ಬೆಂಗಳೂರು: ಹೊಸ ವರ್ಷಕ್ಕೆ ಬೆಂಗಳೂರಿನಲ್ಲಿ ಪ್ರತ್ಯೇಕವಾಗಿ ಮಾರ್ಗಸೂಚಿ ಬರುವುದು ಫಿಕ್ಸ್ ಆಗಿದೆ. ಡಿಸೆಂಬರ್ 30 ಮತ್ತು 31ಕ್ಕೆ ಕಟ್ಟು ನಿಟ್ಟಿನ ಕ್ರಮ ಇರುತ್ತೆ ಅಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ. ಬ್ರಿಟನ್‍ನಿಂದ ಬೆಂಗಳೂರಿಗೆ ಬಂದವರ ಪೈಕಿ 150 ಜನ ನಾಪತ್ತೆಯಾಗಿರೋದು ಒಂದುಕಡೆ ಆತಂಕ ಹೆಚ್ಚಿಸಿದೆ. ಇದರ ಮಧ್ಯೆಯೇ ಹೊಸ ವರ್ಷಕ್ಕೆ ಬೆಂಗಳೂರು ಸಜ್ಜಾಗ್ತಿದೆ. ಈಗ ಬ್ರಿಟನ್ ಕೊರೊನಾ ಹರಡುವುದನ್ನು ನಿಯಂತ್ರಣ ಮಾಡುವ ಸಲುವಾಗಿ ಬೆಂಗಳೂರಿನಲ್ಲಿ 2 …
Read More »ಸಪ್ತಗಿರಿ ಆಸ್ಪತ್ರೆ,ರುದ್ರ ವೆಲ್ಫೇರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಉಚಿತ ಚಿಕಿತ್ಸೆ
ಬಳ್ಳಾರಿ: ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ ಸಪ್ತಗಿರಿ ಆಸ್ಪತ್ರೆ ಮತ್ತು ಬಳ್ಳಾರಿಯ ರುದ್ರ ವೆಲ್ಫೇರ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇದೇ ಡಿ.28 ರಂದು ಕಂಪ್ಲಿ ಬಳಿಯ ಎಮ್ಮಿಗನೂರಿನ ಶ್ರೀ ಆಂಜನೇಯ ದೇವಸ್ಥಾನದಲ್ಲಿ, ಮತ್ತು 29 ರಂದು ಬಳ್ಳಾರಿಯ ಪಾರ್ವತಿನಗರದಲ್ಲಿರುವ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಹೃದಯ, ನರರೋಗ, ಮೂತ್ರಪಿಂಡ, ಕ್ಯಾನ್ಸರ್ ಮತ್ತು ಸಾಮಾನ್ಯ ರೋಗಗಳಿಗೆ ಚಿಕಿತ್ಸೆ ನೀಡಲು ಶಿಬಿರ ಏರ್ಪಡಿಸಲಾಗಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ರುದ್ರ ವೆಲ್ಫೇರ್ ಮತ್ತು …
Read More »ಅಧಿಕಾರಿಗಳ ನಿರ್ಲಕ್ಷಕ್ಕೆ ಕೈಗನ್ನಡಿಯಾಗಿದೆ. ಶಿಕ್ಷಕರ ಕೈಚಳಕ
ಕಾರವಾರ: ಒಬ್ಬ ಶಿಕ್ಷಕ ಮನಸ್ಸು ಮಾಡಿದರೆ ವಿದ್ಯಾರ್ಥಿಯ ಬದುಕೇ ಬದಲಾಗುತ್ತದೆ. ಶಿಕ್ಷಕನ ಪಾತ್ರ ಅಂತಹ ಮಹತ್ವದ್ದಾಗಿದೆ. ಆದರೆ ಶಿಕ್ಷಣಾಧಿಕಾರಿ ಕಚೇರಿಗಳು ಮಾತ್ರ ಹಾಳು ಕೊಂಪೆಯಂತೆ ಇರುವುದು ನಮ್ಮ ಅಧಿಕಾರಿಗಳ ನಿರ್ಲಕ್ಷಕ್ಕೆ ಕೈಗನ್ನಡಿಯಾಗಿದೆ. ಇದೀಗ ಶಿಕ್ಷಕರ ಕೈಚಳಕದಿಂದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಚಿತ್ರಣವೇ ಬದಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಶಿಕ್ಷಕರು ತಮ್ಮ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಹೋಗಲು ಹೆದರುವಂತಿತ್ತು. ಬಣ್ಣವಿಲ್ಲದ ಗೋಡೆಗಳು, ಜೋತು ಬಿದ್ದ ಕಿಟಕಿಗಳು, ಕಚೇರಿಯಲ್ಲಿ ಎಲ್ಲಿ ಬೇಕೆಂದರಲ್ಲಿ …
Read More »ಬಸ್- ಕ್ರೂಸರ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಐವರು ಸಾವು !
