Breaking News

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ ಸಮಸ್ತರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ​ಈ ಅವಿರೋಧ ಆಯ್ಕೆಯು ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಮತ್ತು ಸಹಕಾರದ ಸಂಕೇತವಾಗಿದೆ. ಮುಖ್ಯವಾಗಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ Satish Jarkiholi, ಅರಭಾವಿ ಶಾಸಕರಾದ ಶ್ರೀ ಬಾಲಚಂದ್ರ ಜಾರಕಿಹೊಳಿ, ಯರಗಟ್ಟಿ ತಾಲ್ಲೂಕಿನ ಎಲ್ಲಾ ಪಿ.ಕೆ.ಪಿ.ಎಸ್. (PKPS) ಸೊಸೈಟಿಗಳ ಅಧ್ಯಕ್ಷರುಗಳಿಗೆ, ಸರ್ವ ಸದಸ್ಯರುಗಳಿಗೆ, ಮತ್ತು ಎಲ್ಲ …

Read More »

ಮಾರ್ಗದರ್ಶಿ ಚಿಟ್ಸ್ ಕರ್ನಾಟಕ ಪ್ರಾದೇಶಿಕ ವಿಭಾಗದ ನೂತನ ಕೇಂದ್ರ ಕಚೇರಿ ಉದ್ಘಾಟನೆ

ಬೆಂಗಳೂರು: ಪ್ರತಿಷ್ಠಿತ ರಾಮೋಜಿ ಗ್ರೂಪ್ ಆಫ್ ಕಂಪನೀಸ್​​ಗೆ ಸೇರಿದ ಅತ್ಯಂತ ವಿಶ್ವಾಸಾರ್ಹ ಸಂಸ್ಥೆ ಮಾರ್ಗದರ್ಶಿ ಚಿಟ್ಸ್ ಕಂಪನಿಯ ಮೂರು ಹೊಸ ಶಾಖೆಗಳನ್ನು ಈ ವರ್ಷಾಂತ್ಯದೊಳಗೆ ಕರ್ನಾಟಕದಲ್ಲಿ ಪ್ರಾರಂಭಿಸಲಾಗವುದು ಎಂದು ಮಾರ್ಗದರ್ಶಿ ಚಿಟ್ಸ್​​ನ ಕರ್ನಾಟಕ ಪ್ರಾದೇಶಿಕ ವಿಭಾಗದ ಮುಖ್ಯಸ್ಥರಾದ ಪಿ.ಲಕ್ಷ್ಮಣರಾವ್ ಅವರು ತಿಳಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದ ಅರಮನೆ ರಸ್ತೆಯ ಬಳಿ ಮಾರ್ಗದರ್ಶಿ ಚಿಟ್ಸ್ ಕರ್ನಾಟಕ ಪ್ರಾದೇಶಿಕ ವಿಭಾಗದ ನೂತನ ಕೇಂದ್ರ ಕಚೇರಿ ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ‘ ಮಾತನಾಡಿದ ಅವರು, ಸಿಲಿಕಾನ್ ಸಿಟಿ …

Read More »

ಕ್ರಿಕೆಟ್ ಮಹೋತ್ಸವ 2025 ಟಿ-10 ಲೆದರ್ ಬಾಲ್ ಕ್ರಿಕೆಟ್ ಪಂದ್ಯ

ಕ್ರಿಕೆಟ್ ಮಹೋತ್ಸವ 2025 ಟಿ-10 ಲೆದರ್ ಬಾಲ್ ಕ್ರಿಕೆಟ್ ಪಂದ್ಯ ಆಲ್ ರೌಂಡರ್ ಆಟಗಾರ ಅಮೇಯ ಮೀಲಿಂದ್ ಭಾತಕಾಂಡೆ ವಿಶೇಷ ಸಾಧನೆ ಇಂಗ್ಲೆಂಡ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಆಹ್ವಾನಿತರ ಕ್ರಿಕೆಟ್ ಮಹೋತ್ಸವ 2025 ಟಿ-10 ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬೆಳಗಾವಿಯ ಪ್ರತಿಭಾನ್ವಿತ ಆಲ್ ರೌಂಡರ್ ಆಟಗಾರ ಅಮೇಯ ಮೀಲಿಂದ್ ಭಾತಕಾಂಡೆ ಅವರು ತಮ್ಮ ಸ್ಮರಣೀಯ ಆಟದ ಮೂಲಕ ಭಾರತ್ ಬ್ರಿಸ್ಟಲ್ ತಂಡಕ್ಕೆ ಪಾಕಿಸ್ತಾನ್ ಬ್ರಿಸ್ಟೋಲಿಯನ್ಸ್ ವಿರುದ್ಧ ಅದ್ಭುತ ವಿಜಯ ತಂದುಕೊಟ್ಟಿದ್ದಾರೆ. …

