಮಂಡಳಿ ಅಧ್ಯಕ್ಷ’ರಾಗಿ ‘ಹೆಚ್.ನಾಗೇಶ್’ಗೆ ನೇಮಕ

ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಅಬಕಾರಿ ಸಚಿವರಾಗಿದ್ದಂತ ಸಚಿವ ಹೆಚ್.ನಾಗೇಶ್ ಸಿಎಂ ಸೂಚನೆಯ ಮೇರೆಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಂತಹ ಹೆಚ್ ನಾಗೇಶ್ ಗೆ ಡಾ.ಅಂಬೇಡ್ಕರ್ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ನಾನ್ ಮಾಡಿದ್ದಾದ್ರೂ ಏನು..? ಯಾಕೆ ನನಗೆ ಮೋಸ ಮಾಡಿದ್ರೆ ಎಂಬುದಾಗಿ ಸಿಎಂ ಯಡಿಯೂರಪ್ಪ ಅವರ ಮುಂದೆಯೇ ಅಬಕಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತ ಸಂದರ್ಭದಲ್ಲಿ …

Read More »

BIG NEWS : ‘ಸಿಎಂ ಯಡಿಯೂರಪ್ಪ’ ಸಂಪುಟಕ್ಕೆ ಮತ್ತಷ್ಟು ಬಲ : 7 ಶಾಸಕರು ‘ನೂತನ ಸಚಿವ’ರಾಗಿ ಸಂಪುಟಕ್ಕೆ ಸೇರ್ಪಡೆ

ಬೆಂಗಳೂರು : ಅಂತೂ ಇಂತೂ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ನೂತನ 7 ಶಾಸಕರು ಸಚಿವರಾಗುವ ಮೂಲಕ ಸೇರ್ಪಡೆಗೊಂಡಿದ್ದಾರೆ. ಸಿಎಂ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟಕ್ಕೆ 7 ಶಾಸಕರು ರಾಜಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಅರವಿಂದ ಲಿಂಬಾವಳಿ, ಆರ್.ಶಂಕರ್, ಎಂಟಿಬಿ.ನಾಗರಾಜ್, ಅಂಗಾರ, ಮುರುಗೇಶ್ ನಿರಾಣಿ, ಸಿ.ಪಿ.ಯೋಗೀಶ್ವರ್ ಹಾಗೂ ಉಮೇಶ್ ಕತ್ತಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೊದಲು ಆಗಮಿಸಿದಂತ ಶಾಸಕ ಉಮೇಶ್ ಕತ್ತಿಯವರು ಸಂಪುಟ ದರ್ಜೆಯ ಸಚಿವರಾಗಿ ದೇವರ ಹೆಸರಿನಲ್ಲಿ …

Read More »

ವಾಹನ ಸವಾರರೇ, DL, RC ಅವಧಿ ಮುಗಿದಿದ್ರೆ ನವೀಕರಿಸಿ, ಇಲ್ಲದಿದ್ರೆ ʼ5000 ದಂಡʼ ತೆರಬೇಕಾಗುತ್ತೆ..!

ನವದೆಹಲಿ: ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಾರಿಗೆ ನಿಯಮಗಳಲ್ಲಿ ಸಡಿಲಿಕೆ ನೀಡಿದ್ದು, ಅವಧಿ ಮೀರಿದ ಡಿ.ಎಲ್‌ ಮತ್ತು ಆರ್.ಸಿಯನ್ನ 2021 ಡಿಸೆಂಬರ್ 31ರವರೆಗೆ ಬಳಸಬಹುದು ಎಂದಿದೆ. ಅದ್ರಂತೆ, 2020ರ ಮಾರ್ಚ್ ನಿಂದ ಅಮಾನ್ಯವಾದ ಚಾಲನಾ ಪರವಾನಗಿಗಳು, ಆರ್ ಸಿಗಳು ಮತ್ತು ಫಿಟ್ ನೆಸ್ ಪ್ರಮಾಣ ಪತ್ರಗಳನ್ನು ಹೊಂದಿರುವ ವಾಹನಗಳ ಮೇಲೆ ಸಾರಿಗೆ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ, ಡಿಸೆಂಬರ್ 31ರಿಂದ ಅಕ್ರಮ ಪರವಾನಗಿ ಹೊಂದಿರುವವರ ವಿರುದ್ಧ ಕ್ರಮ …

