Breaking News

ಸರ್ಕಾರ ರಾತ್ರಿ ಕರ್ಫ್ಯು ರದ್ದು ಮಾಡಿದೆ.

ಬೆಳಗಾವಿ- ಇಂದಿನಿಂದ ಜನೇವರಿ 2 ರವರೆಗೆ ನೈಟ್ ಕರ್ಫ್ಯು ಜಾರಿ ಮಾಡಿ ಮಾರ್ಗಸೂಚಿ ಗಳನ್ನು ಹೊರಡಿಸಿದ್ದ ರಾಜ್ಯ ಸರ್ಕಾರ ಇಂದು ಏಕಾ ಏಕಿ ಕರ್ಫ್ಯು ಆದೇಶವನ್ನು ವಾಪಸ್ ಪಡೆದು ನೈಟ್ ಕರ್ಫ್ಯು ರದ್ದು ಮಾಡಿದೆ. ಸರ್ಕಾರ ನೈಟ್ ಕರ್ಫ್ಯು ಆದೇಶ ಹೊರಡಿಸಿದ ಮೇಲೆ ಅನೇಕ ಟೀಕೆ ಟಿಪ್ಪಣಿ ಗಳು ಎದುರಾದ ಹಿನ್ನಲೆಯಲ್ಲಿ ಸರ್ಕಾರ ರಾತ್ರಿ ಕರ್ಫ್ಯು ರದ್ದು ಮಾಡಿದೆ. ಕೊರೊನಾ ರೂಪಾಂತರ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿ …

Read More »

ವಿನಾ ಕಾರಣ ನನ್ನ ಮೇಲೆ ದಂದ ವಿಧಿಸಿರುವ ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು:B.J.P. ಶಾಸಕಎಂ.ಪಿ.ಕುಮಾರಸ್ವಾಮಿ

ಬೆಂಗಳೂರು: ಮಾಸ್ಕ್ ಇಲ್ಲದೇ ಪ್ರಯಾಣಿಸಿದ್ದಕ್ಕಾಗಿ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಪೊಲೀಸರು ದಂಡ ವಿಧಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ದೂರು ನೀಡಿರುವ ಶಾಸಕ, ಬೆಂಗಳೂರಿನ ಶೇಷಾದ್ರಿಪುರಂ ಕಡೆಯಿಂದ ಶಾಸಕರ ಭವನಕ್ಕೆ ತೆರಳುತ್ತಿದ್ದಾಗ ಶೇಷಾದ್ರಿಪುರಂ ಪೊಲೀಸ್ ಠಾಣಾ ಮುಂಭಾಗ ಸಂಚಾರಿ ವ್ಯತ್ಯಯದಿಂದ ಕಾರು ನಿಲುಗಡೆಗೊಂಡಿತು. ಈ ಸಂದರ್ಭದಲ್ಲಿ ಕಾರಿನ ಟಿಂಟ್ ಗ್ಲಾಸ್ ಇಳಿಸುವಂತೆ ಟ್ರಾಫಿಕ್ ಪೊಲೀಸರು ಒತಾಯಿಸಿ ಕಾರಿನೊಳಗಡೆ ಇದ್ದ ನನಗೆ ಮಾಸ್ಕ್ …

Read More »

ವೈಕುಂಠ ಏಕಾದಶಿಯನ್ನು ಈ ವರ್ಷ ಆಚರಿಸಲು ಸಾಧ್ಯವಿಲ್ಲ.

ಬೆಂಗಳೂರು(ಡಿ.24): ನಾಳೆ ವೈಕುಂಠ ಏಕಾದಶಿ. ಕೊರೋನಾ ಬಂದಿಲ್ಲ ಎಂದಿದ್ದರೆ ಎಲ್ಲಾ ದೇವಾಲಯಗಳಲ್ಲೂ ಭಕ್ತರದ್ದೇ ಕಾರುಬಾರು ಇರುತ್ತಿತ್ತು. ಪ್ರತೀ ವರ್ಷ ಸಂಭ್ರಮದಿಂದ ಆಚರಿಸಲಾಗುತ್ತಿದ್ದ ವೈಕುಂಠ ಏಕಾದಶಿಯನ್ನು ಈ ವರ್ಷ ಆಚರಿಸಲು ಸಾಧ್ಯವಿಲ್ಲ. ಕಾರಣ ಮಹಾಮಾರಿ ಕೊರೋನಾ. ಹೌದು, ಈ ಕೊರೋನಾ ಕಾರಣದಿಂದಾಗಿ ನಾಳಿನ ವೈಕುಂಠ ಏಕಾದಶಿಯಂದು ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ. ಬೆಂಗಳೂರಿನ ಬಹುತೇಕ ಎಲ್ಲಾ ದೇವಾಲಯಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗುತ್ತದೆ ಎಂದು ತಿಳಿದು ಬಂದಿದೆ. ಕೋವಿಡ್-19 ಹಿನ್ನೆಲೆಯಲ್ಲಿ ದೇವಾಲಯಗಳಿಗೆ …

