ಬೆಂಗಳೂರು: ಕೋವಿಡ್ 19 ಬಂದ ನಂತರ ಚಿತ್ರೋದ್ಯಮಕ್ಕೆ ಬಲವಾದ ಪೆಟ್ಟು ಬಿದ್ದಿದೆ. ನಿಧಾನವಾಗಿ ಸ್ಥಗಿತಗೊಂಡಿದ್ದ ಆರ್ಥಿಕ ಚಟುವಟಿಕೆಗಳು ಆರಂಭಗೊಂಡಿದ್ದರೂ ಚಲನ ಚಿತ್ರ ಮಂದಿರಕ್ಕೆ ಜನ ಬರುತ್ತಿಲ್ಲ. ಈ ನಿಟ್ಟಿನಲ್ಲಿ ಮುಂದೆ ಚಿತ್ರಗಳನ್ನು ಮಂದಿರಗಳಲ್ಲಿ ರಿಲೀಸ್ ಮಾಡಬೇಕೇ? ಬೇಡವೇ ಎಂಬುದರ ಬಗ್ಗೆ ಚರ್ಚೆ ನಡೆಸಲು ಸ್ಯಾಂಡಲ್‌ವುಡ್ ಚಿತ್ರ ನಿರ್ಮಾಪಕರು ಇಂದು ಸಭೆ ನಡೆಸಿದ್ದಾರೆ. ಕೊರೊನಾದಿಂದಾಗಿ ಬಿಡುಗಡೆಯಾಗಬೇಕಿದ್ದ ಬಿಗ್ ಬಜೆಟ್ ಸಿನಿಮಾಗಳು ಈ ವರ್ಷಕ್ಕೆ ಮುಂದೂಡಿಕೆಯಾಗಿವೆ. ಈ ನಡುವೆ ಸಿನಿಮಾ ಮಂದಿರಗಳಲ್ಲಿ ಶೇ.50 …
Read More »ಆದಿಚುಂಚನಗಿರಿಯಲ್ಲಿ ಮಹಾಸಂಸ್ಥಾನ ಮಠದಿಂದ ಆಯೋಜಿಸಲಾಗಿದ್ದ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣ ಸಂತ ಸಮಾವೇಶ
ಮಂಡ್ಯ: ಆದಿಚುಂಚನಗಿರಿಯಲ್ಲಿ ಮಹಾಸಂಸ್ಥಾನ ಮಠದಿಂದ ಆಯೋಜಿಸಲಾಗಿದ್ದ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣ ಸಂತ ಸಮಾವೇಶ ನಡೆಸಲಾಯಿತು. ವಿವಿಧ ಮಠಾಧೀಶರು ನಿಧಿ ಸಂಗ್ರಹಿಸುವ ಬಗ್ಗೆ ಚರ್ಚೆ ನಡೆಸಿದರು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಪೇಜಾವರ ಮಠದ ಶ್ರೀ ಪೇಜಾವರ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಬೇಲಿ ಮಠದ ಶ್ರೀ ಶಿವರುದ್ರ ಸ್ವಾಮೀಜಿ ಭಾಗವಹಿಸಿ ನಿಧಿ ಸಂಗ್ರಹದ ಬಗ್ಗೆ ಪರಸ್ಪರ ಚರ್ಚೆ ನಡೆಸಿದರು. ಈ ವೇಳೆ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ನಮ್ಮ …
Read More »ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಹಾಗೂ ಜೂನ್ ಮೊದಲ ವಾರದಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ
ಬೆಂಗಳೂರು: ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಹಾಗೂ ಜೂನ್ ಮೊದಲ ವಾರದಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ ಎಂದು ಸುರೇಶ್ ಕುಮಾರ್ ತಿಳಿಸಿದರು. ಈ ಕುರಿತು ಮಾತನಾಡಿದ ಅವರು, ಶಿಕ್ಷಣ ಇಲಾಖೆಯು ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರುತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಟ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ವಿವರಿಸಿದರು. 1 ರಿಂದ …
Read More »ಕಿಚ್ಚ ಸುದೀಪ್ಪತ್ನಿ ಪ್ರಿಯಾ ಅವರ ಹುಟ್ಟುಹಬ್ಬಅವರ ಹುಟ್ಟುಹಬ್ಬಕ್ಕೆ ಸ್ಪೆಷಲ್ ವಿಶ್
