Breaking News

ಹಾಸನ: ಹತ್ತು ಶಿಕ್ಷಕರಿಗೆ ಕೋವಿಡ್‌ 19 ದೃಢ, ಏಳು ಶಾಲೆಗಳಿಗೆ ರಜೆ

ಹಾಸನ: ಜಿಲ್ಲೆಯಲ್ಲಿ ಶಾಲೆಗಳು ಆರಂಭಗೊಂಡ ಬಳಿಕ ಹತ್ತು ಶಿಕ್ಷಕರಿಗೆ ಕೋವಿಡ್‌ 19 ದೃಢಪಟ್ಟಿರುವುದರಿಂದ ಏಳು ಶಾಲೆಗಳಿಗೆ ಶಿಕ್ಷಣ ಇಲಾಖೆ ರಜೆ ಘೋಷಿಸಿದೆ. ‌ ಪ್ರಾಥಮಿಕ ಶಾಲೆಯ ಏಳು ಮತ್ತು ಪ್ರೌಢಶಾಲೆಯ ಮೂವರು ಶಿಕ್ಷಕರಿಗೆ ಸೋಂಕು ತಗುಲಿದ್ದು, ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಆತಂಕ ಉಂಟಾಗಿದೆ. ಶಾಲೆ ಆರಂಭಕ್ಕೂ ಮುನ್ನ ಮೂವರು ಶಿಕ್ಷಕರಿಗೆ ಪಾಸಿಟಿವ್‌ ಪತ್ತೆಯಾಗಿತ್ತು. ಹಾಗಾಗಿ ಸೋಂಕಿತ ಶಿಕ್ಷಕರು ಶಾಲೆಗೆ ಹಾಜರಾಗಿರಲಿಲ್ಲ. ‘ಚನ್ನರಾಯಪಟ್ಟಣ ತಾಲ್ಲೂಕಿನ ಮೂವರು, ಹಾಸನ ತಾಲ್ಲೂಕಿನ ಇಬ್ಬರು ಹಾಗೂ …

Read More »

ಇಂದು ಮತ್ತೆ ಇಬ್ಬರಿಗೆ ರೂಪಾಂತರಿ ಕೊರೊನಾ ಸೋಂಕು ದೃಢ

ನವದೆಹಲಿ: ದೇಶದಲ್ಲಿ ಬ್ರಿಟನ್‌ ಕೊರೊನಾ ಹವಾಳಿ ಹೆಚ್ಚುತ್ತಿದ್ದು, ದೇಶದಲ್ಲಿ ಇಂದು ಮತ್ತೆ ಇಬ್ಬರಿಗೆ ರೂಪಾಂತರಿ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ದೇಶದಲ್ಲಿ ಒಟ್ಟು ರೂಪಾಂತರಿ ಸೋಂಕಿತರ ಸಂಖ್ಯೆ 73ಕ್ಕೆ ಏರಿಕೆಯಾಗಿದೆ. ಅದ್ರಂತೆ, ಬೆಂಗಳೂರಿನ ನಿಮ್ಹಾನ್ಸ್‌ʼನಲ್ಲಿ 11 ಪ್ರಕರಣಗಳು ದಾಖಲಾಗಿದ್ರೆ, ಎನ್‌ʼಐವಿ ಪುಣೆ 30 ಪ್ರಕರಣಗಳು, ಇನ್ನು ಸಿಸಿಎಂಬಿ ಹೈದ್ರಾಬಾದ್‌ನಲ್ಲಿ 3 ಪ್ರಕರಣಗಳು ಹಾಗೂ ಎನ್ಸಿಡಿಸಿ ಕೊಲ್ಕತ್ತಾದಲ್ಲಿ 1 ಪ್ರಕರಣ ಸೇರಿ ದೇಶದಲ್ಲಿ ಒಟ್ಟು 73 ಪ್ರಕರಣಗಳು ದಾಖಲಾಗಿದೆ ಎಂದು …

Read More »

