Breaking News

ಸಂಪುಟ ಸೇರುತ್ತಿರುವ ಸಪ್ತ ಸಚಿವರು

ಬೆಂಗಳೂರು,ಜ.13- ಇಂದು ಸಂಪುಟಕ್ಕೆ 7 ಮಂದಿ ಸಚಿವರು ಸೇರ್ಪಡೆಯಾಗಲಿದ್ದು, ಈಗಾಗಲೇ ರಾಜಭವನಕ್ಕೆ ಪಟ್ಟಿಯನ್ನು ಕಳುಹಿಸಿ ಕೊಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕೃತವಾಗಿ ಘೋಷಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರಾದ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಮುರುಗೇಶ್ ನಿರಾಣಿ, ಅಂಗಾರ, ವಿಧಾನಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್, ಆರ್.ಶಂಕರ್ ಹಾಗೂ ಸಿ.ಪಿ.ಯೋಗೀಶ್ವರ್ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳಲಾಗುವುದು ಎಂದು ಪ್ರಕಟಿಸಿದರು.ಈಗಾಗಲೇ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಿದ್ದು, ಸಂಜೆ 3.50ಕ್ಕೆ ನಡೆಯಲಿರುವ ಸಮಾರಂಭದಲ್ಲಿ ನೂತನ ಸಚಿವರು ಪ್ರಮಾಣವಚನ …

Read More »

ಗಣರಾಜ್ಯೋತ್ಸವವನ್ನು ಈ ಬಾರಿ ಸರಳವಾಗಿ ಆಚರಿಸಲಾಗುವುದು: ಎಂ.ಜಿ.ಹಿರೇಮಠ

ಬೆಳಗಾವಿ: ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ಜನವರಿ 26 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಸರಳವಾಗಿ ಮತ್ತು ಅರ್ಥಪೂರ್ಣವಾಗಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಗಣರಾಜ್ಯೋತ್ಸವವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಜ.13) ನಡೆದ ಗಣರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದು ರಾಷ್ಟ್ರೀಯ ಹಬ್ಬವಾಗಿರುವುದರಿಂದ ಎಲ್ಲ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು. ಪರೇಡ್ ಗೆ ಸಂಬಂಧಿಸಿದಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು …

Read More »

ಲಕ್ಷ್ಮೀ ಹೆಬಾಳ್ಕರ್ ದರ್ಬಾರ್, ಅಂಗ ರಕ್ಷಕನ ಕೈಯಲ್ಲಿ ವೆನಿಟಿ ಬ್ಯಾಗ್.

  ಹುಬ್ಬಳ್ಳಿ ಬೆಳಗಾವಿ ಗ್ರಾಮೀಣ ಶಾಸಕಿ‌ ಲಕ್ಷ್ಮಿ ಹೆಬಾಳ್ಕರ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಪೊಲೀಸ್ ಇಲಾಖೆಯಿಂದ ನಿಯೋಜನೆಗೊಂಡ ಅಂಗ ರಕ್ಷಕನನ್ನು ಮನೆಗೆಲಸದವರಂತೆ ಬಳಕೆ ಮಾಡಿಕೊಳ್ಳುತ್ತಿರುವದು ಬಹಿರಂಗಗೊಂಡಿದೆ. ಹೌದು. ನಗರದಲ್ಲಿ ಖಾಸಗಿ ಹೋಟೆಲ್ ನಲ್ಲಿ ನಡೆದ ಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಿದ್ದ ಶಾಸಕಿ ಗನ್ ಮ್ಯಾನ್ ಕೈಯಲ್ಲಿ ವ್ಯಾನಿಟಿ ಬ್ಯಾಗ್ ನೀಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.     ಶಾಸಕಿಯೊಬ್ಬರು ಪೊಲೀಸ್ ಇಲಾಖೆಗೆ ಸೇರಿದ ಗನ್ ಮ್ಯಾನ್ ಕೈಯಲ್ಲಿ ಮಹಿಳೆಯಾಗಿ …

Read More »

ಶಾಸಕ ಮುರುಗೇಶ್ ನಿರಾಣಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಸ್ಥಾನ ದೊರೆತಿದ್ದು, ಇದರ ಬೆನ್ನಲ್ಲೇ ಪಂಚಮಸಾಲಿ ಪಾದಯಾತ್ರೆ ರದ್ದು