ಬೆಂಗಳೂರು: ಕಿಚ್ಚ ಸುದೀಪ್ ಪತ್ನಿ ಪ್ರಿಯಾ ಅವರ ಹುಟ್ಟುಹಬ್ಬವಾಗಿದ್ದು, ಕಿಚ್ಚ ಸುದೀಪ್ ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ಲ್ಲಿ ಹೇಇನ್‍ಸ್ಟಾಗ್ರಾಮ್‍ನಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಭಾವನಾತ್ಮಕವಾಗಿ ಶುಭ ಕೋರಿದ್ದಾರೆ. ಕವಿ ನಾನಲ್ಲ, ಕವಿತೆಯಂತೂ ನನಗೆ ಗೊತ್ತಿಲ್ಲ. ಕೆಲ ಸಿಂಪಲ್ ವರ್ಡ್ಸ್ ನಳ್ತೀನಿ ಅದರ್ ಮೇಲ್ ನಂಗ್ ಗೊತ್ತಿಲ್ಲ ಎಂದು ಒಂದೇ ಸಾಲಿನ ಕವಿತೆ ಹೇಳಿ. ಬಳಿಕ ಮಡದಿಯೋ, ಗೆಳತಿಯೋ ಏನೆಂದು ಕರೆಯಲಿ ನಿನ್ನ ಎಂದು ಭಾವನಾತ್ಮಕವಾಗಿ ಹೇಳುವ ಮೂಲಕ ಅವರ ಹುಟ್ಟುಹಬ್ಬಕ್ಕೆ ಸ್ಪೆಷಲ್ …
Read More »ಸಿದ್ದರಾಮಯ್ಯ, ಕುಮಾರಸ್ವಾಮಿ ಕರ್ನಾಟಕದ ಬಫೂನ್‍ಗಳು – ಮತ್ತೆ ಕುಟುಕಿದ ಹಳ್ಳಿ ಹಕ್ಕಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಕರ್ನಾಟಕದ ಬಫೂನ್‍ಗಳು. ಅವರು ಯಾಕೆ ಮಾತನಾಡುತ್ತಾರೆ, ಏನು ಮಾತಾಡುತ್ತಾರೆ ಎಂಬುವುದೇ ಅವರಿಗೆ ಅರಿವಿರುವುದಿಲ್ಲ. ಜನ ಅವರನ್ನು ಬಫೂನ್‍ಗಳ ತರ ನೋಡುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ, ಹಳ್ಳಿ ಹಕ್ಕಿ ಹೆಚ್.ವಿಶ್ವನಾಥ್ ವಾಗ್ದಾಳಿ ಹೇಳಿದ್ದಾರೆ. ಶಾಸಕರ ಭವನದಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್ ನಾನು ಮಾಜಿ ಸಿಎಂ ಸಿದ್ದರಾಮಯ್ಯಗೆ ಹೋರಾಟದ ಪಾಠ ಮಾಡಲು ತಯಾರಿದ್ದೇನೆ. ಬರಲಿ ಪಾಠ ಮಾಡೋಣ. ಸಿದ್ದರಾಮಯ್ಯ ಯಾವ ಹೋರಾಟ ಮಾಡಿದ್ದಾರೆ? ದೇವೇಗೌಡರು …
Read More »ಬಲವಂತದ ಸಾಲ ವಸೂಲಾತಿ: ಬಜಾಜ್ ಫೈನಾನ್ಸ್‌ಗೆ 2.5 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ
ನವದೆಹಲಿ, ಜನವರಿ 06: ಗ್ರಾಹಕರಿಂದ ಸಾಲವನ್ನು ವಸೂಲಿ ಮಾಡಲು ಬಲವಂತದ ವಿಧಾನಗಳನ್ನು ಅನುಸರಿದ್ದಕ್ಕಾಗಿ ಹಾಗೂ ಸಾಮಾನ್ಯ ಮಾರ್ಗಸೂಚಿಗಳ ಉಲ್ಲಂಘನೆಯಿಂದಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಬಜಾಜ್ ಫೈನಾನ್ಸ್‌ಗೆ 2.50 ಕೋಟಿ ರೂ. ದಂಡ ವಿಧಿಸಿದೆ. ಬ್ಯಾಂಕಿಂಗ್ ಅಲ್ಲದ ಹಣಕಾಸು ಕಂಪನಿಗಳು (ಎನ್‌ಬಿಎಫ್‌ಸಿ) ಅನ್ವಯವಾಗುವ ನ್ಯಾಯಯುತವಾದ ನಿಯಮಗಳನ್ನು ಮತ್ತು ನೀತಿ ಸಂಹಿತೆಯನ್ನು ನಿರ್ವಹಿಸುವ ನಿರ್ದೇಶನಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಆರ್‌ಬಿಐ ಈ ದಂಡ ವಿಧಿಸಿದೆ. ಇದಲ್ಲದೆ, ಬಜಾಜ್ ಫೈನಾನ್ಸ್ ಸಹ ಪತ್ರ …
Read More »ಬ್ರಾಹ್ಮಣ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧ : BSY