Read More »

ಸಂಪುಟ ವಿಸ್ತರಣೆಯ ಅಸಮಾಧಾನದಿಂದ ಸರ್ಕಾರಕ್ಕೆ ಮತ್ತಷ್ಟು ಅಧೋಗತಿ; ಸಿದ್ದರಾಮಯ್ಯ

ಮೈಸೂರು (ಜ. 13): ಬಿಜೆಪಿ ಸರ್ಕಾರ ಈಗಾಗಲೇ ಅಧೋಗತಿಗೆ ಇಳಿದಿದೆ. ಇದೀಗ ಸಂಪುಟ ವಿಸ್ತರಣೆಯ ಅಸಮಾಧಾನದಿಂದ ಮತ್ತಷ್ಟು ಅಧೋಗತಿಗೆ ಹೋಗಲಿದೆ. ಸಂಪುಟ ಪೂರ್ತಿಯಾದ ಮಾತ್ರಕ್ಕೆ ಈ ಸರ್ಕಾರ ಪರಿಪೂರ್ಣ ಆಗುವುದಿಲ್ಲ. ಆದರೆ, ಮಂತ್ರಿ ಮಂಡಲ ವಿಸ್ತರಣೆಯಿಂದಾಗಿ ಯಡಿಯೂರಪ್ಪ ಇನ್ನೂ ಸ್ವಲ್ಪ ದಿನ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಅನಿಸುತ್ತಿದೆ ಎನ್ನುವ ಮೂಲಕ ಸಿಎಂ ಬದಲಾಗುತ್ತಾರೆ ಎಂಬ ತಮ್ಮ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಉಲ್ಟಾ ಹೊಡೆದಿದ್ದಾರೆ. ಈ ಹಿಂದೆ ಸದ್ಯದಲ್ಲೇ ಸಿಎಂ ಸ್ಥಾನದಿಂದ …

Read More »

ಬ್ಲ್ಯಾಕ್​ಮೇಲ್ ಮಾಡುವ ಮೂವರಿಗೆ ಮುಖ್ಯಮಂತ್ರಿಗಳು ಸಚಿವ ಸ್ಥಾನವನ್ನು ನೀಡಿದ್ದಾರೆ: ಯತ್ನಾಳ್​ ವಾಗ್ದಾಳಿ

ವಿಜಯಪುರ (ಜ. 13): ಬ್ಲ್ಯಾಕ್​ಮೇಲ್ ಮಾಡುವ ಮೂವರಿಗೆ ಮುಖ್ಯಮಂತ್ರಿಗಳು ಸಚಿವ ಸ್ಥಾನವನ್ನು ನೀಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ವಾಗ್ದಾಳಿ ನಡೆಸಿದ್ದಾರೆ. ಈ ಬಾರಿ ಕೂಡ ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆ ಸಿಎಂ ವಿರುದ್ಧ ಹರಿಹಾಯ್ದ ಅವರು, ಕೆಲವರು ಸಿಡಿ ತೋರಿಸಿ ಹೆದರಿಸಿ, ಸಚಿವ ಸ್ಥಾನ ಪಡೆದಿದ್ದಾರೆ. ಇನ್ನು ಕೆಲವರು ಅಪಾರ ಪ್ರಮಾಣದ ಹಣ ನೀಡಿ ಸಚಿವರಾಗಿದ್ದಾರೆ. ಸಿಎಂಗೆ ನೈತಿಕತೆ ಇದ್ದರೆ ರಾಜೀನಾಮೆ ನೀಡಲಿ ಎಂದು ಸವಾಲ್​ ಹಾಕಿದರು.  ಪ್ರಧಾನಿ ನರೇಂದ್ರ …

Read More »