ಬೆಂಗಳೂರು: ಶಾಸಕ ಮುರುಗೇಶ್ ನಿರಾಣಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಸ್ಥಾನ ದೊರೆತಿದ್ದು, ಇದರ ಬೆನ್ನಲ್ಲೇ ಪಂಚಮಸಾಲಿ ಪಾದಯಾತ್ರೆ ರದ್ದುಗೊಳಿಸಲು ನಿರ್ಧರಿಸಲಾಗಿದೆ. ಪಂಚಮಸಾಲಿ ಲಿಂಗಾಯಿತ 2ಎ ಮೀಸಲಾತಿಗೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಾಳೆ ಬಸವಕಲ್ಯಾಣದಿಂದ ಬೆಂಗಳೂರಿನವರೆಗೂ ಪಾದಯಾತ್ರೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಮುರುಗೇಶ್ ನಿರಾಣಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವುದು ಖಚಿತವಾಗುತ್ತಿದ್ದಂತೆಯೇ ಪಾದಪಾತ್ರೆ ಕೈಬಿಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಈ ನಡುವೆ ಪ್ರತಿಕ್ರಿಯೆ ನೀಡಿರುವ …

Read More »

ಮುನಿರತ್ನ ಅವರಿಗೆ ಕೊನೆಗೂ ಕೈತಪ್ಪಿದ ಸಚಿವ ಸ್ಥಾನ

ಬೆಂಗಳೂರು: ಶಾಸಕ ಮುನಿರತ್ನ ಅವರಿಗೆ ಕೊನೆಗೂ ಸಚಿವ ಸ್ಥಾನ ಕೈತಪ್ಪಿದ್ದು, 7 ಶಾಸಕರಿಗೆ ಮಾತ್ರ ನೂತನ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ. ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, 7 ನೂತನ ಸಚಿವರ ಪಟ್ಟಿಯನ್ನು ಈಗಾಗಲೇ ರಾಜಭವನಕ್ಕೆ ಕಳುಹಿಸಲಾಗಿದೆ. ಅವರಲ್ಲಿ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್, ಮುರುಗೇಶ್ ನಿರಾಣಿ, ಆರ್.ಶಂಕರ್, ಸಿ.ಪಿ.ಯೋಗೇಶ್ವರ್ ಹಾಗೂ ಅಂಗಾರ ಅವರು ಇದ್ದಾರೆ ಎಂದರು.   ಇನ್ನು ಒಂದು ಸ್ಥಾನವನ್ನು ಖಾಲಿ ಬಿಡಲಾಗಿದೆ. ಹೈಕಮಾಂಡ್ ಇಂದು …

Read More »

ಉಮೇಶ ಕತ್ತಿ ಸೇರಿ ಏಳು ಜನರಿಗೆ ಸಚಿವ ಭಾಗ್ಯ

ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ನೂತನ ಸಚಿವರ ಪಟ್ಟಿ ರಾಜಭವನ ತಲುಪಿದ್ದು, ಕತ್ತಿ ಅವರೊಂದಿಗೆ ಎಂಟಿಬಿ ನಾಗರಾಜ್, ಆರ್.ಶಂಕರ್, ಅರವಿಂದ ಲಿಂಬಾವಳಿ, ಎಸ್.ಅಂಗಾರ, ಮುರುಗೇಶ ನಿರಾಣಿ, ಸಿ.ಪಿ.ಯೋಗೇಶ್ವರ ಸಚಿವರಾಗುತ್ತಿದ್ದಾರೆ‌. ಇನ್ನೂ ಒಂದೆರಡು ಬದಲಾವಣೆ ನಿರೀಕ್ಷಿಸಲಾಗಿದೆ. ಬಿಜೆಪಿ ಸರ್ಕಾರದಲ್ಲಿ ನೂತನವಾಗಿ ಸಂಪುಟ ಸೇರುವ ಸಚಿವರ ಮಾಹಿತಿ. 1- ಉಮೇಶ ಕತ್ತಿ 2- ಎಂಟಿಬಿ ನಾಗರಾಜ 3- ಆರ್.ಶಂಕರ 4- ಎಸ್.ಅಂಗಾರ 5- …

Read More »

ಯಡಿಯೂರಪ್ಪರನ್ನು ಕೆಳಗಿಳಿಸುವುದು ಹಗಲುಗನಸು, ಸಿದ್ದರಾಮಯ್ಯಗೆ ಮತಿ ಭ್ರಮಣೆ; ಶ್ರೀರಾಮುಲು ಕಿಡಿ

ಚಿತ್ರದುರ್ಗ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಯೂರಪ್ಪರನ್ನ ಬದಲಾವಣೆ ಮಾಡುತ್ತಾರೆ ಎಂದು ಹೇಳುವ ಮಾಜಿ ಸಿಎಂ ಸಿದ್ದರಾಮಯ್ಯ ಮೊದಲು ಅವರ ಕಾಂಗ್ರೇಸ್ ನಲ್ಲಿ ಮೂರು ಭಾಗ ಆಗಿದೆ. ಆ ಮನೆಯನ್ನ ಸರಿ ಮಾಡಿಕೊಳ್ಳಲಿ ಎಂದು ಚಿತ್ರದುರ್ಗ ದಲ್ಲಿ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ತಿರುಗೇಟು ನೀಡಿದ್ದಾರೆ. ನಗರದದಲ್ಲಿ ನಡೆದ ಜನಸೇವಕ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಚಿವ ಬಿ.ಶ್ರೀರಾಮುಲು, ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿ, “ಮಾಜಿ ಸಿಎಂ ಸಿದ್ದರಾಮಯ್ಯ ಯಡಿಯೂರಪ್ಪ ಸಿಎಂ …