Read More »

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ನಡೆದ ಕಾರ್ಯಕ್ರಮ ಬೆಳಗಾವಿ: ಮಹಿಳೆಯರ ಸ್ವಾಭಿಮಾನ ಎತ್ತಿಹಿಡಿದು, ಆರ್ಥಿಕ ಸ್ವಾವಲಂಬನೆ ಮಾಡಲು ನನಗೆ ಅವಕಾಶ ಸಿಕ್ಕಿದೆ. ಮಹಿಳೆ ಅಭಿವೃದ್ಧಿಯಾದರೆ ಮನೆ, ಗ್ರಾಮ, ರಾಜ್ಯ, ದೇಶ ಅಭಿವೃದ್ಧಿಯಾದಂತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಕಂಗ್ರಾಳಿ ಕೆ.ಎಚ್ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ …

Read More »

ಅ.13 ರಂದು ಸಿಎಂಗೆ ಘೇರಾವ್ ಹಾಕಲು ಮುಂದಾದ ವಾಲ್ಮೀಕಿ ಸಮಾಜ

ಅ.13 ರಂದು ಸಿಎಂಗೆ ಘೇರಾವ್ ಹಾಕಲು ಮುಂದಾದ ವಾಲ್ಮೀಕಿ ಸಮಾಜ ರಾಜ್ಯದಲ್ಲಿ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಸೇರ್ಪಡೆ ಮಾಡುವ ಪ್ರಯತ್ನ ಹಾಗೂ ನಕಲಿ ಜಾತಿ ಪ್ರಮಾಣ ಪತ್ರಗಳ ಹಾವಳಿ ವಿರೋಧಿಸಿ ವಾಲ್ಮೀಕಿ ಸಮುದಾಯವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಅಕ್ಟೋಬರ್ 13 ರಂದು ಜಿಲ್ಲೆಗೆ ಭೇಟಿ ನೀಡಲಿರುವ ಮುಖ್ಯಮಂತ್ರಿಗಳಿಗೆ ಘೇರಾವ್ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಾಲ್ಮೀಕಿ …

Read More »

ನಮ್ಮ ಬಣದ ಎಲ್ಲ 13 ಜನ ಅಭ್ಯರ್ಥಿಗಳ ಗೆಲುವು- ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿಯವರ ವಿಶ್ವಾಸ ಜಾರಕಿಹೊಳಿ ಕುಟುಂಬದ ಎರಡನೆ ಪೀಳಿಗೆಯ ರಾಜಕೀಯ ಎಂಟ್ರಿ

ನಮ್ಮ ಬಣದ ಎಲ್ಲ 13 ಜನ ಅಭ್ಯರ್ಥಿಗಳ ಗೆಲುವು- ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿಯವರ ವಿಶ್ವಾಸ ಜಾರಕಿಹೊಳಿ ಕುಟುಂಬದ ಎರಡನೆ ಪೀಳಿಗೆಯ ರಾಜಕೀಯ ಎಂಟ್ರಿ ಸಚಿವ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಮತ್ತು ಹಿರಿಯ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ್ ಸೇರಿ 6 ಜನ ಅವಿರೋಧ ಆಯ್ಕೆ ಬೆಳಗಾವಿ – ನಮ್ಮ ಬೆಂಬಲಿತ 13 ಅಭ್ಯರ್ಥಿಗಳನ್ನು ಬಿಡಿಸಿಸಿ ಬ್ಯಾಂಕ್ ಚುನಾವಣೆಗೆ ಕಣಕ್ಕಿಳಿಸಿದ್ದು, ದೇವರು ಮತ್ತು ಮತದಾರರ ಆಶೀರ್ವಾದದಿಂದ …

Read More »

ಸುಪ್ರೀಂ ಕೋರ್ಟ್ ಸಿಜೆಐ ಬಿ.ಆರ್. ಗವಾಯಿ ಮೇಲೆ ಶೂ ಎಸೆದ ಕೃತ್ಯಕ್ಕೆ ಖಂಡನೆ ಬಾಗಲಕೋಟೆಯಲ್ಲಿ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಸುಪ್ರೀಂ ಕೋರ್ಟ್ ಸಿಜೆಐ ಬಿ.ಆರ್. ಗವಾಯಿ ಮೇಲೆ ಶೂ ಎಸೆದ ಕೃತ್ಯಕ್ಕೆ ಖಂಡನೆ ಬಾಗಲಕೋಟೆಯಲ್ಲಿ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ ಸುಪ್ರೀಂ ಕೋರ್ಟ್ ಸಿಜೆಐ ಬಿ.ಆರ್. ಗವಾಯಿ ಮೇಲೆ ಶೂ ಎಸೆತ ಕೃತ್ಯವನ್ನು ಖಂಡಿಸಿದ ಕಾನೂನು ವಿದ್ಯಾರ್ಥಿಗಳು ಬಾಗಲಕೋಟೆಯಲ್ಲಿ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹ ಸುಪ್ರೀಂ ಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ಕೃತ್ಯವನ್ನು ಖಂಡಿಸಿ ಬಾಗಲಕೋಟೆ ಜಿಲ್ಲೆಯ …