Read More »

ಸಾಂಸ್ಕೃತಿಕ ನಗರಿಯಲ್ಲಿ ಹೊಸವರ್ಷಕ್ಕಿಲ್ಲ ಸಂಭ್ರಮ; ಅರಮನೆ ದೀಪಾಲಂಕಾರದ ಜೊತೆ ಹಲವು ಕಾರ್ಯಕ್ರಮಗಳು ರದ್ದು

ಮೈಸೂರು: ಸಾಕಷ್ಟು ಕೆಟ್ಟ ಘಟನೆಗಳಿಂದ ಕಳೆದು ಹೋಗಿರುವ ಈ 2020ರನ್ನ ಕಳುಹಿಸಿ 2021ನ್ನು ಸಂಭ್ರಮದಿಂದ ಸ್ವಾಗತಿಸಲು ವಿಶ್ಚದಾದ್ಯಂತ ಜನರು ಸಜ್ಜಾಗಿದ್ದಾರೆ. ಆದರೆ, ಪ್ರವಾಸಿಗರ ಸ್ವರ್ಗ ಎಂದೇ ಖ್ಯಾತಿಯಾಗಿರುವ  ಮೈಸೂರಿನಲ್ಲಿ ಈ ವರ್ಷ ಹೊಸ ವರ್ಷದ ಸಂಭ್ರಮಗಳಿಗೆ ಬ್ರೇಕ್‌ ಬಿದ್ದಿದೆ. ಮೈಸೂರು ಜಿಲ್ಲೆಯಲ್ಲಿ ಈ ಬಾರಿ ಹೊಸವರ್ಷಾಚರಣೆ ಕಾರ್ಯಕ್ರಮಗಳು ಇರೋದಿಲ್ಲ,  ಮೈಸೂರು ಅರಮನೆ ದೀಪಾಲಂಕಾರ ಹಾಗೂ ಅರಮನೆಯಲ್ಲಿ ಮಧ್ಯರಾತ್ರಿ 12 ಗಂಟೆಗೆ ಬಾಣಬಿರುಸು ಪ್ರದರ್ಶನದ ಮೂಲಕ ಹೊಸ ವರ್ಷ ಸ್ವಾಗತವು ಕೂಡ …

Read More »

ಶಾಲೆ ಶುಲ್ಕದ ಹೊರೆ ಇಳಿಸಿ, ಪಾಲಕರು, ಮಕ್ಕಳನ್ನು ಉಳಿಸಿ: ಜಿಲ್ಲಾಧಿಕಾರಿ ಮೊರೆ ಹೋದ ಖಾಸಗಿ ಶಾಲೆ ಪಾಲಕರು

ಬೆಳಗಾವಿ  :ಶಾಲೆ ಶುಲ್ಕದ ಹೊರೆ ಇಳಿಸಿ, ಪಾಲಕರು, ಮಕ್ಕಳನ್ನು ಉಳಿಸಿ ಜಿಲ್ಲಾಧಿಕಾರಿ ಮೊರೆ ಹೋದ ಖಾಸಗಿ ಶಾಲೆ ಪಾಲಕರು ಅರ್ಧ ಶೈಕ್ಷಣಿಕ ವರ್ಷ ಮುಗಿದುಹೋಗಿದೆ. ಕೊರೋನಾ ಸಂಕಷ್ಟದಿಂದ ಪಾಲಕರೂ ತೊಂದರೆಯಲ್ಲಿ ಸಿಲುಕಿದ್ದಾರೆ. ಪಾಠಗಳೂ ನಡೆಯುತ್ತಿಲ್ಲ. ಹಾಗಾಗಿ ಶಾಲೆ ಶುಲ್ಕದಲ್ಲಿ ರಿಯಾಯಿತಿ ನೀಡಲು ಸೂಚನೆ ನೀಡಬೇಕು ಎಂದು ಆಗ್ರಹಿಸಿ ಬೆಳಗಾವಿ ತಾಲೂಕು ಯಮನಾಪುರ ಗ್ರಾಮದ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.: ಕೊರೋನಾದಿಂದಾಗಿ …

