Breaking News

ಡಿಕೆಶಿ ತಾಯಿ ಗೌರಮ್ಮ ದೆಹಲಿಗೆ ಬರುವ ಅವಶ್ಯಕತೆ ಇಲ್ಲ. ನಾವೇ ಬೆಂಗಳೂರಿಗೆ ಹೋಗಿ ವಿಚಾರಣೆ ನಡೆಸುತ್ತೇವೆ

ದೆಹಲಿ: ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಡಿಕೆಶಿ ತಾಯಿ ಗೌರಮ್ಮ ವಾಪಸ್ ಪಡೆದಿದ್ದಾರೆ. ವೃದ್ಧರಾದ ಕಾರಣ ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಗೌರಮ್ಮ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಇಂದು ದೆಹಲಿಯ ಹೈಕೋರ್ಟ್​ನಲ್ಲಿ ವಿಚಾರಣೆ ಇತ್ತು. ವಿಚಾರಣೆ ಆರಂಭವಾಗುತ್ತಿದ್ದಂತೆ ಗೌರಮ್ಮ ಅರ್ಜಿ ವಾಪಸ್ ಪಡೆದಿದ್ದಾರೆ. ವೃದ್ಧರಾದ ಕಾರಣ ಡಿಕೆಶಿ ತಾಯಿ ಗೌರಮ್ಮ ದೆಹಲಿಗೆ ಬರುವ …

Read More »

ಮತ್ತೆ ಅನುಶ್ರೀಗೆ ಬುಲಾವ್?​ ಅನುಶ್ರೀ ಫೋನ್​ ಕರೆಯಿಂದಾಗಿ ಈಗ ರಾಜ್ಯದ ಘಟಾನುಘಟಿ ನಾಯಕರು ಅಕ್ಷರಶ: ಸಂಕಷ್ಟಕ್ಕೆ

ಡ್ರಗ್ಸ್ ಕೇಸ್​ನಲ್ಲಿ ತಗ್ಲಾಕ್ಕೊಂಡಿರೋ ಆ್ಯಂಕರ್​ ಅನುಶ್ರೀ ಫೋನ್​ ಕರೆಯಿಂದಾಗಿ ಈಗ ರಾಜ್ಯದ ಘಟಾನುಘಟಿ ನಾಯಕರು ಅಕ್ಷರಶ: ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಾಜಿ ಸಿಎಂ ಸೇರಿದಂತೆ ಪ್ರಭಾವಿಗಳು ಬಚಾವ್ ಆಗೋಕೆ ಈಗ ಪೊಲೀಸರ ಮೇಲೆಯೇ ಒತ್ತಡ ಹೇರ್ತಿದ್ದಾರಂತೆ. ಅನುಶ್ರೀ ಕಾಲ್ ರೆಕಾರ್ಡ್​ನ್ನ ನಾಶಗೊಳಿಸೋಕೆ ಪ್ರಭಾವಿಗಳು ಯತ್ನಿಸ್ತಿದ್ದು, ಪೊಲೀಸರು ಹೈರಾಣಾಗಿ ಹೋಗಿದ್ದಾರೆ ಎನ್ನಲಾಗಿದೆ. ಮಾಜಿ ಸಿಎಂ ಸೇರಿದಂತೆ ರಾಜ್ಯದ ಘಟಾನುಘಟಿ ನಾಯಕರಿಗೆ ಆ್ಯಂಕರ್ ಅನುಶ್ರೀ ಮಾಡಿರೋ ಫೋನ್​ ಕಾಲ್​ ವಿಚಾರ ಈಗ ರಾಜ್ಯದ ಹಾಟೆಸ್ಟ್ …

Read More »

ಈ ಬಿರುಕಿಗೆ ಕಾರಣವಾದ ಸಂಗತಿಯನ್ನು ಪ್ರಸ್ತಾಪಿಸಿದ್ದಾರೆ. K ಕಲ್ಯಾಣ್

ಬೆಳಗಾವಿ: K ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ವಿಚಾರವಾಗಿ ಖುದ್ದು ಚಿತ್ರಸಾಹಿತಿಯೇ ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಈ ಬಿರುಕಿಗೆ ಕಾರಣವಾದ ಸಂಗತಿಯನ್ನು ಪ್ರಸ್ತಾಪಿಸಿದ್ದಾರೆ. ನಾನು, ನನ್ನ ಪತ್ನಿ ಇಬ್ಬರೂ ಚೆನ್ನಾಗಿ ಇದ್ದೇವೆ. ನಮ್ಮಿಬ್ಬರ ನಡುವೆ ಯಾವುದೇ ರೀತಿಯ ಗೊಂದಲವಿಲ್ಲ ಎಂದು ತಮ್ಮ ಕುಟುಂಬದ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ನಮಗೆ ಮದುವೆಯಾಗಿ 14 ವರ್ಷ ಪೂರ್ತಿಯಾಗಿದೆ.ನಮ್ಮ ಕುಟುಂಬದಲ್ಲೂ ಸಣ್ಣಪುಟ್ಟ ಸಮಸ್ಯೆಗಳು ಇವೆ. ನಮ್ಮ ಮನೆಗೆ ಗಂಗಾ ಕುಲಕರ್ಣಿ ಎಂಬ …

