Breaking News

ಅಪಘಾತ ಸ್ಥಳ ಹಾಗೂ ಶಾಸಕ ಶಿವರಾಮ್​ ಹೆಬ್ಬಾರ್​ ಮತ್ತು ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್

ಕಾರವಾರ: “ಹಣ್ಣು ಮತ್ತು ತರಕಾರಿ ತುಂಬಿಕೊಂಡು ವ್ಯಾಪಾರಸ್ಥರೊಂದಿಗೆ ತೆರಳುತ್ತಿದ್ದ ಲಾರಿ ಇಂದು ಮುಂಜಾನೆ ಕಂದಕಕ್ಕೆ ಬಿದ್ದು 10 ಮಂದಿ ಸಾವನ್ನಪ್ಪಿದ್ದರೆ, ಹಲವು ಮಂದಿ ಗಾಯಗೊಂಡಿದ್ದಾರೆ. ಲಾರಿ ಬಿದ್ದಿರುವ ಸ್ಥಳ ಸಾಮಾನ್ಯವಾಗಿ ಯಾರಿಗೂ ಕಾಣುವುದಿಲ್ಲ. ಆದರೆ, ಈ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಾರಿ ಅಡಿ ಸಿಲುಕಿದ್ದವರನ್ನು ಹೊರ ತೆಗೆದು ಗಂಭೀರ ಗಾಯಗೊಂಡಿದ್ದವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಜೀವ ಕಾಪಾಡಿದ್ದಾರೆ” ಎಂದು ಪಶ್ಚಿಮ ವಲಯ ಐಜಿಪಿ ಅಮಿತ್ …

Read More »

ಯಲ್ಲಾಪುರ ಭೀಕರ ಅಪಘಾತ:ಹತ್ತೂ ಮೃತರದ್ದು ಒಂದೊಂದು ಕಥೆ.

ಹಾವೇರಿ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ಹಾವೇರಿ ಜಿಲ್ಲೆಯ ಸವಣೂರಿನವರು. ಅಪಘಾತದಲ್ಲಿ ಮೃತಪಟ್ಟ ಹತ್ತೂ ಮಂದಿಯದ್ದು ಒಂದೊಂದು ಕಥೆ. ಒಬ್ಬ ಮನೆಗೆ ಆಧಾರವಾಗಿದ್ದ, ಇನ್ನೊಬ್ಬ ತಂದೆಗೆ ಆಸರೆಯಾಗಲು ಎದೆ ಎತ್ತರಕ್ಕೆ ಬೆಳೆದು ನಿಂತಿದ್ದ, ಅದೆಷ್ಟೋ ಕನಸು ಕಂಡಿದ್ದ ಮನೆ ಮಕ್ಕಳು ವಿಧಿಯ ಕ್ರೂರ ಲೀಲೆಗೆ ಬಲಿಯಾಗಿದ್ದಾರೆ. ಸವಣೂರಿನಲ್ಲಿ ದುಃಖ ಮಡುಗಟ್ಟಿದೆ. ಹೌದು, ಅಪಘಾತದಿಂದ ಪ್ರಾಣ ಕಳೆದುಕೊಂಡ ಒಬ್ಬರ ಪತ್ನಿ ಗರ್ಭಿಣಿ, ಮತ್ತೊರ್ವನ ಮದುವೆಯಾಗಿ ಕೇವಲ …

Read More »

ಬೆಳಗಾವಿಯಲ್ಲಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ವಿರೋಧಿಸಿ ಕರಾಳ ದಿನ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಮಹಾರಾಷ್ಟ್ರ ಏಕೀಕರಣ ಸಮಿತಿಗೆ (ಎಂಇಎಸ್) ಹೈಕೋರ್ಟ್ ಸೂಚನೆ

ಬೆಂಗಳೂರು: ಬೆಳಗಾವಿಯಲ್ಲಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ವಿರೋಧಿಸಿ ಕರಾಳ ದಿನ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಮಹಾರಾಷ್ಟ್ರ ಏಕೀಕರಣ ಸಮಿತಿಗೆ (ಎಂಇಎಸ್) ಹೈಕೋರ್ಟ್ ಸೂಚನೆ ನೀಡಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಮಲ್ಲಪ್ಪ ಚಾಯಪ್ಪ ಅಕ್ಷರದ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿತು. ವಿಚಾರಣೆ ವೇಳೆ …

Read More »