ಮತ್ತೆ ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ವಿಸ್ತರಣೆ

ಧಾರವಾಡ, ಜನವರಿ 6: ಧಾರವಾಡ ಜಿ.ಪಂ ಸದಸ್ಯ ಯೋಗೀಶ್ ಗೌಡ ಅವರ ಕೊಲೆ ಪ್ರಕರಣದ ಆರೋಪದಡಿ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ. ಬುಧವಾರದಂದು ಧಾರವಾಡ ಹೈಕೋರ್ಟ್ ನಲ್ಲಿ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆಗೆ ಬಂದಿತ್ತು. ಅಷ್ಟೆ ಅಲ್ಲ ಇಂದು ಜಾಮೀನು ಸಿಗುವ ನಿರೀಕ್ಷೆ ಕೂಡ ಅವರ ಮಾಜಿ ಸಚಿವರ ಅಭಿಮಾನಿಗಳಿಗೆ ಇತ್ತು.   ಆದರೆ ಸಿಬಿಐ ಅಧಿಕಾರಿಗಳು ವಿನಯ್ …

Read More »

ಕೊರೊನಾ ಎಫೆಕ್ಟ್: ಖಾಯಂ ಉದ್ಯೋಗಿಗಳಿಗೆ ಸ್ವಯಂ ನಿವೃತ್ತಿ ಯೋಜನೆ ಘೋಷಿಸಿದ ಹೋಂಡಾ

ಕೊರೊನಾ ಸಾಂಕ್ರಾಮಿಕದಿಂದಾಗಿ ಬೇಡಿಕೆ ಕಡಿಮೆಯಾಗುತ್ತಿರುವ ಹಿನ್ನೆಲೆ ಹೋಂಡಾ ಮೋಟಾರ್​ ಕಂಪನಿ ತನ್ನ ಸಂಸ್ಥೆಯ ಕೆಲ ಖಾಯಂ ನೌಕರರಿಗೆ ಸ್ವಯಂ ಪ್ರೇರಿತ ನಿವೃತ್ತಿಯ ಆಫರ್​ ನೀಡುತ್ತಿದೆ. ದೇಶದ ಎರಡನೇ ಅತಿ ದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೋಂಡಾ ಮೋಟಾರ್​ ಸೈಕಲ್ಸ್ ಹಾಗೂ ಸ್ಕೂಟರ್ಸ್ ಇಂಡಿಯಾ ಕೊರೊನಾ ಸಾಂಕ್ರಾಮಿಕದ ಬಳಿಕ ಮಂದಗತಿಯ ಬೇಡಿಕೆ ಹಾಗೂ ಆರ್ಥಿಕ ಕುಸಿತವನ್ನ ಅನುಭವಿಸುತ್ತಿದೆ ಎಂದು ತಿಳಿಸಿದೆ. ಬೇಡಿಕೆ ನಿಧಾನವಾಗುತ್ತಿರೋದ್ರಿಂದ ನೋಯ್ಡಾ ಕಾರು ಪ್ಲಾಂಟ್​ನ್ನ ಬಂದ್​ ಮಾಡಿದ …

Read More »

ಜಿಲ್ಲಾಧಿಕಾರಿ ಕಚೇರಿ ಮುಂದೆ ನಾಡವಿರೋಧಿಗಳ ಪುಂಡಾಟಿಕೆ

ಕನ್ನಡ ಧ್ವಜ ತೆರವಿಗೆ ಜನವರಿ 21ರವರೆಗೆ ಗಡುವು, ಇಲ್ಲವಾದರೆ ಗಲ್ಲಿಗಲ್ಲಿಗಳಲ್ಲಿ ಕೇಸರಿ ಧ್ವಜ ಹಾರಾಟ: ಜಿಲ್ಲಾಧಿಕಾರಿ ಕಚೇರಿ ಮುಂದೆ ನಾಡವಿರೋಧಿಗಳ ಪುಂಡಾಟಿಕೆ ಬೆಳಗಾವಿ ಮಹಾನಗರ ಪಾಲಿಕೆ ಆವರಣದಲ್ಲಿ ಹಾರಿಸಲಾದ ಕನ್ನಡ ಧ್ವಜವನ್ನು ಜನವರಿ 20ರೊಳಗೆ ತೆರವುಗೊಳಿಸದಿದ್ದರೆ ಜನವರಿ 21ರಂದು ನಗರದಲ್ಲಿ ಬೃಹತ್ ಮೆರವಣಿಗೆ ನಡೆಸಿ, ಗಲ್ಲಿ ಗಲ್ಲಿಗಳಲ್ಲಿ ಕೇಸರಿ ಧ್ವಜ ಹಾರಿಸಲಾಗುವುದು ಎಂದು ಮಹಾರಾಷ್ಟ್ರ ಏಕೀಕರಣ ಸಮಿತಿ ಮುಖಂಡರು ಮತ್ತು ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಾಡ ವಿರೋಧಿಗಳು ಪ್ರತಿಭಟನೆ …