ಮೊಳಕಾಲ್ಮುರು: ಬಸ್ ಹಾಗೂ ಕ್ರೂಸರ್ ಮಧ್ಯೆ ಮೊಳಕಾಲ್ಮುರು ತಾಲ್ಲೂಕಿನ ಬಿಜಿ ಕೆರೆ ಬಳಿ ಭಾನುವಾರ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಐದು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಿಮ್ಮಣ್ಣ(40) ಪತ್ನಿ ರತ್ನಮ್ಮ(38) ಸೋಮನಮರಡಿ ಗ್ರಾಮದ ದುರುಗಪ್ಪ(16), ಗಜಲಿ ಗ್ರಾಮದ ಮಹೇಶ (19) ಹಾಗು 55 ವರ್ಷದ ಓರ್ವ ವ್ಯಕ್ತಿ ಎಂದು ತಿಳಿದು ಬಂದಿದೆ. ಮೃತರು ರಾಯಚೂರು ಜಿಲ್ಲೆ ದೆವದುರ್ಗ ತಾಲೂಕಿನ ಹುಣಸೂರು ಗ್ರಾಮದವರಾಗಿದ್ದಾರೆ ಎನ್ನಲಾಗುತ್ತಿದೆ. ಗಾಯಾಳುಗಳನ್ನು ಬಳ್ಳಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬಸ್ …
Read More »ಗ್ರಾಪಂ.ಚುನಾವಣೆಗೆ ಸ್ಪರ್ಧಿಸಿದ್ದ ಅಂಬೋಜಿ ನಿಧನ
ಖಾನಾಪುರ : ತಾಲ್ಲೂಕಿನ ನ್ಯಾಯವಾದಿ, ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದ ಸಿ.ಬಿ.ಅಂಬೋಜಿ (64) ಭಾನುವಾರ ಬೆಳಿಗಿನ ಜಾವ ನಿಧನರಾದರು. ಬಿಷ್ಟಾದೇವಿ ಜೀರ್ಣೊದ್ದಾರ ಟ್ರಸ್ಟ್ ಅಧ್ಯಕ್ಷರಾಗಿದ್ದರು. ಕಕ್ಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಕ್ಕೇರಿ ಗ್ರಾಪಂ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಮಂಗಳವಾರ ನಡೆದ ಗ್ರಾಪಂ ಚುಣಾವಣೆಗೆ ಕಕ್ಕೇರಿ ಗ್ರಾಮದ ವಾರ್ಡ್ ನಂ.2ಕ್ಕೆ ಸ್ಪರ್ಧೆ ಮಾಡಿದ್ದರು.