ಹೈವೇ ಅಪಘಾತದಲ್ಲಿ ಇಬ್ಬರು ಯುವಕರ ದುರ್ಮರಣ: ಕೆರೆಯಲ್ಲಿ ಮುಳುಗಿ ಬಾಲಕ ಸಾವು

ಬೆಳಗಾವಿ: ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ನಿನ್ನೆ ತಡರಾತ್ರಿ ಬೆಳಗಾವಿ ತಾಲೂಕಿನ ಮುತ್ಯಾನಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದ ಛತ್ರಪತಿ ಶಿವಾಜಿ ಗಲ್ಲಿಯ ಸಕ್ಷಮ್ ಪಾಟೀಲ್ (20) ಮತ್ತು ಸಿದ್ದಾರ್ಥ ಪಾಟೀಲ್ (23) ಮೃತರು. ಇಬ್ಬರೂ ಬೈಕ್ ಮೇಲೆ ಕಾಕತಿಯ ಶ್ರೀ ಸಿದ್ದೇಶ್ವರ ದೇವಸ್ಥಾನಕ್ಕೆ ಹೊರಟಿದ್ದರು. ಈ ವೇಳೆ, ಹಿಂದಿನಿಂದ ಬಂದ ಅಪರಿಚಿತ ವಾಹನ ಇವರ ಬೈಕಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ …

Read More »

ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ

ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸ್ಮರಣಾರ್ಥವಾಗಿ, ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು ರಾಷ್ಟ್ರಪಿತ ಗಾಂಧಿಯವರ ಪ್ರತಿಮೆಯನ್ನು ಎಐಸಿಸಿ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ ಮತ್ತು ಶ್ರೀಮತಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅನಾವರಣಗೊಳಿಸಿದರು. ಈ ವೇಳೆ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಶ್ರೀ ಡಿ.ಕೆ.ಶಿವಕುಮಾರ್, ಸಭಾಧ್ಯಕ್ಷರಾದ ಶ್ರೀ ಯು.ಟಿ.ಖಾದರ್, ಸಭಾಪತಿಗಳಾದ ಶ್ರೀ ಬಸವರಾಜ್ ಹೊರಟ್ಟಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಣದೀಪಸಿಂಗ್ …

Read More »

ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

ಮಂಗಳೂರು: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ‌ ಬಂಧಿತನಾಗಿದ್ದ ಮೂವರು ಆರೋಪಿಗಳಲ್ಲಿ ಒಬ್ಬ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು, ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಮುಂಬೈನ ಚೆಂಬೂರಿನ ಕಣ್ಣನ್ ಮಣಿ (36) ಗುಂಡೇಟು ತಗುಲಿದ ಆರೋಪಿ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಜ.17 ರಂದು ಉಳ್ಳಾಲದ ಕೆ.ಸಿ. ರೋಡ್​ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್​ನಲ್ಲಿ ಪಿಸ್ತೂಲ್ ತೋರಿಸಿ ಕೋಟ್ಯಂತರ ಮೌಲ್ಯದ ಚಿನ್ನಾಭರಣ, ನಗದು ದರೋಡೆ ಮಾಡಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿನಲ್ಲಿರುವ …

Read More »

ನೇಮಕಗೊಂಡ ಗ್ರಾಮ ಆಡಳಿತ ಅಧಿಕಾರಿಗಳು ಕೂಡಲೇ ಅವರ ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿ ಆದೇಶ ಹೊರಡಿಸಿದೆ.

ಬೆಂಗಳೂರು : ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳನ್ನು ಅವರು ನೇಮಕಗೊಂಡ ಮೂಲ ಹುದ್ದೆಯಲ್ಲಿಯೇ ಕರ್ತವ್ಯಕ್ಕೆ ನಿಯೋಜಿಸುವಂತೆ ಸರ್ಕಾರದಿಂದ ಈಗಾಗಲೇ ಹಲವಾರು ಬಾರಿ ನಿರ್ದೇಶನ/ಸೂಚನೆಗಳನ್ನು ನೀಡಲಾಗಿದ್ದರೂ ಸಹ ಗ್ರಾಮ ಆಡಳಿತ ಅಧಿಕಾರಿಗಳು ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸದೇ ನಿಯೋಜನೆ/ಅನ್ಯ ಕರ್ತವ್ಯದ ಆಧಾರದ ಮೇಲೆ ಪ್ರಾದೇಶಿಕ ಆಯುಕ್ತರ/ಜಿಲ್ಲಾಧಿಕಾರಿಗಳ/ ಉಪವಿಭಾಗಾಧಿಕಾರಿ/ತಹಶೀಲ್ದಾರ್ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಕಂದಾಯ ಇಲಾಖೆಯ ಕಾರ್ಯ ಸ್ವರೂಪವನ್ನು ಸರಳೀಕರಣಗೊಳಿಸಿ ಡಿಜಿಟಲೀಕರಣ ಮಾಡುವ …

Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಅತೀಕ್ ಅಹಮದ್ ಎಂಬಾತನನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ.