Read More »

ಜನವರಿ 14ಕ್ಕೆ ಎಸ್‌ಎಸ್‌ಎಲ್’ಸಿ ಪರೀಕ್ಷೆ ಪಠ್ಯಕ್ರಮ ಪ್ರಕಟ: ಸಚಿವ ಸುರೇಶ್ ಕುಮಾರ್

ಬೆಂಗಳೂರು: ಜನವರಿ 14 ರಂದು ಎಸ್‌ಎಸ್‌ಎಲ್’ಸಿ ಪರೀಕ್ಷೆ ಪಠ್ಯಕ್ರಮವನ್ನು ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಂಗಳವಾರ ಹೇಳಿದ್ದಾರೆ. ಚಾಮರಾಜನಗರ ತಾಲೂಕಿನ ನಲೂರು ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ವಿವಿಧ ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಈಗಾಗಲೇ ಪಠ್ಯ ನಿರ್ಧಾರವಾಗಿದ್ದು, ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ಶಾಲೆಗಳಿಗೆ ಭೇಟಿ ನೀಡಿದಾಗ ವಿದ್ಯಾರ್ಥಿಗಳಿಗೆ ಧೈರ್ಯ ಹೇಳುತ್ತಿದ್ದೇನೆ. ಗುರುವಾರ ಎಸ್‌ಎಸ್‌ಎಲ್’ಸಿ ಪರೀಕ್ಷೆಯ ಪಠ್ಯಕ್ರಮವನ್ನು ಪ್ರಕಟಿಸಲಾಗುತ್ತದೆ …

Read More »

ಸೆನ್ಸೆಕ್ಸ್, ನಿಫ್ಟಿ ಹೊಸ ಎತ್ತರದಲ್ಲಿ ದಿನದ ವಹಿವಾಟು ಅಂತ್ಯ

ಮುಂಬೈ: ಮುಂಬೈ ಷೇರು ವಿನಿಮಯ ಕೇಂದ್ರ(ಬಿಎಸ್‌ಇ) ಮತ್ತು ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ(ಎನ್‌ಎಸ್‌ಇ)ಗಳ ಸಂವೇದಿ ಸೂಚ್ಯಂಕಗಳು ಸತತ ಮೂರನೇ ವಹಿವಾಟು ದಿನವಾದ ಮಂಗಳವಾರವೂ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿವೆ. ಸೆನ್ಸೆಕ್ಸ್ 248 ಅಂಕ ಏರಿಕೆ ಕಂಡು ದಾಖಲೆಯ ಗರಿಷ್ಠ 49,517 ಕ್ಕೆ ತಲುಪಿದ್ದರೆ, ನಿಫ್ಟಿ 79 ಅಂಕ ಏರಿಕೆ ಕಂಡು 14,563 ಕ್ಕೆ ತಲುಪಿದೆ. ಆರಂಭಿಕ ವಹಿವಾಟಿನಲ್ಲಿ ಸೂಚ್ಯಂಕಗಳು ಇಳಿಕೆ ಕಂಡರೂ ನಂತರ ಬ್ಯಾಂಕಿಂಗ್ ಷೇರುಗಳ ಖರೀದಿ …

Read More »

ಮಹಾ’ ಸಚಿವನಿಂದ ಅತ್ಯಾಚಾರ; ಪೊಲೀಸರಿಗೆ ದೂರು ನೀಡಿದ ಗಾಯಕಿ!

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸಚಿವ ಸಂಪುಟದಲ್ಲಿ ಕಂಪನ ಶುರುವಾಗಿದೆ. ರಾಜ್ಯ ಸಚಿವ ಧನುಂಜಯ ಮುಂಡೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಗಾಯಕಿ ರೇಣು ಶರ್ಮಾ ಪೊಲೀಸರಿಗೆ ದೂರು ನೀಡಿದ್ದಾರೆ. ಸಚಿವರು ತಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತ ಪರಂ ಭೀರ್ ಸಿಂಗ್ ಅವರಿಗೆ ಬರೆದಿರುವ ಪತ್ರದಲ್ಲಿ ದೂರಿದ್ದಾರೆ. ಸಚಿವ ಧನುಂಜಯ ಮುಂಡೆ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ. ಆದರೆ, …

Read More »