ಬೆಂಗಳೂರು(ಡಿ.24): ರಾಜ್ಯದಲ್ಲಿ ಇಂದಿನಿಂದ ಜನವರಿ 2ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆ ಹಿನ್ನೆಲೆ, ಕೊರೋನಾ ನಿಯಂತ್ರಣಕ್ಕಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಹೊಸ ವರ್ಷಾಚರಣೆ ವೇಳೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸ್ ಬಿಗಿ ಭದ್ರತೆ ಹೇಗಿರುತ್ತೆ ಎಂಬುದರ ಬಗ್ಗೆ ಪೊಲೀಸ್ ಕಮೀಷನರ್ ಕಮಲ್ ಪಂಥ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದಿನಿಂದ ಜನವರಿ 2 ರ ವರೆಗೆ ರಾತ್ರಿ 11 ರಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಪ್ಯೂ …
Read More »ಮಾಜಿ ಗೆಳತಿಯ ಬಾಳಿಗೆ ಬೆಂಕಿ ಇಟ್ಟ ಪಾಪಿ..!
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿಯನ್ನ ಆಕೆಯ ಮಾಜಿ ಪ್ರಿಯತಮ ಕೊಲೆ ಮಾಡಿ ಬೆಂಕಿ ಹಚ್ಚಿದ ದಾರುಣ ಘಟನೆ ಆಂಧ್ರಪ್ರದೇಶ ಅನಂತಪುರಂ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿಯನ್ನ ಬಂಧಿಸಲಾಗಿದ್ದು, ಆಕೆ ಬೇರೆಯವನ ಜೊತೆ ಪ್ರೇಮ ಸಂಬಂಧ ಹೊಂದಿದ್ದನ್ನ ಸಹಿಸಲಾಗದೇ ಈ ರೀತಿ ಮಾಡಿದ್ದೇನೆ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಗಾರೆ ಕೆಲಸ ಮಾಡಿಕೊಂಡಿದ್ದ ರಾಜೇಶ್ ಸ್ನೇಹಲತಾ ಎಂಬಾಕೆಯನ್ನ ಪ್ರೀತಿ ಮಾಡುತ್ತಿದ್ದ. ಆದರೆ ಸ್ನೇಹಲತಾ ಗುತ್ತಿಗೆ ಆಧಾರದಲ್ಲಿ …
Read More »ದಕ್ಷಿಣ ಆಫ್ರಿಕಾದಲ್ಲಿ ರೂಪಾಂತರ ಕೊರೋನಾ ವೈರಸ್ ಪತ್ತೆ
ನವದೆಹಲಿ: ಬ್ರಿಟನ್ ನಲ್ಲಿ ಹೊಸ ಮಾದರಿಯ ಕೊರೋನಾ ವೈರಸ್ ಪತ್ತೆಯಾಗಿ ಜಗತ್ತಿನಾದ್ಯಂತ ಜನ ಕಂಗೆಟ್ಟಿದ್ದಾರೆ. ಇದರ ಬೆನ್ನಲ್ಲೇ ಈಗ ದಕ್ಷಿಣ ಆಫ್ರಿಕಾದಲ್ಲಿ ಹೊಸ ಮಾದರಿಯ ಕೋವಿಡ್-19 ವೈರಾಣುವಿನ 2 ಪ್ರಕರಣಗಳು ಪತ್ತೆಯಾಗಿದೆ. ಯುನೈಟೆಡ್ ಕಿಂಗ್ ಡಮ್ ನಲ್ಲಿ ಹೊಸ ಮಾದರಿಯ ವೈರಾಣು ವ್ಯಾಪಕವಾಗಿ ಹರಡುತ್ತಿರುವ ರೀತಿಯಲ್ಲೇ ದಕ್ಷಿಣ ಆಫ್ರಿಕಾದಲ್ಲೂ ವೈರಾಣು ಹರಡುತ್ತಿದ್ದು ಎರಡನೇ ಅಲೆ ಪ್ರಾರಂಭವಾಗಿದೆ ಎಂದು ತಜ್ಞರು ಹೇಳಿದ್ದಾರೆ. ಎರಡೂ ಪ್ರಕರಣಗಳು ದಕ್ಷಿಣ ಆಫ್ರಿಕಾದಿಂದ ಬಂದವರಿಂದಲೇ ಹೊಸ ಮಾದರಿಯ …
Read More »ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪೊಲೀಸರ ವಶಕ್ಕೆ
ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ, ಕಾಯ್ದೆ ರದ್ದು ಮಾಡುವಂತೆ ಕೋರಿ ಸಹಿ ಸಂಗ್ರಹ ಮನವಿ ಪತ್ರದೊಂದಿಗೆ ರಾಷ್ಟ್ರಪತಿ ಭವನಕ್ಕೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರೀಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃಷಿ ಕಾಯ್ದೆ ರದ್ದು ಮಾಡಬೇಕು ಎಂದು ಆಗ್ರಹಿಸಿ 2 ಕೋಟಿ ಸಹಿ ಸಂಗ್ರಹ ಮನವಿ ಪತ್ರದೊಂದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು …
Read More »ತಹಶೀಲ್ದಾರ್ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ !
ಬಳ್ಳಾರಿ : ಜಿಲ್ಲೆ ಸಿರಗುಪ್ಪ ತಾಲ್ಲೂಕಿನ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಸ್.ಬಿ.ಕೂಡಲಗಿ ಅವರ ಪತ್ನಿ ಶಂಕ್ರಮ್ಮ ಎಂಬುವವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತಿಚೇಗೆ ಎಸ್.ಬಿ.ಕೂಡಲಗಿ ಅವರನ್ನು ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಗೆ ವರ್ಗಾವಣೆಗೊಳಿಸಲಾಗಿತ್ತು. ಇದರಿಂದ ಮನನೊಂದು ಅವರ ಪತ್ನಿ ಶಂಕ್ರಮ್ಮ(50) ಸರ್ಕಾರಿ ವಸತಿ ಗೃಹದಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ ನಿಖರ ಕಾರಣ ತಿಳಿದು ಬಂದಿಲ್ಲ. ತಹಶೀಲ್ದಾರ್ ಎಸ್.ಬಿ.ಕೂಡಲಗಿ ನಿವಾಸಕ್ಕೆ ಶಾಸಕ ಎಂ.ಎಸ್.ಸೋಮಲಿಂಗಪ್ಪ ಭೇಟಿ ಮಾಡಿ, ಸಾಂತ್ವಾನ ಹೇಳಿದರು. ಸ್ಥಳಕ್ಕೆ …
Read More »ರಿಪಬ್ಲಿಕ್ ಟಿವಿಗೆ ಬ್ರಿಟನ್ ದಂಡ: ಬ್ರಿಟಿಷರನ್ನು 280 ಬಾರಿ ಕ್ಷಮೆ ಕೋರಿ ಸಾವರ್ಕರ್ ದಾಖಲೆ ಮುರಿದು ಸಾರ್ವಜನಿಕರಿಂದ ಅಪಹಾಸ್ಯಕ್ಕೆ ಗುರಿಯಾದ ಅರ್ನಾಬ್ ಗೋ ಸ್ವಾಮಿ
ಹೊಸದಿಲ್ಲಿ: ಬ್ರಿಟನ್ ನ ಟಿವಿ ನಿಯಂತ್ರಣ ಪ್ರಾಧಿಕಾರ ಆಫ್ ಕಾಮ್ 20 ಲಕ್ಷ ರೂ. ದಂಡ ವಿಧಿಸಿದ ಬಳಿಕ 280 ಬಾರಿ ಕ್ಷಮೆ ಕೋರುವ ಮೂಲಕ ರಿಪಬ್ಲಿಕ್ ಟಿವಿಯ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಸಾರ್ವಜನಿಕರಿಂದ ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭ ಬ್ರಿಟಿಷ್ ಸರಕಾರಕ್ಕೆ ಹಲವು ಬಾರಿ ಕ್ಷಮೆ ಕೋರುವ ಮೂಲಕ ಕಾರಾಗೃಹದಿಂದ ಬಿಡುಗಡೆಗೊಂಡಿದ್ದ ಹಿಂದುತ್ವವಾದಿ ಸಾವರ್ಕರ್ ಅವರಿಗೆ ಗೋಸ್ವಾಮಿಯನ್ನು ಹೋಲಿಸಿರುವ ಜನರು ಕ್ಷಮೆ ಯಾಚನೆಯಲ್ಲಿ ಸಾರ್ವಕರ್ …
Read More »ಬೆಳಗಾವಿ : ಹೃದಯಾಘಾತದಿಂದ ಗ್ರಾಪಂ.ಚುನಾವಣೆಯ ಕಣದಲ್ಲಿದ್ದ ಅಭ್ಯರ್ಥಿ ಸಾವು
ಚಿಕ್ಕೋಡಿ : ಗ್ರಾಪಂ. ಚುನಾವಣೆಯ ಕಣದಲ್ಲಿದ್ದಅಭ್ಯರ್ಥಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ತಾಲ್ಲೂಕಿನ ಜೋಡಕುರಳಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಮಾರುತಿಗೌಡ ಭೀಮಗೌಡ ಪಾಟೀಲ್(65) ಬೆಳಿಗ್ಗೆ ಚಹಾ ಕುಡಿಯುತ್ತಲೇ ಕೊನೆಯುಸಿರೆಳಿದ್ದಾರೆ. ಇವರು ಗ್ರಾಮದ ವಾರ್ಡ್ ನಂ.3ರಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಡಿ.27ರಂದು ಮತದಾನ ನಡೆಯಲಿದೆ. ಮಾರುತಿಗೌಡ ಅವರು ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು.