ಬೆಂಗಳೂರು,ಜ.6- ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಎಸ್ಸೆಸ್ಸೆಲ್ಸಿಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಯೋಜನೆಗಳ ಲೋಕಾರ್ಪಣೆ, ವಿಪ್ರ ಗಣ್ಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರು ಮಾತನಾಡಿದರು. ಶಂಕರಾಚಾರ್ಯ, ಮಧ್ವಾಚಾರ್ಯ ಸೇರಿದಂತೆ …
Read More »ಮೂವತ್ತು ವರ್ಷ ನಾನು ರಾಜಕೀಯ ಮಾಡಿದವನು. ಯಾರಿಗೂ ಹೆದರೋ ಮಗ ನಾನಲ್ಲ :ಯತ್ನಾಳ
ಬೆಂಗಳೂರು(ಜ.06): ಸರ್ಕಾರ ತಪ್ಪು ಮಾಡಿದಾಗ ಎಚ್ಚರಿಸಿದ್ದೇನೆ. ಅಭಿವೃದ್ದಿ ಬಗ್ಗೆ ಮಾತನಾಡಿದರೆ ಅದು ಪಕ್ಷ ವಿರೋಧಿ ಹೇಳಿಕೆ ಹೇಗಾಗುತ್ತೆ? ನಾನೇನು ಮಂತ್ರಿ ಮಾಡಿ ಅಂತ ಯಡಿಯೂರಪ್ಪನವರ ಮನೆಗೆ ಹೋಗಿಲ್ಲ. ಮೂವತ್ತು ವರ್ಷ ನಾನು ರಾಜಕೀಯ ಮಾಡಿದವನು. ಯಾರಿಗೂ ಹೆದರೋ ಮಗ ನಾನಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಗುಡುಗಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ವಪಕ್ಷೀಯರ ವಿರುದ್ಧ ತಿರುಗಿ ಬಿದ್ದರು. ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ವಿರುದ್ಧವೂ …
Read More »ಪಲ್ಸ್ ಪೋಲಿಯೊ ಲಸಿಕೆ ಜ.17ರಂದು
ಹಾವೇರಿ: ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದಡಿ ಜ.17ರಂದು ಜಿಲ್ಲೆಯಾದ್ಯಂತ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರ ಸಹಭಾಗಿತ್ವ ಹಾಗೂ ವಿಶ್ವಾಸದಿಂದ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಪಲ್ಸ್ ಪೋಲಿಯೊ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್ ಹಿನ್ನೆಲೆಯಲ್ಲಿ ಗರಿಷ್ಠ …
Read More »ಹಕ್ಕಿ ಜ್ವರ: ಕರ್ನಾಟಕದಲ್ಲಿ ಹೈ ಅಲರ್ಟ್ ಘೋಷಣೆ
ಬೆಂಗಳೂರು: ಕರೊನಾ ಸೋಂಕಿನ ಭೀತಿಯಿಂದ ಹೊರಬರಲು ಇನ್ನೂ ಆಗಿಲ್ಲ. ಅದರ ಬೆನ್ನಲ್ಲೇ ಕರೊನಾ ರೂಪಾಂತರಿ ಆವರಿಸಿಕೊಂಡಿದೆ. ಈಗ ಹಕ್ಕಿ ಜ್ವರ! ನೆರೆಯ ಕೇರಳದ ಆಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಬಾತುಕೋಳಿಗಳಲ್ಲಿ ಕೋಳಿಶೀತ/ಹಕ್ಕಿಜ್ವರ (H5N8) ಸೋಂಕು ದೃಢಪಟ್ಟಿದ್ದು, ಕರ್ನಾಟಕದಲ್ಲೂ ಈ ರೋಗ ಕಾಣಿಸಿಕೊಳ್ಳುವ ಸಾಧ್ಯತೆ. ಹಾಗಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಸಚಿವ ಪ್ರಭು ಚವ್ಹಾಣ್ ಹೈ ಅಲರ್ಟ್ ಘೋಷಿಸಿದ್ದಾರೆ. ಹಕ್ಕಿ ಜ್ವರದ ಸರ್ವೇಕ್ಷಣ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡಲು ಸಿದ್ಧತೆ ಮಾಡಿಕೊಳ್ಳುವಂತೆ …
Read More »