Read More »

ಸರ್ಕಾರದ ರಾತ್ರಿ ಕರ್ಫ್ಯೂ ವಿಚಾರ ಪೊಲೀಸರು ಮತ್ತು ಸಾರ್ವಜನಿಕರ ಮಧ್ಯೆ ಜಗಳಕ್ಕೆ ಕಾರಣ: ಯತ್ನಾಳ

ವಿಜಯಪುರ(ಡಿ. 24): ಕೊರೋನಾ ತಡೆಗಟ್ಟಲು ರಾಜ್ಯ ಸರಕಾರ ಇಂದಿನಿಂದ ರಾತ್ರಿ 11 ಗಂಟೆಯಿಂದ ಬೆ. 5ರ ವರೆಗೆ ರಾತ್ರಿ ಕರ್ಫ್ಯೂ ವಿಧಿಸಿರುವ ಕ್ರಮವನ್ನು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗಡೌ ರಾ. ಪಾಟೀಲ ಯತ್ನಾಳ ವ್ಯಂಗ್ಯವಾಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ರಾತ್ರಿ ಕರ್ಫ್ಯೂಗೆ ಅರ್ಥವೇ ಇಲ್ಲ.  ರಾತ್ರಿ ಕರ್ಫ್ಯೂ ವಿಧಿಸಿರುವುದು ವ ಪೊಲೀಸರಿಗೆ ತೊಂದರೆ ವಿಧಿಸಿದಂತಾಗಿದೆ.  ಸಾರ್ವಜನಿಕರೊಂದಿಗೆ ಪೊಲೀಸರು ಜಗಳವಾಡಲು ಇಂತಹ ನಿರ್ಣಯಗಳು ಕಾರಣವಾಗುತ್ತವೆ ಎಂದು ಎಚ್ಚರಿಕೆ ನೀಡಿದ್ದಾರೆ. ರಾತ್ರಿ …

Read More »

ಹೊಸ ವರ್ಷಾಚರಣೆಗೆ ಬ್ರೇಕ್: ಸರ್ಕಾರದ ಆದೇಶ ಮೀರಿದರೆ ಕಠಿಣ ಕ್ರಮ; ಪೊಲೀಸ್ ಆಯುಕ್ತ ಕಮಲ್ ಪಂಥ್ ಎಚ್ಚರಿಕೆ

ಬೆಂಗಳೂರು(ಡಿ.24): ರಾಜ್ಯದಲ್ಲಿ ಇಂದಿನಿಂದ ಜನವರಿ 2ರವರೆಗೆ ನೈಟ್​ ಕರ್ಫ್ಯೂ ಜಾರಿ ಮಾಡಲಾಗಿದೆ. ಕ್ರಿಸ್​ಮಸ್ ಮತ್ತು ಹೊಸ ವರ್ಷಾಚರಣೆ ಹಿನ್ನೆಲೆ, ಕೊರೋನಾ ನಿಯಂತ್ರಣಕ್ಕಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಹೊಸ ವರ್ಷಾಚರಣೆ ವೇಳೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸ್ ಬಿಗಿ ಭದ್ರತೆ ಹೇಗಿರುತ್ತೆ ಎಂಬುದರ ಬಗ್ಗೆ ಪೊಲೀಸ್ ಕಮೀಷನರ್ ಕಮಲ್​ ಪಂಥ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದಿನಿಂದ ಜನವರಿ 2 ರ ವರೆಗೆ ರಾತ್ರಿ 11 ರಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಪ್ಯೂ …

Read More »

ಮಾಜಿ ಗೆಳತಿಯ ಬಾಳಿಗೆ ಬೆಂಕಿ ಇಟ್ಟ ಪಾಪಿ..!

