ಧಾರವಾಡ : ಧಾರವಾಡ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು ಆತನ ಗುರುತು ಪತ್ತೆಯಾಗಿಲ್ಲ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೊದಲು ಪೊಲೀಸರು ಪಾದಚಾರಿ ಮೇಲೆ ಬಸ್ ಹರಿದಿದೆ ಎಂದು ತಿಳಿದಿದ್ದರು. ಆದರೆ, ಸಿಸಿಟಿವಿ ಪರಿಶೀಲನೆ ಬಳಿಕ ವ್ಯಕ್ತಿಯೇ ಆತ್ಮಹತ್ಯೆ ಮಾಡಿಕೊಂಡಿರುವುದು ಬಯಲಾಗಿದೆ. ಧಾರವಾಡ ಉಪನಗರ ಠಾಣೆಗೆ ಕೇಸ್ ವರ್ಗಾವಣೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಹೆಸರು ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ರೈಲ್ವೆ ಹಳಿಗೆ ಬಿದ್ದು, ಯುವಕ ಆತ್ಮಹತ್ಯೆ …
Read More »ದಿನಗೂಲಿ ಕಾರ್ಮಿಕರ ಶೆಡ್‌ಗಳ ನೆಲಸಮ; ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್
ಬೆಂಗಳೂರು: ಯಾವುದೇ ತಿಳಿವಳಿಕೆ ನೀಡದೇ ದಿನಗೂಲಿ ನೌಕರರ ಶೆಡ್‌ಗಳನ್ನ ನೆಲಸಮಗೊಳಿಸಿ ಜಾತಿ ನಿಂದನೆ ಹಾಗೂ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಮೇಲೆ ಶಾಸಕ ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿದೆ. ಸೋಮವಾರ (ಜ.20) ಬೆಳಗ್ಗೆ 11ಕ್ಕೆ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ದಿನಗೂಲಿ ಕಾರ್ಮಿಕರ ಮನೆಗಳನ್ನು ನೆಲಸಮ ಮಾಡಿರುವ ಆರೋಪ ಮುನಿರತ್ನ ಅವರ ವಿರುದ್ಧ ಕೇಳಿ ಬಂದಿದ್ದು, ಶಾಸಕರು ಸೇರಿದಂತೆ ಏಳು ಜನರ ವಿರುದ್ಧ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೀಣ್ಯ …
Read More »ಬೆಳಗಾವಿಯಲ್ಲಿ ಗಾಂಧೀಜಿ ಪ್ರತಿಮೆ ಅನಾವರಣಗೊಳಿಸಿದ ಖರ್ಗೆ: ಬಿಜೆಪಿ ವಿರುದ್ಧ ಗುಡುಗಿದ ಸಿಎಂ
ಬೆಳಗಾವಿ: ಸುವರ್ಣ ವಿಧಾನಸೌಧ ಉತ್ತರಪ್ರವೇಶ ದ್ವಾರದಲ್ಲಿ 25 ಅಡಿ ಎತ್ತರದ ಮಹಾತ್ಮ ಗಾಂಧೀಜಿ ಕಂಚಿನ ಪ್ರತಿಮೆಯನ್ನು ಚರಕ ತಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಾರ್ಪಣೆಗೊಳಿಸಿದರು. ಪ್ರತಿಮೆ ಉದ್ಘಾಟನೆ ಆಗುತ್ತಿದ್ದಂತೆ ಸೌಧದ ಮುಂಭಾಗದಲ್ಲಿ ಬಣ್ಣ ಬಣ್ಣದ ಸಿಡಿಮದ್ದುಗಳನ್ನು ಸಿಡಿಸಿ ಸಂಭ್ರಮಿಸಲಾಯಿತು. ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, “ಗಾಂಧೀಜಿಯವರ ಪ್ರತಿಮೆ ಸ್ಥಾಪನೆಯಿಂದ ಈ ಭಾಗಕ್ಕೆ ಮಾತ್ರವಲ್ಲ, ಇಡೀ ಕರ್ನಾಟಕಕ್ಕೆ ಗೌರವ ತಂದಿದೆ. ಸಂವಿಧಾನ ಹಾಗೂ ಪ್ರಜಾತಂತ್ರ ಇಲ್ಲದಿದ್ದರೆ ದೇಶದಲ್ಲಿ ಅರಾಜಕತೆ …
Read More »ಅಂಜನಾದ್ರಿ ದೇಗುಲದ ಕಾಣಿಕೆಯ ಪೆಟ್ಟಿಗೆಯಲ್ಲಿ ರೂ. 61.64 ಲಕ್ಷ ಮೊತ್ತದ ನಗದು ಸಂಗ್ರಹವಾಗಿದೆ.