ನೈತಿಕತೆ ಇದ್ದರೆ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸವಾಲ

ವಿಜಯಪುರ (ಜನವರಿ. 13); ಸಿಎಂ ವೀರಶೈವ ಲಿಂಗಾಯಿತರ ಹೆಸರಿನಲ್ಲಿ ಕೇಂದ್ರ ನಾಯಕರಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರಿಗೆ ಮನಸ್ಲಿಲ್ಲದಿದ್ದರೂ ಸಚಿವ ಸಂಪುಟಕ್ಕೆ ಮೂರು ಜನರನ್ನು ಸೇರಿಸಿಕೊಳ್ಳಲು ಅನುಮತಿ ನೀಡಿದ್ದಾರೆ. ಹೀಗಾಗಿ ಹೈಕಮಾಂಡ್​ನೆ ಬ್ಲ್ಯಾಕ್​ಮೇಲ್​ ಮಾಡಿದ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್ …

Read More »

ಯಡಿಯೂರಪ್ಪ ಕ್ಯಾಬಿನೆಟ್​ ಸೇರಿದ ಸಪ್ತ ಸಚಿವರು

ಬೆಂಗಳೂರು (ಜ. 13): ಬಿಎಸ್​ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಕಾರ್ಯಕ್ಕೆ ಕಡೆಗೂ ಅಂತ್ಯ ಸಿಕ್ಕಿದ್ದು, ರಾಜಭವನದಲ್ಲಿ ನಡೆಯುತ್ತಿರುವ ಸಂಪುಟ ವಿಸ್ತರಣೆ ಕಾರ್ಯದಲ್ಲಿ ಏಳು ಜನ ನೂತನ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ 3:50ಕ್ಕೆ ನೂತನ ಸಚಿವರ ಪದಗ್ರಹಣ ಕಾರ್ಯ ಆರಂಭವಾಗಿದ್ದು, ರಾಷ್ಟ್ರಗೀತೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನೂತನ ಸಚಿವರಿಗೆ ರಾಜ್ಯಪಾಲರು ಪ್ರಮಾಣವಚನ ಬೋಧಿಸಿದರು. ಮೊದಲಿಗೆ ಸಂಪುಟ ದರ್ಜೆ ಸಚಿವರಾಗಿ ಉಮೇಶ್ ಕತ್ತಿ ಪ್ರಮಾಣವಚನ ಸ್ವೀಕರಿಸಿದ್ದರು. ಬಳಿಕ ಬೆಳಗಾವಿಯ ಹುಕ್ಕೇರಿ ಶಾಸಕ …

Read More »

ಫೇಸ್‍ಬುಕ್, ಟ್ವಿಟರ್ ನಂತರ ಯೂಟೂಬ್ ಸರದಿ, ಟ್ರಂಪ್ ವಿಡಿಯೋಗಳಿಗೆ ತಡೆ

ವಾಷಿಂಗ್ಟನ್,ಜ.13- ಅಮೆರಿಕದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಸಂದರ್ಭ ಸಮೀಪಿಸುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಿಂದಲೂ ಡೊಲಾನ್ಡ್ ಟ್ರಂಪ್ ಅವರನ್ನು ಹೊರ ಹಾಕುವ ಪ್ರಕ್ರಿಯೆಗಳು ಬಿರುಸಿನಿಂದ ನಡೆಯುತ್ತಿವೆ. ವಾಷಿಂಗ್ಟನ್‍ನ ಕ್ಯಾಪಿಟಲ್ ಹೀಲ್ಸ್‍ನ ಹೊರಗೆ ನಡೆದ ಹಿಂಸಾಚಾರದ ಬಳಿಕ ಫೇಸ್‍ಬುಕ್ ಮತ್ತು ಟ್ವಿಟರ್ ಟ್ರಂಪ್ ಅವರ ಖಾತೆಯನ್ನು ಅಮಾನತುಗೊಳಿಸಿದ್ದವು. ಪರ್ಯಾಯವಾಗಿ ಟ್ರಂಪ್ ಟೀಮ್ ಹಾಗೂ ಬೇರೆ ಬೇರೆ ಹೆಸರಿನಲ್ಲಿ ಖಾತೆ ತೆರೆಯಲು ಪ್ರಯತ್ನ ಮಾಡಿದರೂ ಅದಕ್ಕೆ ಅವಕಾಶ ಕೊಟ್ಟಿಲ್ಲ. ಪೇಸ್‍ಬುಕ್ ಕಳೆದ 6ದಿನಗಳಿಂದಲೂ ಟ್ರಂಪ್ ಅವರ …

Read More »