Read More »ನೈಟ್ ಕರ್ಫ್ಯೂ ತೀರ್ಮಾನ ಹುಚ್ಚರ ಸಂತೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದಂತಿದೆ: ದಿನೇಶ್ ಗುಂಡೂರಾವ್
ಬೆಂಗಳೂರು: ಕೊರೊನಾ ಹೊಸ ಪ್ರಭೇದ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ರಾತ್ರಿ ವೇಳೆ ಮಾತ್ರ ಜಾರಿಗೊಳಿಸಿರುವ ನೈಟ್ ಕರ್ಫ್ಯೂ ವಿಚಾರ ತೀವ್ರ ಟೀಕೆಗೆ ಗುರಿಯಾಗಿದೆ. ವಿಪಕ್ಷ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದೆ. ರೂಪಾಂತರಿ ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರದ ಕ್ರಮಗಳು ಹುಚ್ಚರ ಸಂತೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದಂತಿದೆ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡುರಾವ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ಕಾಟಾಚಾರದ ರಾತ್ರಿ ಕರ್ಫ್ಯೂ ಹೇರಿ …
Read More »ಲಿಂಗಾಯತ ಮೀಸಲಾತಿ; ರಕ್ತ ದಾಸೋಹದ ಮೂಲಕ ಸರ್ಕಾರದ ಗಮನಸೆಳೆಯಲು ಮುಂದಾದ ಜಯ ಮೃತ್ಯುಂಜಯ ಶ್ರೀಗಳು
ಬಾಗಲಕೋಟೆ : ಪಂಚಮಸಾಲಿ ಲಿಂಗಾಯತ ಸಮಾಜ 2ಎ ಮೀಸಲಾತಿಗೆ ಸೇರಿಸುವಂತೆ ಆಗ್ರಹಿಸಿ ಕೂಡಲಸಂಗಮ ಪಂಚಮಸಾಲಿ ಲಿಂಗಾಯತ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಮೂರನೇ ಹಂತದ ಹೋರಾಟಕ್ಕೆ ಮುಂದಾಗಿದ್ದಾರೆ. ಡಿಸೆಂಬರ್ 23 ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹುಟ್ಟು ಹಬ್ಬದ ದಿನ ಹಾಗೂ ರೈತ ದಿನಾಚರಣೆ ಹಿನ್ನೆಲೆಯಲ್ಲಿ ವಿಶಿಷ್ಟ ರೀತಿಯ ಹೋರಾಟಕ್ಕೆ ಅಣಿಯಾಗಿದ್ದಾರೆ. ಸ್ವತಃ ಸ್ವಾಮೀಜಿ ರಕ್ತ ದಾನ ಮಾಡುವ ಮೂಲಕ ರಕ್ತದಾಸೋಹಕ್ಕೆ ಚಾಲನೆ ನೀಡಿದರು. ರಕ್ತ …
Read More »ಜೈಲು ಸೇರಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ.
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ. ನಟಿ ರಾಗಿಣಿ ದ್ವಿವೇದಿ ಉಸಿರಾಟದ ಸಮಸ್ಯೆ ಹಾಗೂ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಇದೀಗ ಪರಪ್ಪನ ಅಗ್ರಹಾರ ಜೈಲಿನಿಂದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಡ್ರಗ್ಸ್ ಕೇಸ್ ನಲ್ಲಿ ಬಂಧನಕ್ಕೀಡಾಗಿರುವ ನಟಿ ರಾಗಿಣಿ ಕಳೆದ ನಾಲ್ಕು ತಿಂಗಳಿನಿಂದ ಜೈಲುವಾಸ ಅನುಭವಿಸುತ್ತಿದ್ದಾರೆ. ಡ್ರಗ್ಸ್ ಕೇಸ್ ನಲ್ಲಿ ಜೈಲು …
Read More »