Read More »

ವಿಷ್ಣು ಅಭಿಮಾನಿ ಮೃತದೇಹ ಸಾಗಿಸುವುದಕ್ಕೂ ಲಂಚ ಕೇಳಿದ ಆಸ್ಪತ್ರೆಯ ಸಿಬ್ಬಂದಿ’

ದಾವಣಗೆರೆ: ಕೋವಿಡ್ ಹಾಗೂ ನಾನ್ ಕೋವಿಡ್ ವ್ಯಕ್ತಿಗಳು ಆಸ್ಪತ್ರೆಯಲ್ಲಿ ಮೃತರಾದರೆ, ಅವರ ಮೃತದೇಹವನ್ನು ನೀಡಲು ಸಂಬಂಧಿಕರಿಂದ ಹಣದ ಬೇಡಿಕೆ ಇಟ್ಟಿರುವ ಘಟನೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಮೃತದೇಹವನ್ನು ನೀಡಲು ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳು ಹಾಗೂ ಕೆಲವು ಖಾಸಗಿ ವ್ಯಕ್ತಿಗಳು, ಕುಟುಂಬಸ್ಥರಿಗೆ ಹಣದ ಬೇಡಿಕೆ ಇಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜೊತೆಗೆ ನಾನ್ ಕೋವಿಡ್ ರೋಗಿಗಳು ಆಸ್ಪತ್ರೆಯಲ್ಲಿ ಮೃತರಾದರೆ ಅಥವಾ ಮನೆಯಲ್ಲಿ ಮೃತರಾದರೆ ಅವರ ಮೃತದೇಹವನ್ನು ಮನೆಯಿಂದ ಆಸ್ಪತ್ರೆಯ ಶವಾಗಾರಕ್ಕೆ ಹಾಗೂ ಶವಗಾರದಿಂದ …

Read More »

ಸಿಬಿಐ ದಾಳಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ಡಿಕೆಶಿಗೆ ಸಮನ್ಸ್‌

ಬೆಂಗಳೂರು: ಡಿಕೆ ಶಿವಕುಮಾರ್ ನಿವಾಸ ಸೇರಿದಂತೆ ಹಲವೆಡೆ ಸಿಬಿಐ ದಾಳಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ಡಿಕೆಶಿಗೆ ಸಮನ್ಸ್‌ ಜಾರಿಯಾಗಿದೆ. ನಿನ್ನೆ ದಾಳಿ ಮುಕ್ತಾಯ ಬಳಿಕ ಅಧಿಕಾರಿಗಳು ಸಮನ್ಸ್‌ ನೀಡಿದ್ದರು. ಇನ್ನೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಡಿಕೆ‌ ಮನೆ ಮೇಲೆ ದಾಳಿ ನಡೆಸಿದ ವೇಳೆ 57 ಲಕ್ಷ ಹಣ ಹಾಗೂ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಈ ಬಗ್ಗೆ ಸ್ಪಷ್ಟನೆ ಕೇಳಲು ಸಮನ್ಸ್ ನೀಡಿದ್ದಾರೆ. ಹೀಗಾಗಿ …

Read More »

ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ವಿಚಾರವನ್ನು ಸಚುವರು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ಕೋವಿಡ್ 19 ಧೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ. ಯಾವುದೇ ಲಕ್ಷಣವಿಲ್ಲದಿರುವುದರಿಂದ ಯಾವುದೇ ರೀತಿ ಆತಂಕ ವಿಲ್ಲ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ. ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ,ರಾಜ್ಯಪಾಲರಿಂದ ಗೌರವ ಡಾಕ್ಟರೇಟ್ ಪ್ರದಾನ

ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ ಸಮಾರಂಭದಲ್ಲಿ ಘನತೆವೆತ್ತ ರಾಜ್ಯಪಾಲರಾದ  ವಾಜುಭಾಯ್  ರೂಡಾಭಾಯ್ ವಾಲಾರವರು ರ್ಯಾಂಕ್ ವಿಜೇತರಿಗೆ ಸುವರ್ಣ ಪದಕಗಳು, 79 ಜನರಿಗೆ ಪಿಎಚ್.ಡಿ ಮತ್ತು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಸುವರ್ಣ ವಿಧಾನಸೌಧದ ಆಡಿಟೋರಿಯಂ ಸಭಾಂಗಣದಲ್ಲಿ ಸೋಮವಾರ (ಅ.5) ಜರುಗಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದ ಸಮಾರಂಭದಲ್ಲಿ ಸುವರ್ಣ ಪದಕಗಳು ಮತ್ತು ಪದವಿಗಳನ್ನು ಪ್ರದಾನ ಮಾಡಲಾಯಿತು. ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಆನ್ …

Read More »

ಕಾರಿನ ಟಯರ್ ಬ್ಲಾಸ್ಟ್ ಆದ ಪರಿಣಾಮ ಕಾರು ಡಿವೈಡರ್ ಮೇಲೆ ಹತ್ತಿರುವ ಘಟನೆ

ಬೆಂಗಳೂರು: ಕಾರಿನ ಟಯರ್ ಬ್ಲಾಸ್ಟ್ ಆದ ಪರಿಣಾಮ ಕಾರು ಡಿವೈಡರ್ ಮೇಲೆ ಹತ್ತಿರುವ ಘಟನೆ ಬೆಂಗಳೂರಿನಲ್ಲಿ ತಡರಾತ್ರಿ ನಡೆದಿದೆ. ಮೇಕ್ರಿ ಸರ್ಕಲ್ ಅಂಡರ್ ಪಾಸ್ ಬಳಿ ಈ ಘಟನೆ ನಡೆದಿದ್ದು, ಅವಘಡ ತಪ್ಪಿದಂತಾಗಿದೆ. ಹೊಸ ಕಾರನ್ನು ಓಡಿಸುತ್ತಿದ್ದ ವೇಳೆ ಅಂಡರ್ ಪಾಸ್‍ನಲ್ಲಿ ಇದ್ದಕ್ಕಿದ್ದಂತೆ ಕಾರಿನ ಟಯರ್ ಬ್ಲಾಸ್ಟ್ ಆಗಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಮೇಲೆ ಹತ್ತಿದೆ.ಈ ಅವಘಡದಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಾಹಿತಿ …

Read More »

ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಸಿಬಿಐ ದಾಳಿಗೆ ಕಾರಣ: ಡಿಕೆ ಬ್ರದರ್ಸ್

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಸಿಬಿಐ ದಾಳಿಗೆ ಕಾರಣ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇರ ಆರೋಪ ಮಾಡಿದ್ದಾರೆ. ಅಲ್ಲದೆ 14 ಕಡೆ 140 ಜನರಿಗೆ ತೊಂದರೆ ಕೊಡಲಾಗ್ತಿದೆ. ನಾವು ಯಾವುದಕ್ಕೂ ಜಗ್ಗಲ್ಲ ಅಂತ ಡಿಕೆ ಬ್ರದರ್ಸ್ ಗುಡುಗಿದ್ದಾರೆ. ಸಿಬಿಐ ದಾಳಿ ಬಗ್ಗೆ ಡಿಕೆ ಬ್ರದರ್ಸ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಸಿಬಿಐಗೆ ಅನುಮತಿ ಕೊಡೋದು ಬೇಡ. ಇದರ ಬಗ್ಗೆ ಐಟಿ, ಸಿಐಡಿ ತನಿಖೆ ನಡೆಸಬಹುದು ಅಂತ …

Read More »

ಬೆಂಗಳೂರು ವಿರುದ್ಧ 59 ರನ್ ಗಳ ಗೆಲುವು ಪಡೆದ ಡೆಲ್ಲಿ ಕ್ಯಾಪಿಟಲ್ಸ್

ದುಬೈ: ಐಪಿಎಲ್ 2020ರ ಆವೃತ್ತಿಯಲ್ಲಿ ಬೆಂಗಳೂರು ವಿರುದ್ಧ 59 ರನ್ ಗಳ ಗೆಲುವು ಪಡೆದ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ಅಂಕಗಳೊಂದಿಗೆ ಪಟ್ಟಿಯಲ್ಲಿ ನಂ.1 ಪಟ್ಟಕ್ಕೇರಿದೆ. ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 197 ರನ್ ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಆರ್.ಸಿ.ಬಿ ತಂಡದ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಲಷ್ಟೇ ಶಕ್ತವಾಯಿತು. ಐಪಿಎಲ್‍ನಲ್ಲಿ ಟೂರ್ನಿಯ ಪಂದ್ಯದಲ್ಲಿ 190 ಪ್ಲಸ್ ರನ್ ಗಳಿಸಿದ ಯಾವುದೇ ಪಂದ್ಯವನ್ನು …

Read More »