ಹಾವೇರಿ : ಯಾಲಕ್ಕಿ ನಗರಿ ಹಾವೇರಿಯಲ್ಲಿ ಇದೇ ಫೆ.26ರಿಂದ 28ರವರೆಗೆ ನಡೆಯಬೇಕಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಕೊರೊನಾ ಆತಂಕದ ನಡುವೆ ವಿವಿಧ ಸಿದ್ಧತೆಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ಮಾಡಿಕೊಳ್ಳುತ್ತಿದೆ. ಆದರೆ, ಸರ್ಕಾರದಿಂದ ಅನುದಾನ ಮಂಜೂರಾಗದಿರುವುದು, ಸಿದ್ಧತೆಗೆ ಸಮಯ ಕಡಿಮೆ ಇರುವುದರಿಂದಾಗಿ ನಿರ್ಧಾರಿತ ದಿನಾಂಕದಂದು ಸಾಹಿತ್ಯ ಸಮ್ಮೇಳನ ನಡೆಸುವುದು ಅಸಾಧ್ಯ ಎಂದು ಹೇಳಲಾಗುತ್ತಿದೆ. ರಾಜ್ಯ ಸರ್ಕಾರ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇನ್ನೇನು 20 …
Read More »ಸಾಹಿತಿಗಳು, ನಟ-ನಟಿಯವರು ರೈತರ ಪ್ರತಿಭಟನೆ ಬೆಂಬಲಿಸಬೇಕು: ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರೈತರ ಪ್ರತಿಭಟನೆಗೆ ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ ನಟ-ನಟಿಯರು ಬೆಂಬಲಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ರೈತರ ಪರವಾಗಿ ಬೆಂಬಲ ನೀಡುವಂತೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ. ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು. ನಾವೆಲ್ಲರೂ ರೈತರು ಬೆಳೆದ …
Read More »ಬೆಳಗಾವಿಯಲ್ಲಿ ಮಟ್ಕಾ ಅಡ್ಡೆ ಮೇಲೆ ದಾಳಿ: ನಾಲ್ವರ ಬಂಧನ
ಬೆಳಗಾವಿಯಲ್ಲಿ ಮಟ್ಕಾ ಅಡ್ಡೆ ಮೇಲೆ ದಾಳಿ: ನಾಲ್ವರ ಬಂಧನ ಬೆಳಗಾವಿ : ಅಷ್ಟೇ ಗ್ರಾಮದಲ್ಲಿನ ಮಟಕಾ ಅಡ್ಡೆ ಮೇಲೆ ಮಾರಿಹಾಳ ಠಾಣೆ ಪೊಲೀಸರು ನಿನ್ನೆ ತಡರಾತ್ರಿ ದಾಳಿ ನಡೆಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಷ್ಟೇ ಗ್ರಾಮದ ನಿವಾಸಿಗಳಾದ ಲಕ್ಷ್ಮಣ ನಾಯಕ್, ರಾಜು ಕಾಕತಿ, ರಮೇಶ ಗುರುನಾಥ ದೊಡಮನಿ, ಸುಧಾಕರ ನಂದಗಡಕರ ಬಂಧಿತರು. ಮಾರಿಹಾಳ ಠಾಣೆ ಪೊಲೀಸರು ಖಚಿತ ಮಾಹಿತಿ ಆದಾರದ ಮೇಲೆ ಡಿಸಿಪಿ ವಿಕ್ರಂ ಆಮಟೆ ನೇತೃತ್ವದ ತಂಡ ದಾಳಿ …