ಗಂಗಾವತಿ (ಕೊಪ್ಪಳ): ತಾಲೂಕಿನ ಪ್ರಮುಖ ಧಾರ್ಮಿಕ ತಾಣವಾಗಿರುವ ಅಂಜನಾದ್ರಿ ದೇಗುಲದ ಕಾಣಿಕೆಯ ಪೆಟ್ಟಿಗೆಯಲ್ಲಿನ ಹುಂಡಿ ಎಣಿಕೆ ಕಾರ್ಯ ಸೋಮವಾರ ನಡೆದಿದ್ದು, ಸಾರ್ವಕಾಲಿಕ ದಾಖಲೆ ನಿರ್ಮಾಣವಾಗಿದೆ. ಕಳೆದ ನವಂಬರ್ನಲ್ಲಿ ನಡೆದ ಹುಂಡಿ ಎಣಿಕೆಯ ಸಂದರ್ಭದಲ್ಲಿ ಸಂಗ್ರಹವಾಗಿದ್ದ 36 ಲಕ್ಷ ರೂಪಾಯಿ ಇದುವರೆಗಿನ ದಾಖಲೆಯಾಗಿತ್ತು. ಆದರೆ ಈ ಬಾರಿ ಎಲ್ಲಾ ದಾಖಲೆ ಮುರಿದು ಬರೋಬ್ಬರಿ ಅರ್ಧ ಕೋಟಿ ಅಂದರೆ ರೂ. 61.64 ಲಕ್ಷ ಮೊತ್ತದ ನಗದು ಸಂಗ್ರಹವಾಗಿದೆ. ದೇಗುಲದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ಹೆಚ್ …
Read More »ಬೆಳಗಾವಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಅವರಿಗೆ ಸ್ವಾಗತ
ಬೆಳಗಾವಿ: ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನದ ಉದ್ಘಾಟನೆಗೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದರು. ವಿಶೇಷ ವಿಮಾನದಲ್ಲಿ ದೆಹಲಿಯಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ, ಗೃಹ ಸಚಿವ ಡಾ. ಜಿ. ಪರಮೇಶ್ವರ ಸೇರಿ ಮತ್ತಿತರ ನಾಯಕರು ಸ್ವಾಗತಿಸಿದರು. ಸಮಾವೇಶಕ್ಕೆ ರಾಹುಲ್ ಗಾಂಧಿ ಬರಲ್ಲ …
Read More »ಜಿಮ್ಸ್ ನಿರ್ದೇಶಕ, ಅಧೀಕ್ಷಕಿ ನಡುವೆ ಅಧಿಕಾರಕ್ಕಾಗಿ ಪೈಟ್
ಗದಗ, ಜನವರಿ 21: ಜಿಮ್ಸ್ ಆಸ್ಪತ್ರೆ ಗದಗ ಜಿಲ್ಲೆ ಅಷ್ಟೇ ಅಲ್ಲ ಹಾವೇರಿ, ಕೊಪ್ಪಳ, ಬಾಗಲಕೋಟೆಯ ಗಡಿ ಭಾಗದ ಸಾವಿರಾರು ರೋಗಿಗಳ ಚಿಕಿತ್ಸಾ ತಾಣ. ಆದರೆ, ಇತ್ತೀಚಿಗೆ ಈ ಆಸ್ಪತ್ರೆಯಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಆರೋಪ ಕೇಳಿಬಂದಿದೆ. ಯಾಕಂದರೆ, ಮುಖ್ಯ ವೈದ್ಯಾಧಿಕಾರಿಗಳ ಕಿತ್ತಾಟದಿಂದ ಇಡೀ ಆಸ್ಪತ್ರೆಯ ಆಡಳಿತ ವ್ಯವಸ್ಥೆ ಹಳಿ ತಪ್ಪಿದ ರೈಲು ಬಂಡಿಯಂತಾಗಿದೆ. ಜಿಮ್ಸ್ ನಿರ್ದೇಶಕ ಬಸವರಾಜ್ ಬೊಮ್ಮನಹಳ್ಳಿ ಹಾಗೂ ಜಿಮ್ಸ್ ಅಧೀಕ್ಷಕಿ ರೇಖಾ ಸೋನಾವನೆ ನಡುವೆ ಕಳೆದ ಎರಡು …
Read More »ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯರನ್ನು ಯಾಕೆ ಟಾರ್ಗೆಟ್ ? ಶಿವಲಿಂಗೇಗೌಡ
ಬೆಂಗಳೂರು: ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತಾಡಿದ ಅರಸೀಕೆರೆ ಶಾಸಕ ಕೆಎಂ ಶಿವಲಿಂಗೇಗೌಡ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುವ ಬಗ್ಗೆ ತನಗೆ ಮಾಹಿತಿಯಿಲ್ಲ ಎಂದು ಹೇಳಿದರು. ಮುಡಾ ಹಗರಣದ ಬಗ್ಗೆ ಮಾತಾಡಿದ ಅವರು ಮಾಧ್ಯಮಗಳಲ್ಲಿ ಸಿದ್ದರಾಮಯ್ಯನವರ ಆಸ್ತಿ ಈಡಿ ಜಪ್ತು ಮಾಡಿದೆ ಅಂತ ಬರುತ್ತಿದೆ? ಅವರ ಆಸ್ತಿ ಜಪ್ತಿ ಆಗಿದೆಯಾ? ಅವರ 3.14 ಎಕರೆ ಜಮೀನು ಬದಲಿಗೆ ಆಗ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ 50:50 ಅನುಪಾತದಲ್ಲಿ 14 ಸೈಟುಗಳನ್ನು ನೀಡಿದ್ದು …
