ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕೋನಿಗರಹಳ್ಳಿ ಬಳಿ ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಹಳೆಯ ಸೇತುವೆ ಬಿರುಕು ಬಿಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಸುಮಾರು 4 ದಶಕಗಳ ಹಿಂದೆ ನಿರ್ಮಾಣವಾಗಿರುವ ಈ ಸೇತುವೆ, ಹಲವು ದಿನಗಳಿಂದ ಶಿಥಿಲಾವಸ್ಥೆಯಲ್ಲಿದ್ದರೂ ಇದುವರೆಗೂ ಸಮರ್ಪಕವಾಗಿ ದುರಸ್ತಿಗೊಳಿಸದಿರುವುದಕ್ಕೆ ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋನಿಗರಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಚಳ್ಳಕೆರೆ ಪಟ್ಟಣದೊಂದಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಸೇತುವೆ ಇದಾಗಿದೆ. ಪ್ರತಿನಿತ್ಯ ಸಾವಿರಾರು …
Read More »ಬಸವರಾಜ್ ಹೇಳಿದಂತೆ ಕೆಲಸ ಮಾಡಿದ್ದೇನೆ – ಸಿಐಡಿ ಮುಂದೆ ಗ್ಯಾನೇಂದ್ರ ತಪ್ಪೊಪ್ಪಿಗೆ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಪಶುವೈದ್ಯಾಧಿಕಾರಿ ನೇಮಕ ಅಕ್ರಮ ಪ್ರಕರಣಕ್ಕೆ ತನಿಖೆ ತೀವ್ರಗೊಂಡಿದ್ದು, ಸಿಐಡಿ ಅಧಿಕಾರಿಗಳ ಮುಂದೆ ಐಎಎಸ್ ಅಧಿಕಾರಿ ಗ್ಯಾನೇಂದ್ರ ಹಗರಣದಲ್ಲಿನ ತಮ್ಮ ಪಾತ್ರದ ಬಗ್ಗೆ ಸ್ಫೋಟಕ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಮತ್ತೊಂದೆಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಅಭ್ಯರ್ಥಿಗಳೇ ಸಾಕ್ಷಿಗಳಾಗಲು ಮುಂದಾಗಿದ್ದು ಕಿಂಗ್‌ಪಿನ್‌ಗಳಿಗೆ ಸಂಕಷ್ಟ ಎದುರಾಗಿದೆ. ಈ ಇಡೀ ಹಗರಣಕ್ಕೆ ಬಸವರಾಜ್ ಕನ್ನಾಳಿ ಪ್ರಮುಖ ರೂವಾರಿ. ಆತ ಹೇಳಿದಂತೆಯೇ ನಾನು ಕೆಲಸ ಮಾಡಿದ್ದೇನೆ. ನಾನು ಯಾವುದೇ ಅಭ್ಯರ್ಥಿಗಳ ಜೊತೆ ನೇರವಾಗಿ ಮಾತನಾಡಿಲ್ಲ …
Read More »ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ – ವಿದ್ಯಾರ್ಥಿಗಳ ಮೇಲಿದ್ದ ಎಲ್ಲಾ ಎಫ್‌ಐಆರ್ ರದ್ದು
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಶೈಕ್ಷಣಿಕ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದೆಹಲಿ, ಬಿಹಾರ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರ ಹಾಗೂ ಆಯಾ ರಾಜ್ಯ ಸರ್ಕಾರಗಳು ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಪುರಸ್ಕರಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ …
Read More »ಡಿಸಿಪಿ ಮೇಲೆಯೇ ಯೂತ್ ಕಾಂಗ್ರೆಸ್ ಅಧ್ಯಕ್ಷನಿಂದ ಹಲ್ಲೆ- ಎಫ್‌ಐಆರ್ ದಾಖಲಿಸಲು ಪೊಲೀಸರ ಹಿಂದೇಟು