Read More »ರೈಲಿಗೆ ತಲೆ ಕೊಟ್ಟು ಬೆಳಗಾವಿಯಲ್ಲಿ ದಂಪತಿ ಆತ್ಮಹತ್ಯೆಗೆ ಯತ್ನ..ಪತಿ ಸಾವು..ಪತ್ನಿಗೆ ಗಾಯ
ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆಗೆ ಯತ್ನ ಮಾಡಿದ್ದು ಘಟನೆಯಲ್ಲಿ ಪತಿ ಸಾವನ್ನಪ್ಪಿ, ಪತ್ನಿಗೆ ಗಾಯವಾಗಿರುವ ಘಟನೆ ಬೆಳಗಾವಿ ನಗರದ ಒಂದನೇ ರೇಲ್ವೆ ಗೇಟ್ ಬಳಿ ನಡೆದಿದೆ.ಬೆಳಗಾವಿ ತಾಲೂಕಿನ ಹಿಂಡಲಗಾ ನಿವಾಸಿ ರಾಕೇಶ್ ಪಾಟೀಲ್ ಮೃತ ದುರ್ದೈವಿ ಆಗಿದ್ದು, ಪತ್ನಿಗೆ ಗಂಭೀರ ಗಾಯವಾಗಿರುವ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಈ ದಂಪತಿ ಯತ್ನಿಸಿದೆ. ಸ್ಥಳಕ್ಕೆ ಬೆಳಗಾವಿ ರೇಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. …
Read More »ಪೊಲೀಸರ ಎದುರೇ ವಿದ್ಯಾರ್ಥಿ ತಾಯಿಗೆ ಕಪಾಳಮೋಕ್ಷ
ರಾಯಚೂರು: ವಿದ್ಯಾರ್ಥಿಗೆ 80,000 ರೂ ಪೀಸ್ ಡಿಮ್ಯಾಂಡ್ ಮಾಡಿ ಕಿರುಕುಳ ನೀಡುತ್ತಿದ್ದುದನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿ ತಾಯಿಗೆ ಪೊಲೀಸರ ಎದುರೇ ಕಪಾಳಮೋಕ್ಷ ಮಾಡಿದ ಮೊಂಟೆಸರಿ ಶಾಲೆ ಮುಖ್ಯಸ್ಥ ಸತೀಶ್ ಕುಮಾರ್ ಹಾಗೂ ಆತನ ಪತ್ನಿ ಇಬ್ಬರನ್ನು ಬಂಧಿಸಲಾಗಿದೆ. 10ನೇ ತರಗತಿ ವಿದ್ಯಾರ್ಥಿ ಸಂಪತ್ ಗೆ ತಾವು ಹೇಳಿದಷ್ಟು ಹಣವನ್ನು ಕಟ್ಟಬೇಕು ಎಂದು ಶಾಲೆಯ ಮುಖ್ಯಸ್ಥರು ಪ್ರತಿದಿನ ಕಿರುಕುಳ ನೀಡಿತ್ತಿದ್ದರು. ಇದರಿಂದ ಬೇಸತ್ತ ಸಂಪತ್ ಪೋಷಕರು ಟಿಸಿ ಕೊಡುವಂತೆ ಕೇಳಿಕೊಂಡಿದ್ದರು. ಟಿಸಿ ಕೊಡಲು …
Read More »ಪ್ರಿಯಾಂಕಾ ಗಾಂಧಿ ಭದ್ರತಾ ವಾಹನಗಳು ಡಿಕ್ಕಿ
ಲಕ್ನೋ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಭದ್ರತಾ ವಾಹನಗಳು ಅಪಘಾತಕ್ಕೀಡಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಹಾಪುರದಲ್ಲಿ ಭದ್ರತಾ ವಾಹನಗಳು ಡಿಕ್ಕಿಯಾಗಿದ್ದು. ಅದೃಷ್ಟವಶಾತ್ ಭದ್ರತಾ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದಾರೆ. ಉತ್ತರಪ್ರದೇಶದ ರಾಮ್ ಪುರಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.