Read More »

ನುಡಿದಂತೆ ನಡೆದ ಸರ್ಕಾರ- ಡಾ.ಸೋನಾಲಿ ಹರ್ಷ

ಬೆಳಗಾವಿ- ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸುವದು,ಗೋರಕ್ಷಕರ ಬಹುದಿನಗಳ ಕನಸಾಗಿತ್ತು,ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಲಕ್ಷಾಂತರ ಗೋ ರಕ್ಷಕರ ಕನಸು ನನಸು ಮಾಡಿದ್ದು,ಸರ್ಕಾರದ ಕ್ರಮ ರಾಜ್ಯದಲ್ಲಿ ಹೊಸ ಇತಿಹಾಸ ಸೃಷ್ಠಿಸಿದೆ ಎಂದು ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಹರ್ಷ ವ್ಯೆಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕುವ ಮೂಲಕ,ರಾಜ್ಯದಹಿತವನ್ನು ಕಾಪಾಡಿದ್ದು ಅಭಿನಂದಾರ್ಹ ಸಂಗತಿಯಾಗಿದ್ದು,ಸರ್ಕಾರ ರಾಜ್ಯದಲ್ಲಿ ಗೋಹತ್ಯೆ …

Read More »

ಮಹಾಲಿಂಗಪುರ ಪುರಸಭೆ ಸದಸ್ಯೆ ತಳ್ಳಾಟ ಪ್ರಕರಣ : ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದೇನು ?

ಗೋಕಾಕ : ‘ಮಹಾಲಿಂಗಪೂರ ಪುರಸಭೆ ಸದಸ್ಯೆ ತಳ್ಳಾಟ ಪ್ರಕರಣದಲ್ಲಿ ಶಾಸಕ ಸಿದ್ದು ಸವದಿ ಸೇರಿ 31 ಜನರ ವಿರುದ್ಧ ಕೇಸ್ ದಾಖಲು ಬಗ್ಗೆ ಪ್ರತಿಕ್ರಿಯಿಸಿ, ಈ ಹಿಂದೆಯೇ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಬೇಕಿತ್ತು’ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಈ ಹಿಂದೆಯೇ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಬೇಕಿತ್ತು. ಈ ವಿಚಾರವಾಗಿ ಕಾಂಗ್ರೆಸ್ ನಾಯಕರು ಮಹಾಲಿಂಗಪೂರದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿದ್ದೇವೆ. ಯಾರೇ ತಪ್ಪು ಮಾಡಿದರು ಸಹ ಕಾನೂನು ಕ್ರಮ ಕೈಗೊಂಡರೆ …

Read More »