ಬೆಂಗಳೂರು: ಪ್ರತಿಭಟನೆ ವೇಳೆ ಕರ್ತವ್ಯದಲ್ಲಿದ್ದ ಡಿಸಿಪಿ ಮೇಲೆಯೇ ಯುವ ಕಾಂಗ್ರೆಸ್ ಮುಖಂಡ ಗೂಂಡಾವರ್ತನೆ ತೋರಿ ಹಲ್ಲೆ ನಡೆಸಿದ್ದರೂ, ಪೊಲೀಸರು ಇನ್ನೂ ಎಫ್‌ಐಆರ್ ದಾಖಲಿಸದೆ ಇರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಭಾನುವಾರ ಸಂಜೆ ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಯತ್ನ ನಡೆಸಿದ್ದರು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ಲಾಠಿ ಚಾರ್ಜ್ ನಡೆಸಿದ್ದರು. ಲಾಠಿ ಚಾರ್ಜ್ ಸಂದರ್ಭದಲ್ಲಿ …
Read More »ಸಿಗರೇಟ್ ಸೇದುವ ವಿಚಾರಕ್ಕೆ ಯುವಕನ ಬರ್ಬರ ಹತ್ಯೆ: 8 ಮಂದಿ ಜೀವಾವಧಿ ಶಿಕ್ಷೆ
ಬೆಂಗಳೂರು: ಸಿಗರೇಟ್ ಸೇದುವ ವಿಚಾರಕ್ಕೆ ಗಲಾಟೆ ನಡೆದು ಯುವಕನ ಬರ್ಬರ ಹತ್ಯೆಗೈದ 8 ಮಂದಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ ಬೆಂಗಳೂರಿನ ಶಾಂತಿನಗರ ವ್ಯಾಪ್ತಿಯಲ್ಲಿ 2017ರಲ್ಲಿ ಸಿಗರೇಟ್ ಸೇದುವ ವಿಚಾರವಾಗಿ ಹರೀಶ್ ಎಂಬ ಯುವಕನೊಂದಿಗೆ ಗಲಾಟೆ ನಡೆದಿತ್ತು. ಮಾತಿಗೆ ಮಾತು ಬೆಳೆದು ಆರೋಪಿಗಳ ಗುಂಪು ಹರೀಶ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿತ್ತು. ಘಟನೆ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ …
Read More »ಸದ್ಯದಲ್ಲೇ 4,744 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ – ಕೆಇಎ
ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪದವಿ ಹಾಗೂ ಪಿಯುಸಿ-ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಒಟ್ಟು 4,744 ಹುದ್ದೆಗಳ ನೇಮಕಾತಿಗೆ ಈ ತಿಂಗಳಲ್ಲಿಯೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಹುದ್ದೆಗಳಿಗೆ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ಲಿಖಿತ ಪರೀಕ್ಷೆ ಕೂಡ ನಡೆಸಲು ಸಿದ್ಧತೆ ನಡೆದಿದೆ. ಯಾವ ಇಲಾಖೆಯ ಯಾವ ಹುದ್ದೆಗೆಳಿಗೆ ಅರ್ಜಿ ಸಲ್ಲಿಸಬಹುದು …
Read More »ದುಪ್ಪಟ್ಟಾವನ್ನು ಹಗ್ಗದಂತೆ ಬಳಸಿ ಪ್ರವಾಹದಲ್ಲಿ ಸಿಲುಕಿದ್ದ ಬೈಕ್ ಸವಾರನನ್ನು ರಕ್ಷಿಸಿದ ನವದಂಪತಿ
ಶಿಮ್ಲಾ: ಚಚಂಬಾ ಜಿಲ್ಲೆಯಲ್ಲಿ ಹಠಾತ್ ಪ್ರವಾಹದಲ್ಲಿ ಸಿಲುಕಿದ್ದ ಬೈಕ್ ಸವಾರನನ್ನು ದುಪ್ಪಟ್ಟಾವನ್ನು ಹಗ್ಗದಂತೆ ಬಳಸಿ ಕುಟುಂಬವೊಂದು ಸುರಕ್ಷಿತವಾಗಿ ರಕ್ಷಿಸಿದೆ. ಭತಿಯತ್‌ನ ಭರ್ಮಲಾ ಪ್ರದೇಶದ ಕಾಕಿಯಾರಾ-ತುನುಹಟ್ಟಿ ರಸ್ತೆಯಲ್ಲಿ ನಡೆದಿದ್ದು, ತಡರಾತ್ರಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆಯು ಹಠಾತ್ ಜಲಾವೃತಗೊಂಡು ರಭಸವಾಗಿ ಹರಿಯುತ್ತಿತ್ತು. ಈ ವೇಳೆ ಘಟಾಶ್ನಿಯ ಮಾಮ್ಲಾ ಗ್ರಾಮದ ಬೈಕ್ ಸವಾರನೋರ್ವ ನೀರಿನ ಮಧ್ಯೆ ಸಿಲುಕಿ ಪರದಾಡುತ್ತಿದ್ದರು. ಇದೇ ವೇಳೆ ಅದೇ ರಸ್ತೆ ಮಾರ್ಗವಾಗಿ ಕಾರಿನಲ್ಲಿ ಹೋಗುತ್ತಿದ್ದ ಕುಟುಂಬವೊಂದು ಬೈಕ್ ಸವಾರನ ಪರಿಸ್ಥಿತಿ …