Read More »ಮೂರು ಸಾವಿರ ಮಠದ ಆಸ್ತಿ ವಾಪಸ್ ನೀಡಿ: ಕೆಎಲ್ಇ ಸಂಸ್ಥೆಗೆ ದಿಂಗಾಲೇಶ್ವರ ಸ್ವಾಮೀಜಿ ಒತ್ತಾಯ
ಹುಬ್ಬಳ್ಳಿ : ಹುಬ್ಬಳ್ಳಿಯ ಮೂರು ಸಾವಿರ ಮಠದ ಆಸ್ತಿಯನ್ನು ಕೆ ಎಲ್ ಇ ಸಂಸ್ಥೆಯವರು ವಾಪಸ್ ಮಠಕ್ಕೆ ನೀಡಬೇಕು ಎಂದು ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಆಗ್ರಹಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೂರು ಸಾವಿರ ಮಠದ ಆಸ್ತಿಯಲ್ಲಿ ನಗರದ ಗಬ್ಬೂರು ಬಳಿ ಕೆಎಲ್ ಇ ಸಂಸ್ಥೆ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲಾಗುತ್ತಿದೆ. ಕೆಎಲ್‌ಇ ಸಂಸ್ಥೆಯವರಿಗೆ ಮಠದಿಂದ 24 ಎಕರೆ 30 ಗುಂಟೆ ಜಾಗ ಕೊಟ್ಟಿದ್ದು ತಪ್ಪು. ಮಠದ ಆಡಳಿತ ಮಂಡಳಿ ನೇತೃತ್ವದಲ್ಲೇ …
Read More »ಗೋಕಾಕ: ಜ.6 ರಂದು ತೆರಿಗೆ ಸಂದಾಯ ಮಾಡದ 21 ವಾಹನಗಳ ಹರಾಜು!!
ಗೋಕಾಕ: ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆಯ ಪ್ರಕಾರ ತೆರಿಗೆ ಸಂದಾಯ ಮಾಡದಿರುವ ಕಾರಣ ಮುಟ್ಟುಗೋಲು ಹಾಕಿಕೊಂಡಿರುವ 21 ವಾಹನಗಳನ್ನು ಜ. 6 ರಂದು ಮುಂಜಾನೆ 10.30 ಘಂಟೆಗೆ ನಗರದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಆವರಣದಲ್ಲಿ ಬಹಿರಂಗು ಹರಾಜು ಮಾಡಲಾಗುವುದು ಸಾರಿಗೆ ಅಧಿಕಾರಿ ಟಿ.ಜೆ.ಹೇಮಾವತಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಬಾಕಿ ಇರುವ ತೆರಿಗೆ ಸಂದಾಯ ಮಾಡಿ ವಾಹನವನ್ನು ತಮ್ಮ ಸ್ವಾಧೀನಕ್ಕೆ ತೆಗೆದುಕೊಳ್ಳುಲು …
Read More »ಬ್ಯಾಲೇಟ್ ಪೇಪರ್ ನಲ್ಲಿ ಬಕೆಟ್ ಬದಲು ಅಲ್ಮೇರಾ ಚಿಹ್ನೆ: ಮತದಾನ ಸ್ಥಗಿತ
ರಾಮದುರ್ಗ: ಬ್ಯಾಲೆಟ್ ಪೇಪರ್‌ನಲ್ಲಿ ಅಭ್ಯರ್ಥಿ ಚಿಹ್ನೆಯನ್ನು ತಪ್ಪಾಗಿ ಮುದ್ರಿಸಿರುವ ಹಿನ್ನೆಲೆ ಕದಂಪೂರ ವಾರ್ಡ್ ನಂಬರ್ 6 ರ ಚುನಾವಣೆ ಮುಂದೂಡಿಕೆ ಮಾಡಲಾಗಿದೆ. ತಾಲೂಕಿನ ಕದಂಪೂರ ಗ್ರಾಮದಲ್ಲಿ 6 ನೇ ವಾರ್ಡ್ಗೆ ನಿರ್ಮಲಾ ಮಹಾಂತೇಶ ಖಾನಪೇಟ್ ಎಂಬುವರು ಸ್ಪರ್ಧಿಸಿದ್ದಾರೆ. ಇವರಿಗೆ ಬಕೆಟ್ ಚಿಹ್ನೆ ನೀಡಲಾಗಿತ್ತು. ಆದರೆ ಮತದಾನದ ಬ್ಯಾಲೆಟ್ ಪೇಪರ್‌ನಲ್ಲಿ ‘ಬಕೆಟ್’ ಚಿಹ್ನೆ ಬದಲು ‘ಅಲ್ಮೇರಾ’ ಚಿಹ್ನೆ ಮುದ್ರಣವಾಗಿದೆ. ಇದರಿಂದಾಗಿ ಮತದಾನ ಮೂಂದೂಡಿಕೆ ಮಾಡಲಾಗಿದೆ. ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ …
Read More »ಮತದಾನ ಮಾಡಿದ ಅಭ್ಯರ್ಥಿ ಭಿಕ್ಷುಕ ಅಂಕ ನಾಯಕ : ಗೆಲುವಿನ ವಿಶ್ವಾಸ
ಮೈಸೂರು : ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬೊಕ್ಕಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಚುನಾವಣಾ ಕಣಕ್ಕೆ ಇಳಿಸಿದರುವ ಭಿಕ್ಷುಕ ಅಂಕ ನಾಯಕ ಮತದಾನ ಮಾಡಿದರು. ಅಂಕ ನಾಯಕ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಗ್ರಾಮ ಪಂಚಾಯಿತಿ ಬ್ಲಾಕ್ ನಂ.1ರಲ್ಲಿ ಭಾನುವಾರ ಮತದಾನ ಮಾಡಿದರು. ಬಳಿಕ ಮಾತನಾಡಿದ ಅವರು, “ಗ್ರಾಮದ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಹೀಗಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇನೆ ಎಂಬ ವಿಶ್ವಾಸ ವಿದೆ” ಎಂದರು. ಈ ಹಿಂದೆ ಗ್ರಾಪಂ.ಸದಸ್ಯರು ಯಾವುದೇ ಮೂಲ ಸೌಕರ್ಯ …
Read More »ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ: ಭಾಷೆ ಬದಲು ಪಕ್ಷದ ಆಧಾರದ ಮೇಲೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ
ಬೆಳಗಾವಿ(ಡಿ. 26): ಬೆಳಗಾವಿ ಮಹಾನಗರ ಪಾಲಿಕೆ ಭಾಷೆ, ಗಡಿ ವಿಚಾರವಾಗಿ ರಾಜ್ಯದಲ್ಲಿ ಅನೇಕ ಸಲ ಸುದ್ದಿಯಾಗಿದೆ. ಅನೇಕ ಬಾರಿ ಅಧಿಕಾರ ಚುಕ್ಕಾಣಿ ಹಿಡಿಯಲು ಇದೇ ವಿಚಾರವನ್ನು ದಾಳವಾಗಿ ಬಳಸಿಕೊಳ್ಳಲಾಗುತ್ತದೆ. ಆದರೆ, ಈ ಬಾರಿ ರಾಜಕೀಯ ಪಕ್ಷಗಳು ಭಾಷೆ ಆಧಾರದ ಬದಲಾಗಿ ಪಕ್ಷದ ಆಧಾರದ ಮೇಲೆ ಸ್ಪರ್ಧಿಸಲು ಸಜ್ಜಾಗಿವೆ. 2019ರ ಮಾರ್ಚ್ ತಿಂಗಳಲ್ಲಿಯೇ ಮಹಾನಗರ ಪಾಲಿಕೆ ಅವಧಿ ಮುಕ್ತಾಯವಾಗಿದೆ. ಆದರೆ, ಮೀಸಲಾತಿ, ವಾರ್ಡ್ ವಿಂಗಡಣೆ ವಿಚಾರದಲ್ಲಿ ವಿವಾದ ಉಂಟಾಗಿ ಕೋರ್ಟ್ ಮೆಟ್ಟಿಲು ಏರಿದ್ದರ ಪರಿಣಾಮ ಚುನಾವಣೆ …
Read More »