ಸ್ಟೇಟ್​ ಬ್ಯಾಂಕ್ ಆಫ್​ ಇಂಡಿಯಾದಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿಯನ್ನ ಆಕೆಯ ಮಾಜಿ ಪ್ರಿಯತಮ ಕೊಲೆ ಮಾಡಿ ಬೆಂಕಿ ಹಚ್ಚಿದ ದಾರುಣ ಘಟನೆ ಆಂಧ್ರಪ್ರದೇಶ ಅನಂತಪುರಂ ಜಿಲ್ಲೆಯಲ್ಲಿ ನಡೆದಿದೆ.‌ ಪ್ರಕರಣ ಸಂಬಂಧ ಆರೋಪಿಯನ್ನ ಬಂಧಿಸಲಾಗಿದ್ದು, ಆಕೆ ಬೇರೆಯವನ ಜೊತೆ ಪ್ರೇಮ ಸಂಬಂಧ ಹೊಂದಿದ್ದನ್ನ ಸಹಿಸಲಾಗದೇ ಈ ರೀತಿ ಮಾಡಿದ್ದೇನೆ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಗಾರೆ ಕೆಲಸ ಮಾಡಿಕೊಂಡಿದ್ದ ರಾಜೇಶ್​ ಸ್ನೇಹಲತಾ ಎಂಬಾಕೆಯನ್ನ ಪ್ರೀತಿ ಮಾಡುತ್ತಿದ್ದ. ಆದರೆ ಸ್ನೇಹಲತಾ ಗುತ್ತಿಗೆ ಆಧಾರದಲ್ಲಿ …

Read More »

ದಕ್ಷಿಣ ಆಫ್ರಿಕಾದಲ್ಲಿ ರೂಪಾಂತರ ಕೊರೋನಾ ವೈರಸ್ ಪತ್ತೆ

ನವದೆಹಲಿ: ಬ್ರಿಟನ್ ನಲ್ಲಿ ಹೊಸ ಮಾದರಿಯ ಕೊರೋನಾ ವೈರಸ್ ಪತ್ತೆಯಾಗಿ ಜಗತ್ತಿನಾದ್ಯಂತ ಜನ ಕಂಗೆಟ್ಟಿದ್ದಾರೆ. ಇದರ ಬೆನ್ನಲ್ಲೇ ಈಗ ದಕ್ಷಿಣ ಆಫ್ರಿಕಾದಲ್ಲಿ ಹೊಸ ಮಾದರಿಯ ಕೋವಿಡ್-19 ವೈರಾಣುವಿನ 2 ಪ್ರಕರಣಗಳು ಪತ್ತೆಯಾಗಿದೆ. ಯುನೈಟೆಡ್ ಕಿಂಗ್ ಡಮ್ ನಲ್ಲಿ ಹೊಸ ಮಾದರಿಯ ವೈರಾಣು ವ್ಯಾಪಕವಾಗಿ ಹರಡುತ್ತಿರುವ ರೀತಿಯಲ್ಲೇ ದಕ್ಷಿಣ ಆಫ್ರಿಕಾದಲ್ಲೂ ವೈರಾಣು ಹರಡುತ್ತಿದ್ದು ಎರಡನೇ ಅಲೆ ಪ್ರಾರಂಭವಾಗಿದೆ ಎಂದು ತಜ್ಞರು ಹೇಳಿದ್ದಾರೆ. ಎರಡೂ ಪ್ರಕರಣಗಳು ದಕ್ಷಿಣ ಆಫ್ರಿಕಾದಿಂದ ಬಂದವರಿಂದಲೇ ಹೊಸ ಮಾದರಿಯ …

Read More »

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪೊಲೀಸರ ವಶಕ್ಕೆ

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ, ಕಾಯ್ದೆ ರದ್ದು ಮಾಡುವಂತೆ ಕೋರಿ ಸಹಿ ಸಂಗ್ರಹ ಮನವಿ ಪತ್ರದೊಂದಿಗೆ ರಾಷ್ಟ್ರಪತಿ ಭವನಕ್ಕೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರೀಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃಷಿ ಕಾಯ್ದೆ ರದ್ದು ಮಾಡಬೇಕು ಎಂದು ಆಗ್ರಹಿಸಿ 2 ಕೋಟಿ ಸಹಿ ಸಂಗ್ರಹ ಮನವಿ ಪತ್ರದೊಂದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು …

Read More »