ದೇಶದ ನಾಗರಿಕರು ಭಾವೈಕ್ಯತೆಯಿಂದ ಜೀವಿಸಿದರೆ ಮಾತ್ರ ದೇಶದ ಎಳ್ಗೆ ಸಾದ್ಯ : ವಿವೇಕ ಜತ್ತಿ

  ಗೋಕಾಕನ ನಗರದ ಕೆಪಿಸಿಸಿ ಕಾರ್ಯಾದಕ್ಷ ಸತೀಶ ಜಾರಕಿಹೋಳಿಯವರ ಗೋಕಾಕ ಗೃಹ ಕಚೇರಿ ಹಿಲ್ ಗಾರ್ಡನ್ ನಲ್ಲಿ ಗೋಕಾಕ ಬ್ಲಾಕ್ ಕಾಂಗ್ರೆಸ್ ಮೈನಾರಿಟಿ ಘಟಕದ ವತಿಯಿಂದ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ಮುಖಂಡರಾದ ವಿವೇಕ ಜತ್ತಿ ಮಾತನಾಡಿ ಕಾಂಗ್ರೆಸ್ ಮಾಡಿದ ಎಪ್ಪತ್ತು ವರ್ಷಗಳ ಸಾಧನೆಯನ್ನು ಬಿಡಿ ಬಿಡಿಯಾಗಿ ಬಿಡಿಸಿ ಹೇಳಿದರು ಹಾಗೂ ಈ ದೇಶದ ಎಲ್ಲಾ ನಾಗರಿಕರು ಭಾವೈಕ್ಯತೆಯಿಂದ ಜೀವಿಸಿದರೆ ಮಾತ್ರ ದೇಶದ ಎಳ್ಗೆ ಸಾದ್ಯ …

Read More »

ಹಕ್ಕಿ ಜ್ವರ ಹಿನ್ನೆಲೆಯಲ್ಲಿ ಈ ರಾಜ್ಯಗಳಲ್ಲಿ ಕೋಳಿ ಮಾಂಸ ಮಾರಾಟ ನಿಷೇಧ

ನವದೆಹಲಿ: ಕೊರೊನಾ ವೈರಸ್ ನ ನಡುವೆಯೇ ಕೋಳಿ ಜ್ವರ ಇದೀಗ ವ್ಯಾಪಕ ಭಯ ಹುಟ್ಟಿಸಿದೆ. ಹಿಮಾಚಲ ಪ್ರದೇಶದ ಅನೇಕ ಭಾಗದಲ್ಲಿ ಪೌಲ್ಟ್ರಿ ಕೋಳಿ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ. ಹರ್ಯಾಣ, ಹಿಮಾಚಲ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ 2 ಲಕ್ಷ ಕೋಳಿ ಮತ್ತು ವಲಸೆ ಹಕ್ಕಿಗಳು ಸಾವನ್ನಪ್ಪಿದ ನಂತರ ಅಧಿಕಾರಿಗಳು ತೀವ್ರ ಮುನ್ನೆಚ್ಚರಿಕೆ ಕ್ರಮವಾಗಿ ಈ ಕ್ರಮ ಕೈಗೊಂಡಿದ್ದಾರೆ. ಭೋಪಾಲ್ ಮೂಲದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೈ ಸೆಕ್ಯೂರಿಟಿ ಅನಿಮಲ್ ಡಿಸೀಸ್ …

Read More »

ಗೋಹತ್ಯೆ ನಿಷೇಧ ಕಾಯ್ದೆ: ರಾಜ್ಯ ಸರಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು. ಸುಗ್ರೀವಾಜ್ಞೆಯ ಪ್ರಕಾರ ರಾಜ್ಯದಲ್ಲಿ ಜಾನುವಾರು ಸಾಗಾಣಿಕೆ, ಹತ್ಯೆಗೆ ನಿರ್ಬಂಧ ಹೇರಲಾಗಿದೆ. ಜೊತೆಗೆ, ಹತ್ಯೆಗಾಗಿ ಜಾನುವಾರು ಮಾರಾಟ, ಖರೀದಿ ಮೇಲೆ ಸಹ ನಿರ್ಬಂಧ ವಿಧಿಸಲಾಗಿದೆ. ಒಂದು ವೇಳೆ, ಹತ್ಯೆಗಾಗಿ ಮಾರಾಟ ಮಾಡಿದರೆ ಆ ಜಾನುವಾರುಗಳನ್ನು ಜಪ್ತಿ ಮಾಡಲಾಗುವುದು. ನಿಯಮ ಉಲ್ಲಂಘಿಸಿದರೆ ಮೂರು ವರ್ಷದಿಂದ ಏಳು ವರ್ಷ ಜೈಲು ಶಿಕ್ಷೆ ಸಹ ವಿಧಿಸಲಾಗುವುದು ಎಂದು ಹೇಳಲಾಗಿದೆ. ಅಲ್ಲದೆ 50 ಸಾವಿರದಿಂದ 5 ಲಕ್ಷ ರೂಪಾಯಿವರೆಗೆ ದಂಡ ಸಹ ವಿಧಿಸಲಾಗುವುದು. ಆದರೆ, ಕೃಷಿ …

Read More »