Read More »ವಿದೇಶಿಯರ ಅಪಪ್ರಚಾರ ವಿರುದ್ಧ ಸಿಡಿದೆದ್ದ ಬಾಲಿವುಡ್, ಕ್ರೀಡಾ ತಾರೆಯರು
ನವದೆಹಲಿ: ಭಾರತದ ಆಂತರಿಕ ವಿಷಯಗಳ ಕುರಿತು ವಿದೇಶಿಯರ ಅಪಪ್ರಚಾರದ ವಿರುದ್ಧ ಬಾಲಿವುಡ್ ಹಾಗೂ ಕ್ರೀಡಾ ತಾರೆಗಳು ತೀವ್ರ ಖಂಡನೆಯನ್ನು ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಸಂಬಂಧ ಅಂತರರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಸೇರಿದಂತೆ ಅನೇಕ ವಿದೇಶಿ ಗಣ್ಯ ವ್ಯಕ್ತಿಗಳು ಪ್ರತಿಕ್ರಿಯಿಸಿದ್ದರು. ಭಾರತದ ವಿಷಯಗಳ ಬಗ್ಗೆ ವಿದೇಶಿಯರು ಮಾತನಾಡಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಭಾರತೀಯ ಸೆಲೆಬ್ರಿಟಿಗಳು, ದೇಶದ ಆಂತರಿಕ ವಿಷಯಗಳಲ್ಲಿ ವಿದೇಶಿಯರು ಅಪಪ್ರಚಾರ ನಡೆಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. …
Read More »ಕಾಯ್ದೆ ಹಿಂದೆ ವಿದೇಶಿ ಕೈವಾಡ ಆರೋಪ: ಪರಿಸರ ಸಂಸ್ಥೆಗೆ ದಂಡ ಪಾವತಿಸಲು ಹೈಕೋರ್ಟ್ ಸೂಚನೆ
ಬೆಂಗಳೂರು, ಫೆ.3: ಪರಿಸರ ಸಂರಕ್ಷಣೆ ಕಾಯ್ದೆಯನ್ನು ವಿದೇಶಿ ಪ್ರಭಾವಕ್ಕೆ ಒಳಗಾಗಿ ರೂಪಿಸಲಾಗಿದೆ ಎಂದು ಆಕ್ಷೇಪಾರ್ಹ ಹೇಳಿಕೆ ಸಲ್ಲಿಸಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ದಂಡ ವಿಧಿಸಲು ತೀರ್ಮಾನಿಸಿರುವ ಹೈಕೋರ್ಟ್ ದಂಡದ ಹಣವನ್ನು ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಗೆ ಪಾವತಿಸುವಂತೆ ಸೂಚಿಸಿದೆ. ನೂರು ಕಿ.ಮೀ ವರೆಗಿನ ರಾಷ್ಟ್ರೀಯ ಹೆದ್ದಾರಿಗಳ ವಿಸ್ತರಣೆಗೆ ಪರಿಸರ ಪರಿಣಾಮ ಅಧ್ಯಯನ (ಇಐಎ) ಅನ್ವಯಿಸದಿರಲು ಮುಂದಾಗಿರುವ ಕೇಂದ್ರ ಸರಕಾರದ ನಿರ್ಧಾರ ಪ್ರಶ್ನಿಸಿ ಯುನೈಟೆಡ್ ಕನ್ಸರ್ವೇಷನ್ ಟ್ರಸ್ಟ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ …
Read More »ಕಲ್ಲು ಕ್ವಾರಿಗಳಲ್ಲಿ ಸುರಕ್ಷತಾ ನಿಯಮಗಳ ಪಾಲನೆ: ವರದಿ ಸಲ್ಲಿಸಲು ಹೈಕೋರ್ಟ್ ಆದೇಶ
ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ಕ್ವಾರಿಗಳಲ್ಲಿ ಸುರಕ್ಷತಾ ನಿಯಮಾವಳಿ ಪಾಲಿಸಲಾಗುತ್ತಿದೆಯೇ ಎಂಬ ಬಗ್ಗೆ ಸರ್ವೇ ನಡೆಸಿ ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸರಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಸಮಾಜ ಪರಿವರ್ತನಾ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ಈ ನಿರ್ದೇಶನ ನೀಡಿದೆ. ರಾಜ್ಯದಲ್ಲಿರುವ ಕ್ವಾರಿಗಳ ಸರ್ವೇ ನಡೆಸಿ ಸುರಕ್ಷತಾ ನಿಯಮಾವಳಿ ಪಾಲಿಸ ಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸ ಬೇಕು. ಒಂದೊಮ್ಮೆ …
Read More »ಗ್ಯಾಸ್ ಟ್ಯಾಂಕರ್ – ಕಂಟೈನರ್ ನಡುವೆ ಢಿಕ್ಕಿ ರಸ್ತೆ ಸಂಚಾರ ಅಸ್ತವ್ಯಸ್ತ
ಬಂಟ್ವಾಳ, ಫೆ.03. ಗ್ಯಾಸ್ ಟ್ಯಾಂಕರ್ ಹಾಗೂ ಕಂಟೈನರ್ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕೆಲಕಾಲ ರಸ್ತೆ ಸಂಚಾರದಲ್ಲಿ ಅಡಚಣೆಯುಂಟಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಬುಧವಾರ ರಾತ್ರಿ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕಂಟೈನರ್ ಲಾರಿ ನಡುವೆ ಕಲ್ಲಡ್ಕ ಎಂಬಲ್ಲಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಎರಡೂ ಲಾರಿಗಳ ಚಾಲಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ …
Read More »