Read More »ಪ್ರತಿ ತಿಂಗಳು 2 ದಿನ ಗರ್ಭಿಣಿಯರ ಉಚಿತ ಆರೋಗ್ಯ ತಪಾಸಣೆ
ಬೆಂಗಳೂರು, (ಜನವರಿ 20): ಗರ್ಭಿಣಿಯರ ಸುರಕ್ಷತೆ ದೃಷ್ಟಿಯಿಂದ ಮಾತೃತ್ವ ಸುರಕ್ಷತಾ ಅಭಿಯಾನವನ್ನ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ನಡೆಸಲು ರಾಜ್ಯ ಆರೋಗ್ಯ ಇಲಾಖೆ ಮುಂದಾಗಿದೆ. ಪ್ರತಿ ತಿಂಗಳು 9 ಹಾಗೂ 24ನೇ ತಾರಿಖಿನಂದು ಎರಡು ಬಾರಿ ಗರ್ಭಿಣಿಯರ ಉಚಿತ ಆರೋಗ್ಯ ತಪಾಸಣೆ ನಡೆಯಲಿದೆ. ಇದೇ ತಿಂಗಳ 22 ರಂದು ರಾಯಚೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಗರ್ಬಿಣಿಯರಿಗಾಗಿಯೇ ಬೃಹತ್ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಂಡಿದ್ದು, ಆರೋಗ್ಯ ಸವಿವ ದಿನೇಶ್ ಗುಂಡೂರಾವ್ ಅಭಿಯಾನಕ್ಕೆ …
Read More »ಅಪ್ಪನ ಸಾವಿನ ಸದ್ದಿ ಮುಚ್ಚಿಟ್ಟು ಮಗಳ ಮದ್ವೆ
ಚಿಕ್ಕಮಗಳೂರು, (ಜನವರಿ 20): ಆಸ್ಪತ್ರೆಯ ಚಿತಾಗಾರದಲ್ಲಿ ಅಪ್ಪನ ಶವ. ಮದುವೆ ಮಂಟಪದಲ್ಲಿ ಮಗಳ ವಿವಾಹೋತ್ಸವ ನಡೆದಿದೆ. ಹೌದು…ಮದುವೆ ನಿಲ್ಲಬಾರದು ಎಂದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸಾವಿನ ಸುದ್ದಿ ಮುಚ್ಚಿಟ್ಟಿದ್ದು, ಅತ್ತ ಅಪ್ಪ ಸಾವನ್ನಪ್ಪಿದ ವಿಷಯ ತಿಳಿಯದೆ ಈ ಮಗಳು ಖುಷಿ ಖಷಿಯಿಂದಲೇ ಸಪ್ತಪದಿ ತುಳಿದಿದ್ದಾಳೆ. ಈ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದ್ದು, ಮದುವೆ ಮನೆಯಲ್ಲಿ ಸೂತಕದ ಛಾಯೆ ಆವರಿಸಿದಿದೆ. ಚಂದ್ರು ಎನ್ನುವರೇ ಮಗಳ ಮದುವೆಯನ್ನು ಕಣ್ತುಂಬಿಕೊಳ್ಳದೇ ರಸ್ತೆ …
Read More »ಬಿಬಿಎಂಪಿ ಕಸದ ಟೆಂಡರ್ ಕೊಡಿಸುವುದಾಗಿ ಮಹಿಳೆಗೆ ಲಕ್ಷಾಂತರ ರೂ ವಂಚನೆ
ನೆಲಮಂಗಲ, ಜನವರಿ 20: ಬಿಬಿಎಂಪಿ ಕಸದ ಟೆಂಡರ್ ಕೊಡಿಸುವುದಾಗಿ ನೆರೆ ಮನೆಯ ವ್ಯಕ್ತಿಯಿಂದ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿರುವಂತಹ (fraud) ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೇರೋಹಳ್ಳಿಯ ಸೌಭಾಗ್ಯ ಎಂಬುವವರಿಗೆ ವಂಚಿಸಿದ್ದ ಬಿಬಿಎಂಪಿ ಕಸದ ಗುತ್ತಿಗೆದಾರ ಹರೀಶ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹರೀಶ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ನಿಮ್ಮ ಬಳಿ ಇರುವ ಚಿನ್ನಾಭರಣ ಒತ್ತೆ ಇಟ್ಟು ಹಣ ತಂದು ಕೊಡಿ …
Read More »