Read More »ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 11 ಕಾರ್ಮಿಕರು ಸಾವು, ಹಲವರು ಗಂಭೀರ
ಲಕ್ನೋ: ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ 11 ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಬಗ್ಗೆ ಕೌಶಂಬಿ ಜಿಲ್ಲಾಧಾಕಾರಿ ಅಮಿತ್ ಕುಮಾರ್ ಪಾಲ್ ಅವರು ಮಾಹಿತಿ ನೀಡಿದ್ದಾರೆ. ಸ್ಫೋಟದತೀವ್ರತೆಗೆ ಇಡೀ ಕಾರ್ಖಾನೆ ಸಂಪೂರ್ಣವಾಗಿ ನೆಲಸಮವಾಗಿದೆ. ಪರಿಣಾಮ ಹನ್ನೊಂದು ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ. ಸದ್ಯ ಸ್ಥಳಕ್ಕೆ ರಕ್ಷಣಾ ತಂಡಗಳು ದೌಡಾಯಿಸಿದ್ದು, ಅವಶೇಷಗಳಡಿಯಿಂದ ಶವಗಳನ್ನು …
Read More »ಮಹಿಳೆಯರು ಮನೆಯಲ್ಲೇ ಇರಬೇಕು, ಸಾರ್ವಜನಿಕವಾಗಿ ಕಾಣಿಸಿಕೊಳ್ಳಬಾರದು: ಧರ್ಮಗುರು ಕಾಂತಪುರಂ ವಿವಾದಾತ್ಮಕ ಹೇಳಿಕೆ
ತಿರುವನಂತಪುರಂ: ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಮುಖ ಇಸ್ಲಾಮಿಕ್ ವಿದ್ವಾಂಸ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಹೇಳಿಕೆ ನೀಡಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ. ಕೊಚ್ಚಿಯಲ್ಲಿ ನಡೆದ ಇಸ್ಲಾಮಿಕ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ಪವಿತ್ರ ಕುರಾನ್ ಪ್ರಕಾರ ಮಹಿಳೆಯರು ಮನೆಗಳಲ್ಲೇ ಇರಬೇಕು. ಮಹಿಳೆಯರ ಘನತೆಯನ್ನು ಗೌರವಿಸಲು ಮತ್ತು ರಕ್ಷಿಸಲು ಇಸ್ಲಾಂನಲ್ಲಿ ಪರ್ದಾ ಪದ್ಧತಿಯನ್ನು ಸೂಚಿಸಲಾಗಿದೆ. ಮಹಿಳೆಯರನ್ನು ಸಾರ್ವಜನಿಕ ಕ್ಷೇತ್ರಕ್ಕೆ ತರುವುದು ಭಾರೀ ವಿನಾಶಕ್ಕೆ ಕಾರಣವಾಗುತ್ತದೆ …
Read More »ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ 16ರ ಬಾಲಕಿ ಮೇಲೆ ಗ್ಯಾಂಗ್ ರೇಪ್ ಆರೋಪ – ಡ್ರೈವರ್, ಕಂಡಕ್ಟರ್ ಬಂಧನ
ನವದೆಹಲಿ: ಉತ್ತರ ಪ್ರದೇಶದ 16 ವರ್ಷದ ಬಾಲಕಿಯ ಮೇಲೆ ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಸ್ ಚಾಲಕ ಹಾಗೂ ಕಂಡಕ್ಟರ್‌ರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬಾಲಕಿಯನ್ನು ಸುಮಾರು 47 ಕಿಲೋಮೀಟರ್ ದೂರ ಕರೆದೊಯ್ದು ಬಳಿಕ ಕಾಶ್ಮೀರಿ ಗೇಟ್ ಬಸ್ ಟರ್ಮಿನಲ್ ಸಮೀಪದ ರಿಂಗ್ ರೋಡ್ ಬಳಿ ಬಿಟ್ಟು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಆಗಸ್ಟ್ 4ರ ರಾತ್ರಿ ಕಾಶ್ಮೀರಿ ಗೇಟ್ …
Read More »
Laxmi News 24×7