Read More »

ಬೆಳಗಾವಿ–ಮೀರಜ್–ಬೆಳಗಾವಿ ಪ್ಯಾಸೆಂಜರ್ ವಿಶೇಷ ರೈಲುಗಳ ಖಾಯಂಗೆ ರೈಲ್ವೆ ಮಂಡಳಿ ಅನುಮೋದನೆ

ಹುಬ್ಬಳ್ಳಿ: ದೈನಂದಿನ ವಿಶೇಷ ಪ್ಯಾಸೆಂಜರ್ ರೈಲುಗಳನ್ನು ಖಾಯಂಗೊಳಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ರೈಲ್ವೆ ಮಂಡಳಿಯು ರೈಲು ಸಂಖ್ಯೆ 07301/07302 ಬೆಳಗಾವಿ–ಮೀರಜ್–ಬೆಳಗಾವಿ ಮತ್ತು 07303/07304 ಬೆಳಗಾವಿ–ಮೀರಜ್–ಬೆಳಗಾವಿ ಕಾಯ್ದಿರಿಸದ ದೈನಂದಿನ ವಿಶೇಷ ಪ್ಯಾಸೆಂಜರ್ ರೈಲುಗಳನ್ನು ಖಾಯಂಗೊಳಿಸಲು ಅನುಮೋದನೆ ನೀಡಿದೆ. ಅದರಂತೆ ಈ ರೈಲುಗಳು 51461/51462 ಬೆಳಗಾವಿ–ಮೀರಜ್–ಬೆಳಗಾವಿ ಮತ್ತು 51463/51464 ಬೆಳಗಾವಿ–ಮೀರಜ್–ಬೆಳಗಾವಿ ಎಂದು ಮರು-ಸಂಖ್ಯೆ ಪಡೆಯಲಿವೆ. ರೈಲು ಸಂಖ್ಯೆ 51461 ಬೆಳಗಾವಿ-ಮೀರಜ್ ಡೈಲಿ ಪ್ಯಾಸೆಂಜರ್ ಬೆಳಗಾವಿಯಿಂದ ಬೆಳಗ್ಗೆ 05:45ಕ್ಕೆ ಹೊರಟು, ಅದೇ ದಿನ ಬೆಳಗ್ಗೆ …

Read More »

ಡಿಸಿಸಿ ಬ್ಯಾಂಕ್ ಚುನಾವಣೆಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ನಾಮಪತ್ರ ಸಲ್ಲಿಕೆ

ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಬೆಳಗಾವಿ ತಾಲೂಕಿನಿಂದ ನಿರ್ದೇಶಕ ಸ್ಥಾನಕ್ಕೆ ನನ್ನ ನಾಮಪತ್ರವನ್ನು ಇಂದು ಸಲ್ಲಿಸುವ ಮೂಲಕ ಸಹಕಾರಿ ಕ್ಷೇತ್ರದಲ್ಲಿ ನನ್ನ ಮೊದಲ ಹೆಜ್ಜೆಯನ್ನು ಇಟ್ಟಿದ್ದೇನೆ. ಈ ಸಂದರ್ಭದಲ್ಲಿ ಸಹಕಾರಿ ಕ್ಷೇತ್ರದ ಹಿರಿಯ ನಾಯಕರು ಶ್ರೀ ಬಾಲಚಂದ್ರ ಜಾರಕಿಹೊಳಿ, ಶ್ರೀ ಅಣ್ಣಾಸಾಹೇಬ ಜೊಲ್ಲೆ, ಶ್ರೀ ಚನ್ನರಾಜ ಹಟ್ಟಿಹೊಳಿ ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು. ಸಹಕಾರದ ಸಿದ್ಧಾಂತಗಳನ್ನು ಬೆಂಬಲಿಸಿ ಜನರ ಸೇವೆಗೆ ಸಮರ್ಪಿತರಾಗಿರುವ ನನ್ನ ಪ್ರಯತ್ನಕ್ಕೆ ಎಲ್ಲರ ಆಶೀರ್ವಾದ ಹಾಗೂ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಗುದಗೋಪ್ಪ ಗ್ರಾಮದ ಶ್ರೀ ಮರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …

Read More »