ಬೆಂಗಳೂರು : ಬಿಜೆಪಿ ಯುವ ಮೋರ್ಚಾದ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿತನನ್ನ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ. ಅತೀಕ್ ಅಹಮದ್ ಬಂಧಿತ ಆರೋಪಿ. ಪ್ರವೀಣ್ ಹತ್ಯೆ ಹಿಂದಿನ ಮುಖ್ಯ ಸಂಚುಕೋರ ಎಂದು ಗುರುತಿಸಲಾದ ಮುಸ್ತಫಾ ಪೈಚಾರ್‌ಗೆ ಆಶ್ರಯ ನೀಡಿದ್ದ ಅತೀಕ್ ಅಹಮದ್‌ನನ್ನ ಪ್ರಕರಣದಲ್ಲಿ 21ನೇ ಆರೋಪಿ ಎಂದು ಗುರುತಿಸಲಾಗಿತ್ತು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ನಾಯಕತ್ವದ ಅಡಿ ಕೆಲಸ ಮಾಡಿದ್ದ ಅತೀಕ್‌ ಅಹಮದ್, ಹತ್ಯೆ …

Read More »

ದಂಪತಿ ಮನೆ ತೊರೆದ ವಿಚಾರ ತಿಳಿದು ಅವರ ಮನೆಗೆ ನುಗ್ಗಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಖದೀಮನೊಬ್ಬನನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ಹೆಂಡತಿಯೊಂದಿಗೆ ಜಗಳವಾಡಿಕೊಂಡು ಊರಿಗೆ ಹೋಗಿದ್ದ ವ್ಯಕ್ತಿಯ ಮನೆ ದೋಚಿದ್ದ ಕಳ್ಳನನ್ನ ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಟೋ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ತಮಿಳುನಾಡಿನ ವೆಲ್ಲೂರು ಮೂಲದ ಸತೀಶ್ ಬಂಧಿತ ಆರೋಪಿ. ಆರೋಪಿ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಸುಮಾರು 16.50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ದಂಪತಿ ಮನೆ ತೊರೆದಾಗ ಕಳ್ಳನ ಕೈಚಳಕ: ಅಕ್ಕಸಾಲಿಗರಾಗಿದ್ದ ಮನೆ ಮಾಲೀಕ ಮನೆಯಲ್ಲಿ ಚಿನ್ನಾಭರಣಗಳ …

Read More »

ಡಿಕೆ ಶಿವಕುಮಾರ್​ಗೆ ಸಿಎಂ ಆಗುವಂತೆ ಆಶೀರ್ವದಿಸಿದ ಗುಣಧರನಂದಿ ಮಹಾರಾಜರು

ಹುಬ್ಬಳ್ಳಿ: ”ನಾನು ಮುಖ್ಯಮಂತ್ರಿ ಆಗಲಿ ಎಂದು ಗುಣಧರನಂದಿ ಮಹಾರಾಜರು ಆಶೀರ್ವಾದ ಮಾಡಿದ್ದಾರೆ. ನೀವು ಆಶೀರ್ವಾದ ಮಾಡಿದಾಗಲೆಲ್ಲಾ ನಮಗೆ ಏಟು ಹೊಡಿತಾ ಇರ್ತಾರೆ” ಎಂದು ಉಪಮುಖ್ಯಮಂತ್ರಿ ಡಿ‌ಕೆ ಶಿವಕುಮಾರ್ ಮಾರ್ಮಿಕವಾಗಿ ನುಡಿದರು. ವರೂರು ನವಗ್ರಹ ‌ತೀರ್ಥಕ್ಷೇತ್ರದ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ”ವಿನಯ್ ಗುರೂಜಿ ಅವರು ಈ ಮಾತನ್ನು ಹೇಳಿದ್ದರು. ಈಗ ಗುಣಧರನಂದಿ ಮಹಾರಾಜರು ಆಶೀರ್ವಾದ ಮಾಡಿದ್ದಾರೆ. ಆದರೆ, ನೀವು ಆಶೀರ್ವಾದ ಮಾಡಿದಾಗಲೆಲ್ಲಾ ನಮಗೆ ಏಟು ಹೊಡಿತಾ ಇರ್ತಾರೆ” ಎಂದು …

Read More »